Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 19:35 - ಕನ್ನಡ ಸತ್ಯವೇದವು C.L. Bible (BSI)

35 ಚಿದ್ದೀಮ್, ಚೇರ್, ಹಮ್ಮತ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಚಿದ್ದೀಮ್, ಚೇರ್, ಹಮ್ಮತ್, ರಕ್ಕತ್, ಕಿನ್ನೆರೆತ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಚಿದ್ದೀಮ್, ಚೇರ್, ಹಮ್ಮತ್, ರಕ್ಕತ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಈ ಸೀಮೆಯ ಒಳಗಡೆ ಕೆಲವು ಅತಿ ಭದ್ರವಾದ ಪಟ್ಟಣಗಳಿದ್ದವು. ಆ ಪಟ್ಟಣಗಳೆಂದರೆ: ಚಿದ್ದೀಮ್, ಚೇರ್, ಹಮ್ಮತ್, ರಕ್ಕತ್, ಕಿನ್ನೆರೆತ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಇದರಲ್ಲಿರುವ ಕೋಟೆಗಳುಳ್ಳ ಪಟ್ಟಣಗಳು ಯಾವುವೆಂದರೆ: ಜಿದ್ದೀಮ್, ಚೇರ್, ಹಮ್ಮತ್, ರಕ್ಕತ್, ಕಿನ್ನೆರೆತ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 19:35
14 ತಿಳಿವುಗಳ ಹೋಲಿಕೆ  

ಉತ್ತರದಿಕ್ಕಿನ ಪರ್ವತಪ್ರದೇಶ, ಕಿನ್ನೆರೋತ್ ಸಮುದ್ರದ ದಕ್ಷಿಣದಲ್ಲಿನ ಕಣಿವೆಪ್ರದೇಶ, ಇಳಿಜಾರು ಪ್ರದೇಶ, ದೋರ್ ಊರಿನ ಪಶ್ಚಿಮದಲ್ಲಿದ್ದ ಮಲೆನಾಡಿನ ಪ್ರದೇಶ, ಇವುಗಳ ಅರಸರಿಗೂ


ಹೀಗೆ ಸೊಲೊಮೋನನು ಹಬ್ಬವನ್ನು ಆಚರಿಸಿದನು. ಅಂತೆಯೇ ಹಮಾತಿನ ದಾರಿ ಇಂದ ಈಜಿಪ್ಟಿನ ಹಳ್ಳದವರೆಗಿರುವ ಪ್ರಾಂತ್ಯಗಳಿಂದ ಮಹಾಸಮೂಹವಾಗಿ ಕೂಡಿಬಂದಿದ್ದ ಎಲ್ಲ ಇಸ್ರಯೇಲರು ಆಚರಿಸಿದರು; ಎರಡು ವಾರ, ಅಂದರೆ ಹದಿನಾಲ್ಕು ದಿವಸಗಳವರೆಗೆ, ನಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಹಬ್ಬಮಾಡಿದರು.


ಅರ್ವಾದಿಯರೂ ಚೆಮಾರಿಯರೂ ಹಮಾತಿಯರೂ ಕಾನಾನನಿಂದ ಹುಟ್ಟಿದರು. ಕಾಲಕ್ರಮೇಣ ಈ ಕಾನಾನ್ ಕುಲಗಳವರು ಹರಡಿಕೊಂಡರು.


ಅವರೆಲ್ಲರು ಸರೋವರವನ್ನು ದಾಟಿ ಗೆನಸರೇತ್ ಊರಿನ ದಡ ಸೇರಿದರು.


ಜೋರ್ಡನ್ ಕಣಿವೆಯಲ್ಲಿರುವ ಬೇತ್ ಹಾರಾಮ್, ಬೇತ್ ನಿಮ್ರಾ, ಸುಕ್ಕೋತ್, ಚಾಫೋನ್ ಎಂಬ ನಗರಗಳು, ಕಿನ್ನೆರೆತ್ ಸರೋವರ, (ದಕ್ಷಿಣ ದಿಕ್ಕಿನ) ಮೂಲೆಯವರೆಗೆ ವಿಸ್ತರಿಸಿಕೊಂಡಿರುವ ಜೋರ್ಡನ್ ಪೂರ್ವಪ್ರದೇಶ.


ಆ ಪರ್ವತದಿಂದ ಹಮಾತಿನ ದಾರಿಗೂ ಗುರುತು ಹಾಕಿಕೊಳ್ಳಬೇಕು. ಅದರ ಮೂಲೆ ಚೆದಾದಿನ ಹತ್ತಿರ ಇರುವುದು.


ಅವರು ಬೆಟ್ಟವನ್ನು ಹತ್ತಿ ಚಿನ್ ಮರುಭೂಮಿಯಿಂದ ಹಮಾತಿನ ದಾರಿಯಲ್ಲಿರುವ ರೆಹೋಬಿನವರೆಗೆ ಆ ನಾಡನ್ನು ಸಂಚರಿಸಿ ನೋಡಿದರು.


ಪಶ್ಚಿಮದಲ್ಲಿ ಅವರ ಪ್ರದೇಶ ಜೋರ್ಡನ್ ನದಿಯವರೆಗೆ ಹರಡಿತ್ತು. ಉತ್ತರದಲ್ಲಿ ಕಿನ್ನೆರೆತ್ ಸರೋವರ ಮೊದಲ್ಗೊಂಡು ದಕ್ಷಿಣದಲ್ಲಿ ಲವಣ ಸಮುದ್ರದವರೆಗೆ ವಿಸ್ತರಿಸಿತ್ತು. ಅದು ಪೂರ್ವದಲ್ಲಿ ಪಿಸ್ಗಾ ಬೆಟ್ಟದ ಬುಡದವರೆಗೆ ವ್ಯಾಪಿಸಿತ್ತು.


ಮತ್ತೆ ಅದೇ ಸ್ಥಳದಿಂದ ತೊಡಗಿ ಅಜ್ನೋತ್ ತಾಬೋರಿನ ಮೇಲೆ ಹುಕ್ಕೋಕಿಗೆ ಹೋಗುತ್ತದೆ. ದಕ್ಷಿಣದಲ್ಲಿ ಜೆಬುಲೂನ್ಯರ ಎಲ್ಲೆಗೂ ಪಶ್ಚಿಮದಲ್ಲಿ ಆಶೇರ್ಯರ ಮತ್ತು ಯೂದವಂಶದವರ ಎಲ್ಲೆಗೂ ಪೂರ್ವದಲ್ಲಿ ಜೋರ್ಡನ್ ನದಿಗೂ ಹೊಂದಿಕೊಂಡಿರುತ್ತದೆ.


ರಕ್ಕತ್, ಕಿನ್ನೆರೆತ್, ಅದಾಮಾ, ರಾಮಾ, ಹಾಚೋರ್,


ಅಂತೆಯೇ ಇಸ್ರಯೆಲರು ನಫ್ತಾಲಿ ಕುಲದವರ ಮಲೆನಾಡಿನ ಪ್ರದೇಶವಾದ ಗಲಿಲೇಯ ಪ್ರಾಂತ್ಯದಲ್ಲಿನ ಕೆದೆಷ್, ಎಫ್ರಯಿಮ್ ಮಲೆನಾಡಿನ ಪ್ರದೇಶದಲ್ಲಿನ ಶೆಕೆಮ್ ಹಾಗೂ ಯೂದವಂಶದ ಮಲೆನಾಡಿನ ಹೆಬ್ರೋನ್ ಎನಿಸಿಕೊಳ್ಳುವ ಕಿರ್ಯತರ್ಬ ಎಂಬ ನಗರಗಳನ್ನು ನೇಮಿಸಿದರು.


ನಫ್ತಾಲಿ ಸೊತ್ತಿನಿಂದ ಕೊಲೆಮಾಡಿದವನಿಗೆ ಆಶ್ರಯನಗರವಾದ ಗಲಿಲೇಯದ ಕೆದೆಷ್, ಹಮ್ಮೋತ್ ದೋರ್, ಕರ್ತಾನ್ ಎಂಬ ಗೋಮಾಳ ಸಹಿತವಾದ ಮೂರು ನಗರಗಳು.


ಆಕೆ ನಫ್ತಾಲಿ ದೇಶದ ಕೆದೆಷ್ ಊರಿನಲ್ಲಿದ್ದ ಅಬೀನೋವಮನ ಮಗ ಬಾರಾಕನನ್ನು ಬರಹೇಳಿ ಅವನಿಗೆ, “ನಿಶ್ಚಯವಾಗಿ ಇಸ್ರಯೇಲರ ದೇವರಾದ ಸರ್ವೇಶ್ವರ ನಿನಗೆ ಆಜ್ಞಾಪಿಸಿದ್ದಾರೆ: ‘ನೀನೆದ್ದು ನಫ್ತಾಲಿ ಮತ್ತು ಜೆಬುಲೂನ್ ಕುಲಗಳಿಂದ ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್ ಬೆಟ್ಟಕ್ಕೆ ಹೋಗು;


ಇಸ್ರಯೇಲರ ಅರಸನಾದ ಪೆಕಹನ ಕಾಲದಲ್ಲಿ ಅಸ್ಸೀರಿಯಾ ದೇಶದ ಅರಸನಾದ ತಿಗ್ಲತ್ಪಿಲೆಸೆರನೆಂಬವನು ಬಂದು ಇಯ್ಯೋನ್, ಅಬೇಲ್ಬೇತ್ಮಾಕಾ, ಯಾನೋಹ, ಕೆದೆಷ್, ಹಾಚೋರ್ ಮೊದಲಾದ ನಫ್ತಾಲಿಯ ಊರುಗಳನ್ನೂ ಮತ್ತು ಗಿಲ್ಯಾದ್ ಹಾಗು ಗಲಿಲೇಯ ಪ್ರಾಂತ್ಯಗಳನ್ನೂ ಸ್ವಾಧೀನಪಡಿಸಿಕೊಂಡು, ಅವುಗಳ ನಿವಾಸಿಗಳನ್ನು ಅಸ್ಸೀರಿಯಾ ದೇಶಕ್ಕೆ ಸೆರೆಯಾಗಿ ತೆಗೆದುಕೊಂಡು ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು