Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 13:21 - ಕನ್ನಡ ಸತ್ಯವೇದವು C.L. Bible (BSI)

21 ಒಟ್ಟಾರೆ ಮೀಶೋರೆಂಬ ಎತ್ತರವಾದ ಬಯಲಿನಲ್ಲಿದ್ದ ಎಲ್ಲ ನಗರಗಳು, ಹೆಷ್ಬೋನಿನಲ್ಲಿ ಆಳುತ್ತಿದ್ದ ಅಮೋರಿಯರ ಅರಸ ಸೀಹೋನನ ಸಮಸ್ತ ರಾಜ್ಯ. ಮೋಶೆ ಈ ನಾಡಿನಲ್ಲಿ ವಾಸವಾಗಿದ್ದ ಸೀಹೋನನನ್ನೂ ಎವೀ, ರೆಕೆಮ್, ಚೂರ್, ಹೂರ್, ರೆಬಾ ಎಂಬ ಮಿದ್ಯಾನ್ ಪ್ರಭುಗಳಾಗಿದ್ದ ಅವನ ಸರದಾರರನ್ನೂ ಸದೆಬಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಒಟ್ಟಾರೆ ಮೀಶೋರೆಂಬ ಎತ್ತರವಾದ ಬಯಲಿನಲ್ಲಿದ್ದ ಎಲ್ಲಾ ಪಟ್ಟಣಗಳೂ ಹೆಷ್ಬೋನಿನಲ್ಲಿ ಆಳುತ್ತಿದ್ದ ಅಮೋರಿಯರ ಅರಸನಾದ ಸೀಹೋನಿನ ಸಮಸ್ತ ರಾಜ್ಯಗಳು. ಮೋಶೆಯು ಆ ದೇಶದಲ್ಲಿ ವಾಸವಾಗಿದ್ದ ಸೀಹೋನನ್ನೂ ಎವೀ, ರೆಕೆಮ್, ಚೂರ್, ಹೂರ್, ರೆಬಾ ಎಂಬ ಮಿದ್ಯಾನ್ ಪ್ರಭುಗಳಾಗಿರುವ ಅವನ ಸರದಾರರನ್ನೂ ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಒಟ್ಟಾರೆ ಮೀಶೋರೆಂಬ ಎತ್ತರವಾದ ಬೈಲಿನಲ್ಲಿದ್ದ ಎಲ್ಲಾ ಪಟ್ಟಣಗಳೂ ಹೆಷ್ಬೋನಿನಲ್ಲಿ ಆಳುತ್ತಿದ್ದ ಅಮೋರಿಯರ ಅರಸನಾದ ಸೀಹೋನನ ಸಮಸ್ತರಾಜ್ಯವೂ ಇವುಗಳೇ. ಮೋಶೆಯು ಆ ದೇಶದಲ್ಲಿ ವಾಸವಾಗಿದ್ದ ಸೀಹೋನನನ್ನೂ ಎವೀ, ರೆಕೆಮ್, ಚೂರ್, ಹೂರ್, ರೆಬಾ ಎಂಬ ವಿುದ್ಯಾನ್ ಪ್ರಭುಗಳಾಗಿರುವ ಅವನ ಸರದಾರರನ್ನೂ ಹೊಡೆದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆದ್ದರಿಂದ ಅಮೋರಿಯರ ಅರಸನಾದ ಸೀಹೋನನ ಆಳ್ವಿಕೆಯಲ್ಲಿದ್ದ ಎಲ್ಲ ಊರುಗಳನ್ನು ಆ ಪ್ರದೇಶವು ಒಳಗೊಂಡಿತ್ತು. ಆ ಅರಸನು ಹೆಷ್ಬೋನ್ ಪಟ್ಟಣದಲ್ಲಿ ಆಳಿದನು. ಆದರೆ ಮೋಶೆಯು ಅವನನ್ನು ಮತ್ತು ಮಿದ್ಯಾನ್ ಜನರ ನಾಯಕರನ್ನು ಸೋಲಿಸಿದ್ದನು. ಎವೀ, ರೆಕೆಮ್, ಚೂರ್, ಹೂರ್ ಮತ್ತು ರೆಬಾ, ಇವರೇ ಆ ನಾಯಕರಾಗಿದ್ದರು. (ಈ ನಾಯಕರೆಲ್ಲ ಸೀಹೋನನ ಜೊತೆ ಸೇರಿ ಯುದ್ಧಮಾಡಿದ್ದರು.) ಈ ನಾಯಕರೆಲ್ಲ ಅದೇ ದೇಶದಲ್ಲಿ ವಾಸವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಸಮನಾದ ಭೂಮಿಯ ಎಲ್ಲಾ ಪಟ್ಟಣಗಳೂ ಹೆಷ್ಬೋನಿನಲ್ಲಿ ಆಳಿದ ಸೀಹೋನೆಂಬ ಅಮೋರಿಯರ ಅರಸನ ರಾಜ್ಯವೆಲ್ಲವೂ ಅವರ ಮೇರೆಗೊಳಗಾದವು. ಮೋಶೆಯು ಅವನನ್ನೂ ದೇಶದಲ್ಲಿ ಅವನ ಅಧಿಪತಿಗಳಾದಂಥ ಮಿದ್ಯಾನಿನ ಪ್ರಧಾನರಾದ ಎವೀ, ರೆಕೆಮ್, ಚೂರ್, ಹೂರ್, ರೆಬಾ ಎಂಬವರನ್ನೂ ಸೆದೆಬಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 13:21
6 ತಿಳಿವುಗಳ ಹೋಲಿಕೆ  

ಹತರಾದವರಲ್ಲಿ ಎವೀ, ರೆಕೆಮ್, ಚೂರ್, ಹೂರ್ ಹಾಗು ರೆಬಾ ಎಂಬ ಮಿದ್ಯಾನರ ಐದು ಮಂದಿ ರಾಜರು ಇದ್ದರು. ಅದೂ ಅಲ್ಲದೆ ಬೆಯೋರನ ಮಗ ಬಿಳಾಮನನ್ನು ಕತ್ತಿಯಿಂದ ಕೊಂದುಹಾಕಿದರು.


ಹೀಗೆ ಮೀಶೋರೆಂಬ ಎತ್ತರವಾದ ಬೈಲುಸೀಮೆಯ ಎಲ್ಲಾ ಪಟ್ಟಣಗಳನ್ನೂ ಗಿಲ್ಯಾದ್ ಸೀಮೆಯನ್ನೂ ಓಗನ ರಾಜ್ಯವಾದ ಸಲ್ಕಾ, ಎದ್ರೈ ಎಂಬ ಪಟ್ಟಣಗಳಿಂದ ಕೂಡಿರುವ ಬಾಷಾನ್ ಸೀಮೆಯನ್ನೂ ಸ್ವಾಧೀನಮಾಡಿಕೊಂಡೆವು.


ಪಿಸ್ಗದ ಬುಡದಲ್ಲಿ ಇರುವ ಪ್ರದೇಶ, ಬೇತ್ ಯೆಷಿಮೋತ್ ನಗರ,


ಹತಳಾದ ಮಿದ್ಯಾನ್ ಮಹಿಳೆಯ ಹೆಸರು ಕೊಜ್ಜೀ. ಅವಳು ಮಿದ್ಯಾನ್ಯರಲ್ಲಿ ಗೋತ್ರನಾಯಕನಾದ ಚೂರ್ ಎಂಬವನ ಮಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು