Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 15:11 - ಕನ್ನಡ ಸತ್ಯವೇದವು C.L. Bible (BSI)

11 ಅಲ್ಲಿಂದ ಉತ್ತರ ದಿಕ್ಕಿನಲ್ಲಿರುವ ಎಕ್ರೋನ್ ಗುಡ್ಡಕ್ಕೆ ಹೋಗಿ ಶಿಕ್ಕೆರೋನಿಗೆ ತಿರುಗಿಕೊಂಡು ಬಾಲಾಗುಡ್ಡದ ಮೇಲೆ ಯೆಬ್ನೇಲಿಗೆ ಹೋಗಿ ಸಮುದ್ರ ತೀರದಲ್ಲಿ ಮುಗಿಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಮುಂದೆ ಉತ್ತರದಿಕ್ಕಿನಲ್ಲಿರುವ ಎಕ್ರೋನ್ ಗುಡ್ಡಕ್ಕೆ ಹೋಗಿ ಶಿಕ್ಕೆರೋನಿಗೆ ತಿರುಗಿಕೊಂಡು ಬಾಲಾ ಗುಡ್ಡದ ಮೇಲೆ ಯಬ್ನೇಲಿಗೆ ಹೋಗಿ ಸಮುದ್ರದಲ್ಲಿ ಮುಗಿಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅಲ್ಲಿಂದ ಉತ್ತರದಿಕ್ಕಿನಲ್ಲಿರುವ ಎಕ್ರೋನ್ ಗುಡ್ಡಕ್ಕೆ ಹೋಗಿ ಶಿಕ್ಕೆರೋನಿಗೆ ತಿರುಗಿಕೊಂಡು ಬಾಲಾ ಗುಡ್ಡದ ಮೇಲೆ ಯಬ್ನೇಲಿಗೆ ಹೋಗಿ ಸಮುದ್ರತೀರದಲ್ಲಿ ಮುಗಿಯುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅಲ್ಲಿಂದ ಆ ಗಡಿಯು ಉತ್ತರ ದಿಕ್ಕಿನಲ್ಲಿರುವ ಎಕ್ರೋನ್ ಗುಡ್ಡಕ್ಕೆ ಹೋಗಿ ಅಲ್ಲಿಂದ ಶಿಕ್ಕೆರೋನಿಗೆ ತಿರುಗಿಕೊಂಡು ಬಾಲಾ ಗುಡ್ಡವನ್ನು ತಲುಪುತ್ತದೆ. ಆ ಗಡಿಯು ಯಬ್ನೇಲಿನವರೆಗೆ ಮುಂದುವರೆದು ನಂತರ ಮೆಡಿಟರೆನಿಯನ್ ಸಮುದ್ರ ತೀರದಲ್ಲಿ ಮುಗಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅಲ್ಲಿಂದ ಉತ್ತರಕ್ಕಿರುವ ಎಕ್ರೋನಿನ ಗುಡ್ಡಕ್ಕೆ ಹೋಗಿ ಶಿಕ್ಕೆರೋನಿಗೂ, ಅಲ್ಲಿಂದ ಬಾಲಾ ಬೆಟ್ಟವನ್ನು ದಾಟಿ ಯಬ್ನೆಯೇಲಿಗೆ ಹೊರಟು ಸಮುದ್ರ ತೀರದಲ್ಲಿ ಮುಗಿಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 15:11
15 ತಿಳಿವುಗಳ ಹೋಲಿಕೆ  

ಅರಸನಿಗೆ, “ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ದೂತರನ್ನು ಕಳುಹಿಸಿದ್ದೇಕೆ? ಇಸ್ರಯೇಲರಲ್ಲಿ ದೇವರಿಲ್ಲವೆ? ಹೀಗೆ ಮಾಡಿದ್ದರಿಂದ ನೀವು ಹಿಡಿದ ಹಾಸಿಗೆಯಿಂದ ಏಳದೆ ಸಾಯಲೇಬೇಕು ಎಂಬುದಾಗಿ ಸರ್ವೇಶ್ವರ ಹೇಳಿದ್ದಾರೆ,” ಎಂದನು.


ಅದಕ್ಕೆ ಅವರು, “ಒಬ್ಬ ವ್ಯಕ್ತಿ ನಮ್ಮನ್ನು ಎದುರುಗೊಂಡು, “ನಿಮ್ಮನ್ನು ಕಳುಹಿಸಿದ ಅರಸನ ಬಳಿಗೆ ಹಿಂದಿರುಗಿರಿ. ಸರ್ವೇಶ್ವರನ ಹೆಸರಿನಲ್ಲಿ ಅವನಿಗೆ ಹೀಗೆಂದು ಹೇಳಿರಿ: ‘ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವ ಅಗತ್ಯವಾದರೂ ಏನು? ಇಸ್ರಯೇಲರಲ್ಲಿ ದೇವರಿಲ್ಲವೆ? ಹೀಗೆ ಮಾಡಿದ್ದರಿಂದ ನೀವು ಹಿಡಿದ ಹಾಸಿಗೆಯಿಂದ ಏಳದೆ ಸಾಯಲೇಬೇಕು ಎಂಬುದಾಗಿ ಹೇಳಿರಿ’ ಎಂದು ಆಜ್ಞಾಪಿಸಿದನು,” ಎಂದು ಉತ್ತರಕೊಟ್ಟರು.


ಅವರು ಎಕ್ರೋನ್ ಮೊದಲುಗೊಂಡು ಗತ್ ಊರಿನವರೆಗೆ ಇಸ್ರಯೇಲರಿಂದ ಕಿತ್ತುಕೊಂಡಿದ್ದ ಎಲ್ಲ ಪಟ್ಟಣಗಳು ಇಸ್ರಯೇಲರಿಗೆ ದೊರಕಿದವು. ಅವುಗಳಿಗೆ ಸೇರಿದ ಗ್ರಾಮಗಳನ್ನೂ ಇಸ್ರಯೇಲರು ಫಿಲಿಷ್ಟಿಯರಿಂದ ತೆಗೆದುಕೊಂಡರು. ಇಸ್ರಯೇಲರಿಗೂ ಅಮೋರಿಯರಿಗೂ ಸಮಾಧಾನವಿತ್ತು.


ಆದುದರಿಂದ ಅವರು ದೇವರ ಮಂಜೂಷವನ್ನು ಎಕ್ರೋನಿಗೆ ಕಳುಹಿಸಿದರು. ಅದು ಅಲ್ಲಿಗೆ ಬಂದಾಗ ಆ ಊರಿನವರು, “ನೋಡಿ, ನಮ್ಮನ್ನೂ ನಮಗೆ ಸೇರಿದವರನ್ನೂ ಕೊಲ್ಲುವುದಕ್ಕಾಗಿಯೇ ಇಸ್ರಯೇಲ್ ದೇವರ ಮಂಜೂಷವನ್ನು ಇಲ್ಲಿಗೆ ಕಳುಹಿಸಿದ್ದಾರೆ,” ಎಂದು ಕೂಗಾಡಿದರು.


ಎಕ್ರೋನ್ ಸಂಸ್ಥಾನ ಮತ್ತು ಅದಕ್ಕೆ ಸೇರಿದ ಗ್ರಾಮ-ನಗರಗಳು;


ಅದು ಆ ಬೆಟ್ಟದ ತುದಿಯಿಂದ ಮುಂದೆ ನೆಪ್ತೋಹ ಬುಗ್ಗೆ, ಎಫ್ರೋನ್ ಬೆಟ್ಟದ ನಗರಗಳು ಇವುಗಳ ಮೇಲೆ ಕಿರ್ಯತ್ಯಾರೀಮ್ ಎನಿಸಿಕೊಳ್ಳುವ ಬಾಲಾ ಎಂಬ ಊರಿಗೆ ಹೋಗುತ್ತದೆ.


ಅಲ್ಲಿಂದ ಪಶ್ಚಿಮದಲ್ಲಿ ಇರುವ ಸೇಯಿರ್ ಬೆಟ್ಟದ ಕಡೆಗೆ ತಿರುಗಿಕೊಂಡು ಕೆಸಾಲೋನ್ ಎನಿಸಿಕೊಳ್ಳುವ ಯಾರೀಮ್ ಬೆಟ್ಟದ ಉತ್ತರಮಾರ್ಗವಾಗಿ ಇಳಿಯುತ್ತಾ ಬೇತ್ ಷೆಮೆಷಿಗೂ ಅಲ್ಲಿಂದ ತಿಮ್ನಾ ಊರಿಗೂ ಬಂದು


ಮಹಾಸಾಗರದ ತೀರವೇ ಪಶ್ಚಿಮ ಎಲ್ಲೆ, ಯೆಹೂದ ಗೋತ್ರಗಳ ನಾಡಿನ ಸುತ್ತಣ ಎಲ್ಲೆಗಳು ಇವೇ.


ಇಸ್ರಯೇಲರೂ ಯೆಹೂದ್ಯರೂ ಎದ್ದು ಆರ್ಭಟಿಸಿ ಫಿಲಿಷ್ಟಿಯರನ್ನು ಕಣಿವೆಯ ದಾರಿಯವರೆಗೂ ಎಕ್ರೋನಿನ ಬಾಗಿಲುಗಳವರೆಗೂ ಹಿಂದಟ್ಟಿದರು. ಫಿಲಿಷ್ಟಿಯರ ಹೆಣಗಳು ಶಾರಯಿಮಿನಿಂದ ಗತ್, ಎಕ್ರೋನ್ ಪಟ್ಟಣಗಳವರೆಗೂ ಬಿದ್ದಿದ್ದವು.


‘ಪಶ್ಚಿಮ ದಿಕ್ಕಿನಲ್ಲಿ ಮಹಾಸಮುದ್ರದ ದಡವೇ ನಿಮ್ಮ ನಾಡಿನ ಮೇರೆಯಾಗಿರುವುದು.


ಅನಂತರ ಅವರು ಗಾಜಾ, ಅಷ್ಕೆಲೋನ್, ಎಕ್ರೋನ್ ಎಂಬ ಪಟ್ಟಣಗಳನ್ನೂ ಅವುಗಳ ಮೇರೆಗಳನ್ನೂ ಸ್ವಾಧೀನಮಾಡಿಕೊಂಡರು.


ಫಿಲಿಷ್ಟಿಯದ ರಾಜರೆಲ್ಲರನ್ನು ಕೂಡಿಸಿ, “ಇಸ್ರಯೇಲ್ ದೇವರ ಮಂಜೂಷವನ್ನು ಏನು ಮಾಡೋಣ?” ಎಂದು ವಿಚಾರಿಸಿದರು. ಅವರು ಅದನ್ನು ಗತ್ ಊರಿಗೆ ಕಳುಹಿಸಬೇಕೆಂದು ನಿರ್ಣಯಿಸಿದರು. ಹಾಗೆಯೇ ಇಸ್ರಯೇಲ್ ದೇವರ ಮಂಜೂಷವನ್ನು ಅಲ್ಲಿಗೆ ಕಳುಹಿಸಿದರು.


ಉಜ್ಜೀಯನು ಫಿಲಿಷ್ಟಿಯರ ಮೇಲೆ ಯುದ್ಧಕ್ಕೆ ಹೊರಟು ಗತ್‍ಊರು, ಯಬ್ನೆ, ಅಷ್ಡೋದ್ ಎಂಬ ಪಟ್ಟಣಗಳ ಗೋಡೆಗಳನ್ನು ಕೆಡವಿಬಿಟ್ಟು ಅಷ್ಡೋದಿನ ಮತ್ತು ಫಿಲಿಷ್ಟಿಯರ ಪ್ರಾಂತಗಳಲ್ಲಿ ಪಟ್ಟಣಗಳನ್ನು ಕಟ್ಟಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು