Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 19:50 - ಕನ್ನಡ ಸತ್ಯವೇದವು C.L. Bible (BSI)

50 ಆತ ತನಗೋಸ್ಕರ ಎಫ್ರಯಿಮರ ಮಲೆನಾಡಿನಲ್ಲಿರುವ ‘ತಿಮ್ನತ್ ಸೆರಹ’ ಎಂಬ ನಗರವನ್ನು ಕೇಳಿಕೊಂಡನು. ಸರ್ವೇಶ್ವರನ ಆಜ್ಞೆಯಂತೆ ಅವರು ಅದನ್ನು ಅವನಿಗೆ ಕೊಟ್ಟರು. ಅವನು ಅದನ್ನು ಹೊಸದಾಗಿ ಕಟ್ಟಿ ಅದರಲ್ಲೇ ವಾಸಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

50 ಅವನು ತನಗೋಸ್ಕರ ಎಫ್ರಾಯೀಮ್ ಪರ್ವತ ಪ್ರದೇಶದಲ್ಲಿರುವ ತಿಮ್ನತ್ ಸೆರಹ ಎಂಬ ಪಟ್ಟಣವನ್ನು ಕೇಳಿಕೊಳ್ಳಲು ಅವರು ಯೆಹೋವನ ಆಜ್ಞೆಯಂತೆ ಅದನ್ನು ಅವನಿಗೆ ಕೊಟ್ಟು ಬಿಟ್ಟರು. ಅವನು ಅದನ್ನು ಹೊಸದಾಗಿ ಕಟ್ಟಿಕೊಂಡು ಅದರಲ್ಲೇ ವಾಸವಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

50 ಅವನು ತನಗೋಸ್ಕರ ಎಫ್ರಾಯೀಮ್ಯರ ಪರ್ವತ ಪ್ರದೇಶದಲ್ಲಿರುವ ತಿಮ್ನತ್‍ಸೆರಹ ಎಂಬ ಪಟ್ಟಣವನ್ನು ಕೇಳಿಕೊಳ್ಳಲು ಅವರು ಯೆಹೋವನ ಆಜ್ಞೆಯಂತೆ ಅದನ್ನು ಅವನಿಗೆ ಕೊಟ್ಟುಬಿಟ್ಟರು. ಅವನು ಅದನ್ನು ಕಟ್ಟಿಕೊಂಡು ಅದರಲ್ಲಿ ವಾಸವಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

50 ಆ ಭೂಮಿಯನ್ನು ಕೊಡಬೇಕೆಂಬುದು ಯೆಹೋವನ ಆಜ್ಞೆಯಾಗಿತ್ತು. ಆದ್ದರಿಂದ ಅವರು ಯೆಹೋಶುವನ ಅಪೇಕ್ಷೆಯಂತೆ ಎಫ್ರಾಯೀಮ್ಯರ ಬೆಟ್ಟಪ್ರದೇಶದಲ್ಲಿರುವ ತಿಮ್ನತ್‌ಸೆರಹ ಎಂಬ ಪಟ್ಟಣವನ್ನು ಅವನಿಗೆ ಕೊಟ್ಟರು. ಯೆಹೋಶುವನು ಆ ಪಟ್ಟಣವನ್ನು ಭದ್ರಗೊಳಿಸಿ ಅಲ್ಲಿ ವಾಸವಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

50 ಅವನು ಕೇಳಿದ ಎಫ್ರಾಯೀಮ್ ಬೆಟ್ಟದಲ್ಲಿರುವ ತಿಮ್ನತ್ ಸೆರಹ ಎಂಬ ಪಟ್ಟಣವನ್ನು ಯೆಹೋವ ದೇವರ ಆಜ್ಞೆಯ ಪ್ರಕಾರ ಕೊಟ್ಟರು. ಅವನು ಪಟ್ಟಣವನ್ನು ಕಟ್ಟಿಕೊಂಡು ಅಲ್ಲಿಯೇ ನೆಲೆಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 19:50
6 ತಿಳಿವುಗಳ ಹೋಲಿಕೆ  

ಆತನ ಕಳೇಬರವನ್ನು ಎಫ್ರಯಿಮ್ ಮಲೆನಾಡಿನಲ್ಲಿ ಗಾಷ್ ಬೆಟ್ಟದ ಉತ್ತರ ದಿಕ್ಕಿನಲ್ಲಿರುವ ತಿಮ್ನತ್ ಸೆರಹ ಎಂಬ ಅವರ ಸ್ವಂತ ಭೂಮಿಯಲ್ಲಿ ಸಮಾಧಿಮಾಡಿದರು.


ಅವನನ್ನು ಅವನ ಸ್ವಾಸ್ತ್ಯಭೂಮಿಯಾದ ತಿಮ್ನತ್ ಹೆರೆಸ್ ಎಂಬಲ್ಲಿ ಸಮಾಧಿಮಾಡಿದರು. ಅದು ಎಫ್ರಯಿಮ್ ಪರ್ವತಪ್ರದೇಶದಲ್ಲಿರುವ ಗಾಷ್ ಬೆಟ್ಟದ ಉತ್ತರದಿಕ್ಕಿನಲ್ಲಿದೆ.


ಎಫ್ರಯಿಮನಿಗೆ ಶೇರ ಎಂಬ ಮಗಳು ಇದ್ದಳು. ಈಕೆ ಮೇಲಿನ ಹಾಗು ಕೆಳಗಿನ ಬೇತ್ ಹೋರೋನ್ ಪಟ್ಟಣಗಳನ್ನೂ ಉಜ್ಜೇನ್ ಶೇರ ಎಂಬ ಪಟ್ಟಣವನ್ನೂ ಕಟ್ಟಿಸಿದಳು.


ಎಫ್ರಾಯೀಮ್ ಕುಲದ ನೂನನ ಮಗ ಹೋಶೇಯ


ಇಸ್ರಯೇಲರು ನಾಡನ್ನು ಎಲ್ಲೆಎಲ್ಲೆಗಳ ಪ್ರಕಾರ ತಮ್ಮೊಳಗೆ ಹಂಚಿಕೊಂಡ ಮೇಲೆ ನೂನನ ಮಗ ಯೆಹೋಶುವನಿಗೂ ತಮ್ಮದರಲ್ಲಿ ಪಾಲು ಕೊಟ್ಟರು.


ಅವರ ಹೆಸರುಗಳು ಹಾಗು ಜಿಲ್ಲೆಗಳ ಹೆಸರುಗಳು ಇವು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು