Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 2:11 - ಕನ್ನಡ ಸತ್ಯವೇದವು C.L. Bible (BSI)

11 ಇದನ್ನೆಲ್ಲಾ ಕೇಳಿ ನಮ್ಮ ಎದೆ ಒಡೆದುಹೋಗಿದೆ. ನಿಮ್ಮನ್ನು ಎದುರಿಸುವ ಧೈರ್ಯ ಯಾರಿಗೂ ಇಲ್ಲ. ನಿಮ್ಮ ದೇವರಾದ ಸರ್ವೇಶ್ವರರೊಬ್ಬರೇ ಪರಲೋಕದಲ್ಲೂ ಭೂಲೋಕದಲ್ಲೂ ದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಮ್ಮ ಎದೆ ಒಡೆದು ಹೋಯಿತು; ನಿಮ್ಮನ್ನು ಎದುರಿಸುವ ಧೈರ್ಯವು ಯಾರಿಗೂ ಇಲ್ಲ. ನಿಮ್ಮ ದೇವರಾದ ಯೆಹೋವನೊಬ್ಬನೇ ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಮ್ಮ ಎದೆಯೊಡೆದು ಹೋಯಿತು; ನಿಮ್ಮನ್ನು ಎದುರಿಸುವ ಧೈರ್ಯವು ಒಬ್ಬನಲ್ಲಿಯೂ ಇಲ್ಲ. ನಿಮ್ಮ ದೇವರಾದ ಯೆಹೋವನೊಬ್ಬನೇ ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಇವೆಲ್ಲವುಗಳ ಬಗ್ಗೆ ಕೇಳಿ ನಮಗೆ ಅತೀವ ಭಯವಾಗಿದೆ; ನಮ್ಮಲ್ಲಿ ಯಾರಿಗೂ ನಿಮ್ಮೊಂದಿಗೆ ಯುದ್ಧ ಮಾಡಲು ಧೈರ್ಯವಿಲ್ಲ. ಏಕೆಂದರೆ ನಿಮ್ಮ ದೇವರಾದ ಯೆಹೋವನು, ಭೂಪರಲೋಕಗಳನ್ನು ಆಳುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಇವುಗಳನ್ನು ನಾವು ಕೇಳಿದಾಗಲೇ ನಮ್ಮ ಹೃದಯವು ಕುಂದಿಹೋಯಿತು. ಇನ್ನು ನಿಮ್ಮ ನಿಮಿತ್ತ ಯಾವನಲ್ಲಿಯೂ ಧೈರ್ಯವಿಲ್ಲದೆ ಹೋಯಿತು. ನಿಮ್ಮ ದೇವರಾದ ಯೆಹೋವ ದೇವರೇ ಮೇಲಿರುವ ಪರಲೋಕದಲ್ಲಿಯೂ ಕೆಳಗಿರುವ ಭೂಮಿಯ ಮೇಲೆಯೂ ದೇವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 2:11
27 ತಿಳಿವುಗಳ ಹೋಲಿಕೆ  

ನೀವು ಇದನ್ನೆಲ್ಲಾ ಆಲೋಚಿಸಿ, ಮೇಲೆ ಆಕಾಶದಲ್ಲಾಗಲಿ, ಕೆಳಗೆ ಭೂಮಿಯಲ್ಲಾಗಲಿ ಸರ್ವೇಶ್ವರಸ್ವಾಮಿ ಒಬ್ಬರೇ ದೇವರು, ಬೇರೆ ಯಾವ ದೇವರೂ ಇಲ್ಲವೆಂಬುದನ್ನು ಈಗ ಗ್ರಹಿಸಿಕೊಂಡು ಜ್ಞಾಪಕದಲ್ಲಿ ಇಡಬೇಕು.


ಜೋರ್ಡನಿನ ಪಶ್ಚಿಮದಲ್ಲಿದ್ದ ಅಮೋರಿಯರ ಎಲ್ಲ ಅರಸರು ಮತ್ತು ಸಮುದ್ರದ ಬಳಿಯಿದ್ದ ಸರ್ವ ಕಾನಾನ್ ರಾಜರು ಸರ್ವೇಶ್ವರ ಸ್ವಾಮಿ ಇಸ್ರಯೇಲರ ಕಣ್ಮುಂದೆಯೇ ಜೋರ್ಡನನ್ನು ಬತ್ತಿಸಿ ಆ ನದಿ ದಾಟಿಸಿದರೆಂದು ಕೇಳಿದರು. ಆಗ ಅವರ ಎದೆ ಒಡೆದುಕೋಯಿತು. ಇಸ್ರಯೇಲರ ಮುಂದೆ ಅವರಿಗೆ ಧೈರ್ಯವಿಲ್ಲದೆ ಹೋಯಿತು.


ಈ ಕಾರಣ ಜೋಲುಬೀಳುವುವು ಎಲ್ಲರ ಕೈಗಳು; ಕರಗಿ ನೀರಾಗುವುವು ಎಲ್ಲರ ಹೃದಯಗಳು.


ಆಯಿ ಊರಿನವರು ಅವರನ್ನು ಊರ ಬಾಗಿಲಿನಿಂದ ಕಲ್ಲುಗಣಿಯವರೆಗೂ ಹಿಂದಟ್ಟಿ ಇಳಿನೆಲದಲ್ಲಿ ಅವರನ್ನು ಸೋಲಿಸಿ ಸುಮಾರು ಮೂವತ್ತಾರು ಮಂದಿಯನ್ನು ಕೊಂದುಹಾಕಿದರು. ಇದರಿಂದ ಇಸ್ರಯೇಲರ ಧೈರ್ಯ ಕರಗಿ ನೀರಾಯಿತು.


ಹೆದರುವುವು ಪ್ರಭುವೆಂಬ ನಿನ್ನ ನಾಮಕೆ ಜನಾಂಗಗಳು I ಭಯಪಡುವರು ನಿನ್ನ ಪ್ರತಾಪಕೆ ಭೂರಾಜರುಗಳು II


ಇವರು ಅರಿಯಲಿ ಪ್ರಭುವೆಂಬ ನಾಮ ನಿನ್ನದೆಂದು I ಧರೆಯಲ್ಲೆಲ್ಲಾ ಸರ್ವೋನ್ನತ ನೀನೇ ಎಂದು II


ಭೂಲೋಕದ ಜನರೆಲ್ಲರೂ ಸರ್ವೇಶ್ವರನ ಹೊರತು ಬೇರೆ ದೇವರಿಲ್ಲವೆಂಬುದನ್ನು ತಿಳಿದುಕೊಳ್ಳುವಂತೆ, ಅವರು ಅವಶ್ಯವಿರುವಾಗೆಲ್ಲಾ ತಮ್ಮ ದಾಸನ ಹಾಗು ಪ್ರಜೆಗಳಾದ ಇಸ್ರಯೇಲರ ನ್ಯಾಯವನ್ನು ಸ್ಥಾಪಿಸುತ್ತಾ ಬರಲಿ.


ಅವರು ಆ ಬೆಟ್ಟಗಳನ್ನೂ ಬಂಡೆಗಳನ್ನೂ ಉದ್ದೇಶಿಸಿ, “ನಮ್ಮ ಮೇಲೆ ಬೀಳಿ; ಸಿಂಹಾಸನದಲ್ಲಿ ಆಸೀನರಾಗಿರುವವರ ಸಮ್ಮುಖದಿಂದಲೂ ಯಜ್ಞದ ಕುರಿಮರಿಯಾದಾತನ ಕೋಪಾಗ್ನಿಯಿಂದಲೂ ನಮ್ಮನ್ನು ಮರೆಮಾಡಿ;


ನಿನೆವೆ ಬರಿದಾಗಿದೆ; ಬಟ್ಟಬರಿದಾಗಿ ಪಾಳುಬಿದ್ದಿದೆ; ಎದೆಕರಗಿದೆ, ಮೊಣಕಾಲುಗಳು ಅದರುತ್ತಿವೆ. ಎಲ್ಲರ ಸೊಂಟಗಳು ಮುರಿದಂತಾಗಿವೆ, ಅವರ ಮುಖಗಳು ಬಾಡಿಹೋಗಿವೆ.


ಕ್ಷಯಿಸುತ್ತಿರುವೆ ನಾ ಚೆಲ್ಲಿದ ನೀರಿನಂತೆ I ಎಲುಬುಗಳು ಅಲುಗಿವೆ, ಎದೆ ಕರಗಿದೆ ಮೇಣದಂತೆ II


ನನ್ನ ಜೊತೆಯಲ್ಲಿ ಬಂದಿದ್ದ ಸಹೋದರರು ಜನರನ್ನು ಎದೆಗೆಡಿಸಿದರು. ನಾನಾದರೋ ನನ್ನ ದೇವರಾದ ಸರ್ವೇಶ್ವರನನ್ನೇ ಸಂಪೂರ್ಣವಾಗಿ ನಂಬಿ ಶ್ರದ್ಧೆಯಿಂದ ಅನುಸರಿಸಿದೆ.


ಮತ್ತು ‘ಯಾವನಾದರೂ ಧೈರ್ಯ ಕಡಿಮೆಯಾಗಿ ಅಂಜಿಕೊಂಡರೆ ಅವನೂ ಮನೆಗೆ ಹೋಗಲಿ; ಅವನು ದಿಗಿಲುಪಡುವುದರಿಂದ ಅವನ ಜೊತೆಗಾರರೂ ದಿಗಿಲುಪಟ್ಟಾರು’, ಎಂದು ಹೇಳಬೇಕು.


ನಾವು ಹೋಗಬೇಕಾದ ಆ ಸೀಮೆ ಎಂಥದೆಂದು ಆಲೋಚಿಸಿ ನೋಡಬೇಕು; ಅಲ್ಲಿಗೆ ಹೋಗಿದ್ದ ನಮ್ಮ ಸಹೋದರರು ಬಂದು ಆ ನಾಡಿನ ಜನರು ನಮಗಿಂತ ಬಲಿಷ್ಠರೂ ಎತ್ತರವಾಗಿಯೂ ಇದ್ದಾರೆ. ಅವರಿರುವ ಪಟ್ಟಣಗಳು ದೊಡ್ಡವು, ಆಕಾಶವನ್ನು ಮುಟ್ಟುವಂಥ ಕೋಟೆಕೊತ್ತಲುಳ್ಳವು; ಅಲ್ಲಿ ‘ಅನಾಕಿಮ್’ ವಂಶಸ್ಥರನ್ನು ಕಂಡೆವೆಂದು ಹೇಳಿ ನಮ್ಮ ಧೈರ್ಯವನ್ನು ಕೆಡಿಸಿದ್ದಾರೆ,’ ಎಂದುಕೊಳ್ಳುತ್ತಿದ್ದಿರಿ.


ಇದನ್ನು ಕೇಳಿ ನಡುಗುತ್ತಿರುವುವು ಜನಾಂಗಗಳು ಪ್ರಸವವೇದನೆ ಪಡುತ್ತಿರುವರು ಫಿಲಿಷ್ಟಿಯರು.


ಕಳವಳಗೊಂಡರು ಎದೋಮ್ಯರ ಕುಲನಾಯಕರು ಗಡಗಡನೆ ನಡುಗುತ್ತಿಹರು ಮೋವಾಬ್ಯರ ಮುಖಂಡರು. ಕರಗಿ ನೀರಾಗಿ ಹೋದರು ಕಾನಾನ್ ನಾಡಿನವರು.


ಅನಂತರ ನಾಮಾನನು ತನ್ನ ಪರಿವಾರದವರೊಡನೆ ಹಿಂದಿರುಗಿ ದೈವಪುರುಷನ ಬಳಿಗೆ ಹೋಗಿ ಅವನ ಮುಂದೆ ನಿಂತನು. “ಇಸ್ರಯೇಲ್ ನಾಡಿನಲ್ಲಿರುವ ದೇವರ ಹೊರತು, ಲೋಕದಲ್ಲಿ ಬೇರೆ ದೇವರು ಇಲ್ಲವೇ ಇಲ್ಲವೆಂಬುದು ಈಗ ನನಗೆ ಗೊತ್ತಾಯಿತು; ತಾವು ದಯವಿಟ್ಟು ಈ ಕಾಣಿಕೆಯನ್ನು ಅಂಗೀಕರಿಸಬೇಕು,” ಎಂದು ಹೇಳಿದನು.


ಅವರಾಗಲಿ ಬೇಗನೆ ಕಾಣದೆ ಹೋಗುವ ತೊರೆಯಂತೆ I ನಸುಕಿ ನಾಶವಾಗಲಿ ಪಾದದಡಿ ಸಿಲುಕಿದ ಗರಿಕೆಕಣದಂತೆ II


ಈಜಿಪ್ಟಿನ ವಿಷಯವಾಗಿ ದೈವೋಕ್ತಿ : ಇಗೋ, ಸರ್ವೇಶ್ವರ ವೇಗವಾಗಿ ಚಲಿಸುವ ಮೇಘಗಳ ಮೇಲೆ ಈಜಿಪ್ಟಿಗೆ ಬರುವರು. ಅವರ ಮುಂದೆ ಈಜಿಪ್ಟಿನ ವಿಗ್ರಹಗಳು ನಡುಗುವುವು. ಈಜಿಪ್ಟಿನವರ ಹೃದಯ ಕರಗಿ ನೀರಾಗುವುದು.


ನೀರಾಗುವುದು ಜನರ ಹೃದಯ, ಎಡವಿ ಬೀಳುವರು ಬಹುಜನ. ಪುರದ್ವಾರಗಳಿಗೇ ತಂದಿರುವೆನು ಹತಿಸುವಾ ಖಡ್ಗವ. ಮಿನುಗುತಿಹುದದು ಮಿಂಚಿನಂತೆ ಹರಿತವಿದೆ ವಧೆಗಾಗುವ ಕತ್ತಿಯಂತೆ.


ಇದಲ್ಲದೆ, ಅವರು ಯೆಹೋಶುವನಿಗೆ, “ಸರ್ವೇಶ್ವರಸ್ವಾಮಿ ನಿಜವಾಗಿ ಈ ನಾಡನ್ನೆಲ್ಲಾ ನಮಗೆ ಕೊಟ್ಟಿದ್ದಾರೆ. ಅದರ ನಿವಾಸಿಗಳೆಲ್ಲ ನಮ್ಮನ್ನು ಕಂಡು ನಡುಗುತ್ತ ಇದ್ದಾರೆ,” ಎಂದು ತಿಳಿಸಿದರು.


ಅವರು ಯೆಹೋಶುವನಿಗೆ, “ನಿಮ್ಮ ದೇವರಾದ ಸರ್ವೇಶ್ವರ ತಮ್ಮ ದಾಸ ಮೋಶೆಗೆ, ‘ನಾನು ನಿಮಗೆ ಈ ದೇಶವನ್ನೆಲ್ಲ ಕೊಡುವಾಗ ನೀವು ಇದರ ನಿವಾಸಿಗಳನ್ನೆಲ್ಲಾ ಸಂಹರಿಸಬೇಕು’ ಎಂದು ಆಜ್ಞಾಪಿಸಿದ್ದಾರೆಂದು ಕೇಳಿ ನಮ್ಮ ಪ್ರಾಣ ತೆಗೆಯುವಿರೆಂದು ಹೆದರಿ ಹೀಗೆ ಮಾಡಿದೆವು.


ಈ ಸುದ್ದಿ ಸುತ್ತ-ಮುತ್ತಲಿನ ನಮ್ಮ ವಿರೋಧಿಗಳಾದ ಜನಾಂಗಗಳಿಗೆ ಮುಟ್ಟಿತು. ಅವರು ಭಯಭೀತರಾದರು. ಸೊಕ್ಕು ಮುರಿದವರಾಗಿ ಹಾಗೇ ಕುಗ್ಗಿಹೋದರು. ಈ ಕಾರ್ಯ ನಮ್ಮ ದೇವರಿಂದಲೇ ಪೂರ್ಣಗೊಂಡಿತು ಎಂದು ಅವರಿಗೆ ಮನದಟ್ಟಾಯಿತು.


ರಾಜನಿರ್ಣಯ ಶಾಸನಗಳು ಪ್ರಕಟವಾದ ಸಂಸ್ಥಾನಗಳಲ್ಲೂ ನಗರಗಳಲ್ಲೂ ವಾಸಿಸುತ್ತಿದ್ದ ಯೆಹೂದ್ಯರೆಲ್ಲರಿಗೆ ಶುಭದಿನ ಉದಯವಾಯಿತು. ಅವರು ಅದನ್ನು ಸಂತೋಷದ ಹಾಗೂ ಸಂಭ್ರಮದ ದಿನವನ್ನಾಗಿ ಆಚರಿಸಿದರು. ಜನರಲ್ಲಿ ಅನೇಕರು ಯೆಹೂದ್ಯರಿಗೆ ಭಯಪಟ್ಟು ಅವರ ಮತಕ್ಕೆ ಸೇರಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು