Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 2:5 - ಕನ್ನಡ ಸತ್ಯವೇದವು C.L. Bible (BSI)

5 ಊರಬಾಗಿಲನ್ನು ಮುಚ್ಚುವ ಹೊತ್ತಿಗೆ ಕತ್ತಲಲ್ಲಿ ಹೊರಟುಹೋದರು. ಎಲ್ಲಿಗೆ ಹೋದರೆಂಬುದೂ ನನಗೆ ಗೊತ್ತಿಲ್ಲ. ಬೇಗನೆ ಅವರ ಬೆನ್ನಟ್ಟಿರಿ. ಅವರು ನಿಮಗೆ ಸಿಕ್ಕುವರು,” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಊರಬಾಗಿಲನ್ನು ಮುಚ್ಚುವ ಹೊತ್ತಿನಲ್ಲಿ ಕತ್ತಲಲ್ಲೇ ಹೊರಟುಹೋದರು. ಎಲ್ಲಿಗೆ ಹೋದರೆಂಬುದು ಗೊತ್ತಿಲ್ಲ. ಬೇಗನೆ ಅವರನ್ನು ಬೆನ್ನಟ್ಟಿರಿ; ನಿಮಗೆ ಸಿಕ್ಕಾರು” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಊರುಬಾಗಲನ್ನು ಮುಚ್ಚುವ ಹೊತ್ತಿನಲ್ಲಿ ಕತ್ತಲೊಳಗೆ ಹೊರಟುಹೋದರು. ಎಲ್ಲಿಗೆ ಹೋದರೆಂಬದೂ ಗೊತ್ತಿಲ್ಲ. ಬೇಗನೆ ಅವರನ್ನು ಬೆನ್ನಟ್ಟಿರಿ; ನಿಮಗೆ ಸಿಕ್ಕಾರು ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಸಾಯಂಕಾಲ ನಗರದ ದ್ವಾರವನ್ನು ಮುಚ್ಚುವ ಸಮಯವಾದಾಗ ಅವರು ಹೊರಟುಹೋದರು. ಅವರು ಎಲ್ಲಿಗೆ ಹೋದರೆಂಬುದು ನನಗೆ ತಿಳಿಯದು. ಆದರೂ ನೀವು ಬೇಗ ಹೋದರೆ ಅವರನ್ನು ಹಿಡಿಯಬಹುದು” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಪಟ್ಟಣದ ಬಾಗಿಲು ಮುಚ್ಚುವ ಮುಸ್ಸಂಜೆ ವೇಳೆಯಲ್ಲಿ ಆ ಮನುಷ್ಯರು ಹೊರಟು ಹೋದರು. ಅವರು ಎಲ್ಲಿ ಹೋದರೋ ನಾನು ಅರಿಯೆ. ಅವರನ್ನು ಬೇಗ ಹಿಂದಟ್ಟಿರಿ. ನಿಮಗೆ ಸಿಕ್ಕುವರು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 2:5
11 ತಿಳಿವುಗಳ ಹೋಲಿಕೆ  

ಹಗಲಿನಲ್ಲಿ ಅದರ ಹೆಬ್ಬಾಗಿಲುಗಳನ್ನು ಮುಚ್ಚುವಂತಿಲ್ಲ. ರಾತ್ರಿಯೆಂಬುದು ಅಲ್ಲಿ ಇಲ್ಲವೇ ಇಲ್ಲ.


ತೊರೆಯ ಎರಡು ದಡಗಳಲ್ಲಿಯೂ ಸಕಲ ಫಲವೃಕ್ಷಗಳು ಬೆಳೆಯುವುವು. ಅವುಗಳ ಎಲೆ ಬಾಡದು, ಹಣ್ಣು ತೀರದು. ತೊರೆಯ ನೀರು ಪವಿತ್ರಾಲಯದೊಳಗಿಂದ ಹೊರಟುಬರುವ ಕಾರಣ ಅವು ತಿಂಗಳು ತಿಂಗಳಲ್ಲಿಯೂ ಹೊಸ ಹೊಸ ಫಲವನ್ನು ಕೊಡುತ್ತಲಿರುವುವು; ಅವುಗಳ ಹಣ್ಣು ಆಹಾರಕ್ಕೂ, ಸೊಪ್ಪು ಔಷಧಕ್ಕೂ ಅನುಕೂಲಿಸುವುವು.”


ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಯೇಲಿನ ಅಧರ್ಮವನ್ನು ಎಲ್ಲಿ ಹುಡುಕಿದರೂ ಸಿಗದು. ಜುದೇಯದ ಪಾಪವನ್ನು ತಡಕಿದರೂ ಸಿಗದು. ಏಕೆಂದರೆ ನಾನು ಉಳಿಸಿದ ಜನಶೇಷವನ್ನು ಕ್ಷಮಿಸಿಬಿಡುವೆನು. ಇದು ಸರ್ವೇಶ್ವರನಾದ ನನ್ನ ನುಡಿ.”


ತರುತ್ತಿಹರು ರಾಷ್ಟ್ರಗಳ ಆಸ್ತಿಯನ್ನು ನಿನ್ನಲ್ಲಿಗೆ ಬರುತಿಹರು ಅವುಗಳ ಅರಸರು ಮೆರವಣಿಗೆಯೊಂದಿಗೆ. ನಿನ್ನ ದ್ವಾರಗಳು ತೆರೆದಿರುವುವು ಹಗಲಿರುಳು ಮುಚ್ಚದೆ.


ಇದಲ್ಲದೆ, “ಸಬ್ಬತ್‍ದಿನ ಪ್ರಾರಂಭವಾಗುವುದಕ್ಕಿಂತ ಮೊದಲು ಜೆರುಸಲೇಮಿನ ಬಾಗಿಲುಗಳಲ್ಲಿ ಕತ್ತಲಾಗುವಾಗಲೇ ಕದಗಳನ್ನು ಮುಚ್ಚಿಸಬೇಕು; ಸಬ್ಬತ್‍ದಿನ ಗತಿಸುವುದಕ್ಕಿಂತ ಮುಂಚೆ ಅವುಗಳನ್ನು ತೆರೆಯಬಾರದು,” ಎಂದು ಆಜ್ಞಾಪಿಸಿದೆ. ಯಾವ ಹೊರೆಯೂ ಒಳಗೆ ಬಾರದಂತೆ ನನ್ನ ಸೇವಕರಲ್ಲಿ ಕೆಲವರನ್ನು ಬಾಗಿಲುಗಳ ಬಳಿಯಲ್ಲಿ ಕಾವಲಿರಿಸಿದೆ.


ಅರಸನ ಆಳುಗಳು ಜೋರ್ಡನ್ ದಾರಿ ಹಿಡಿದು ಹೋಗಿ ನದಿದಾಟುವ ಸ್ಥಳದವರೆಗೂ ಹುಡುಕಿದರು. ಹುಡುಕುವವರು ಹೊರಟಕೂಡಲೆ ಊರಬಾಗಿಲನ್ನು ಮುಚ್ಚಲಾಯಿತು.


ವೇಶ್ಯೆ ಆ ಇಬ್ಬರನ್ನು ಅಡಗಿಸಿಟ್ಟು, ಕೇಳಲು ಬಂದವರಿಗೆ, “ಆ ವ್ಯಕ್ತಿಗಳು ನನ್ನ ಬಳಿಗೆ ಬಂದದ್ದೇನೋ ನಿಜ. ಅವರು ಎಲ್ಲಿಯವರೆಂದು ನನಗೆ ತಿಳಿಯದೆ ಹೋಗಿದೆ.


ಆದರೆ ಅವಳು ಆ ವ್ಯಕ್ತಿಗಳನ್ನು ಮಾಳಿಗೆಯ ಮೇಲೆ ಹತ್ತಿಸಿ, ಅಲ್ಲಿ ಸಾಲಾಗಿ ಇಟ್ಟಿದ್ದ ಸೆಣಬಿನ ಹೊರೆಗಳೊಳಗೆ ಬಚ್ಚಿಟ್ಟಿದ್ದಳು.


ಸೌಲನ ದೂತರು ದಾವೀದನನ್ನು ಹಿಡಿಯುವುದಕ್ಕೆ ಬಂದಾಗ ಅವಳು, “ಅವರಿಗೆ ಮೈ ಚೆನ್ನಾಗಿಲ್ಲ,” ಎಂದು ಹೇಳಿ ಕಳುಹಿಸಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು