Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 13:4 - ಕನ್ನಡ ಸತ್ಯವೇದವು C.L. Bible (BSI)

4 ಗೆಷೂರ್ಯರ ನಾಡು, ದಕ್ಷಿಣದಲ್ಲಿದ್ದ ಅವ್ವೀಯರ ನಾಡು; ಸಿದೋನ್ಯರಿಗೆ ಸೇರಿದ ಮೆಯರಾದಿಂದ ಅಮೋರಿಯರ ಮೇರೆಯಾದ ಅಫೇಕದವರೆಗಿರುವ ಕಾನಾನ್ಯರ ನಾಡು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ದಕ್ಷಿಣದಲ್ಲಿದ್ದ ಅವ್ವೀಯರ ದೇಶ ಚೀದೋನ್ಯರಿಗೆ ಸೇರಿದ ಮೆಯಾರಾ ಮೊದಲುಗೊಂಡು ಅಮೋರಿಯರ ಮೇರೆಯಾದ ಅಫೇಕದವರೆಗಿರುವ ಕಾನಾನ್ಯರ ದೇಶವು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಗೆಷೂರ್ಯರ ಸೀಮೆಯು, ದಕ್ಷಿಣದಲ್ಲಿದ್ದ ಅವ್ವೀಯರ ದೇಶವು ಇವುಗಳೂ ಚೀದೋನ್ಯರಿಗೆ ಸೇರಿದ ಮೆಯಾರಾ ಮೊದಲುಗೊಂಡು ಅಮೋರಿಯರ ಮೇರೆಯಾದ ಅಫೇಕದವರೆಗಿರುವ ಕಾನಾನ್ಯರ ದೇಶವು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಗೆಷೂರ್ಯ ಸೀಮೆಯು, ಕಾನಾನ್ ದೇಶದ ದಕ್ಷಿಣದಲ್ಲಿ ವಾಸವಾಗಿರುವ ಅವ್ವೀಯರನ್ನು ಸಹ ನೀನು ಸೋಲಿಸಬೇಕಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಸೀದೋನ್ಯರ ಆರಾ ಪ್ರದೇಶದಿಂದ ಅಫೇಕ್ ಮತ್ತು ಅಮೋರಿಯರ ಮೇರೆಯವರೆಗೆ ಕಾನಾನ್ಯರ ಎಲ್ಲಾ ದೇಶವು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 13:4
11 ತಿಳಿವುಗಳ ಹೋಲಿಕೆ  

ಉಮ್ಮಾ, ಅಫೇಕ್, ರೆಹೂಬ್ ಇವೇ ಮೊದಲಾದ ಇಪ್ಪತ್ತೆರಡು ನಗರಗಳೂ ಅವುಗಳ ಗ್ರಾಮಗಳೂ


ಇಸ್ರಯೇಲರು ಫಿಲಿಷ್ಟಿಯರಿಗೆ ವಿರುದ್ಧ ಯುದ್ಧಕ್ಕೆ ಹೊರಟು ಎಬೆನೆಜೆರಿನ ಸಮೀಪದಲ್ಲಿ ಪಾಳೆಯ ಮಾಡಿಕೊಂಡರು. ಫಿಲಿಷ್ಟಿಯರು ಬಂದು ಅಫೇಕಿನಲ್ಲಿ ಇಳಿದುಕೊಂಡರು.


ಈಜಿಪ್ಟಿನಿಂದ ನಿಮ್ಮನ್ನು ಹೊರತಂದವನು ನಾನೇ. ನಲವತ್ತು ವರ್ಷಗಳ ಕಾಲ ಅರಣ್ಯದ ಮಾರ್ಗವಾಗಿ ನಿಮ್ಮನ್ನು ನಡೆಸಿ ಕರೆತಂದು, ಅಮೋರ್ಯದವರ ನಾಡನ್ನು ನಿಮಗೆ ದೊರಕಿಸಿಕೊಟ್ಟವನು ನಾನೇ.


ಅಷ್ಟಾರೋನಿನ ಅರಸ - 1 ಅಫೇಕದ ಅರಸ - 1


ಪೂರ್ವ ಪಶ್ಚಿಮಗಳಲ್ಲಿರುವ ಕಾನಾನ್ಯರು, ಅಮೋರಿಯರು, ಹಿತ್ತಿಯರು, ಪೆರಿಜ್ಜೀಯರು, ಮಲೆನಾಡಿನ ಪ್ರದೇಶದಲ್ಲಿದ್ದ ಯೆಬೂಸಿಯರು, ಹೆರ್ನೋನಿನ ಬುಡದಲ್ಲಿ ಮಿಚ್ಪಾನಾಡಿನಲ್ಲಿದ್ದ ಹಿವ್ವಿಯರು ಇವರಿಗೂ ಹೇಳಿಕಳಿಸಿದನು.


ಹೀಗೆ ಯೆಹೋಶುವನು ಮಲೆನಾಡಿನ ಪ್ರದೇಶ, ದಕ್ಷಿಣಪ್ರಾಂತ್ಯ, ಇಳಿಜಾರಿನ ಪ್ರದೇಶ, ಬೆಟ್ಟಗುಡ್ಡಗಳ ಬುಡ ಪ್ರದೇಶ ಇವುಗಳನ್ನು ಸ್ವತಂತ್ರಿಸಿಕೊಂಡು ಇವುಗಳ ರಾಜಪ್ರಜೆಗಳನ್ನು ಸಂಹರಿಸಿಬಿಟ್ಟನು. ಒಬ್ಬನನ್ನೂ ಉಳಿಸಲಿಲ್ಲ. ಇಸ್ರಯೇಲ್ ದೇವರಾದ ಸರ್ವೇಶ್ವರನ ಆಜ್ಞೆಯಂತೆ ಜೀವವಿರುವುದೆಲ್ಲವನ್ನು ಶಾಪನಾಶಕ್ಕೆ ಗುರಿಮಾಡಿದನು.


ಒಂದು ವರ್ಷ ದಾಟಿದನಂತರ ಬೆನ್ಹದದನು ಸಿರಿಯಾದವರನ್ನು ಕೂಡಿಸಿಕೊಂಡು ಇಸ್ರಯೇಲರೊಡನೆ ಯುದ್ಧಮಾಡುವುದಕ್ಕಾಗಿ ಅಫೇಕಕ್ಕೆ ಬಂದನು.


ಉಳಿದ ಇಪ್ಪತ್ತೇಳು ಸಾವಿರಮಂದಿ ಸೈನಿಕರು ಅಫೇಕ ಪಟ್ಟಣವನ್ನು ಹೊಕ್ಕರು. ಆದರೆ ಆ ಪಟ್ಟಣದ ಗೋಡೆ ಅವರ ಮೇಲೆ ಬಿದ್ದುದರಿಂದ ಅವರೂ ಸತ್ತರು. ಬೆನ್ಹದದನೂ ಆ ಪಟ್ಟಣವನ್ನು ಹೊಕ್ಕು, ಒಂದು ಮನೆಯ ಒಳಕೋಣೆಯಲ್ಲಿ ಅಡಗಿಕೊಂಡನು.


ಸರ್ವೇಶ್ವರ ದೇವರು ಜೆರುಸಲೇಮೆಂಬಾಕೆಗೆ ಈ ಮಾತನ್ನು ಹೇಳಿ ಕಳುಹಿಸಿದ್ದಾರೆ: “ನೀನು ಹುಟ್ಟಿದ್ದು ಕಾನಾನ್ ದೇಶದಲ್ಲಿ, ಅದೇ ನಿನ್ನ ಜನ್ಮಭೂಮಿ. ನಿನ್ನ ತಂದೆ ಅಮೋರಿಯನು, ನಿನ್ನ ತಾಯಿ ಹಿತ್ತಿಯಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು