Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 2:2 - ಕನ್ನಡ ಸತ್ಯವೇದವು C.L. Bible (BSI)

2 ಇಸ್ರಯೇಲಿನ ಕೆಲವು ಜನರು ನಮ್ಮ ನಾಡಿನಲ್ಲಿ ಸಂಚರಿಸಿ ನೋಡಲು ಈ ರಾತ್ರಿ ನಗರಕ್ಕೆ ಬಂದಿದ್ದಾರೆಂದು ಜೆರಿಕೋವಿನ ಅರಸನಿಗೆ ತಿಳಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಜನರು ಯೆರಿಕೋವಿನ ಅರಸನಿಗೆ “ಇಗೋ, ಈ ರಾತ್ರಿ ಇಸ್ರಾಯೇಲ್ಯರ ಕಡೆಯವರು ನಮ್ಮ ದೇಶವನ್ನು ಸಂಚರಿಸಿ ಹೊಂಚುಹಾಕುವುದಕ್ಕೆ ಬಂದಿದ್ದಾರೆ” ಎಂದು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆಗ ಜನರು ಯೆರಿಕೋವಿನ ಅರಸನಿಗೆ - ಇಗೋ, ಈ ರಾತ್ರಿ ಇಸ್ರಾಯೇಲ್ಯರ ಕಡೆಯವರು ನಮ್ಮ ದೇಶವನ್ನು ಸಂಚರಿಸಿ ನೋಡುವದಕ್ಕೆ ಬಂದಿದ್ದಾರೆಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆಗ ಯಾರೋ ಒಬ್ಬರು ಜೆರಿಕೊ ನಗರದ ರಾಜನಿಗೆ, “ನಿನ್ನೆ ರಾತ್ರಿ ಇಸ್ರೇಲರ ಕಡೆಯ ಕೆಲವರು ನಮ್ಮ ದೇಶದ ದೌರ್ಬಲ್ಯಗಳನ್ನು ಕಂಡುಹಿಡಿಯುವುದಕ್ಕಾಗಿ ಬಂದಿದ್ದಾರೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯೆರಿಕೋವಿನ ಅರಸನಿಗೆ, “ಇಗೋ, ಇಸ್ರಾಯೇಲರಲ್ಲಿ ಕೆಲವರು ದೇಶವನ್ನು ಗೂಢಚಾರ ಮಾಡಲು ರಾತ್ರಿಯಲ್ಲಿ ಇಲ್ಲಿಗೆ ಬಂದಿದ್ದಾರೆ,” ಎಂದು ತಿಳಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 2:2
7 ತಿಳಿವುಗಳ ಹೋಲಿಕೆ  

ಆತನ ದೃಷ್ಟಿಯಲ್ಲಿ ಭೂನಿವಾಸಿಗಳೆಲ್ಲರು ಶೂನ್ಯರು ಇಹದ ಜನರೂ ಪರದ ದೂತರೂ ಆತನಿಗೆ ಅಧೀನರು. ಆತನ ಶಕ್ತಿಯುತ ಹಸ್ತವನ್ನು ಯಾರಿಂದಲೂ ತಡೆಯಲಾಗದು. ‘ನೀನು ಮಾಡುತ್ತಿರುವುದೇನು?’ ಎಂದು ಯಾರೂ ಆತನನ್ನು ಪ್ರಶ್ನಿಸಲಾರರು.


ಹೌದು, ನಾನೇ ಪರಮಾತ್ಮ ಆದಿಯಿಂದ ಬಿಡಿಸುವವರಾರು ಇಲ್ಲ ನನ್ನ ಕೈಯಿಂದ ನಾಗೈದುದನು ತಡೆಯಲಾಗದು ಯಾರಿಂದ.” ಈ ಪರಿ ನುಡಿದಿಹನು ಸರ್ವೇಶ್ವರನು, ನಿಮ್ಮ ಉದ್ಧಾರಕನು, ಇಸ್ರಯೇಲಿನ ಪರಮಪಾವನನು;


ಸರ್ವೇಶ್ವರನ ಮುಂದೆ ನಿಲ್ಲಬಲ್ಲ ಜ್ಞಾನವಿಲ್ಲ, ವಿವೇಚನೆಯಿಲ್ಲ, ಆಲೋಚನೆಯಿಲ್ಲ.


ಪ್ರಭುವೇ ಮನೆಮಠವನು ಕಟ್ಟದ ಹೊರತು I ಅದನು ಕಟ್ಟುವವರ ಪ್ರಯಾಸ ವ್ಯರ್ಥ II ಪ್ರಭುವೇ ಪಟ್ಟಣವನು ಕಟ್ಟಿದ ಹೊರತು I ಕಾವಲುಗಾರನು ಅದನು ಕಾಯುವುದು ವ್ಯರ್ಥ II


ನೂನನ ಮಗನಾದ ಯೆಹೋಶುವನು ಕಾನಾನ್ ನಾಡನ್ನೂ ಜೆರಿಕೋ ನಗರವನ್ನೂ ನೋಡುವುದಕ್ಕೋಸ್ಕರ ಶಿಟ್ಟೀಮಿನಿಂದ ಇಬ್ಬರು ಗೂಢಚಾರರನ್ನು ಕಳುಹಿಸಿದನು. ಅವರು ಹೊರಟುಹೋಗಿ ರಾಹಾಬಳೆಂಬ ವೇಶ್ಯೆಯ ಮನೆಯಲ್ಲಿ ಇಳಿದುಕೊಂಡರು.


ಅವನು ರಾಹಾಬಳಿಗೆ, “ನಿನ್ನ ಮನೆಯಲ್ಲಿ ಇಳಿದುಕೊಂಡಿರುವ ಆ ವ್ಯಕ್ತಿಗಳನ್ನು ತಂದೊಪ್ಪಿಸು. ಅವರು ನಾಡನ್ನೆಲ್ಲಾ ಸಂಚರಿಸಿ ಬೇಹು ಮಾಡಲು ಬಂದವರು” ಎಂದು ಹೇಳಿ ಕಳಿಸಿದನು.


ಚೊರ್ಗಾ, ಎಷ್ಟಾವೋಲ್ ಎಂಬ ಊರುಗಳಿಂದ ತಮ್ಮ ಕುಲದಲ್ಲಿ ಐದುಮಂದಿ ಪರಾಕ್ರಮಶಾಲಿಗಳಾದ ಗೂಢಚಾರರನ್ನು ಆರಿಸಿ ಅವರಿಗೆ, “ನೀವು ಹೋಗಿ (ಲಯಿಷ್) ದೇಶವನ್ನು ಸಂಚರಿಸಿ ನೋಡಿ ಬನ್ನಿ,” ಎಂದು ಆಜ್ಞಾಪಿಸಿ ಕಳುಹಿಸಿದನರು . ಇವರು ಪ್ರಯಾಣ ಮಾಡುತ್ತಾ ಎಫ್ರಯಿಮ್ ಬೆಟ್ಟದ ಸೀಮೆಯಲ್ಲಿ ಇದ್ದ ಮೀಕನ ಮನೆಗೆ ಬಂದು ಇಳಿದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು