Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 14:3 - ಕನ್ನಡ ಸತ್ಯವೇದವು C.L. Bible (BSI)

3 ಉಳಿದ ಎರಡುವರೆ ಕುಲಗಳ ಜನರಿಗೆ ಜೋರ್ಡನಿನ ಆಚೆಯಲ್ಲಿ ಮೋಶೆಯೇ ಸೊತ್ತನ್ನು ಕೊಟ್ಟಿದ್ದನು. ಲೇವಿಯರಿಗೆ ಮಾತ್ರ ಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಉಳಿದ ಎರಡುವರೆ ಕುಲಗಳ ಜನರಿಗೆ ಯೊರ್ದನಿನ ಆಚೆಯಲ್ಲಿ ಮೋಶೆಯೇ ಸ್ವತ್ತನ್ನು ಕೊಟ್ಟಿದ್ದನು. ಲೇವಿಯರಿಗೆ ಮಾತ್ರ ಕೊಟ್ಟಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಉಳಿದ ಎರಡುವರೆ ಕುಲಗಳ ಜನರಿಗೆ ಯೊರ್ದನಿನ ಆಚೆಯಲ್ಲಿ ಮೋಶೆಯೇ ಸ್ವಾಸ್ತ್ಯವನ್ನು ಕೊಟ್ಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಎರಡುವರೆ ಕುಲಗಳ ಜನರಿಗೆ ಮೋಶೆಯು ಜೋರ್ಡನ್ ನದಿಯ ಪೂರ್ವದಿಕ್ಕಿನ ಪ್ರದೇಶವನ್ನು ಕೊಟ್ಟಿದ್ದನು. ಆದರೆ ಲೇವಿಯ ಕುಲದವರಿಗೆ ಉಳಿದವರಂತೆ ಯಾವ ಪ್ರದೇಶವನ್ನೂ ಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಏಕೆಂದರೆ ಮೋಶೆಯು ಯೊರ್ದನ್ ನದಿ ಆಚೆ ಎರಡೂವರೆ ಗೋತ್ರಗಳಿಗೆ ಸೊತ್ತನ್ನು ಕೊಟ್ಟಿದ್ದನು. ಆದರೆ ಲೇವಿಯರಿಗೆ ಯಾವ ಸೊತ್ತನ್ನೂ ಕೊಡಲಿಲ್ಲ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 14:3
9 ತಿಳಿವುಗಳ ಹೋಲಿಕೆ  

ಲೇವಿ ಕುಲದವರಿಗೆ ಮಾತ್ರ ಯಾವ ಪಾಲೂ ಸಿಕ್ಕಲಿಲ್ಲ. ಏಕೆಂದರೆ ಇಸ್ರಯೇಲಿನ ದೇವರಾದ ಸರ್ವೇಶ್ವರನು ಆಜ್ಞಾಪಿಸಿದಂತೆ ಯಜ್ಞಶೇಷವೇ ಅವರ ಸೊತ್ತಾಗಿತ್ತು.


ಮನಸ್ಸೆಕುಲದ ಉಳಿದ ಅರ್ಧಜನರಿಗೆ, ರೂಬೇನ್ಯರಿಗೆ ಹಾಗೂ ಗಾದ್ಯರಿಗೆ ಜೋರ್ಡನಿನ ಆಚೆಕಡೆ ಈಗಾಗಲೇ ಮೋಶೆಯಿಂದ ಸ್ವಂತ ಭೂಮಿ ದೊರಕಿತ್ತು. ಸರ್ವೇಶ್ವರನ ದಾಸ ಮೋಶೆ ಅವರಿಗೆ ಕೊಟ್ಟ ಪ್ರಾಂತ್ಯಗಳು ಇವು :


ನೀವು ನಾಡನ್ನು ಸೊತ್ತುಸೊತ್ತಾಗಿ ಹಂಚುವಾಗ ಒಂದು ಭಾಗವನ್ನು ಮೀಸಲಾಗಿ ಪ್ರತ್ಯೇಕಿಸಿ ಸರ್ವೇಶ್ವರನಿಗೆ ಸಮರ್ಪಿಸಬೇಕು; ಅದರ ಉದ್ದ ಹನ್ನೆರಡುವರೆ ಕಿಲೋಮೀಟರ್, ಅಗಲ ಹತ್ತು ಕಿಲೋಮೀಟರ್; ಆ ಪ್ರಾಂತ್ಯವೆಲ್ಲಾ ಸುತ್ತುಮುತ್ತಲು ಪರಿಶುದ್ಧವಾಗಿ ಇರಬೇಕು.


ಸರ್ವೇಶ್ವರನ ದಾಸ ಮೋಶೆ ಇಸ್ರಯೇಲರ ಸಹಿತವಾಗಿ ಈ ಇಬ್ಬರನ್ನು ಸೋಲಿಸಿ ಅವರ ರಾಜ್ಯಗಳನ್ನು ರೂಬೇನ್ಯರಿಗೂ ಗಾದ್ಯರಿಗೂ ಮತ್ತು ಮನಸ್ಸೆಕುಲದ ಅರ್ಧಜನರಿಗೂ ಶಾಶ್ವತ ಸೊತ್ತಾಗಿ ಕೊಟ್ಟನು.


ಅರ್ನೋನ್ ಕಣಿವೆಯ ಅಂಚಿನಲ್ಲಿದ್ದ ಅರೋಯೇರ್ ನಗರ, ಅದೇ ಕಣಿವೆಯ ಮಧ್ಯೆಯಿದ್ದ ನಗರ;


ಮೇದೆಬದ ಬಯಲುನಾಡಿಗೆ ಸೇರಿದ ಹೆಷ್ಬೋನ್ ನಗರ, ಅಲ್ಲೆ ಎತ್ತರವಾದ ಬಯಲಿನಲ್ಲಿರುವ ದೀಬೋನ್, ಬಾಮೋತ್ ಬಾಳ್, ಬೇತ್ಬಾಳ್ಮೆಯೋನ್ ಯಹಚಾ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು