Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 17:2 - ಕನ್ನಡ ಸತ್ಯವೇದವು C.L. Bible (BSI)

2 ಜೋಸೆಫನ ಮಗ ಮನಸ್ಸೆಯ ಉಳಿದ ಗಂಡು ಮಕ್ಕಳಾದ ಅಬೀಯೆಜೆರ್, ಹೇಲೆಕ್, ಅಸ್ರೀಯೇಲ್, ಶೆಕೆಮ್, ಹೇಫೆರ್, ಶಮೀದಾ, ಎಂಬವರ ವಂಶದವರಿಗೆ ಜೋರ್ಡನಿನ ಈಚೆಕಡೆ ಪಾಲು ಸಿಕ್ಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೋಸೇಫನ ಮಗನಾಗಿರುವ ಮನಸ್ಸೆಯ ಉಳಿದ ಗಂಡು ಮಕ್ಕಳಾದ ಅಬೀಯೆಜೆರ್, ಹೇಲೆಕ್, ಅಸ್ರೀಯೇಲ್, ಶೆಕೆಮ್, ಹೇಫೆರ್, ಶೆಮೀದಾ ಎಂಬುವವರ ವಂಶದವರಿಗೆ ಯೊರ್ದನಿನ ಈಚೆಯಲ್ಲಿ ಸ್ವತ್ತು ಸಿಕ್ಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೋಸೇಫನ ಮಗನಾಗಿರುವ ಮನಸ್ಸೆಯ ಉಳಿದ ಗಂಡು ಮಕ್ಕಳಾದ ಅಬೀಯೆಜೆರ್, ಹೇಲೆಕ್, ಅಸ್ರೀಯೇಲ್, ಶೆಕೆಮ್, ಹೇಫೆರ್, ಶೆಮೀದಾ ಎಂಬವರ ವಂಶದವರಿಗೆ [ಯೊರ್ದನಿನ ಈಚೆಯಲ್ಲಿ] ಸ್ವಾಸ್ತ್ಯವು ಸಿಕ್ಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಮನಸ್ಸೆ ಕುಲದ ಅಬೀಯೆಜೆರ್, ಹೇಲೆಕ್, ಅಸ್ರೀಯೇಲ್, ಶೆಕೆಮ್, ಹೇಫೇರ್, ಶೆಮೀದಾ ಎಂಬವರ ವಂಶದವರಿಗೂ ಭೂಮಿಯನ್ನು ಕೊಡಲಾಯಿತು. ಇವರೆಲ್ಲರು ಯೋಸೇಫನ ಮಗನಾದ ಮನಸ್ಸೆಯ ಉಳಿದ ಗಂಡುಮಕ್ಕಳು. ಈ ಜನರ ವಂಶದವರೂ ತಮ್ಮ ಪಾಲಿನ ಭೂಮಿಯನ್ನು ಪಡೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಮನಸ್ಸೆಯ ಉಳಿದವರಿಗೆ ಅಬೀಯೆಜೆರನ ಮಕ್ಕಳಿಗೂ ಹೇಲೆಕ್‌ನ ಮಕ್ಕಳಿಗೂ ಅಸ್ರೀಯೇಲನ ಮಕ್ಕಳಿಗೂ ಶೆಕೆಮ್ ಮಕ್ಕಳಿಗೂ ಹೇಫೆರನ ಮಕ್ಕಳಿಗೂ ಶೆಮೀದಾನನ ಮಕ್ಕಳಿಗೂ ಅವರ ಕುಟುಂಬಗಳಿಗೆ ತಕ್ಕ ಸೊತ್ತು ದೊರೆಯಿತು. ಇವರು ತಮ್ಮ ಕುಟುಂಬಗಳ ಪ್ರಕಾರ ಯೋಸೇಫನ ಮಗನಾದ ಮನಸ್ಸೆಯ ಗಂಡು ಮಕ್ಕಳಾಗಿದ್ದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 17:2
6 ತಿಳಿವುಗಳ ಹೋಲಿಕೆ  

ಗಿಲ್ಯಾದನ ತಂಗಿ ಹಮ್ಮೋಲೆಕೆತಳು ಈಷ್ಹೋದ್, ಅಬೀಯೆಜೆರ್, ಮಹ್ಲ ಎಂಬ ಮೂರು ಮಕ್ಕಳಿಗೆ ಜನ್ಮವಿತ್ತಳು.


ಆಗ ಅವನು ಅವರಿಗೆ, “ನೀವು ಮಾಡಿದ ಕಾರ್ಯಕ್ಕೆ ಸರಿಸಮಾನ ಆದದ್ದನ್ನು ನಾನೇನು ಮಾಡಿದೆ? ಅಭೀಯಿಜೆರನವರು ಸುಗ್ಗಿಯಲ್ಲಿ ಕೂಡಿಸಿದ್ದಕ್ಕಿಂತಲೂ ಎಫ್ರಯಿಮ್ಯರು ಹಕ್ಕಲಾಯ್ದು ಕೂಡಿಸಿದ್ದು ಹೆಚ್ಚಾಗಿದೆಯಲ್ಲವೇ?


ಆಮೇಲೆ ಸರ್ವೇಶ್ವರನ ದೂತನು ಬಂದು ಒಫ್ರದಲ್ಲಿದ್ದ ಓಕ್ ಮರದ ಅಡಿಯಲ್ಲಿ ಕುಳಿತುಕೊಂಡನು. ಅದು ಅಬೀಯೆಜೆರನ ಗೋತ್ರದವನಾದ ಯೋವಾಷನದಾಗಿತ್ತು. ಅವನ ಮಗ ಗಿದ್ಯೋನನು ಮಿದ್ಯಾನ್ಯರಿಗೆ ಗೊತ್ತಾಗದ ಹಾಗೆ ಅಲ್ಲಿ ದ್ರಾಕ್ಷಿಯ ಆಲೆಯ ಮರೆಯಲ್ಲಿ ಗೋದಿಯನ್ನು ಬಡಿಯುತ್ತಿದ್ದನು.


ಜೋಸೆಫನ ಚೊಚ್ಚಲ ಮಗ ಮನಸ್ಸೆಯ ವಂಶದವರಿಗೆ ದೊರಕಿದ ಸೊತ್ತಿನ ವಿವರ ಇದು: ಮನಸ್ಸೆಯ ಹಿರಿಯ ಮಗನೂ ಗಿಲ್ಯಾದನ ತಂದೆಯೂ ಆದ ಮಾಕೀರನು ಯುದ್ಧವೀರನು. ಆದ್ದರಿಂದ ಅವನಿಗೆ ಗಿಲ್ಯಾದ, ಬಾಷಾನ ಎಂಬ ಪ್ರಾಂತ್ಯಗಳು ಸಿಕ್ಕಿದವು.


ಮನಸ್ಸೆಗೆ ಹುಟ್ಟಿದ ಮಾಕೀರನ ಮರಿಮಗನೂ ಗಿಲ್ಯಾದನ ಮೊಮ್ಮಗನೂ ಹೇಫೆರನ ಮಗನೂ ಆದ ಚಲ್ಪಹಾದನಿಗೆ ಹೆಣ್ಣು ಮಕ್ಕಳು ಹುಟ್ಟಿದರೇ ಹೊರತು ಗಂಡು ಮಕ್ಕಳು ಆಗಲಿಲ್ಲ. ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ ಎಂಬವರು ಅವನ ಹೆಣ್ಣುಮಕ್ಕಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು