Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 17:1 - ಕನ್ನಡ ಸತ್ಯವೇದವು C.L. Bible (BSI)

1 ಜೋಸೆಫನ ಚೊಚ್ಚಲ ಮಗ ಮನಸ್ಸೆಯ ವಂಶದವರಿಗೆ ದೊರಕಿದ ಸೊತ್ತಿನ ವಿವರ ಇದು: ಮನಸ್ಸೆಯ ಹಿರಿಯ ಮಗನೂ ಗಿಲ್ಯಾದನ ತಂದೆಯೂ ಆದ ಮಾಕೀರನು ಯುದ್ಧವೀರನು. ಆದ್ದರಿಂದ ಅವನಿಗೆ ಗಿಲ್ಯಾದ, ಬಾಷಾನ ಎಂಬ ಪ್ರಾಂತ್ಯಗಳು ಸಿಕ್ಕಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೋಸೇಫನ ಚೊಚ್ಚಲ ಮಗನಾದ ಮನಸ್ಸೆಯ ವಂಶದವರಿಗೆ ಸಿಕ್ಕಿದ ಸ್ವತ್ತಿನ ವಿವರ: ಮನಸ್ಸೆಯ ಹಿರಿಯ ಮಗನೂ ಗಿಲ್ಯಾದನ ತಂದೆಯೂ ಆಗಿರುವ ಮಾಕೀರನು ಯುದ್ಧವೀರನಾಗಿದ್ದನು. ಆದ್ದರಿಂದ ಅವನಿಗೆ ಗಿಲ್ಯಾದ್, ಬಾಷಾನ್ ಎಂಬ ಪ್ರಾಂತ್ಯಗಳು ಸಿಕ್ಕಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೋಸೇಫನ ಚೊಚ್ಚಲಮಗನಾದ ಮನಸ್ಸೆಯ ವಂಶದವರಿಗೆ ಸಿಕ್ಕಿದ ಸ್ವಾಸ್ತ್ಯದ ವಿವರ. ಮನಸ್ಸೆಯ ಹಿರೀಮಗನೂ ಗಿಲ್ಯಾದನ ತಂದೆಯೂ ಆಗಿರುವ ಮಾಕೀರನು ಯುದ್ಧವೀರನಾದದರಿಂದ ಅವನಿಗೆ ಗಿಲ್ಯಾದ್, ಬಾಷಾನ್ ಎಂಬ ಪ್ರಾಂತಗಳು ಸಿಕ್ಕಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆಮೇಲೆ ಮನಸ್ಸೆ ಕುಲದವರಿಗೆ ಭೂಮಿಯನ್ನು ಕೊಡಲಾಯಿತು. ಮನಸ್ಸೆಯು ಯೋಸೇಫನ ಚೊಚ್ಚಲ ಮಗನು. ಗಿಲ್ಯಾದನ ತಂದೆಯಾದ ಮಾಕೀರನು ಮನಸ್ಸೆಯ ಚೊಚ್ಚಲ ಮಗನು. ಮಾಕೀರನು ವೀರ ಸೈನಿಕನಾಗಿದ್ದನು. ಈ ಕಾರಣದಿಂದ ಗಿಲ್ಯಾದ್ ಮತ್ತು ಬಾಷಾನ್ ಕ್ಷೇತ್ರಗಳನ್ನು ಮಾಕೀರ ಮನೆತನದವರಿಗೆ ಕೊಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇದಲ್ಲದೆ ಮನಸ್ಸೆಯ ಗೋತ್ರಕ್ಕೂ ಭಾಗ ದೊರೆಯಿತು. ಏಕೆಂದರೆ ಅವನು ಯೋಸೇಫನಿಗೆ ಚೊಚ್ಚಲ ಮಗನಾಗಿದ್ದನು. ಮನಸ್ಸೆಯ ಹಿರಿಯ ಮಗ ಗಿಲ್ಯಾದನ ತಂದೆಯಾದ ಮಾಕೀರನು ಶೂರನಾದುದರಿಂದ ಗಿಲ್ಯಾದ್, ಬಾಷಾನ್ ಎಂಬ ಪ್ರಾಂತ್ಯಗಳು ಅವನ ಪಾಲಿಗೆ ಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 17:1
20 ತಿಳಿವುಗಳ ಹೋಲಿಕೆ  

ಮನಸ್ಸೆ ಕುಲದ ಕುಟುಂಬಗಳು ಯಾವುವೆಂದರೆ - ಮಾಕೀರನಿಂದ ಮಾಕೀರ್ಯರು ಮತ್ತು ಮಾಕೀರನ ಮಗ ಗಿಲ್ಯಾದನಿಂದ ಗಿಲ್ಯಾದ್ಯರು ಎಂಬ ವಂಶಸ್ಥರು.


ಜೇಷ್ಠಮಗ ಹುಟ್ಟಿದಾಗ ಜೋಸೆಫನು, “ನಾನು ನನ್ನ ಕಷ್ಟದುಃಖವನ್ನೂ ತಂದೆಯ ಮನೆಯವರನ್ನೂ ಮರೆಯುವಂತೆ ದೇವರು ಮಾಡಿದ್ದಾರಲ್ಲಾ!” ಎಂದುಕೊಂಡು ಆ ಮಗುವಿಗೆ, ‘ಮನಸ್ಸೆ’ ಎಂದು ಹೆಸರಿಟ್ಟನು.


ಎಫ್ರಯಿಮನ ಮಕ್ಕಳ ಮೊಮ್ಮಕ್ಕಳನ್ನೂ ನೋಡಿದನು. ಮನಸ್ಸೆಯ ಮಗನಾದ ಮಾಕೀರನಿಗೂ ಮಕ್ಕಳು ಹುಟ್ಟಿದಾಗ ಜೋಸೆಫನು ಅವರನ್ನೂ ತನ್ನ ಮಡಲಿಗೆ ಬರಮಾಡಿಕೊಂಡನು.


ಈಜಿಪ್ಟಿನಲ್ಲಿ ಜೋಸೆಫನಿಗೆ ಓನ್ ಪಟ್ಟಣದ ಆಚಾರ್ಯ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯಲ್ಲಿ ಹುಟ್ಟಿದ ಮನಸ್ಸೆ ಮತ್ತು ಎಫ್ರಯಿಮ್.


“ಹಾಗಲ್ಲ ಅಪ್ಪಾ, ಇವನೇ ಜೇಷ್ಠ ಪುತ್ರ; ಬಲಗೈಯನ್ನು ಇವನ ತಲೆಯ ಮೇಲೆ ಇಡು”, ಎಂದು ಹೇಳಿದ.


ಆದರೆ ಗೆಷೂರ್ಯರ ಮತ್ತು ಅರಾಮ್ಯರ ರಾಜ್ಯಗಳವರು ಯಾಯೀರನ ಹಾಗೂ ಕೆನತ್ ಪ್ರಾಂತ್ಯದ ಗ್ರಾಮಗಳನ್ನೂ ಅವುಗಳ ಸಮೀಪದ ಪಟ್ಟಣಗಳನ್ನೂ ಸೇರಿ ಒಟ್ಟು ಅರುವತ್ತು ಪಟ್ಟಣಗಳನ್ನು ಗೆದ್ದುಕೊಂಡರು. ಅಲ್ಲಿ ವಾಸಿಸಿದ್ದ ಎಲ್ಲಾ ಜನರೂ ಗಿಲ್ಯಾದನ ತಂದೆ ಮಾಕೀರನ ವಂಶಜರೇ ಆಗಿದ್ದರು.


ಬಂದರು ಅಮಾಲೇಕ್ಯರ ಪ್ರದೇಶದೊಳು ನೆಲೆಗೊಂಡ ಎಫ್ರಯೀಮ್ಯರು, ಅವರೊಂದಿಗೆ ಬಂದರು ಬೆನ್ಯಾಮೀನ್ಯರು, ಮಾಕೀರನ ಗೋತ್ರದ ಪ್ರಧಾನರು, ಜೆಬುಲೂನ್ ಕುಲದೊಳು ದಂಡಧಾರಿಗಳಾದ ಸೇನಾನಾಯಕರು.


ತಿರಸ್ಕರಿಸಲ್ಪಟ್ಟವಳ ಮಗನೇ ಚೊಚ್ಚಲವನೆಂದು ಒಪ್ಪಿ, ಅವನಿಗೆ ಎರಡು ಭಾಗಗಳನ್ನು ಕೊಡಬೇಕು. ಅವನೇ ತಂದೆಯ ಪ್ರಥಮಫಲ, ಅವನೇ ಚೊಚ್ಚಲುತನದ ಹಕ್ಕಿಗೆ ಬಾಧ್ಯಸ್ತ.


ಹೀಗೆ ಮೋಶೆ ಗಾದ್ಯರಿಗು, ರೂಬೇನ್ಯರಿಗು, ಹಾಗು ಜೋಸೆಫನ ಮಗನಾದ ಮನಸ್ಸೆಯ ಕುಲದ ಅರ್ಧ ಜನರಿಗು ಅಮೋರಿಯರ ಅರಸನಾದ ಸೀಹೋನನ ರಾಜ್ಯವನ್ನು, ಬಾಷಾನಿನ ಅರಸನಾದ ಓಗನ ರಾಜ್ಯವನ್ನು, ಅವುಗಳ ಎಲ್ಲ ಊರುಗಳನ್ನು ಮತ್ತು ಆ ಊರುಗಳಿಗೆ ಸೇರಿದ ಎಲ್ಲ ಭೂಮಿಗಳನ್ನು ಕೊಟ್ಟನು.


ಜೋಸೆಫನ ಕುಮಾರ ಮನಸ್ಸೆಯ ವಂಶಕ್ಕೆ ಸೇರಿದವನು ಚಲ್ಪಹಾದ ಎಂಬವನು. ಇವನು ಮಾಕೀರನ ಮರಿಮಗ, ಗಿಲ್ಯಾದನ ಮೊಮ್ಮಗ ಹಾಗು ಹೇಫರನ ಮಗ. ಈ ಚಲ್ಪಹಾದನಿಗೆ ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ ಮತ್ತು ತಿರ್ಚಾ ಎಂಬ ಹೆಣ್ಣು ಮಕ್ಕಳಿದ್ದರು.


ತನ್ನ ತಂದೆ ಬಲಗೈಯನ್ನು ಎಫ್ರಯಿಮನ ತಲೆಯ ಮೇಲೆ ಇಟ್ಟದ್ದು ಜೋಸೆಫನಿಗೆ ಹಿಡಿಸಲಿಲ್ಲ. ಅವನು ಆ ಕೈಯನ್ನು ಹಿಡಿದು ಎಫ್ರಯಿಮನ ತಲೆಯಿಂದ ಎತ್ತಿ ಮನಸ್ಸೆಯ ತಲೆಯ ಮೇಲೆ ಇಡುವಂತೆ ತಂದೆಗೆ,


ಜೋಸೆಫನ ಮಗ ಮನಸ್ಸೆಯ ಉಳಿದ ಗಂಡು ಮಕ್ಕಳಾದ ಅಬೀಯೆಜೆರ್, ಹೇಲೆಕ್, ಅಸ್ರೀಯೇಲ್, ಶೆಕೆಮ್, ಹೇಫೆರ್, ಶಮೀದಾ, ಎಂಬವರ ವಂಶದವರಿಗೆ ಜೋರ್ಡನಿನ ಈಚೆಕಡೆ ಪಾಲು ಸಿಕ್ಕಿತು.


(ಮೋಶೆ ಮನಸ್ಸೆಕುಲದ ಅರ್ಧಜನರಿಗೆ ಬಾಷಾನಿನಲ್ಲಿ ಪಾಲನ್ನು ಕೊಟ್ಟಿದ್ದನು. ಉಳಿದ ಅರ್ಧಜನರಿಗೆ ಯೆಹೋಶುವನು ಜೋರ್ಡನಿನ ಪಶ್ಚಿಮದಲ್ಲಿ ಬೇರೆ ಕುಲದವರೊಂದಿಗೆ ಪಾಲುಕೊಟ್ಟಿದ್ದನು). ಯೆಹೋಶುವ ಅವರನ್ನು ಹೀಗೆ ಆಶೀರ್ವದಿಸಿ ತಮ್ಮ ಸ್ವಂತ ಸ್ಥಳಗಳಿಗೆ ಕಳಿಸುವಾಗ ಅವರಿಗೆ,


ನಫ್ತಾಲಿಯ ಸರಹದ್ದಿನ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ಮನಸ್ಸೆಗೆ ಒಂದು ಪಾಲು.


ಎರಡನೆಯ ಮಗನು ಹುಟ್ಟಿದಾಗ, ಯಾವ ದೇಶದಲ್ಲಿ ನನಗೆ ಸಂಕಷ್ಟವಿತ್ತೋ ಆ ದೇಶದಲ್ಲಿ ದೇವರು ನನಗೆ ಸಮೃದ್ಧಿಯನ್ನು ದಯಪಾಲಿಸಿದ್ದಾರೆ!” ಎಂದು ಆ ಮಗನಿಗೆ ‘ಎಫ್ರಾಯೀಮ್’ ಎಂದು ನಾಮಕರಣ ಮಾಡಿದನು.


ಗಿಲ್ಯಾದ್, ಆಶೇರ್, ಜೆಸ್ರೀಲ್, ಎಫ್ರಯಿಮ್, ಬೆನ್ಯಾಮೀನ್ ಇವುಗಳ ಜನರ ಮೇಲೆ ಮತ್ತು ಬೇರೆ ಎಲ್ಲ ಇಸ್ರಯೇಲರ ಮೇಲೆ ಅವನನ್ನು ಅರಸನನ್ನಾಗಿ ಮಾಡಿದನು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನೀವು ಇಸ್ರಯೇಲಿನ ಹನ್ನೆರಡು ಕುಲಗಳಿಗೆ ನಾಡನ್ನು ಬಾಧ್ಯವಾಗಿ ಹಂಚಿಕೊಡುವಾಗ ಮುಂದಿನ ಮೇರೆಗಳನ್ನು ಅನುಸರಿಸಬೇಕು. ಜೋಸೆಫಿಗೆ ಎರಡು ಪಾಲು ಸೇರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು