Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 15:19 - ಕನ್ನಡ ಸತ್ಯವೇದವು C.L. Bible (BSI)

19 ಅವಳು, “ನನಗೊಂದು ಕೊಡುಗೆ ಬೇಕು. ನನ್ನನ್ನು ಬೆಂಗಾಡಿಗೆ ಕೊಟ್ಟುಬಿಟ್ಟಿದ್ದೀರಲ್ಲವೆ? ಬುಗ್ಗೆಗಳಿರುವ ಸ್ಥಳವನ್ನು ನನಗೆ ಕೊಡಿ,” ಎಂದಳು. ಆಗ ಕಾಲೇಬನು ಅವಳಿಗೆ ಬುಗ್ಗೆಗಳಿದ್ದ ಮೇಲಣ ಹಾಗೂ ಕೆಳಗಣ ಸ್ಥಳಗಳನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆಕೆಯು “ನನಗೊಂದು ಕೊಡುಗೆ ಬೇಕು. ನನ್ನನ್ನು ದಕ್ಷಿಣ ದೇಶದ ಬೆಂಗಾಡಿಗೆ (ಬರಡು ಭೂಮಿ) ಕೊಟ್ಟುಬಿಟ್ಟೆಯಲ್ಲಾ? ಬುಗ್ಗೆಗಳಿರುವ ಸ್ಥಳವನ್ನು ನನಗೆ ಕೊಡು” ಎಂದಳು. ಆಗ ಅವನು ಆಕೆಗೆ ಮೇಲಣ ಮತ್ತು ಕೆಳಗಣ ಬುಗ್ಗೆಗಳನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನನಗೊಂದು ದಾನ ಕೊಡಬೇಕು; ನನ್ನನ್ನು ಬೆಗ್ಗಾಡಿಗೆ ಕೊಟ್ಟುಬಿಟ್ಟಿಯಲ್ಲಾ; ಬುಗ್ಗೆಗಳಿರುವ ಸ್ಥಳವನ್ನು ನನಗೆ ಕೊಡು ಅಂದಳು. ಆಗ ಅವನು ಆಕೆಗೆ ಮೇಲಣ ಮತ್ತು ಕೆಳಗಣ ಬುಗ್ಗೆಗಳನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಅದಕ್ಕೆ ಅವಳು “ನನ್ನನ್ನು ಆಶೀರ್ವದಿಸು. ನೀನು ನನಗೆ ನೆಗೆವ್‌ನಲ್ಲಿ ಮರುಭೂಮಿಯನ್ನು ಕೊಟ್ಟಿರುವೆ. ದಯವಿಟ್ಟು ನೀರಿರುವ ಭೂಮಿಯನ್ನು ಸ್ವಲ್ಪಕೊಡು” ಎಂದು ಕೇಳಿಕೊಂಡಳು. ಅವಳ ಕೋರಿಕೆಗನುಸಾರವಾಗಿ ಕಾಲೇಬನು ಮೇಲಿನ ಮತ್ತು ಕೆಳಗಿನ ನೀರಿನ ಬುಗ್ಗೆಗಳನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅದಕ್ಕೆ ಅವಳು ಅವನಿಗೆ, “ನನಗೆ ಒಂದು ಸಹಾಯಮಾಡಬೇಕು. ಮೊದಲು ದಕ್ಷಿಣ ಹೊಲವನ್ನು ಕೊಟ್ಟೆ; ನೀರಿನ ಬುಗ್ಗೆಗಳನ್ನು ಸಹ ನೀನು ನನಗೆ ಕೊಡು,” ಎಂದಳು. ಆಗ ಕಾಲೇಬನು ಅವಳಿಗೆ ಮೇಲಿನ ಹಾಗೂ ಕೆಳಗಿನ ನೀರಿನ ಬುಗ್ಗೆಗಳನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 15:19
8 ತಿಳಿವುಗಳ ಹೋಲಿಕೆ  

ಆದ್ದರಿಂದಲೇ, ನೀವು ವಾಗ್ದಾನಮಾಡಿದ ಕೊಡುಗೆಯನ್ನು ಸಂಗ್ರಹಿಸುವ ಏರ್ಪಾಡನ್ನು ಮಾಡುವಂತೆ ಈ ಸಹೋದರರನ್ನು ನಮಗೆ ಮುಂಚಿತವಾಗಿಯೇ ನಿಮ್ಮ ಬಳಿಗೆ ಕಳುಹಿಸುವುದು ಉಚಿತವೆಂದು ನನಗೆ ತೋಚಿತು. ಹೀಗೆ ಈ ಕೊಡುಗೆ ಬಲಾತ್ಕಾರವಾದ ವಸೂಲಿ ಆಗಿರದೆ ಮನಃಪೂರ್ವಕವಾಗಿ ಕೊಟ್ಟ ನಿಧಿ ಆಗಿರುತ್ತದೆ.


ನಿಮ್ಮ ದಾಸಿ ತಂದ ಈ ಕಾಣಿಕೆಯನ್ನು ಅಂಗೀಕರಿಸಿರಿ. ಅದು ತಮ್ಮ ಸೇವಕರಿಗೆ ಸಲ್ಲಲಿ.


ಯೆಹೂದ ಕುಲ ಕುರಿತು ಮೋಶೆ ಹೇಳಿದ್ದು: “ಸರ್ವೇಶ್ವರಾ, ಯೆಹೂದನ ಮೊರೆಯನ್ನಾಲಿಸು ಬಂಧುಗಳೊಡನೆ ಅವನನ್ನು ಮರಳಿ ಸೇರಿಸು ತನ್ನ ಹಕ್ಕುಬಾಧ್ಯತೆಗಳನ್ನು ಕಾದಿರಿಸಿಕೊಳ್ಳಲು ಶತ್ರುಗಳ ಕೈಯಿಂದ ಅವನನ್ನು ತಪ್ಪಿಸು.”


ದೇವರ ಕೃಪೆಯಿಂದ ನನಗೆ ಬೇಕಾದುದೆಲ್ಲ ಇದೆ; ಆದಕಾರಣ ನಾನು ಸಮರ್ಪಿಸುವ ಕಾಣಿಕೆಯನ್ನು ತಾವು ದಯವಿಟ್ಟು ಅಂಗೀಕರಿಸಬೇಕು,” ಎಂದು ಹೇಳಿ ಒತ್ತಾಯಪಡಿಸಿದ್ದರಿಂದ ಏಸಾವನು ಆ ಕಾಣಿಕೆಯನ್ನು ತೆಗೆದುಕೊಂಡನು.


ತರುವಾಯ ಅಲ್ಲಿಂದ ಮುಂದ ಮುಂದಕ್ಕೆ ಸಾಗುತ್ತಾ ಕಾನಾನ್ ನಾಡಿನ ದಕ್ಷಿಣ ಪ್ರಾಂತ್ಯಕ್ಕೆ ಬಂದನು.


ಆಕೆ ಮನೆ ಸೇರಿದಾಗ ತನ್ನ ತಂದೆಯ ಬಳಿ ಭೂಮಿಯನ್ನು ಕೇಳಬೇಕೆಂದು ಒತ್ನಿಯೇಲನು ಅವಳನ್ನು ಪ್ರೋತ್ಸಾಹಿಸಿದನು. ಅಂತೆಯೇ ಅವಳು ಹೊರಟು ಹೇಸರಗತ್ತೆ ಮೇಲಿಂದ ಇಳಿದದ್ದೇ ಕಾಲೇಬನು, “ನಿನಗೇನು ಬೇಕು?” ಎಂದು ಕೇಳಿದನು.


ಯೆಹೂದ ಕುಲದ ಗೋತ್ರಗಳಿಗೆ ಸಿಕ್ಕಿದ ಸೊತ್ತಿನ ವಿವರ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು