ಯೆಹೋಶುವ 2:7 - ಕನ್ನಡ ಸತ್ಯವೇದವು C.L. Bible (BSI)7 ಅರಸನ ಆಳುಗಳು ಜೋರ್ಡನ್ ದಾರಿ ಹಿಡಿದು ಹೋಗಿ ನದಿದಾಟುವ ಸ್ಥಳದವರೆಗೂ ಹುಡುಕಿದರು. ಹುಡುಕುವವರು ಹೊರಟಕೂಡಲೆ ಊರಬಾಗಿಲನ್ನು ಮುಚ್ಚಲಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅರಸನ ಆಳುಗಳು ಯೊರ್ದನಿನ ದಾರಿ ಹಿಡಿದು ಹೋಗಿ ಹೊಳೆದಾಟುವ ಸ್ಥಳದವರೆಗೂ ಹುಡುಕಿದರು. ಅವರನ್ನು ಹಿಂದಟ್ಟುವವರು ಹೋದ ಕೂಡಲೇ ಹೆಬ್ಬಾಗಿಲನ್ನು ಮುಚ್ಚಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅರಸನ ಆಳುಗಳು ಯೊರ್ದನಿನ ದಾರಿಹಿಡಿದು ಹೋಗಿ ಹೊಳೆದಾಟುವ ಸ್ಥಳಗಳವರೆಗೂ ಹುಡುಕಿದರು. ಹುಡುಕುವವರು ಹೊರಟ ಕೂಡಲೆ ಊರುಬಾಗಲನ್ನು ಮುಚ್ಚಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ರಾಜಭಟರು ನಗರದ ಹೊರಗೆ ಹೋಗಿ ನಗರದ ದ್ವಾರಗಳನ್ನು ಮುಚ್ಚಿ ಇಸ್ರೇಲಿನಿಂದ ಬಂದ ಆ ಇಬ್ಬರನ್ನು ಹುಡುಕಿಕೊಂಡು ಹೋದರು. ಅವರು ಜೋರ್ಡನ್ ನದಿಯವರೆಗೆ ಹೋಗಿ ಜನರು ನದಿದಾಟುವ ಎಲ್ಲ ಸ್ಥಳಗಳಲ್ಲಿ ಹುಡುಕಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆ ಮನುಷ್ಯರು ಯೊರ್ದನ್ ನದಿ ದಾರಿ ಹಿಡಿದು ಹೋಗಿ ನದಿ ದಾಟುವ ಸ್ಥಳದವರೆಗೂ ಅವರನ್ನು ಹಿಂದಟ್ಟಿದರು. ಅವರನ್ನು ಹಿಂದಟ್ಟುವವರು ಹೊರಟುಹೋದ ಕೂಡಲೆ, ಪಟ್ಟಣದ ಹೆಬ್ಬಾಗಿಲು ಮುಚ್ಚಿದರು. ಅಧ್ಯಾಯವನ್ನು ನೋಡಿ |