Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 13:30 - ಕನ್ನಡ ಸತ್ಯವೇದವು C.L. Bible (BSI)

30 ಮನಸ್ಸೆ ಕುಲದ ಅರ್ಧಕುಲಗಳಿಗೆ ಮೋಶೆ ಕೊಟ್ಟನು, ಯಾಯಿರನ ಗ್ರಾಮಗಳೆನಿಸಿಕೊಳ್ಳುವ ಅರವತ್ತು ಊರುಗಳು ಇದರಲ್ಲೆ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಮೋಶೆಯು ಮನಸ್ಸೆ ಕುಲದ ಅರ್ಧ ಗೋತ್ರಗಳಿಗೆ ಕೊಟ್ಟನು. ಯಾಯೀರನ ಗ್ರಾಮಗಳೆನ್ನಿಸಿಕೊಳ್ಳುವ ಅರವತ್ತು ಊರುಗಳು ಇದರೊಂದಿಗೆ ಇರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಯಾಯೀರನ ಗ್ರಾಮಗಳೆನಿಸಿಕೊಳ್ಳುವ ಅರುವತ್ತು ಊರುಗಳು ಇದರಲ್ಲೇ ಇರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಈ ಪ್ರದೇಶವು ಮಹನಯಿಮಿನಿಂದ ಪ್ರಾರಂಭವಾಗುತ್ತದೆ. ಇಡೀ ಬಾಷಾನ್, ಅರಸನಾದ ಓಗನ ಆಳ್ವಿಕೆಗೆ ಒಳಪಟ್ಟ ಪ್ರದೇಶ, ಬಾಷಾನಿನಲ್ಲಿರುವ ಯಾಯೀರನ ಎಲ್ಲ ಊರುಗಳು (ಒಟ್ಟು ಅರವತ್ತು ಊರುಗಳು) ಇದರಲ್ಲಿ ಸೇರಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಮಹನಯಿಮಿನಿಂದ ಬಾಷಾನಿನ ಅರಸನಾದ ಓಗನ ಸಮಸ್ತ ರಾಜ್ಯವಾಗಿರುವ ಬಾಷಾನೆಲ್ಲವೂ, ಬಾಷಾನಿನಲ್ಲಿರುವ ಯಾಯೀರನ ಸಮಸ್ತ ಊರುಗಳಾದ ಅರವತ್ತು ಪಟ್ಟಣಗಳೂ ಅವರ ಮೇರೆಗೆ ಒಳಗಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 13:30
11 ತಿಳಿವುಗಳ ಹೋಲಿಕೆ  

ಹೆಷ್ಬೋನಿನಿಂದ ರಾಮತ್ ಮಿಚ್ಫೆ, ಬೆಟೋನೀಮ್ ಎಂಬ ಊರುಗಳವರೆಗೆ ಇರುವ ಪ್ರದೇಶ, ಮಹನಯಿಮಿನಿಂದ ದೇಬೀರ್ ಪ್ರಾಂತ್ಯದವರೆಗೆ ಇರುವ ನಾಡು,


ಇಸ್ರಯೇಲರು ಹಿಂದಿರುಗಿ ಬಾಷಾನಿನ ಮಾರ್ಗವಾಗಿ ಪ್ರಯಾಣ ಮಾಡಿದರು. ಬಾಷಾನಿನ ಅರಸ ಓಗನು ತನ್ನ ಜನರೆಲ್ಲರೊಡನೆ ಅವರಿಗೆ ವಿರುದ್ಧ ಯುದ್ಧಮಾಡಲು ಎದ್ರೈವೂರಿಗೆ ಹೊರಟುಬಂದನು.


ಮಹನಯಿಮಿನ (ಉತ್ತರದಲ್ಲಿದ್ದ) ಹಾಗೂ ಮೊದಲು ಬಾಷಾನಿನ ಅರಸ ಓಗನ ರಾಜ್ಯವಾಗಿದ್ದ ಬಾಷಾನ್ ನಾಡನ್ನು


ಗಿಲ್ಯಾದ್ ನಾಡು ಮನಸ್ಸೆಯ ಉಳಿದ ಗೋತ್ರಗಳಿಗೆ ಸಿಕ್ಕಿತು.


ಬಳಿಕ ಯಕೋಬನು ಎದೋಮ್ಯರ ನಾಡಿನ ‘ಸೇಯೀರ್’ ಎಂಬಲ್ಲಿ ವಾಸವಾಗಿದ್ದ ತನ್ನ ಅಣ್ಣ ಏಸಾವನ ಬಳಿಗೆ ಮುಂದಾಳುಗಳನ್ನು ಕಳಿಸಿದನು.


ಅಂದು ಅವನ ಎಲ್ಲ ಪಟ್ಟಣಗಳನ್ನು ಜಯಿಸಿದೆವು; ನಾವು ಜಯಿಸದ ಕೋಟೆ ಒಂದೂ ಇರಲಿಲ್ಲ; ಬಾಷಾನಿನಲ್ಲಿರುವ ಓಗನ ರಾಜ್ಯದಲ್ಲಿ ಅಂದರೆ, ಅರ್ಗೋಬ್ ಎಂಬ ಸಮಸ್ತ ಪ್ರದೇಶದಲ್ಲಿ ಅರವತ್ತು ಪಟ್ಟಣಗಳನ್ನು ತೆಗೆದುಕೊಂಡೆವು.


ಹೀಗೆ ಮೀಶೋರೆಂಬ ಎತ್ತರವಾದ ಬೈಲುಸೀಮೆಯ ಎಲ್ಲಾ ಪಟ್ಟಣಗಳನ್ನೂ ಗಿಲ್ಯಾದ್ ಸೀಮೆಯನ್ನೂ ಓಗನ ರಾಜ್ಯವಾದ ಸಲ್ಕಾ, ಎದ್ರೈ ಎಂಬ ಪಟ್ಟಣಗಳಿಂದ ಕೂಡಿರುವ ಬಾಷಾನ್ ಸೀಮೆಯನ್ನೂ ಸ್ವಾಧೀನಮಾಡಿಕೊಂಡೆವು.


ಗಾದ್ಯರ ಸೊತ್ತಿನಿಂದ ಕೊಲೆಮಾಡಿದವನಿಗೆ ಆಶ್ರಯ ನಗರವಾಗಿರುವ ಗಿಲ್ಯಾದಿನ ರಾಮೋತ್, ಮಹನಯಿಮ್,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು