Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 14:12 - ಕನ್ನಡ ಸತ್ಯವೇದವು C.L. Bible (BSI)

12 ಹೀಗಿರಲು ಸರ್ವೇಶ್ವರ ಆ ದಿನದಂದು ಸೂಚಿಸಿದಂತೆ ಈ ಮಲೆನಾಡನ್ನು ನನಗೆ ಕೊಡು. ‘ಇದರಲ್ಲಿ ಎತ್ತರದ ವ್ಯಕ್ತಿಗಳಿದ್ದಾರೆ, ದೊಡ್ಡ ದೊಡ್ಡ ನಗರಗಳಿವೆ, ಕೋಟೆಕೊತ್ತಲಗಳಿವೆ’ ಎಂದು ಆ ಕಾಲದಲ್ಲಿ ನೀನು ಕೇಳಿದ್ದುಂಟು. ಅವರೆಲ್ಲರನ್ನು ಓಡಿಸಿಬಿಡಲು ಸರ್ವೇಶ್ವರ ತಮ್ಮ ಮಾತಿಗನುಸಾರ ನನಗೆ ಸಹಾಯಮಾಡುವರೆಂಬ ನಂಬಿಕೆ ನನಗಿದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಹೀಗಿರಲು ಯೆಹೋವನು ಆ ದಿನದಂದು ಸೂಚಿಸಿದಂತೆ ಈ ಪರ್ವತ ಪ್ರದೇಶವನ್ನು ನನಗೆ ಕೊಡು ಇದರಲ್ಲಿ ಉನ್ನತ ಪುರುಷರು (ಅನಾಕ್ಯರು) ಇರುತ್ತಾರೆ ಎಂದು ಈ ಪಟ್ಟಣಗಳು ದೊಡ್ಡದೂ, ಕೋಟೆಕೊತ್ತಲುಳ್ಳವುಗಳೂ ಆಗಿವೆ ಎಂದೂ ಆ ಕಾಲದಲ್ಲಿ ನೀನೇ ಕೇಳಿದ್ದೀಯಲ್ಲಾ. ಅವರೆಲ್ಲರನ್ನು ಓಡಿಸಿಬಿಡುವುದಕ್ಕೋಸ್ಕರ ಯೆಹೋವನು ತನ್ನ ಮಾತಿಗನುಸಾರವಾಗಿ ನನಗೆ ಸಹಾಯ ಮಾಡುವನೆಂದು ನಂಬಿಕೊಂಡಿದ್ದೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಹೀಗಿರಲಾಗಿ ಯೆಹೋವನು ಆ ದಿನದಲ್ಲಿ ಸೂಚಿಸಿದಂಥ ಈ ಪರ್ವತಪ್ರದೇಶವನ್ನು ನನಗೆ ಕೊಡು. ಇದರಲ್ಲಿ ಉನ್ನತ ಪುರುಷರಿರುತ್ತಾರೆಂದೂ ಇದರ ಪಟ್ಟಣಗಳು ದೊಡ್ಡವೂ ಕೋಟೆಕೊತ್ತಲುಳ್ಳವುಗಳೂ ಆಗಿವೆ ಎಂದೂ ಆ ಕಾಲದಲ್ಲಿ ನೀನು ಕೇಳಿದಿಯಲ್ಲಾ. ಅವರೆಲ್ಲರನ್ನೂ ಓಡಿಸಿ ಬಿಡುವದಕ್ಕೋಸ್ಕರ ಯೆಹೋವನು ತನ್ನ ಮಾತಿಗನುಸಾರವಾಗಿ ನನಗೆ ಸಹಾಯ ಮಾಡುವನೆಂದು ನಿರೀಕ್ಷಿಸಿಕೊಂಡಿದ್ದೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆದ್ದರಿಂದ ಯೆಹೋವನು ನನಗೆ ಬಹಳ ಹಿಂದೆಯೇ ವಾಗ್ದಾನ ಮಾಡಿದ್ದ ಬೆಟ್ಟಪ್ರದೇಶವನ್ನು ಈಗ ನನಗೆ ಕೊಡು. ಬಲಿಷ್ಠರಾದ ಅನಾಕವಂಶಸ್ಥರು ವಾಸವಾಗಿರುವ ಆ ಪಟ್ಟಣಗಳು ಬಹಳ ದೊಡ್ಡದಾಗಿವೆಯೆಂದೂ ಸುಭದ್ರವಾದವುಗಳೆಂದೂ ನೀನು ಕೇಳಿರುವೆ. ಆದರೆ ಯೆಹೋವನು ನನ್ನೊಂದಿಗಿರುವುದರಿಂದ ಆತನು ಹೇಳಿದಂತೆಯೇ ಆ ಪ್ರದೇಶವನ್ನು ನಾನು ತೆಗೆದುಕೊಳ್ಳುತ್ತೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆದ್ದರಿಂದ ಯೆಹೋವ ದೇವರು ಆ ದಿವಸದಲ್ಲಿ ಹೇಳಿದ ಈ ಬೆಟ್ಟವನ್ನು ಈಗ ನನಗೆ ಕೊಡು; ಏಕೆಂದರೆ ಅಲ್ಲಿ ಅನಾಕ್ಯರು ಇದ್ದಾರೆಂದೂ, ಗೋಡೆಗಳುಳ್ಳ ದೊಡ್ಡ ಪಟ್ಟಣಗಳುಂಟೆಂದೂ ನೀನು ಆ ದಿವಸದಲ್ಲಿ ಕೇಳಿದ್ದಿ. ಯೆಹೋವ ದೇವರು ಹೇಳಿದ ಪ್ರಕಾರವೇ ನಾನು ಅವರನ್ನು ಹೊರಡಿಸಲು ಯೆಹೋವ ದೇವರು ನನಗೆ ಸಹಾಯ ಮಾಡುವರೆಂದು ನಂಬಿಕೊಂಡಿದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 14:12
21 ತಿಳಿವುಗಳ ಹೋಲಿಕೆ  

ಇವರು ವಿಶ್ವಾಸದಿಂದಲೇ ರಾಜ್ಯಗಳನ್ನು ಗೆದ್ದರು; ನ್ಯಾಯನೀತಿಯಿಂದ ಆಳಿದರು; ದೇವರಿಂದ ವಾಗ್ದಾನಗಳನ್ನು ಪಡೆದರು; ಸಿಂಹಗಳ ಬಾಯನ್ನು ಬಂಧಿಸಿದರು.


ಸರ್ವೇಶನ ಶಕ್ತಿಯಿಂದ ಸರ್ವವನ್ನೂ ಸಾಧಿಸುವ ಸಾಮರ್ಥ್ಯ ನನಗಿದೆ.


ಅಲ್ಲಿ ‘ನೆಫೀಲಿಯರನ್ನು’ ಅಂದರೆ ನೆಫೀಲಿಯನ ವಂಶದವರಾದ ‘ಅನಕಿಮ್’ರನ್ನು ನೋಡಿದೆವು. ಅವರ ಮುಂದೆ ನಾವು ಮಿಡತೆಗಳಂತೆ ಇದ್ದೆವು. ಅವರಿಗೂ ನಾವು ಹಾಗೆಯೆ ಕಾಣಿಸಿಕೊಂಡೆವು,” ಎಂದರು.


ಅಂತೆಯೇ ಆ ನಾಡಿನ ನಿವಾಸಿಗಳು ಬಲಿಷ್ಠರು. ಅವರಿರುವ ಪಟ್ಟಣಗಳು ದೊಡ್ಡವು; ಅವು ಕೋಟೆ ಕೊತ್ತಲುಗಳಿಂದ ಕೂಡಿವೆ. ಅದೂ ಅಲ್ಲದೆ ಅಲ್ಲಿ ‘ಅನಕಿಮ್’ ವಂಶಸ್ಥರನ್ನು ಕಂಡೆವು.


ಹೀಗಿರುವಲ್ಲಿ ನಾವು ಏನು ಹೇಳೋಣ? ದೇವರೇ ನಮ್ಮ ಪರ ಇರುವಾಗ ನಮ್ಮನ್ನು ವಿರೋಧಿಸುವವರು ಯಾರು?


ಕಾಲೇಬನು ಶೇಷೈ, ಅಹೀಮನ್, ತಲ್ಮೈ ಎಂಬ ಅನಾಕನ ಮೂರು ಮಂದಿ ಮಕ್ಕಳನ್ನು ಅಲ್ಲಿಂದ ಹೊರಡಿಸಿಬಿಟ್ಟನು.


ನಮ್ಮ ಪರ ದೇವನಿರಲು ಹೆಣಗುವೆವು ಶೂರರಾಗಿ I ವೈರಿಗಳನು ತುಳಿದುಬಿಡುವನಾತ ಖರೆಯಾಗಿ II


ನಾಡ ಗೆದ್ದುದು ನಮ್ಮವರ ಕತ್ತಿಯಲ್ಲ I ಜಯ ದೊರೆತದು ತಮ್ಮ ಭುಜಬಲದಿಂದಲ್ಲ II ಜಯ ತಂದಿತು ನಿನ್ನ ಬಲಹಸ್ತ, ನಿನ್ನ ಮುಖಕಾಂತಿ I ನಿನ್ನ ಭುಜಬಲ, ನೀ ತೋರಿದಾ ಅಚಲಪ್ರೀತಿ II


ಆಸನು ತನ್ನ ದೇವರಾದ ಸರ್ವೇಶ್ವರನಿಗೆ, “ಸರ್ವೇಶ್ವರಾ, ಬಲಿಷ್ಠನು ಬಲಹೀನನ ಮೇಲೆ ಬೀಳುವಾಗ, ನಿಮ್ಮ ಹೊರತು ರಕ್ಷಕನಿಲ್ಲ. ನಿಮ್ಮಲ್ಲಿ ಭರವಸೆ ಇಟ್ಟು ನಿಮ್ಮ ಹೆಸರಿನಲ್ಲಿ ಈ ಮಹಾ ಸೇನೆಗೆ ವಿರುದ್ಧ ಯುದ್ಧಕ್ಕೆ ಬಂದಿದ್ದೇವೆ. ಸರ್ವೇಶ್ವರಾ, ನಮ್ಮ ದೇವರು ನೀವು; ನರರು ನಿಮ್ಮನ್ನು ಎದುರಿಸಿ ಗೆಲ್ಲಬಾರದು,” ಎಂದು ಮೊರೆ ಇಟ್ಟನು.


ಯೋನಾತಾನನು ತನ್ನ ಆಯುಧಗಳನ್ನು ಹೊರುವವನಿಗೆ, “ಸುನ್ನತಿಯಿಲ್ಲದ ಈ ಕಾವಲುದಂಡಿನವರೆಗೆ ನೇರವಾಗಿ ಹೋಗೋಣ ಬಾ; ಬಹುಶಃ ಸರ್ವೇಶ್ವರ ತಾವೇ ನಮ್ಮ ಪರವಾಗಿ ಕಾರ್ಯಸಾಧಿಸುವರು. ಬಹುಜನರಿಂದಾಗಲಿ, ಸ್ವಲ್ಪಜನರಿಂದಾಗಲಿ, ರಕ್ಷಿಸುವುದು ಸರ್ವೇಶ್ವರಸ್ವಾಮಿಗೆ ಅಸಾಧ್ಯವಲ್ಲ,” ಎಂದು ಹೇಳಿದನು.


ಮೋಶೆ ಆಜ್ಞಾಪಿಸಿದಂತೆ ಅವರು ಕಾಲೇಬನಿಗೆ ಹೆಬ್ರೋನ್ ಪಟ್ಟಣವನ್ನು ಕೊಟ್ಟರು; ಅವನು ಅನಾಕನ ಮೂರು ಮಂದಿ ಮಕ್ಕಳನ್ನು ಅಲ್ಲಿಂದ ಅಟ್ಟಿಬಿಟ್ಟನು.


ಸರ್ವೇಶ್ವರ ಮೋಶೆಗೆ, “ಅವನಿಗೆ ಭಯಪಡಬೇಡ; ಅವನನ್ನೂ ಅವನ ಸಮಸ್ತ ಪ್ರಜೆಯನ್ನೂ ನಾಡನ್ನೂ ನಿನ್ನ ಕೈವಶಮಾಡಿದ್ದೇನೆ. ನೀನು ಹೆಷ್ಬೋನಿನಲ್ಲಿ ಅಮೋರಿಯರ ಅರಸ ಸೀಹೋನನಿಗೆ ಮಾಡಿದಂತೆಯೇ ಇವನಿಗೂ ಮಾಡು,” ಎಂದು ಹೇಳಿದರು.


ನಾವು ಹೋಗಬೇಕಾದ ಆ ಸೀಮೆ ಎಂಥದೆಂದು ಆಲೋಚಿಸಿ ನೋಡಬೇಕು; ಅಲ್ಲಿಗೆ ಹೋಗಿದ್ದ ನಮ್ಮ ಸಹೋದರರು ಬಂದು ಆ ನಾಡಿನ ಜನರು ನಮಗಿಂತ ಬಲಿಷ್ಠರೂ ಎತ್ತರವಾಗಿಯೂ ಇದ್ದಾರೆ. ಅವರಿರುವ ಪಟ್ಟಣಗಳು ದೊಡ್ಡವು, ಆಕಾಶವನ್ನು ಮುಟ್ಟುವಂಥ ಕೋಟೆಕೊತ್ತಲುಳ್ಳವು; ಅಲ್ಲಿ ‘ಅನಾಕಿಮ್’ ವಂಶಸ್ಥರನ್ನು ಕಂಡೆವೆಂದು ಹೇಳಿ ನಮ್ಮ ಧೈರ್ಯವನ್ನು ಕೆಡಿಸಿದ್ದಾರೆ,’ ಎಂದುಕೊಳ್ಳುತ್ತಿದ್ದಿರಿ.


ಜೀವಸ್ವರೂಪರಾದ ದೇವರನ್ನು ದೂಷಿಸುವುದಕ್ಕಾಗಿ ತನ್ನ ಯಜಮಾನ ಅಸ್ಸೀರಿಯದ ರಾಜನಿಂದ ಕಳುಹಿಸಲಾಗಿದ್ದ ರಬ್ಷಾಕೆಯ ನಿಂದಾವಾಕ್ಯಗಳನ್ನು ನಿಮ್ಮ ದೇವರಾದ ಸರ್ವೇಶ್ವರ ಕೇಳಿದ್ದಾರೆ. ನಿಮ್ಮ ದೇವರಾದ ಸರ್ವೇಶ್ವರ ತಾವು ಕೇಳಿದ ಆ ವಾಕ್ಯಗಳ ನಿಮಿತ್ತ ಮುಯ್ಯಿತೀರಿಸಾರು; ಹೀಗಿರಲು ಉಳಿದಿರುವ ಸ್ವಲ್ಪ ಜನರಿಗಾಗಿ ದೇವರನ್ನು ನೀವು ಪ್ರಾರ್ಥನೆ ಮಾಡಿ’ ಎಂದು ಹಿಜ್ಕೀಯ ಕೇಳಿಕೊಂಡಿದ್ದಾರೆ ಎಂದು ತಿಳಿಸಿ,” ಎಂದನು.


“ಇಸ್ರಯೇಲರೇ ಕೇಳಿ : ನಿಮಗಿಂತ ಮಹಾಬಲಿಷ್ಠ ಜನಾಂಗಗಳನ್ನು ಹಾಗು ಗಗನ ಮುಟ್ಟುವ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಸ್ವಾಧೀನಮಾಡಿಕೊಳ್ಳಲು, ನೀವು ಈ ಜೋರ್ಡನ್ ನದಿಯನ್ನು ಇಂದು ದಾಟಲಿದ್ದೀರಿ.


ಆದುದರಿಂದ ನಿಮ್ಮ ದೇವರಾದ ಸರ್ವೇಶ್ವರ ತಾವೇ, ವಿರೋಧಿಗಳನ್ನು ದಹಿಸುವ ಬೆಂಕಿಯೋಪಾದಿಯಲ್ಲಿ ನಿಮ್ಮ ಮುಂದೆ ಹೋಗುತ್ತಾರೆಂದು ಈಗ ತಿಳಿದುಕೊಳ್ಳಿ. ಅವರೇ ಆ ವಿರೋಧಿಗಳನ್ನು ನಾಶಮಾಡುವರು; ನಿಮ್ಮ ಮುಂದೆ ಆ ವಿರೋಧಿಗಳು ಸೋತುಹೋಗುವಂತೆ ಮಾಡುವರು. ಸರ್ವೇಶ್ವರ ನಿಮಗೆ ಹೇಳಿದಂತೆ ನೀವು ಅವರನ್ನು ಹೊರಡಿಸಿ ಬೇಗನೆ ನಾಶಮಾಡುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು