Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 14:10 - ಕನ್ನಡ ಸತ್ಯವೇದವು C.L. Bible (BSI)

10 ಸರ್ವೇಶ್ವರ ಈ ಮಾತುಗಳನ್ನು ಮೋಶೆಗೆ ಹೇಳಿದಂದಿನಿಂದ ಇಸ್ರಯೇಲರು ಅರಣ್ಯದಲ್ಲಿ ಅಲೆಯುತ್ತಿದ್ದ ವರ್ಷಗಳೂ ಸೇರಿ ನಾಲ್ವತ್ತೈದು ವರ್ಷಗಳು ದಾಟಿದವು. ಸರ್ವೇಶ್ವರ ತಾವು ನುಡಿದಂತೆಯೇ ಈ ಕಾಲವೆಲ್ಲ ನನ್ನನ್ನು ಜೀವದಿಂದುಳಿಸಿದ್ದಾರೆ. ಈಗ ನನಗೆ ಎಂಬತ್ತೈದು ವರ್ಷ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೆಹೋವನು ಈ ಮಾತುಗಳನ್ನು ಮೋಶೆಗೆ ಹೇಳಿದಂದಿನಿಂದ ಇಸ್ರಾಯೇಲ್ಯರು ಅರಣ್ಯದಲ್ಲಿ ಅಲೆಯುತ್ತಿದ್ದ ವರ್ಷಗಳು ಸೇರಿ ನಲ್ವತ್ತೈದು ವರ್ಷಗಳು ದಾಟಿದವು. ಯೆಹೋವನು ತಾನು ನುಡಿದಂತೆಯೇ ಈ ಕಾಲವೆಲ್ಲಾ ನನ್ನನ್ನು ಜೀವದಿಂದುಳಿಸಿದ್ದಾನೆ. ಈಗ ನಾನು ಎಂಭತ್ತೈದು ವರ್ಷದವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯೆಹೋವನು ಈ ಮಾತುಗಳನ್ನು ಮೋಶೆಗೆ ಹೇಳಿದಂದಿನಿಂದ ಇಸ್ರಾಯೇಲ್ಯರು ಅರಣ್ಯದಲ್ಲಿ ಅಲೆಯುತ್ತಿದ್ದ ವರುಷಗಳೂ ಸೇರಿ ನಾಲ್ವತ್ತೈದು ವರುಷಗಳು ದಾಟಿದವು. ಯೆಹೋವನು ತಾನು ನುಡಿದಂತೆಯೇ ಈ ಕಾಲವೆಲ್ಲಾ ನನ್ನನ್ನು ಜೀವದಿಂದುಳಿಸಿದ್ದಾನೆ. ಈಗ ನಾನು ಎಂಭತ್ತೈದು ವರುಷದವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ಯೆಹೋವನು ತಾನು ಹೇಳಿದಂತೆ ನನ್ನನ್ನು ನಲವತ್ತೈದು ವರ್ಷ ಜೀವಂತವಾಗಿ ಉಳಿಸಿದ್ದಾನೆ. ಆ ಸಮಯದಲ್ಲಿ ನಾವೆಲ್ಲರು ಅರಣ್ಯದಲ್ಲಿ ಸುತ್ತಾಡಿದೆವು. ಈಗ ನಾನು ಎಂಭತ್ತೈದು ವರ್ಷದವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ಈಗ ಯೆಹೋವ ದೇವರು ಮೋಶೆಗೆ ಈ ವಾಕ್ಯವನ್ನು ಹೇಳಿದಂದಿನಿಂದ ಇಸ್ರಾಯೇಲರು ಮರುಭೂಮಿಯಲ್ಲಿ ಸಂಚರಿಸಿದ ನಾಲ್ವತ್ತೈದು ವರ್ಷ ಯೆಹೋವ ದೇವರು ಹೇಳಿದ ಹಾಗೆಯೇ ನನ್ನನ್ನು ಜೀವದಿಂದ ಇಟ್ಟಿದ್ದಾರೆ. ಈಗ ನಾನು ಇಂದು ಎಂಬತ್ತೈದು ವರ್ಷ ಪ್ರಾಯದವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 14:10
9 ತಿಳಿವುಗಳ ಹೋಲಿಕೆ  

ಯೆಫುನ್ನೆಯ ಮಗ ಕಾಲೇಬ್ ಮತ್ತು ನೂನನ ಮಗ ಯೆಹೋಶುವ ಇವರಿಬ್ಬರೇ ಹೊರತು ನಿಮ್ಮಲ್ಲಿ ಯಾರೂ ನಿಮ್ಮ ನಿವಾಸಕ್ಕಾಗಿ ನಾನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ನಾಡನ್ನು ಸೇರುವುದಿಲ್ಲ.


ಯೆಹೋಶುವ ಈ ಎಲ್ಲಾ ಅರಸರೊಡನೆ ಬಹುದಿನಗಳ ತನಕ ಯುದ್ಧಮಾಡಿದನು.


ಯೆಹೋಶುವ ಹಣ್ಣುಹಣ್ಣು ಮುದುಕನಾದ. ಆಗ ಸರ್ವೇಶ್ವರ ಆತನಿಗೆ, “ನೀನೀಗ ಮುದುಕ. ಸ್ವಾಧೀನ ಮಾಡಿಕೊಳ್ಳಬೇಕಾದ ನಾಡುಗಳು ಇನ್ನೂ ಬಹಳ ಇವೆ.


ಮೋಶೆ ಅಂದು ನನಗೆ, ‘ನೀನು ಪೂರ್ಣ ಮನಸ್ಸಿನಿಂದ ನನ್ನ ದೇವರಾದ ಸರ್ವೇಶ್ವರನನ್ನೇ ಶ್ರದ್ಧೆಯಿಂದ ಅನುಸರಿಸಿದ ಕಾರಣ ನೀನು ಸಂಚರಿಸಿದ ಪ್ರದೇಶ ನಿನಗೂ ನಿನ್ನ ಸಂತಾನದವರಿಗೂ ಶಾಶ್ವತ ಸೊತ್ತಾಗುವುದು,’ ಎಂದು ಪ್ರಮಾಣಮಾಡಿ ಹೇಳಿದನು.


ಮೋಶೆ ನನ್ನನ್ನು ಕಳಿಸಿದಾಗ ನನಗೆಷ್ಟು ಬಲವಿತ್ತೋ ಈಗಲೂ ಅಷ್ಟೇ ಬಲವಿದೆ. ಯುದ್ಧಮಾಡುವುದಕ್ಕೂ ವಿಶೇಷ ಕಾರ್ಯಗಳನ್ನು ನಿರ್ವಹಿಸುವುದಕ್ಕೂ ನನಗೆ ಮುಂಚಿನಂತೆಯೇ ಶಕ್ತಿಯಿದೆ.


ಬೀಳಬಹುದು ಸಾವಿರ ಹೆಣಗಳು ಪಕ್ಕದಲೆ I ಹತ್ತುಸಾವಿರ ಹೆಣಗಳು ನಿನ್ನ ಬಲಗಡೆಯಲೆ I ಅಂಥ ಕೇಡೊಂದೂ ಬಾರದು ನಿನ್ನ ಪಾಲಿಗೆ II


ಅಲೆದರು ಮರುಳುಗಾಡಿನಲಿ ದಾರಿಕಾಣದೆ I ಬಳಲಿದರು ಜನರಿರುವ ಊರು ಸಿಗದೆ II


ಅವರಲ್ಲಿ ನೂನನ ಮಗ ಯೆಹೋಶುವನು ಮತ್ತು ಯೆಫುನ್ನೆಯ ಮಗ ಕಾಲೇಬನು ಉಳಿದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು