ಯೆಹೋಶುವ 14:4 - ಕನ್ನಡ ಸತ್ಯವೇದವು C.L. Bible (BSI)4 ಜೋಸೆಫ್ಯರರು ಮನಸ್ಸೆ ಮತ್ತು ಎಫ್ರಯಿಮ್ ಎಂಬ ಎರಡು ಕುಲಗಳಾಗಿ ಎಣಿಸಲ್ಪಟ್ಟಿದ್ದರು. ಲೇವಿಯರಿಗೆ, ತಂಗುವುದಕ್ಕೆ ಕೆಲವು ನಗರಗಳು ಹಾಗು ಅವರ ದನಕುರಿಗಳಿಗೆ ಅಲ್ಲಿನ ಕೆಲವು ಹುಲ್ಲುಗಾವಲುಗಳನ್ನು ಬಿಟ್ಟರೆ ಬೇರೇನೂ ಸಿಕ್ಕಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಯೋಸೇಫನ ಮಕ್ಕಳಾದ ಮನಸ್ಸೆ ಮತ್ತು ಎಫ್ರಾಯೀಮ್ ಎಂಬ ಎರಡು ಕುಲಗಳಾಗಿ ಅವರು ಎಣಿಸಲ್ಪಟ್ಟಿದ್ದರಲ್ಲಾ; ಲೇವಿಯರಿಗೆ ಕೆಲವು ಪಟ್ಟಣಗಳೂ ಹಾಗೂ ಅವರ ದನಕುರಿಗಳಿಗೋಸ್ಕರ ಅಲ್ಲಿನ ಕೆಲವು ಹುಲ್ಲುಗಾವಲುಗಳನ್ನೂ ಬಿಟ್ಟರೆ ಬೇರೇನೂ ಸಿಕ್ಕಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಲೇವಿಯರಿಗೆ ಮಾತ್ರ ಕೊಡಲಿಲ್ಲ. ಯೋಸೇಫ್ಯರು ಮನಸ್ಸೆ, ಎಫ್ರಾಯೀಮ್ ಎಂಬ ಎರಡು ಕುಲಗಳಾಗಿ ಎಣಿಸಲ್ಪಟ್ಟರಲ್ಲಾ; ಲೇವಿಯರಿಗೆ ಕೆಲವು ಪಟ್ಟಣಗಳೂ ಅವರ ದನಕುರಿಗಳಿಗೋಸ್ಕರ ಅವುಗಳಿಗೆ ಸೇರಿದ ಹುಲ್ಲುಗಾವಲುಗಳೂ ಹೊರತಾಗಿ ಬೇರೇನೂ ಸಿಕ್ಕಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಹನ್ನೆರಡು ಕುಲಗಳಿಗೆ ಅವರವರ ಪ್ರದೇಶಗಳ ಪೂರ್ಣಸ್ವಾಸ್ತ್ಯವನ್ನು ಕೊಡಲಾಯಿತು. ಯೋಸೇಫನ ಮನೆತನದವರು ಮನಸ್ಸೆ ಮತ್ತು ಎಫ್ರಾಯೀಮ್ ಎಂಬ ಎರಡು ಕುಲಗಳಾಗಿ ವಿಂಗಡಿಸಲ್ಪಟ್ಟಿದ್ದರು. ಪ್ರತಿಯೊಂದು ಕುಲಕ್ಕೂ ಸ್ವಲ್ಪಸ್ವಲ್ಪ ಪ್ರದೇಶ ದೊರೆಯಿತು. ಆದರೆ ಲೇವಿ ಕುಲದ ಜನರಿಗೆ ಯಾವ ಪ್ರದೇಶವನ್ನೂ ಕೊಡಲಿಲ್ಲ. ಅವರಿಗೆ ವಾಸಿಸಲು ಕೆಲವು ಊರುಗಳನ್ನು ಮಾತ್ರ ಕೊಡಲಾಯಿತು. ಈ ಊರುಗಳು ಪ್ರತಿಯೊಂದು ಕುಲದ ಜನರ ಪ್ರದೇಶದಲ್ಲಿ ಇದ್ದವು. ಅವರ ಪಶುಗಳಿಗಾಗಿ ಹುಲ್ಲುಗಾವಲುಗಳನ್ನು ಕೊಡಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಯೋಸೇಫನ ಮಕ್ಕಳಾದ ಮನಸ್ಸೆಯೂ, ಎಫ್ರಾಯೀಮನೂ ಎರಡು ಗೋತ್ರಗಳಾಗಿದ್ದರು. ಲೇವಿಯರಿಗೆ ದೇಶದಲ್ಲಿ ಪಾಲುಕೊಡಲಿಲ್ಲ. ಆದರೆ ವಾಸಮಾಡುವ ಪಟ್ಟಣಗಳನ್ನೂ, ದನಕುರಿಗಳಿಗೋಸ್ಕರವಾಗಿ ಹುಲ್ಲುಗಾವಲುಗಳನ್ನೂ, ಪ್ರಾಂತಗಳನ್ನೂ ಮಾಡಿಕೊಟ್ಟರು. ಅಧ್ಯಾಯವನ್ನು ನೋಡಿ |