Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 2:14 - ಕನ್ನಡ ಸತ್ಯವೇದವು C.L. Bible (BSI)

14 ಆಗ ಆ ಗೂಢಚಾರರು, “ನೀವು ನಮ್ಮ ಸಂಗತಿಯನ್ನು ಹೊರಪಡಿಸದಿದ್ದರೆ, ನಾವು ನಿಮ್ಮ ಪ್ರಾಣಕ್ಕೆ ಹೊಣೆಯಾಗಿರುತ್ತೇವೆ. ಸರ್ವೇಶ್ವರಸ್ವಾಮಿ ಈ ನಾಡನ್ನು ನಮಗೆ ಅನುಗ್ರಹಿಸಿದ ಮೇಲೆ ನಾವು ಕೊಟ್ಟ ಮಾತಿನಂತೆ ದಯೆಯಿಂದ ನಡೆದುಕೊಳ್ಳುತ್ತೇವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ಆ ಗೂಢಚಾರರು “ನೀವು ನಮ್ಮ ವಿಷಯವನ್ನು ಬಹಿರಂಗ ಮಾಡದಿದ್ದರೆ ನಾವು ನಿಮ್ಮ ಪ್ರಾಣಕ್ಕೆ ಹೊಣೆಯಾಗಿರುತ್ತೇವೆ; ಯೆಹೋವನು ಈ ದೇಶವನ್ನು ನಮಗೆ ಅನುಗ್ರಹಿಸಿದ ಮೇಲೆ ನಾವು ಕೊಟ್ಟ ಮಾತಿನಂತೆ ನಿನ್ನಲ್ಲಿ ದಯೆಯಿಂದಲೂ ನಂಬಿಗಸ್ತಿಕೆಯಿಂದಲೂ ನಡೆದುಕೊಳ್ಳುವೆವು” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಗ ಆ ಮನುಷ್ಯರು - ನೀವು ನಮ್ಮ ಸಂಗತಿಯನ್ನು ಹೊರಪಡಿಸದಿದ್ದರೆ ನಾವು ನಿಮ್ಮ ಪ್ರಾಣಕ್ಕೆ ಹೊಣೆಯಾಗಿರುವೆವು; ಯೆಹೋವನು ಈ ದೇಶವನ್ನು ನಮಗೆ ಅನುಗ್ರಹಿಸಿದ ಮೇಲೆ ನಮ್ಮ ಮಾತಿನಂತೆ ನಿನ್ನಲ್ಲಿ ದಯದಿಂದ ನಡೆದುಕೊಳ್ಳುವೆವು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅದಕ್ಕೆ ಅವರು, “ನಮ್ಮ ಪ್ರಾಣವನ್ನಾದರೂ ಕೊಟ್ಟು ನಿಮ್ಮ ಪ್ರಾಣ ಉಳಿಸುತ್ತೇವೆ. ಆದರೆ ನೀವು ಇದನ್ನು ಯಾರಿಗೂ ಹೇಳಬೇಡಿ. ಯೆಹೋವನು ಈ ದೇಶವನ್ನು ನಮಗೆ ಅನುಗ್ರಹಿಸಿದ ಮೇಲೆ ನಾವು ನಿಮಗೆ ದಯೆ ತೋರುತ್ತೇವೆ. ನೀನು ನಮ್ಮನ್ನು ನಂಬಬಹುದು” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ಅವರು ಆಕೆಗೆ, “ನೀನು ಈ ನಮ್ಮ ಕಾರ್ಯವನ್ನು ಬಹಿರಂಗ ಮಾಡದೆ ಇದ್ದರೆ, ನಾವು ನಿಮ್ಮ ಪ್ರಾಣಕ್ಕೆ ಹೊಣೆಯಾಗಿ ಇರುವೆವು. ಯೆಹೋವ ದೇವರು ನಮಗೆ ದೇಶವನ್ನು ಕೊಟ್ಟಾಗ, ಸತ್ಯದಿಂದಲೂ, ದಯೆಯಿಂದಲೂ ನಡೆದುಕೊಳ್ಳುವೆವು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 2:14
18 ತಿಳಿವುಗಳ ಹೋಲಿಕೆ  

ದಯಾವಂತರು ಭಾಗ್ಯವಂತರು; ದೇವರ ದಯೆ ಅವರಿಗೆ ದೊರಕುವುದು.


ಗೆಳೆಯರಂತೆ ನಟಿಸಿ ನಾಶಗೊಳಿಸುವವರು ಅನೇಕರುಂಟು; ಸಹೋದರನಿಗಿಂತ ಪ್ರಿಯನಾದ ಸ್ನೇಹಿತನೂ ಉಂಟು.


ಹೀಗಿರುವಲ್ಲಿ ನೀವು ನನ್ನೊಡೆಯನಿಗೆ ಪ್ರತಿ ಪ್ರೀತಿಯನ್ನೂ ಪ್ರಾಮಾಣಿಕತೆಯನ್ನೂ ತೋರಲು ಒಪ್ಪಿದರೆ ನನಗೆ ಹೇಳಿ; ಇಲ್ಲವಾದರೆ ಇಲ್ಲವೆನ್ನಿ; ಆಗ ಯಾವ ಕಡೆ ತಿರುಗಬೇಕೆಂದು ನನಗೆ ಗೊತ್ತಾಗುತ್ತದೆ,” ಎಂದು ವಿವರಿಸಿದನು.


ಅರಸನು ಹಾದುಹೋಗುವಾಗ ಅವನಿಗೆ, “ನಿಮ್ಮ ಸೇವಕನಾದ ನಾನು ಯುದ್ಧಕ್ಕೆ ಹೋಗಿದ್ದಾಗ ರಣರಂಗದಲ್ಲಿ ಒಬ್ಬನು, ಇನ್ನೊಬ್ಬನನ್ನು ಹಿಡಿದುಕೊಂಡು ನನ್ನ ಬಳಿಗೆ ಬಂದು, ‘ನೀನು ಇವನನ್ನು ಕಾಯಬೇಕು, ಇವನು ತಪ್ಪಿಸಿಕೊಂಡರೆ ಇವನ ಪ್ರಾಣಕ್ಕೆ ನಿನ್ನ ಪ್ರಾಣವು ನನ್ನದಾಗಿರುವುದು; ಇಲ್ಲವೆ ನೀನು ನನಗೆ ಮೂರು ಸಾವಿರ ಬೆಳ್ಳಿನಾಣ್ಯವನ್ನು ಕೊಡಬೇಕು’ ಎಂದು ಆಜ್ಞಾಪಿಸಿದನು.


ಒಂದು ದಿನ ದಾವೀದನು, “ಸೌಲನ ಮನೆಯವರಲ್ಲಿ ಯಾರಾದರು ಇನ್ನೂ ಉಳಿದಿದ್ದಾರೋ? ಯೋನಾತಾನನ ಸಲುವಾಗಿ ನಾನು ಅವರಿಗೆ ದಯೆತೋರಿಸಬೇಕೆಂದಿರುತ್ತೇನೆ,” ಎಂದು ವಿಚಾರಿಸಿದನು.


ಸೇವಕನ ಮೇಲೆ ದಯವಿರಲಿ. ನೀನು ಸರ್ವೇಶ್ವರನ ಸನ್ನಿಧಿಯಲ್ಲಿ ನನ್ನೊಡನೆ ಒಡಂಬಡಿಕೆ ಮಾಡಿಕೊಂಡಿರುವೆಯಲ್ಲವೆ? ನಾನು ಅಪರಾಧಿಯಾಗಿದ್ದರೆ, ನನ್ನನ್ನು ನಿನ್ನ ತಂದೆಗೆ ಒಪ್ಪಿಸಬೇಕಾಗಿಲ್ಲ, ನೀನೆ ಕೊಂದುಹಾಕು,” ಎಂದು ಹೇಳಿದನು.


ವೇಶ್ಯೆಯಾದ ರಾಹಾಬಳು, ಜೆರಿಕೋ ನಗರದಲ್ಲಿ ಸಂಚರಿಸಿ ನೋಡಲು ಬಂದಿದ್ದ ಯೆಹೋಶುವನ ಗೂಢಚಾರರನ್ನು ಬಚ್ಚಿಟ್ಟಿದ್ದರಿಂದ ಅವಳನ್ನೂ ಅವಳ ತಂದೆಯ ಮನೆಯವರನ್ನೂ ಅವಳಿಗಿದ್ದುದೆಲ್ಲವನ್ನೂ ಉಳಿಸಿದರು. ಅವಳು ಇಂದಿನವರೆಗೂ ಇಸ್ರಯೇಲರಲ್ಲೇ ವಾಸವಾಗಿದ್ದಾಳೆ.


ಇದೂ ಇದರಲ್ಲಿರುವುದೆಲ್ಲವೂ ಸರ್ವೇಶ್ವರನಿಗೆ ಮೀಸಲಾಗಿ ಆಹುತಿಯಾಗತಕ್ಕದೆಂದು ತಿಳಿಯಿರಿ. ವೇಶ್ಯೆಯಾದ ರಾಹಾಬಳು ಮತ್ತು ಅವಳ ಸಂಗಡ ಮನೆಯಲ್ಲಿರುವವರೆಲ್ಲರು ಉಳಿಯಲಿ. ಏಕೆಂದರೆ ನಾವು ಕಳಿಸಿದ ಗೂಢಚಾರರನ್ನು ಅವಳು ಬಚ್ಚಿಟ್ಟಿದ್ದಳು.


ನನ್ನ ತಂದೆ ತಾಯಿಗಳನ್ನೂ ಸಹೋದರ ಸಹೋದರಿಯರನ್ನೂ ಅವರಿಗಿರುವುದೆಲ್ಲವನ್ನೂ ನಾಶಮಾಡದೆ ಉಳಿಸುವುದಾಗಿ ಸರ್ವೇಶ್ವರನ ಹೆಸರಿನಲ್ಲಿ ಪ್ರಮಾಣ ಮಾಡಬೇಕೆಂದು ಬೇಡಿಕೊಳ್ಳುತ್ತೇನೆ,” ಎಂದಳು


ಅವಳ ಮನೆ ಊರಗೋಡೆಯ ಮೇಲಿತ್ತು. ಆದ್ದರಿಂದ ಅವರನ್ನು ಹಗ್ಗದ ಮೂಲಕ ಕಿಟಕಿಯಿಂದ ಕೆಳಕ್ಕೆ ಇಳಿಸಿದಳು.


ಯಕೋಬನಿಗೆ ಅಂತಿಮಕಾಲ ಹತ್ತಿರ ಆದಾಗ ಅವನು ತನ್ನ ಮಗ ಜೋಸೆಫನನ್ನು ಕರೆಸಿ, “ನನ್ನ ಮೇಲೆ ನಿನಗೆ ಪ್ರೀತಿಯಿದ್ದರೆ ನೀನು ನನ್ನ ಮಾತನ್ನು ಪ್ರೀತಿಯಿಂದಲೂ ಪ್ರಾಮಾಣಿಕತೆಯಿಂದಲೂ ನಡೆಸಿಕೊಡಬೇಕು. ಅದೇನೆಂದರೆ; ನನ್ನನ್ನು ಈಜಿಪ್ಟ್ ದೇಶದಲ್ಲಿ ಸಮಾಧಿ ಮಾಡಬಾರದು.


ಯೆಹೋಶುವನು ಆ ನಾಡಿನಲ್ಲಿ ಬೇಹುಗಾರಿಕೆ ನಡೆಸಿದ್ದ ಇಬ್ಬರು ವ್ಯಕ್ತಿಗಳನ್ನು ಕರೆದು, “ನೀವು ಆ ವೇಶ್ಯೆಯ ಮನೆಗೆ ಹೋಗಿ, ಅವಳಿಗೆ ಪ್ರಮಾಣ ಮಾಡಿದಂತೆ ಅವಳನ್ನೂ ಅವಳಿಗಿರುವುದೆಲ್ಲವನ್ನು ಹೊರಗೆ ತೆಗೆದುಕೊಂಡು ಬನ್ನಿ,” ಎಂದು ಹೇಳಿದನು.


ಆಗ ಅವನು ಅವರ ಬಳಿಗೆ ದೂತರನ್ನು ಕಳುಹಿಸಿ, “ನೀವು ರಾಜನಿಷ್ಠೆಯಿಂದ ನಿಮ್ಮ ಒಡೆಯ ಸೌಲನ ಶವವನ್ನು ಸಮಾಧಿಮಾಡಿದ್ದಕ್ಕಾಗಿ ಸರ್ವೇಶ್ವರನ ಆಶೀರ್ವಾದ ನಿಮಗೆ ಲಭಿಸಲಿ!


ಅವರ ಅಚಲ ಪ್ರೀತಿಸತ್ಯತೆಗಳು ನಿಮ್ಮೊಂದಿಗಿರಲಿ! ಈ ಸತ್ಕಾರ್ಯಕ್ಕಾಗಿ ನಾನೂ ನಿಮಗೆ ಉಪಕಾರ ಮಾಡುವೆನು.


ಕೆಟ್ಟದ್ದನ್ನು ಕಲ್ಪಿಸುವವರು ಮಾರ್ಗಭ್ರಷ್ಟರು; ಒಳ್ಳೆಯದನ್ನು ಕಲ್ಪಿಸುವವರು ಮರ್ಯಾದಸ್ಥರು.


“ಈ ವಿಷಯವನ್ನು ನೀನು ನನಗೆ ವರದಿಮಾಡಿರುವುದಾಗಿ ತಿಳಿಸಬೇಡ,” ಎಂದು ಸಹಸ್ರಾಧಿಪತಿ ಆ ಯುವಕನಿಗೆ ಆಜ್ಞೆಮಾಡಿ ಅವನನ್ನು ಕಳುಹಿಸಿಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು