Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 13:2 - ಕನ್ನಡ ಸತ್ಯವೇದವು C.L. Bible (BSI)

2-3 ಅವು ಯಾವುವೆಂದರೆ - ಈಜಿಪ್ಟಿನ ಈಚೆಯಿರುವ ಶೀಹೋರ್ ನದಿಯಿಂದ ಕಾನಾನ್ಯರಿಗೆ ಸೇರಿದ ಉತ್ತರ ಮೇರೆಯಾದ ಎಕ್ರೋನಿನವರೆಗಿರುವ ಗಾಜಾ, ಅಷ್ಡೋದ್, ಅಷ್ಕೆಲೋನ್, ಗತೂರ್, ಎಕ್ರೋನ್ ಎಂಬ ನಗರಗಳ ಐದು ಮಂದಿ ಫಿಲಿಷ್ಟಿಯ ಪ್ರಭುಗಳ ಸ್ವಾಧೀನದಲ್ಲಿದ್ದಂಥ ಫಿಲಿಷ್ಟಿಯ ಪ್ರಾಂತ್ಯ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವುಗಳು ಯಾವುವೆಂದರೆ: ಐಗುಪ್ತದ ಈಚೆಯಲ್ಲಿರುವ ಶೀಹೋರ್ ಹಳ್ಳ ಮೊದಲುಗೊಂಡು ಕಾನಾನ್ಯರಿಗೆ ಸೇರಿರುವ ಉತ್ತರ ಮೇರೆಯಾದ ಎಕ್ರೋನಿನವರೆಗಿರುವ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2-3 ಅವು ಯಾವವಂದರೆ - ಐಗುಪ್ತದ ಈಚೆಯಲ್ಲಿರುವ ಶೀಹೋರ್ ಹಳ್ಳ ಮೊದಲುಗೊಂಡು ಕಾನಾನ್ಯರಿಗೆ ಸೇರಿದ್ದ ಉತ್ತರ ಮೇರೆಯಾದ ಎಕ್ರೋನಿನವರೆಗಿದ್ದು ಗಾಜಾ, ಅಷ್ಡೋದ್, ಅಷ್ಕೆಲೋನ್, ಗತೂರು, ಎಕ್ರೋನ್ ಎಂಬ ಪಟ್ಟಣಗಳ ಐದು ಮಂದಿ ಫಿಲಿಷ್ಟಿಯ ಪ್ರಭುಗಳ ಸ್ವಾಧೀನದಲ್ಲಿದ್ದಂಥ ಫಿಲಿಷ್ಟಿಯ ಪ್ರಾಂತ್ಯವು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನೀನು ಗೆಷೂರ ಪ್ರದೇಶವನ್ನು ಮತ್ತು ಫಿಲಿಷ್ಟಿಯರ ಪ್ರದೇಶವನ್ನು ಇನ್ನೂ ವಶಪಡಿಸಿಕೊಂಡಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಅವು ಯಾವುವೆಂದರೆ: “ಫಿಲಿಷ್ಟಿಯರ ಮತ್ತು ಗೆಷೂರ್ಯರ ದೇಶವೆಲ್ಲಾ ಅಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 13:2
15 ತಿಳಿವುಗಳ ಹೋಲಿಕೆ  

ಗಿಲ್ಯಾದ್ ನಾಡು, ಗೆಷ್ಯೂರ ಮತ್ತು ಮಾಕತೀಯರ ಪ್ರಾಂತ್ಯಗಳು, ಹೆರ್ಮೋನ್ ಬೆಟ್ಟದ ಮೇಲಿನ ಪ್ರದೇಶ


“ಟೈರ್, ಸಿದೋನ್ ಮತ್ತು ಫಿಲಿಷ್ಟಿಯ ಪ್ರಾಂತ್ಯಗಳೇ, ನನ್ನ ಮೇಲೆ ನಿಮಗಿರುವ ದೂರು ಯಾವುದು? ನನಗೆ ಪ್ರತೀಕಾರ ಮಾಡಬೇಕೆಂದಿರುವಿರೋ? ಹಾಗೇನಾದರೂ ಮಾಡಿದ್ದೇ ಆದರೆ, ನೀವು ಮಾಡಿದ ಕೇಡನ್ನು ತಡಮಾಡದೆ ನಿಮ್ಮ ತಲೆಗೇ ತರುವೆನು.


ಈ ಅವಧಿಯಲ್ಲಿ ಅವನು ಮತ್ತು ಅವನ ಜನರು ಗೆಷೂರ್ಯರ ಮೇಲೆ, ಗಿಜ್ರೀಯರ ಮೇಲೆ ಹಾಗು ಅಮಾಲೇಕ್ಯರ ಮೇಲೆ ದಾಳಿಮಾಡುತ್ತಿದ್ದರು. ಇವರುಗಳ ಪ್ರಾಂತ್ಯಗಳು ತೇಲಾಮಿನಿಂದ ಶೂರಿನವರೆಗೂ ಹಾಗು ಈಜಿಪ್ಟಿನವರೆಗೂ ವಿಸ್ತರಿಸಿತ್ತು.


ಕಾನಾನ್ಯರೊಡನೆ ನಡೆದ ಯುದ್ಧಗಳಲ್ಲಿ ಒಂದರಲ್ಲೂ ಪಾಲ್ಗೊಳ್ಳದೆ ಇದ್ದ ಇಸ್ರಯೇಲರನ್ನು ಪರೀಕ್ಷಿಸುವುದಕ್ಕೂ


ನಿಮ್ಮ ಸೇವಕನಾದ ನಾನು ಸಿರಿಯಾದೇಶದ ಗೆಷೂರಿನಲ್ಲಿದ್ದಾಗ ಸರ್ವೇಶ್ವರ ನನ್ನನ್ನು ಮರಳಿ ಜೆರುಸಲೇಮಿಗೆ ಬರಮಾಡುವುದಾದರೆ ಅವರಿಗೆ ಒಂದು ವಿಶೇಷ ಆರಾಧನೆ ಮಾಡಿಸುವೆನೆಂದು ಹರಕೆ ಮಾಡಿದ್ದೆನು,” ಎಂದು ವಿಜ್ಞಾಪಿಸಿದನು.


ಎರಡನೆಯವನು ಕಿಲಾಬನು; ಇವನು ಕರ್ಮೆಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳ ಮಗ. ಮೂರನೆಯವನು ಅಬ್ಷಾಲೋಮನು; ಇವನು ಗೆಷೂರಿನ ಅರಸನಾದ ತಲ್ಮೈ ಎಂಬವನ ಮಗಳಾದ ಮಾಕಳ ಪುತ್ರ.


ಇಸ್ರಯೇಲರು ಗೆಷೂರ್ಯರನ್ನೂ ಮಾಕತೀಯರನ್ನೂ ನಾಡಿನೊಳಗಿಂದ ಅಟ್ಟಿಬಿಡಲಿಲ್ಲ. ಅವರು ಇಂದಿನವರೆಗೂ ಇಸ್ರಯೇಲರ ಮಧ್ಯದಲ್ಲೇ ಇದ್ದಾರೆ.


ಇವನ ರಾಜ್ಯ, ಹೆರ್ಮೋನ್ ಮಲೆನಾಡು, ಸಲ್ಕಾನಗರ, ಗೆಷೂರ್ಯರ ಮತ್ತು ಮಾಕತೀಯರ ಮೇರೆಯವರೆಗಿದ್ದ ಬಾಷಾನ್ ನಾಡು, ಹೆಷ್ಬೋನಿನ ಅರಸನದ ಸೀಹೋನನ ಮೇರೆಯವರೆಗಿದ್ದ ಗಿಲ್ಯಾದಿನ ಅರ್ಧಪ್ರಾಂತ್ಯ ಇವುಗಳಿಂದ ಕೂಡಿತ್ತು.


ಹಿಂದೆ ಅಬ್ರಹಾಮನ ಕಾಲದಲ್ಲಿ ಬಂದಿದ್ದ ಬರಗಾಲವು ಮತ್ತೊಮ್ಮೆ ಕಾನಾನ್ ನಾಡಿಗೆ ಬಂದಿತು. ಇಸಾಕನು ಫಿಲಿಷ್ಟಿಯರ ಅರಸ ಅಬೀಮೆಲೆಕನನ್ನು ಕಾಣಲು ಗೆರಾರಿಗೆ ಹೋದನು.


ಕಸ್ಲುಹ್ಯರೂ ಕೆಪ್ತೋರ್ಯರೂ ಹುಟ್ಟಿದರು. ಕಸ್ಲುಹ್ಯರಿಂದ ಬಂದವರು ಫಿಲಿಷ್ಟಿಯರು.


(ಬಾಷಾನ್ ನಾಡು ರೆಫಾಯರ ನಾಡೆನಿಸಿಕೊಳ್ಳುತ್ತದೆ. ಮನಸ್ಸೆಯ ವಂಶಸ್ಥನಾದ ಯಾಯೀರನು ಗೆಷೂರ್ಯರ ಮತ್ತು ಮಾಕಾತ್ಯರ ಮೇರೆಯವರೆಗೆ ಅರ್ಗೋಬ್ ಎಂಬ ಪ್ರದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡು ಬಾಷಾನಿಗೆ ಸೇರಿರುವ ಆ ಪ್ರಾಂತ್ಯಕ್ಕೆ ಯಾಯೀರನ ಗ್ರಾಮಗಳೆಂದು ತನ್ನ ಹೆಸರಿಟ್ಟನು. ಈ ಹೆಸರು ಇಂದಿನವರೆಗೂ ಉಂಟು).


ಕರಾವಳಿಯಲ್ಲಿ ವಾಸಿಸುವ ಕೆರೇತ್ಯ ಜನರೇ, ನಿಮಗೆ ಧಿಕ್ಕಾರ! ಫಿಲಿಷ್ಟಿಯರ ನಾಡಾದ ಕಾನಾನೇ, ನಿನಗೆ ಧಿಕ್ಕಾರ! ಸರ್ವೇಶ್ವರನ ನ್ಯಾಯತೀರ್ಪು ನಿನಗೆ ವಿರುದ್ಧವಾಗಿದೆ; ನಿನ್ನಲ್ಲಿ ಯಾರೂ ಉಳಿಯದಂತೆ ಅಳಿಸಿಬಿಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು