Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 13:5 - ಕನ್ನಡ ಸತ್ಯವೇದವು C.L. Bible (BSI)

5 ಗೆಬಾಲ್ಯರ ಸೀಮೆ, ಹೆರ್ಮೋನ್ ಬೆಟ್ಟದ ತಪ್ಪಲಿನಲ್ಲಿರುವ ಬಾಲ್ಗಾದಿನಿಂದ ಹಾಮಾತಿನ ಹಾದಿಯವರೆಗಿರುವ ಲೆಬನೋನಿನ ಪೂರ್ವಪ್ರದೇಶ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಗೆಬಾಲ್ಯರ ಸೀಮೆ, ಹೆರ್ಮೋನ್ ಬೆಟ್ಟದ ತಪ್ಪಲಿನಲ್ಲಿರುವ ಬಾಲ್ಗಾದಿನಿಂದ ಹಾಮಾತಿನ ದಾರಿಯ ವರೆಗಿರುವ ಲೆಬನೋನಿನ ಪೂರ್ವ ಪ್ರದೇಶ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಗೆಬಾಲ್ಯರ ಸೀಮೆ, ಹೆರ್ಮೋನ್ ಬೆಟ್ಟದ ಬುಡದಲ್ಲಿರುವ ಬಾಲ್ಗಾದಿನಿಂದ ಹಾಮಾತಿನ ದಾರಿಯವರೆಗಿರುವ ಲೆಬನೋನಿನ ಪೂರ್ವಪ್ರದೇಶ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನೀನು ಇಲ್ಲಿಯವರೆಗೂ ಗೆಬಾಲ್ಯರನ್ನು ಸೋಲಿಸಿಲ್ಲ. ಹೆರ್ಮೋನ್ ಬೆಟ್ಟದ ಬುಡದಲ್ಲಿರುವ ಬಾಲ್ಗಾದಿನ ಪೂರ್ವದಿಂದಿಡಿದು ಲೆಬೊಹಾಮಾತಿನವರೆಗೆ ಇರುವ ಪ್ರದೇಶವನ್ನು ನೀನು ಗೆಲ್ಲಬೇಕು. ಬಾಲ್ಗಾದ್ ಲೆಬನೋನ್ ಪ್ರದೇಶದಲ್ಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅದರೊಂದಿಗೆ ಗೆಬಾಲ್ಯರ ಪ್ರಾಂತ್ಯ, ಹೆರ್ಮೋನ್ ಬೆಟ್ಟದ ಕೆಳಗೆ ಇರುವ ಬಾಲ್ಗಾದಿನಿಂದ ಹಮಾತಿನ ದಾರಿಯವರೆಗೂ ಇರುವ ಲೆಬನೋನಿನ ಪೂರ್ವ ಪ್ರದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 13:5
14 ತಿಳಿವುಗಳ ಹೋಲಿಕೆ  

ಸೊಲೊಮೋನನ ಮತ್ತು ಹೀರಾಮನ ಶಿಲ್ಪಿಗಳೂ ಗೆಬಾಲ್ಯರೂ ಅವುಗಳನ್ನು ಕೆತ್ತುತ್ತಿದ್ದರು. ದೇವಾಲಯ ಕಟ್ಟುವುದಕ್ಕೆ ಬೇಕಾದ ಕಲ್ಲು, ಮರಗಳನ್ನು ಸಿದ್ಧಪಡಿಸಿದವರು ಇವರೇ.


ಯೆಹೋಶುವನು ಇಸ್ರಯೇಲರ ಸಮೇತ, ಜೋರ್ಡನ್ ನದಿಯ ಪಶ್ಚಿಮದಲ್ಲಿ ಲೆಬನೋನ್ ಕಣಿವೆಯಲ್ಲಿದ್ದ ಬಾಲ್ಗಾದಿನಿಂದ ಸೇಯೀರಿನ ದಾರಿಯಲ್ಲಿದ್ದ ಹಾಲಾಕ್ ಪರ್ವತದವರೆಗೂ ವಿಸ್ತರಿಸಿಕೊಂಡಿದ್ದ ಮಲೆನಾಡಿನ ಪ್ರದೇಶ,


ನಿನ್ನ ಕಂಡಿಗಳ ಭದ್ರಪಡಿಸಿಹರು, ನಿನ್ನಲ್ಲಿ ಸೇರಿದ್ದ ಗೆಬಲಿನ ಜಾಣರು, ಹಿರಿಯರು. ನಿನಗೆ ಸರಕುಗಳ ತಂದೊಪ್ಪಿಸುತ್ತಿದ್ದರು ಸಕಲ ನಾವೆಗಳು, ಸಕಲ ನಾವಿಕರು.


ಅವನು ಸೇಯೀರಿನ ಹಾದಿಯಲ್ಲಿದ್ದ ಹಾಲಾಕ್ ಬೆಟ್ಟದಿಂದ ಹೆರ್ಮೋನಿನ ಬುಡದಲ್ಲಿ ಲೆಬನೋನ್ ಕಣಿವೆಯಲ್ಲಿರುವ ಬಾಲ್ಗಾದ್ ನಗರದವರೆಗೂ ಇರುವ ಪ್ರದೇಶವನ್ನೆಲ್ಲಾ ತೆಗೆದುಕೊಂಡು ಅದರ ಅರಸರನ್ನೆಲ್ಲಾ ಹಿಡಿದು ಸಂಹರಿಸಿಬಿಟ್ಟನು.


ಆ ಪರ್ವತದಿಂದ ಹಮಾತಿನ ದಾರಿಗೂ ಗುರುತು ಹಾಕಿಕೊಳ್ಳಬೇಕು. ಅದರ ಮೂಲೆ ಚೆದಾದಿನ ಹತ್ತಿರ ಇರುವುದು.


ಕಲ್ನೆ ಪಟ್ಟಣಕ್ಕೆ ಹೋಗಿ ನೋಡಿ. ಅಲ್ಲಿಂದ ಪ್ರಖ್ಯಾತ ಪಟ್ಟಣವಾದ ಹಮಾತಿಗೆ ನಡೆಯಿರಿ. ಹಮಾತಿನಿಂದ ಫಿಲಿಷ್ಟಿಯರ ಊರಾದ ಗತ್ ನಗರಕ್ಕೆ ಇಳಿದುಹೋಗಿರಿ. ಅವು ನಿಮ್ಮ ರಾಜ್ಯಗಳಿಗಿಂತ ದೊಡ್ಡವೋ? ಅವುಗಳ ಪ್ರಾಂತ್ಯ, ನಿಮ್ಮ ಪ್ರಾಂತ್ಯಕ್ಕಿಂತ ಹಿರಿದೋ?


ಕರ್ಕೆಮೀಷಿನ ಗತಿ ಕಲ್ನೋವಿಗೂ ಬಂತಲ್ಲವೇ? ಅರ್ಪದಿಗೆ ಬಂದ ಪಾಡು ಹಮಾತಿಗೂ ಬಂದಿತಷ್ಟೆ. ದಮಸ್ಕಸ್ಸಿನ ಅವಸ್ಥೆಯು ಸಮಾರ್ಯಕ್ಕೂ ಸಂಭವಿಸಿತು.


ಸರ್ವೇಶ್ವರಾ, ನಾನು ಕೂಡ ಈ ನದಿಯನ್ನು ದಾಟಿ, ಆಚೆಯಿರುವ ಒಳ್ಳೆಯ ನಾಡನ್ನು ಅಂದರೆ, ಆ ಅಂದವಾದ ಮಲೆನಾಡನ್ನೂ ಲೆಬನೋನ್ ಪರ್ವತವನ್ನೂ ನೋಡುವುದಕ್ಕೆ ಅಪ್ಪಣೆಯಾಗಲಿ’ ಎಂದು ಭಿನ್ನಯಿಸಿದೆ.


ಈಗ ಹಿಂದಿರುಗಿ ಅಮೋರಿಯರು ಇರುವ ಮಲೆನಾಡಿಗೂ ಅದರ ಸುತ್ತಮುತ್ತಲಿನ ಪ್ರದೇಶಕ್ಕೂ ಪ್ರಯಾಣಮಾಡಿರಿ. ಅಲ್ಲಿನ ಕಣಿವೆ, ತಪ್ಪಲು, ಇಳಕಲು ಪ್ರದೇಶಗಳಿಗೂ ದಕ್ಷಿಣಸೀಮೆ, ಸಮುದ್ರತೀರ ಎಂಬ ನಾಡುಗಳಿಗೂ ಕಾನಾನ್ಯರ ನಾಡು, ಲೆಬನೋನ್ ಪರ್ವತ ಮತ್ತು ಯೂಫ್ರೆಟಿಸ್ ಮಹಾನದಿಯವರೆಗೆ ವಿಸ್ತರಿಸಿಕೊಂಡಿರುವ ಪ್ರದೇಶಗಳಿಗೂ ತೆರಳಿರಿ.


ಅವರು ಬೆಟ್ಟವನ್ನು ಹತ್ತಿ ಚಿನ್ ಮರುಭೂಮಿಯಿಂದ ಹಮಾತಿನ ದಾರಿಯಲ್ಲಿರುವ ರೆಹೋಬಿನವರೆಗೆ ಆ ನಾಡನ್ನು ಸಂಚರಿಸಿ ನೋಡಿದರು.


ಪೂರ್ವ ಪಶ್ಚಿಮಗಳಲ್ಲಿರುವ ಕಾನಾನ್ಯರು, ಅಮೋರಿಯರು, ಹಿತ್ತಿಯರು, ಪೆರಿಜ್ಜೀಯರು, ಮಲೆನಾಡಿನ ಪ್ರದೇಶದಲ್ಲಿದ್ದ ಯೆಬೂಸಿಯರು, ಹೆರ್ನೋನಿನ ಬುಡದಲ್ಲಿ ಮಿಚ್ಪಾನಾಡಿನಲ್ಲಿದ್ದ ಹಿವ್ವಿಯರು ಇವರಿಗೂ ಹೇಳಿಕಳಿಸಿದನು.


ಹೀಗೆ ಸೊಲೊಮೋನನು ಹಬ್ಬವನ್ನು ಆಚರಿಸಿದನು. ಅಂತೆಯೇ ಹಮಾತಿನ ದಾರಿ ಇಂದ ಈಜಿಪ್ಟಿನ ಹಳ್ಳದವರೆಗಿರುವ ಪ್ರಾಂತ್ಯಗಳಿಂದ ಮಹಾಸಮೂಹವಾಗಿ ಕೂಡಿಬಂದಿದ್ದ ಎಲ್ಲ ಇಸ್ರಯೇಲರು ಆಚರಿಸಿದರು; ಎರಡು ವಾರ, ಅಂದರೆ ಹದಿನಾಲ್ಕು ದಿವಸಗಳವರೆಗೆ, ನಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಹಬ್ಬಮಾಡಿದರು.


ಅನಂತರ ಬಾಬಿಲೋನಿಯರು ಅವನನ್ನು ತಮ್ಮ ಅರಸ ನೆಬೂಕದ್ನೆಚ್ಚರನ ಬಳಿಗೆ ಎಳೆದುತಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು