ಯೆಹೋಶುವ 18:4 - ಕನ್ನಡ ಸತ್ಯವೇದವು C.L. Bible (BSI)4 ಪ್ರತಿಯೊಂದು ಕುಲದಿಂದ ಮೂರುಮೂರು ಮಂದಿಯನ್ನು ನೇಮಿಸಿರಿ. ನಾನು ಅವರನ್ನು ಕಳುಹಿಸುವೆನು. ಅವರು ಹೋಗಿ ನಾಡಿನಲ್ಲೆಲ್ಲಾ ಸಂಚಾರಮಾಡಿ ತಮ್ಮ ತಮ್ಮ ಕುಲಗಳಿಗನುಸಾರ ಎಲ್ಲಾ ಪ್ರದೇಶಗಳ ಪಟ್ಟಿಯನ್ನು ಬರೆದುಕೊಂಡು ನನ್ನ ಬಳಿಗೆ ಬರಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಪ್ರತಿಯೊಂದು ಕುಲದಿಂದ ಮೂರು ಮೂರು ಜನರನ್ನು ನೇಮಿಸಿರಿ. ನಾನು ಅವರನ್ನು ಕಳುಹಿಸುವೆನು. ಅವರು ಹೋಗಿ ದೇಶದಲ್ಲೆಲ್ಲಾ ಸಂಚರಿಸಿ ತಮ್ಮ ತಮ್ಮ ಕುಲಗಳಿಗನುಸಾರವಾಗಿ ಎಲ್ಲಾ ಪ್ರದೇಶಗಳ ಪಟ್ಟಿಯನ್ನು ಬರೆದುಕೊಂಡು ನನ್ನ ಬಳಿಗೆ ಬರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಪ್ರತಿಯೊಂದು ಕುಲದಿಂದ ಮೂರು ಮೂರು ಜನರನ್ನು ನೇವಿುಸಿರಿ; ನಾನು ಅವರನ್ನು ಕಳುಹಿಸುವೆನು. ಅವರು ಹೋಗಿ ದೇಶದಲ್ಲೆಲ್ಲಾ ಸಂಚರಿಸಿ ತಮ್ಮ ತಮ್ಮ ಕುಲಗಳಿಗನುಸಾರವಾಗಿ ಎಲ್ಲಾ ಪ್ರದೇಶಗಳ ಪಟ್ಟಿಯನ್ನು ಬರೆದುಕೊಂಡು ನನ್ನ ಬಳಿಗೆ ಬರಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆದ್ದರಿಂದ ಪ್ರತಿಯೊಂದು ಕುಲದಿಂದ ಮೂರು ಮೂರು ಜನರನ್ನು ಆರಿಸಬೇಕು. ಭೂಮಿಯನ್ನು ಪರಿಶೀಲಿಸಲು ನಾನು ಅವರನ್ನು ಕಳುಹಿಸುತ್ತೇನೆ. ಅವರು ಭೂಮಿಯನ್ನು ಸೂಕ್ಷ್ಮವಾಗಿ ಪರಿಶೀಲಿಸಿ ಅದರ ನಕ್ಷೆಯನ್ನು ಮಾಡಿ ನನ್ನ ಬಳಿಗೆ ತೆಗೆದುಕೊಂಡು ಬರಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಒಂದೊಂದು ಗೋತ್ರಕ್ಕೆ ಮೂರು ಮಂದಿಯ ಪ್ರಕಾರ ನಿಮ್ಮೊಳಗಿಂದ ಕರೆದುಕೊಂಡು ಬನ್ನಿರಿ. ನಾನು ಅವರನ್ನು ಕಳುಹಿಸುವೆನು. ಅವರು ಎದ್ದು ದೇಶದಲ್ಲೆಲ್ಲಾ ಹೋಗಿ ತಮ್ಮ ಬಾಧ್ಯತೆಗಳ ಪ್ರಕಾರ ಅದನ್ನು ಅಳತೆಮಾಡಿ ವಿವರವಾಗಿ ಬರೆಯಲಿ. ತರುವಾಯ ನನ್ನ ಬಳಿಗೆ ಅವರು ಬರಲಿ. ಅಧ್ಯಾಯವನ್ನು ನೋಡಿ |