Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 18:21 - ಕನ್ನಡ ಸತ್ಯವೇದವು C.L. Bible (BSI)

21 ಬೆನ್ಯಾಮೀನ್ ಗೋತ್ರಗಳಿಗೆ ದೊರಕಿದ ನಗರಗಳು ಯಾವುವೆಂದರೆ: ಜೆರಿಕೊ, ಬೇತ್ ಹೊಗ್ಲಾ, ಏಮೆಕ್ಕೆಚ್ಚೀಚ್, ಬೇತ್ ಅರಾಬಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಬೆನ್ಯಾಮೀನ್ ಗೋತ್ರಗಳ ಸ್ವತ್ತಿನ ಸುತ್ತಣ ಮೇರೆಯು ಇದೇ ಬೆನ್ಯಾಮೀನನ ಗೋತ್ರಗಳಿಗೆ ದೊರಕಿದ ಪಟ್ಟಣಗಳು ಯಾವುವೆಂದರೆ: ಯೆರಿಕೋ, ಬೇತ್‌ಹೊಗ್ಲಾ, ಏಮೆಕ್ಕೆಚ್ಚೀಚ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಬೆನ್ಯಾಮೀನ್ ಗೋತ್ರಗಳಿಗೆ ದೊರಕಿದ ಪಟ್ಟಣಗಳಾವವಂದರೆ - ಯೆರಿಕೋ, ಬೇತ್‍ಹೊಗ್ಲಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಬೆನ್ಯಾಮೀನ್ ಗೋತ್ರಗಳಿಗೆ ದೊರಕಿದ ಪಟ್ಟಣಗಳು: ಜೆರಿಕೊ, ಬೇತ್‌ಹೊಗ್ಲಾ, ಏಮೆಕ್ಕೆಚ್ಚೀಚ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಬೆನ್ಯಾಮೀನನ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ದೊರಕಿರುವ ಪಟ್ಟಣಗಳ ವಿವರ: ಯೆರಿಕೋ, ಬೇತ್ ಹೊಗ್ಲಾ, ಏಮೆಕ್ ಕೆಚ್ಚೀಚ್ ತಗ್ಗು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 18:21
12 ತಿಳಿವುಗಳ ಹೋಲಿಕೆ  

ಅದರ ಉತ್ತರ ದಿಕ್ಕಿನ ಎಲ್ಲೆ ಜೋರ್ಡನ್ ನದಿಯಿಂದ ತೊಡಗಿ ಜೆರಿಕೋವಿನ ಉತ್ತರದಲ್ಲಿರುವ ಗುಡ್ಡದ ಮೇಲಿಂದ ಪಶ್ಚಿಮಕ್ಕೆ ಹೋಗಿ, ದಿಣ್ಣೆ ಹತ್ತಿ ಬೆತಾವೆನಿನ ಬಯಲಿನಲ್ಲಿ ಕೊನೆಗೊಳ್ಳುತ್ತದೆ.


ಯೇಸುಸ್ವಾಮಿ ಜೆರಿಕೊ ಪಟ್ಟಣವನ್ನು ಪ್ರವೇಶಿಸಿ ಅದರ ಬೀದಿಗಳಲ್ಲಿ ಹಾದುಹೋಗುತ್ತಿದ್ದರು.


ಆಗ ಯೇಸು ಅವನಿಗೆ ಹೀಗೆಂದು ವಿವರಿಸಿದರು: “ಒಬ್ಬನು ಜೆರುಸಲೇಮಿನಿಂದ ಇಳಿದು ಜೆರಿಕೋವಿಗೆ ಪ್ರಯಾಣ ಮಾಡುತ್ತಿದ್ದಾಗ, ದರೋಡೆಗಾರರ ಕೈಗೆ ಸಿಕ್ಕಿಬಿದ್ದ. ದರೋಡೆಗಾರರು ಅವನನ್ನು ಸುಲಿಗೆಮಾಡಿ, ಹೊಡೆದು ಬಡಿದು, ಅರೆಜೀವ ಮಾಡಿ ಅಲ್ಲೇ ಬಿಟ್ಟುಹೋದರು.


ಅಲ್ಲಿಂದ ಆ ಎಲ್ಲೆ ಬೇತ್ ಹೊಗ್ಲಾ ಎಂಬ ಊರಿನ ಉತ್ತರದಲ್ಲಿರುವ ಗುಡ್ಡದ ಮೇಲೆ ಲವಣಸಮುದ್ರದ ಉತ್ತರ ಮೂಲೆಗೆ ಹೋಗಿ ಜೋರ್ಡನ್ ನದಿಯು ಆ ಸಮುದ್ರಕ್ಕೆ ಕೂಡುವ ಸ್ಥಳದಲ್ಲಿ ಮುಗಿಯುತ್ತದೆ. ಇದೇ ದಕ್ಷಿಣದಿಕ್ಕಿನ ಸರಹದ್ದು.


ಅದರ ಉತ್ತರ ದಿಕ್ಕಿನ ಎಲ್ಲೆ ಜೋರ್ಡನ್ ನದಿಯು ಲವಣಸಮುದ್ರವನ್ನು ಕೂಡುವ ಸ್ಥಳದಿಂದ ತೊಡಗಿ ಬೇತ್ ಹೊಗ್ಲಾ, ಬೇತ್ ಅರಾಬದ ಉತ್ತರ ಪ್ರಾಂತ್ಯ, ರೂಬೇನನ ಮಗ ಬೋಹನನ ಬಂಡೆ, ಆಕೋರಿನ ಕಣಿವೆ


ಜೆರಿಕೋದ ಜನರು ಇಸ್ರಯೇಲರಿಗೆ ಹೆದರಿ ತಮ್ಮ ನಗರದ ಬಾಗಿಲುಗಳನ್ನು ಭದ್ರವಾಗಿ ಮುಚ್ಚಿದ್ದರು. ಯಾರೂ ಹೊರಗೆ ಬರುತ್ತಿರಲಿಲ್ಲ, ಒಳಗೆ ಹೋಗುತ್ತಿರಲಿಲ್ಲ.


ನೂನನ ಮಗನಾದ ಯೆಹೋಶುವನು ಕಾನಾನ್ ನಾಡನ್ನೂ ಜೆರಿಕೋ ನಗರವನ್ನೂ ನೋಡುವುದಕ್ಕೋಸ್ಕರ ಶಿಟ್ಟೀಮಿನಿಂದ ಇಬ್ಬರು ಗೂಢಚಾರರನ್ನು ಕಳುಹಿಸಿದನು. ಅವರು ಹೊರಟುಹೋಗಿ ರಾಹಾಬಳೆಂಬ ವೇಶ್ಯೆಯ ಮನೆಯಲ್ಲಿ ಇಳಿದುಕೊಂಡರು.


ಜೋರ್ಡನ್ ನದಿಯೇ ಅವರ ಪೂರ್ವದಿಕ್ಕಿನ ಸರಹದ್ದು, ಬೆನ್ಯಾಮೀನ್ ಗೋತ್ರಗಳ ಸೊತ್ತಿನ ಸುತ್ತಣ ಎಲ್ಲೆ ಇದೇ.


ಚಮಾರಯಿಮ್, ಬೇತೇಲ್, ಅವ್ವೀಮ್, ಪಾರಾ,


ಒಮ್ಮೆ ಅರಸ ಸೊಲೊಮೋನನು ಬಲಿಯರ್ಪಿಸುವುದಕ್ಕಾಗಿ ಪೂಜಾಸ್ಥಳಗಳಲ್ಲೇ ಪ್ರಾಮುಖ್ಯವಾದ ಗಿಬ್ಯೋನಿಗೆ ಹೋದನು. ಅಲ್ಲಿನ ಪೀಠದ ಮೇಲೆ ಸಹಸ್ರಬಲಿಗಳನ್ನು ಸಮರ್ಪಿಸಿದಾಗ,


ಮಿಕ್ಕ ಕುಲಗಳ ಪಾಲಿನ ಕ್ರಮವೇನೆಂದರೆ: ಪೂರ್ವದಿಂದ ಪಶ್ಚಿಮದ ತನಕ ಬೆನ್ಯಾಮೀನಿಗೆ ಒಂದು ಪಾಲು;


ಕೇನ್ಯನೂ ಮೋಶೆಯ ಮಾವನೂ ಆದ ಹೋಬಾಬನ ವಂಶದವರು ಖರ್ಜೂರ ನಗರದಿಂದ ಹೊರಟು ಯೆಹೂದ ಕುಲದವರ ಜೊತೆಯಲ್ಲಿ ಆರಾದಿನ ದಕ್ಷಿಣದಲ್ಲಿರುವ ಯೆಹೂದ ಮರುಭೂಮಿಗೆ ಬಂದು ಅಲ್ಲಿಯ ಜನರ ಸಂಗಡ ವಾಸಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು