Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 14:15 - ಕನ್ನಡ ಸತ್ಯವೇದವು C.L. Bible (BSI)

15 ಅದರ ಹಿಂದಿನ ಹೆಸರು, ‘ಕಿರ್ಯತ್ ಅರ್ಬ’ ಎಂದು. ಅರ್ಬ ಎಂಬವನು ಈ ಎತ್ತರದ ವ್ಯಕ್ತಿಗಳಲ್ಲಿ ಪ್ರಮುಖನು. ಯುದ್ಧವು ನಿಂತಿತು. ನಾಡಿನಲ್ಲಿ ಶಾಂತಿಸಮಾಧಾನ ನೆಲೆಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅದರ ಹಿಂದಿನ ಹೆಸರು “ಕಿರ್ಯತ್ಅರ್ಬ” ಎಂಬುದಾಗಿತ್ತು. “ಅರ್ಬ” ಎಂಬುವವನು ಉನ್ನತ ಪುರುಷರಲ್ಲಿ (ಅನಾಕ್ಯರಲ್ಲಿ) ಪ್ರಮುಖನಾಗಿದ್ದನು. ಯುದ್ಧವು ನಿಂತು ದೇಶದಲ್ಲಿ ಸಮಾಧಾನ ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅದರ ಮುಂಚಿನ ಹೆಸರು ಕಿರ್ಯತ್ಅರ್ಬ ಎಂಬದು. ಅರ್ಬ ಎಂಬವನು ಉನ್ನತ ಪುರುಷರಲ್ಲಿ ಪ್ರಮುಖನು. ಯುದ್ಧವು ನಿಂತು ದೇಶದಲ್ಲಿ ಸಮಾಧಾನವುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಹಿಂದೆ ಆ ನಗರದ ಹೆಸರು ಕಿರ್ಯಾತ್ ಅರ್ಬ ಎಂದಿತ್ತು. ಅನಾಕ ವಂಶದವರಲ್ಲಿ ಶ್ರೇಷ್ಠನಾದ ಅರ್ಬ ಎಂಬವನ ಸ್ಮರಣಾರ್ಥವಾಗಿ ಆ ನಗರಕ್ಕೆ ಅವನ ಹೆಸರನ್ನೇ ಇಡಲಾಗಿತ್ತು. ಇದಾದ ಮೇಲೆ, ಆ ಪ್ರದೇಶದಲ್ಲಿ ಶಾಂತಿ ನೆಲೆಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಹೆಬ್ರೋನಿನ ಮೊದಲಿನ ಹೆಸರು ಕಿರ್ಯತ್ ಅರ್ಬ. “ಅರ್ಬ” ಎಂಬುವವನು ಅನಾಕ್ಯರಲ್ಲಿ ಪ್ರಮುಖನಾಗಿದ್ದನು. ದೇಶವು ಯುದ್ಧವಿಲ್ಲದೆ ಶಾಂತವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 14:15
16 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಮೋಶೆಯ ಮುಖಾಂತರ ವಾಗ್ದಾನ ಮಾಡಿದ್ದ ಪ್ರದೇಶವನ್ನೆಲ್ಲಾ ಯೆಹೋಶುವ ಹಿಡಿದುಕೊಂಡನು, ಇಸ್ರಯೇಲ್ ಕುಲಭಾಗಗಳಿಗನುಸಾರ ಅದನ್ನು ಹಂಚಿಕೊಟ್ಟನು. ಯುದ್ಧ ನಿಂತಿತು. ದೇಶದಲ್ಲೆಲ್ಲಾ ಶಾಂತಿಸಮಾಧಾನ ನೆಲೆಸಿತು.


ಇಷ್ಟು ವರ್ಷಗಳಾದ ಮೇಲೆ ಆಕೆ ಕಾನಾನ್ ನಾಡಿನ ಹೆಬ್ರೋನೆಂಬ ಕಿರ್ಯತರ್ಬದಲ್ಲಿ ಕಾಲವಾದಳು. ಅಬ್ರಹಾಮನು ಅಲ್ಲಿಗೆ ಬಂದು ಅವಳಿಗಾಗಿ ಕಣ್ಣೀರಿಟ್ಟು ಗೋಳಾಡಿದನು.


ನಾಡಿನಲ್ಲಿ ನಾಲ್ವತ್ತು ವರ್ಷಗಳ ಕಾಲ ನೆಮ್ಮದಿ ನೆಲಸಿತ್ತು. ತರುವಾಯ ಕೆನಜನ ಮಗ ಒತ್ನೀಯೇಲನು ಮರಣ ಹೊಂದಿದನು.


ಯೆಹೋಶುವನು ಸರ್ವೇಶ್ವರನ ಅಪ್ಪಣೆಯಂತೆ ಯೆಫುನ್ನೆಯ ಮಗ ಕಾಲೇಬನಿಗೆ ಯೆಹೂದ ಕುಲದವರ ನಡುವೆ ಅನಾಕನ ತಂದೆ ಆದ ಅರ್ಬನ ನಗರವಾಗಿದ್ದ ಹೆಬ್ರೋನನ್ನು ಕೊಟ್ಟನು.


ಮಿದ್ಯಾನ್ಯರು ಇಸ್ರಯೇಲರ ಮುಂದೆ ಬಹಳವಾಗಿ ತಗ್ಗಿಹೋದರು. ಅವರು ಮರಳಿ ತಲೆಯೆತ್ತಲಾಗಲಿಲ್ಲ. ಗಿದ್ಯೋನನ ಜೀವಮಾನದಲ್ಲಿ ನಾಲ್ವತ್ತು ವರ್ಷಗಳ ಕಾಲಪರ್ಯಂತ ದೇಶದಲ್ಲಿ ಶಾಂತಿಸಮಾಧಾನವಿತ್ತು.


ಸರ್ವೇಶ್ವರನ ಶತ್ರುಗಳೆಲ್ಲರು ನಾಶವಾಗಲಿ ಇವರಂತೆ ಆತನ ಭಕ್ತರು ಬೆಳಗಲಿ ಉದಯಕಾಲದ ಸೂರ್ಯನಂತೆ! ನಾಡಿನಲಿ ನಾಲ್ವತ್ತು ವರ್ಷಕಾಲ ಶಾಂತಿ ನೆಲಸಿತ್ತು!


ಮೋವಾಬ್ಯರು ಇಸ್ರಯೇಲರಿಗೆ ಶರಣಾದರು; ನಾಡಿನಲ್ಲಿ ಎಂಬತ್ತು ವರ್ಷ ನೆಮ್ಮದಿ ಇತ್ತು.


ಯಕೋಬನು ತನ್ನ ತಂದೆ ಇಸಾಕನ ಬಳಿಗೆ ಮಮ್ರೆಗೆ ಬಂದನು. ಮಮ್ರೆಯು ಹೆಬ್ರೋನೆಂಬ ಕಿರ್ಯತರ್ಬಕ್ಕೆ ಸೇರಿದುದು. ಅದೇ ಅಬ್ರಹಾಮ್ ಹಾಗು ಇಸಾಕನು ಪರದೇಶಸ್ಥರಾಗಿ ವಾಸವಾಗಿದ್ದ ಸ್ಥಳ.


ಅವನು, “ಇಗೋ ಸಿದ್ಧನಿದ್ದೇನೆ,” ಎಂದ. ಯಕೋಬನು ಅವನಿಗೆ, "ನೀನು ಹೋಗಿ ನಿನ್ನ ಅಣ್ಣಂದಿರ ಹಾಗೂ ಆಡುಕುರಿಗಳ ಯೋಗಕ್ಷೇಮವನ್ನು ವಿಚಾರಿಸಿಕೊಂಡು ಬಾ,” ಎಂದು ಅಪ್ಪಣೆಕೊಟ್ಟು ಅವನನ್ನು ಹೆಬ್ರೋನ್ ಕಣಿವೆಯಿಂದ ಕಳಿಸಿಕೊಟ್ಟ.


ಕೆನಿಜ್ಜೀಯನಾದ ಯೆಫುನ್ನೆಯ ಮಗ ಕಾಲೇಬನು ಇಸ್ರಯೇಲಿನ ದೇವರಾದ ಸರ್ವೇಶ್ವರನನ್ನು ಸಂಪೂರ್ಣವಾಗಿ ಶ್ರದ್ಧೆಯಿಂದ ಅನುಸರಿಸಿದ್ದರಿಂದ ಹೆಬ್ರೋನ್ ಅವನಿಗೆ ಸೊತ್ತಾಗಿ ಸಿಕ್ಕಿತು.ಅದು ಇಂದಿನವರೆಗೂ ಅವನದೇ ಆಗಿದೆ.


ಇವುಗಳಲ್ಲಿ ಯೆಹೂದ ಮಲೆನಾಡಿನ ಹೆಬ್ರೋನೆಂಬ ಗೋಮಾಳ ಸಹಿತವಾದ ಕಿರ್ಯತರ್ಬವೂ ಸೇರಿರುತ್ತದೆ. (ಕಿರ್ಯತರ್ಬ ಎಂದರೆ ಅನಾಕನ ತಂದೆಯಾದ ಅರ್ಬನನಗರ).


ಹೊಲಗದ್ದೆಗಳಿದ್ದವರು ವಾಸಿಸುತ್ತಿದ್ದ ಊರುಗಳು - ಕಿರ್ಯತರ್ಬ, ದೀಬೋನ್, ಯೆಕಬ್ಜೆಯೇಲ್, ಇವುಗಳೂ ಇವುಗಳ ಗ್ರಾಮಗಳೂ;


ಆದರೆ ಇದಕ್ಕೆ ಸೇರಿದ ಹೊಲಗಳನ್ನು ಮತ್ತು ಗ್ರಾಮಗಳನ್ನು ಯಫುನ್ನೆಯ ಮಗ ಕಾಲೇಬನಿಗೆ ಕೊಟ್ಟರು.


ಮೋಶೆ ಆಜ್ಞಾಪಿಸಿದಂತೆ ಅವರು ಕಾಲೇಬನಿಗೆ ಹೆಬ್ರೋನ್ ಪಟ್ಟಣವನ್ನು ಕೊಟ್ಟರು; ಅವನು ಅನಾಕನ ಮೂರು ಮಂದಿ ಮಕ್ಕಳನ್ನು ಅಲ್ಲಿಂದ ಅಟ್ಟಿಬಿಟ್ಟನು.


ಮತ್ತು ದಾವೀದನೂ ಅವನ ಜನರೂ ಸಂಚರಿಸುತ್ತಿದ್ದ ಇತರ ಎಲ್ಲಾ ಸ್ಥಳಗಳವರು.


ಆರೋನನಿಗೆ ನಾದಾಬ್, ಅಬೀಹೂ, ಎಲ್ಲಾಜಾರ್, ಈತಾಮಾರ್ ಎಂಬ ನಾಲ್ಕು ಜನ ಮಕ್ಕಳಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು