Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 16:10 - ಕನ್ನಡ ಸತ್ಯವೇದವು C.L. Bible (BSI)

10 ಅವರು ಗೆಜೆರಿನಲ್ಲಿದ್ದ ಕಾನಾನ್ಯರನ್ನು ಹೊರಡಿಸದೆ ಹೋದುದರಿಂದ ಅವರು ಇಂದಿಗೂ ಎಫ್ರಯಿಮ್ಯರ ನಡುವೆ ಊಳಿಗದವರಾಗಿದ್ದುಕೊಂಡು ಅವರಿಗೆ ಸೇವೆಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವರು ಗೆಜೆರಿನಲ್ಲಿದ್ದ ಕಾನಾನ್ಯರನ್ನು ಹೊರಡಿಸದೆ ಇದ್ದುದರಿಂದ ಅವರು ಇಂದಿನವರೆಗೂ ಎಫ್ರಾಯೀಮ್ಯರ ಮಧ್ಯದಲ್ಲಿ ದಾಸತ್ವದಲ್ಲಿದ್ದುಕೊಂಡು ಅವರಿಗೋಸ್ಕರ ಸೇವೆ ಮಾಡುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವರು ಗೆಜೆರಿನಲ್ಲಿದ್ದ ಕಾನಾನ್ಯರನ್ನು ಹೊರಡಿಸದೆ ಇದ್ದದರಿಂದ ಅವರು ಇಂದಿನವರೆಗೂ ಎಫ್ರಾಯೀಮ್ಯರ ಮಧ್ಯದಲ್ಲಿ ದಾಸತ್ವದಲ್ಲಿದ್ದುಕೊಂಡು ಅವರಿಗೋಸ್ಕರ ಕೆಲಸ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆದರೆ ಎಫ್ರಾಯೀಮಿನ ಜನರಿಗೆ ಗೆಜೆರಿನಲ್ಲಿದ್ದ ಕಾನಾನ್ಯರನ್ನು ಅಲ್ಲಿಂದ ಹೊರದೂಡುವುದು ಸಾಧ್ಯವಾಗಲಿಲ್ಲ. ಅದಕ್ಕಾಗಿ ಇಂದಿಗೂ ಕಾನಾನ್ಯರು ಎಫ್ರಾಯೀಮ್ ಜನರೊಂದಿಗೆ ಇರುತ್ತಾರೆ. ಆದರೆ ಕಾನಾನ್ಯರು ಎಫ್ರಾಯೀಮ್ ಜನರ ದಾಸರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವರು ಗೆಜೆರಿನಲ್ಲಿ ವಾಸವಾಗಿದ್ದ ಕಾನಾನ್ಯರನ್ನು ಹೊರಡಿಸದೆ ಇದ್ದುದರಿಂದ, ಎಫ್ರಾಯೀಮ್ಯರ ಮಧ್ಯದಲ್ಲಿ ಕಾನಾನ್ಯರು ಈವರೆಗೂ ಅವರಲ್ಲಿ ದಾಸತ್ವದಲ್ಲಿದ್ದುಕೊಂಡು ಕೆಲಸಮಾಡುವವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 16:10
12 ತಿಳಿವುಗಳ ಹೋಲಿಕೆ  

ಎಫ್ರಯಿಮ್ ಕುಲದವರು ಗೆಜೆರಿನಲ್ಲಿದ್ದ ಕಾನಾನ್ಯರನ್ನು ಹೊರಡಿಸಿಬಿಡಲಿಲ್ಲ. ಆದುದರಿಂದ ಅವರು ಅವರ ನಡುವೆಯೇ ವಾಸಿಸಿದರು.


ಈಜಿಪ್ಟಿನ ಅರಸ ಫರೋಹನು, ಗೆಜೆರ್ ಪಟ್ಟಣವನ್ನು ಹಿಡಿದು ಅದನ್ನು ವಶಮಾಡಿಕೊಂಡು, ಸೊಲೊಮೋನನ ಹೆಂಡತಿಯಾದ ತನ್ನ ಮಗಳಿಗೆ ಉಡುಗೊರೆಯಾಗಿ ಕೊಟ್ಟಿದ್ದನು.


ಇಸ್ರಯೇಲರು ಬಲಗೊಂಡ ಮೇಲೂ ಕಾನಾನ್ಯರನ್ನು ಹೊರದೂಡದೆ ಅವರನ್ನು ಜೀತದಾರರನ್ನಾಗಿಸಿಕೊಂಡರು.


ಯೆಬೂಸಿಯ ಮೊದಲಾದ ಇತರ ಜನಾಂಗಗಳ ಸಂತಾನದವರೆಲ್ಲರನ್ನು ಬಿಟ್ಟೀ ಕೆಲಸಕ್ಕಾಗಿ ಇಟ್ಟಿದ್ದನು. ಇಂದಿನವರೆಗೂ ಅವರು ಬಿಟ್ಟೀ ಕೆಲಸದವರಾಗಿಯೇ ಇರುತ್ತಾರೆ.


ಜೆರುಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಡಿಸಲು ಯೆಹೂದ ಕುಲದವರಿಂದ ಆಗದೆ ಹೋಯಿತು. ಆದುದರಿಂದ ಅವರು ಇಂದಿನವರೆಗೂ ಯೆಹೂದ ಕುಲದವರೊಡನೆ ಜೆರುಸಲೇಮಿನಲ್ಲೇ ವಾಸವಾಗಿದ್ದಾರೆ.


ಇದಲ್ಲದೆ ಯೆಹೋಶುವನು ಲಾಕೀಷಿನವರ ಸಹಾಯಕ್ಕೆ ಬಂದ ಗೆಜೆರಿನ ಅರಸನಾದ ಹೋರಾಮನನ್ನೂ ಅವನ ಪ್ರಜೆಗಳೆಲ್ಲರನ್ನೂ ಸದೆಬಡಿದನು. ಒಬ್ಬನೂ ಉಳಿಯಲಿಲ್ಲ.


ಇದಲ್ಲದೆ, ಎಫ್ರಯಿಮ್ ಕುಲದವರಿಗೆ ಮನಸ್ಸೆ ಕುಲದವರ ಮಧ್ಯೆ ಪ್ರತ್ಯೇಕವಾದ ಕೆಲವು ನಗರಗಳೂ ಅವಕ್ಕೆ ಸೇರಿದ ಗ್ರಾಮಗಳೂ ದೊರಕಿದವು.


ಆದರೆ ಮನಸ್ಸೆಯವರು ಆ ನಗರಗಳ ನಿವಾಸಿಗಳನ್ನು ಹೊರದೂಡಲಾಗಲಿಲ್ಲ. ಕಾನಾನ್ಯರಿಗೆ ಅಲ್ಲೇ ವಾಸಿಸಲು ಅನುಕೂಲವಾಯಿತು.


ಸರ್ವೇಶ್ವರನ ಆಲಯ, ಅರಮನೆ, ಮಿಲ್ಲೋಕೋಟೆ, ಜೆರುಸಲೇಮಿನ ಪೌಳಿಗೋಡೆ, ಹಾಚೋರ್, ಮೆಗಿದ್ದೋ ಹಾಗು ಗೆಜೆರ್ ಇವುಗಳನ್ನು ಸೊಲೊಮೋನನು ಬಿಟ್ಟೀಕೆಲಸದವರಿಂದ ಕಟ್ಟಿಸಿದನು.


ಅವರು ಇಂದಿನವರೆಗೂ ಬಿಟ್ಟೀಕೆಲಸದವರಾಗಿರುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು