Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 17:5 - ಕನ್ನಡ ಸತ್ಯವೇದವು C.L. Bible (BSI)

5 ಮನಸ್ಸೆ ಕುಲದ ಹೆಣ್ಣುಮಕ್ಕಳಿಗೆ ಗಂಡುಮಕ್ಕಳ ಸಮೇತ ಸೊತ್ತು ದೊರಕಿದ್ದರಿಂದ ಮನಸ್ಸೆಯವರಿಗೆ ಜೋರ್ಡನಿನ ಆಚೆಯಿದ್ದ ಬಾಷಾನ್ ಮತ್ತು ಗಿಲ್ಯಾದ್ ಪ್ರಾಂತ್ಯಗಳ ಜೊತೆಗೆ ಈಚೆಯಲ್ಲೂ ಹತ್ತುಪಾಲು ಸಿಕ್ಕಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಮನಸ್ಸೆ ಕುಲದ ಹೆಣ್ಣುಮಕ್ಕಳಿಗೆ ಗಂಡು ಮಕ್ಕಳ ಸಹಿತವಾಗಿ ಸ್ವಾಸ್ತ್ಯ ದೊರಕಿದ್ದರಿಂದ ಮನಸ್ಸೆಯವರಿಗೆ ಯೊರ್ದನಿನ ಆಚೆಯಲ್ಲಿ ಬಾಷಾನ್ ಮತ್ತು ಗಿಲ್ಯಾದ್ ಪ್ರಾಂತ್ಯಗಳ ಜೊತೆಗೆ ಈಚೆಯಲ್ಲಿಯೂ ಹತ್ತು ಪಾಲು ಸಿಕ್ಕಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಮನಸ್ಸೆಕುಲದ ಹೆಣ್ಣು ಮಕ್ಕಳಿಗೆ ಗಂಡು ಮಕ್ಕಳ ಸಂಗಡ ಸ್ವಾಸ್ತ್ಯದೊರಕಿದ್ದರಿಂದ ಮನಸ್ಸೆಯವರಿಗೆ ಯೊರ್ದನಿನ ಆಚೆಯಿದ್ದ ಬಾಷಾನ್ ಗಿಲ್ಯಾದ್ ಪ್ರಾಂತಗಳ ಹೊರತು ಈಚೆಯಲ್ಲಿಯೂ ಹತ್ತು ಪಾಲು ಸಿಕ್ಕಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಮನಸ್ಸೆ ಕುಲದವರು ಜೋರ್ಡನ್ ನದಿಯ ಪಶ್ಚಿಮದಲ್ಲಿ ಹತ್ತು ಭೂಭಾಗಗಳನ್ನು ಮತ್ತು ಆ ನದಿಯ ಮತ್ತೊಂದು ದಿಕ್ಕಿನಲ್ಲಿ ಗಿಲ್ಯಾದ್ ಮತ್ತು ಬಾಷಾನ್ ಎಂಬ ಮತ್ತೆರಡು ಭೂಭಾಗಗಳನ್ನು ಪಡೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೊರ್ದನ್ ನದಿ ಆಚೆಯಲ್ಲಿರುವ ಗಿಲ್ಯಾದ್, ಬಾಷಾನ್ ಎಂಬ ಪ್ರಾಂತ್ಯಗಳ ಜೊತೆಗೆ ಮನಸ್ಸೆಗೆ ಬಿದ್ದ ಚೀಟಿನಲ್ಲಿ ಈಚೆಯಲ್ಲಿಯೂ ಹತ್ತು ಪಾಲು ಸಿಕ್ಕಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 17:5
9 ತಿಳಿವುಗಳ ಹೋಲಿಕೆ  

ಜೋಸೆಫ್ಯರು ಯೆಹೋಶುವನಿಗೆ, “ನೀವು ಚೀಟುಹಾಕಿ, ನಮಗೆ ಒಂದೇ ಒಂದುಭಾಗವನ್ನು ಕೊಟ್ಟಿದ್ದೀರಿ, ಇದು ಸರಿಯೆ? ಸರ್ವೇಶ್ವರ ಸ್ವಾಮಿ ನಮ್ಮನ್ನು ಇಂದಿನವರೆಗೂ ಆಶೀರ್ವದಿಸಿ ನಮ್ಮನ್ನು ಮಹಾಜನಾಂಗವಾಗಿಸಿದ್ದಾರಲ್ಲವೆ?” ಎಂದು ಕೇಳಿಕೊಂಡರು.


ಗಿಲ್ಯಾದ್ ನಾಡು, ಗೆಷ್ಯೂರ ಮತ್ತು ಮಾಕತೀಯರ ಪ್ರಾಂತ್ಯಗಳು, ಹೆರ್ಮೋನ್ ಬೆಟ್ಟದ ಮೇಲಿನ ಪ್ರದೇಶ


ಇವರು ಮಹಾಯಾಜಕನಾದ ಎಲ್ಲಾಜಾರ್, ನೂನನ ಮಗ ಯೆಹೋಶುವ ಹಾಗೂ ಕುಲಾಧಿಪತಿಗಳ ಬಳಿಗೆ ಬಂದು, “ನಮ್ಮ ಅಣ್ಣತಮ್ಮಂದಿರೊಡನೆ ನಮಗೂ ಪಾಲುಕೊಡಬೇಕೆಂದು ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದ್ದಾರಲ್ಲವೆ?” ಎಂದು ಹೇಳಿದರು. ಯೆಹೋಶುವನು ಸರ್ವೇಶ್ವರನ ಅಪ್ಪಣೆಯಂತೆ ಅವರಿಗೆ ಅವರ ತಂದೆಯ ಅಣ್ಣತಮ್ಮಂದಿರ ಜೊತೆಗೆ ಸೊತ್ತನ್ನು ಪಾಲಾಗಿಕೊಟ್ಟನು.


ಗಿಲ್ಯಾದ್ ನಾಡು ಮನಸ್ಸೆಯ ಉಳಿದ ಗೋತ್ರಗಳಿಗೆ ಸಿಕ್ಕಿತು.


(ಮೋಶೆ ಮನಸ್ಸೆಕುಲದ ಅರ್ಧಜನರಿಗೆ ಬಾಷಾನಿನಲ್ಲಿ ಪಾಲನ್ನು ಕೊಟ್ಟಿದ್ದನು. ಉಳಿದ ಅರ್ಧಜನರಿಗೆ ಯೆಹೋಶುವನು ಜೋರ್ಡನಿನ ಪಶ್ಚಿಮದಲ್ಲಿ ಬೇರೆ ಕುಲದವರೊಂದಿಗೆ ಪಾಲುಕೊಟ್ಟಿದ್ದನು). ಯೆಹೋಶುವ ಅವರನ್ನು ಹೀಗೆ ಆಶೀರ್ವದಿಸಿ ತಮ್ಮ ಸ್ವಂತ ಸ್ಥಳಗಳಿಗೆ ಕಳಿಸುವಾಗ ಅವರಿಗೆ,


ನಫ್ತಾಲಿಯ ಸರಹದ್ದಿನ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ಮನಸ್ಸೆಗೆ ಒಂದು ಪಾಲು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು