Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 13:6 - ಕನ್ನಡ ಸತ್ಯವೇದವು C.L. Bible (BSI)

6 ಒಟ್ಟಾರೆ ಲೆಬನೋನಿನಿಂದ ಮಿಸ್ರೆಫೋತ್ಮಯಿಮಿನವರೆಗಿರುವ ಸಿದೋನ್ಯರ ಎಲ್ಲ ಪರ್ವತ ಪ್ರಾಂತ್ಯಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಒಟ್ಟಾರೆ ಲೆಬನೋನಿನಿಂದ ಮಿಸ್ರೆಫೋತ್ಮಯಿಮಿನವರೆಗೂ, ಚೀದೋನ್ಯರ ಎಲ್ಲಾ ಪರ್ವತ ಪ್ರಾಂತ್ಯಗಳು. ನಾನೇ ಈ ಎಲ್ಲಾ ಜನಾಂಗಗಳನ್ನು ಇಸ್ರಾಯೇಲ್ಯರ ಸಮ್ಮುಖದಿಂದ ಹೊರಡಿಸಿಬಿಡುವೆನು. ನೀನಾದರೂ ನಾನು ಮೊದಲೇ ಆಜ್ಞಾಪಿಸಿದಂತೆ ಇಸ್ರಾಯೇಲ್ಯರಿಗೆ ದೇಶವನ್ನು ಹಂಚಿಕೊಡುವಾಗ ಇವುಗಳನ್ನು ಸೇರಿಸಿ ದೇಶವನ್ನೆಲ್ಲಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಒಟ್ಟಾರೆ ಲೆಬನೋನಿನಿಂದ ವಿುಸ್ರೆಫೋತ್ಮಯಿವಿುನವರೆಗಿರುವ ಚೀದೋನ್ಯರ ಎಲ್ಲಾ ಪರ್ವತ ಪ್ರಾಂತ್ಯಗಳೂ ಇವೇ. ನಾನೇ ಈ ಎಲ್ಲಾ ಜನಾಂಗಗಳನ್ನು ಇಸ್ರಾಯೇಲ್ಯರ ಎದುರಿನಿಂದ ಹೊರಡಿಸಿಬಿಡುವೆನು. ನೀನಾದರೋ ನಾನು ಮೊದಲೇ ಆಜ್ಞಾಪಿಸಿದಂತೆ ಇಸ್ರಾಯೇಲ್ಯರಿಗೆ ದೇಶವನ್ನು ಹಂಚಿಕೊಡುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ಲೆಬನೋನಿನಿಂದ ಮಿಸ್ರೆಪೋತ್ಮಯಿಮಿನವರೆಗಿರುವ ಪರ್ವತ ಪ್ರದೇಶದಲ್ಲಿ ಚೀದೋನ್ಯರು ವಾಸವಾಗಿದ್ದಾರೆ. ಆದರೆ ಇಸ್ರೇಲರಿಗಾಗಿ ನಾನು ಅವರನ್ನೆಲ್ಲಾ ಹೊರ ತಳ್ಳುತ್ತೇನೆ. ಇಸ್ರೇಲರಿಗೆ ದೇಶವನ್ನು ಹಂಚುವಾಗ ಈ ಪ್ರದೇಶವನ್ನು ಸೇರಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ಒಟ್ಟಾರೆ ಲೆಬನೋನಿನಿಂದ ಮಿಸ್ರೆಫೋತ್ಮಯಿಮಿನವರೆಗೂ ಬೆಟ್ಟದ ದೇಶದ ಎಲ್ಲಾ ನಿವಾಸಿಗಳನ್ನೂ ಎಲ್ಲಾ ಸೀದೋನ್ಯರನ್ನೂ ನಾನು ಇಸ್ರಾಯೇಲರ ಎದುರಿನಿಂದ ಹೊರಡಿಸಿಬಿಡುವೆನು. ಆದರೆ ನಾನು ನಿನಗೆ ಹೇಳಿದ ಹಾಗೆಯೇ ನೀನು ಚೀಟುಗಳನ್ನು ಹಾಕಿ, ಇಸ್ರಾಯೇಲರಿಗೆ ಸೊತ್ತಾಗಿ ಪಾಲು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 13:6
13 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಅವರನ್ನು ಇಸ್ರಯೇಲರ ಕೈವಶ ಮಾಡಿದರು. ಇವರು ಅವರನ್ನು ದೊಡ್ಡ ಚೀದೋನ್ ಹಾಗು ಮಿಸ್ರೆಫೋತ್ಮಯಿಮ್ ಎಂಬ ಊರುಗಳವರೆಗೂ ಮತ್ತು ಪೂರ್ವ ದಿಕ್ಕಿನಲ್ಲಿರುವ ಮಿಚ್ಫೆಯ ಬಯಲಿನವರೆಗೂ ಹಿಂದಟ್ಟಿ, ಒಬ್ಬನೂ ಉಳಿಯದಂತೆ ಸದೆಬಡಿದರು.


ಮಿಶ್ರವಾದರೆ ನಿಮ್ಮ ದೇವರಾದ ಸರ್ವೇಶ್ವರ ಅವರನ್ನು ನಿಮ್ಮ ಮಧ್ಯೆಯಿಂದ ಹೊರಡಿಸುವುದೇ ಇಲ್ಲವೆಂಬುದು ನಿಮಗೆ ತಿಳಿದಿರಲಿ. ಆ ಜನರೇ ನಿಮಗೆ ಉರುಳೂ ಬೋನೂ ಆಗುವರು; ಪಕ್ಕೆಗೆ ಬಡಿಯುವ ಕೊರಡಾಗಿಯೂ ಇರಿಯುವ ಶೂಲವಾಗಿಯೂ ಕಣ್ಣಿಗೆ ಚುಚ್ಚುವ ಮುಳ್ಳಾಗಿಯೂ ಮಾರ್ಪಡುವರು. ಕಡೆಗೆ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಟ್ಟ ಈ ಚೆಲುವ ನಾಡಲ್ಲಿ ನೀವೇ ಇಲ್ಲದಂತಾಗುವಿರಿ.


ನೋಡಿ, ಜೋರ್ಡನಿನಿಂದ ಪಶ್ಚಿಮ ಮಹಾ ಸಮುದ್ರದವರೆಗೂ ಇರುವ ಜನಾಂಗಗಳಲ್ಲಿ ಸತ್ತವರ ಹಾಗೂ ಉಳಿದವರ ನಾಡನ್ನು ನಿಮಗೆ ಸೊತ್ತಾಗಿ ಕೊಟ್ಟಿದ್ದೇನೆ,


ಚೀಟು ಹಾಕಿ ಅದನ್ನು ನಿಮ್ಮ ನಿಮ್ಮ ಕುಟುಂಬಗಳಿಗೆ ಹಂಚಿಕೊಳ್ಳಿ. ಹೆಚ್ಚು ಮಂದಿಯುಳ್ಳ ಕುಟುಂಬಕ್ಕೆ ಹೆಚ್ಚಾಗಿಯೂ ಕಡಿಮೆಯಾದ ಕುಟುಂಬಕ್ಕೆ ಕಡಿಮೆಯಾಗಿಯೂ ಆಸ್ತಿ ದೊರಕಬೇಕು. ಒಂದೊಂದು ಕುಟುಂಬದ ಚೀಟು ಯಾವ ಯಾವ ಸ್ಥಳವನ್ನು ಸೂಚಿಸುವುದೋ ಅಲ್ಲೇ ಆ ಕುಟುಂಬದ ಸೊತ್ತಿರಬೇಕು. ಒಂದೊಂದು ಕುಲಕ್ಕೆ ಸೇರಿದ ಕುಟುಂಬಗಳು ಒಂದೇ ಪ್ರದೇಶದಲ್ಲಿರಬೇಕು.


“ನಾನೇ ಈ ಎಲ್ಲಾ ಜನಾಂಗಗಳನ್ನು ಇಸ್ರಯೇಲರ ಸಮ್ಮುಖದಿಂದ ಹೊರಡಿಸಿಬಿಡುವೆನು. ನೀನಾದರೋ ನಾನು ಮೊದಲೇ ಆಜ್ಞಾಪಿಸಿದಂತೆ ಇಸ್ರಯೇಲರಿಗೆ ನಾಡನ್ನು ಹಂಚಿಕೊಡುವಾಗ ಇವುಗಳನ್ನು ಕೂಡ ಸೇರಿಸಿ ನಾಡನ್ನೆಲ್ಲಾ ಒಂಬತ್ತು ಕುಲಗಳಿಗೂ ಮನಸ್ಸೆ ಕುಲದ ಅರ್ಧಜನರಿಗೂ ಪಾಲುಮಾಡಿಕೊಡು,” ಎಂದರು.


ಈಜಿಪ್ಟಿನಿಂದ ದ್ರಾಕ್ಷಾಲತೆಯೊಂದನು ನೀ ತಂದೆ I ಅನ್ಯಜನತೆಯನು ಹೊರದೂಡಿ ಅದನು ನಾಟಿಮಾಡಿದೆ II


“ಸ್ಥಿರಚಿತ್ತನಾಗಿರು, ಧೈರ್ಯದಿಂದಿರು. ಏಕೆಂದರೆ ನಾನು ಈ ಜನರ ಪೂರ್ವಜರಿಗೆ ಪ್ರಮಾಣ ಮಾಡಿಕೊಟ್ಟ ನಾಡನ್ನು ಇವರಿಗೆ ಸ್ವಾಧೀನಪಡಿಸಬೇಕಾದವನು ನೀನೇ.


ಯೆಹೋಶುವನು ಆ ಬೇರೆ ಅರಸರನ್ನು, ಅವರ ಎಲ್ಲ ನಗರಗಳನ್ನು ಹಿಡಿದು ಸರ್ವೇಶ್ವರನ ದಾಸ ಮೋಶೆಯ ಆಜ್ಞೆಯಂತೆ ಅವರನ್ನು ಕತ್ತಿಯಿಂದ ನಾಶಮಾಡಿದನು.


ನಿಮ್ಮ ದೇವರಾದ ಸರ್ವೇಶ್ವರ ತಾವೇ ಉಳಿದವರನ್ನು ನಿಮ್ಮ ಕಣ್ಮುಂದೆ ಹೊರಡಿಸಿಬಿಡುವರು. ಅವರ ವಾಗ್ದಾನದಂತೆ ಆ ಜನರ ನಾಡನ್ನು ನೀವು ವಶಪಡಿಸಿಕೊಳ್ಳುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು