Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 2:9 - ಕನ್ನಡ ಸತ್ಯವೇದವು C.L. Bible (BSI)

9 “ಸರ್ವೇಶ್ವರ ಈ ನಾಡನ್ನು ನಿಮಗೆ ಕೊಟ್ಟಿದ್ದಾರೆಂದು ನಾನು ಬಲ್ಲೆ; ನಿಮ್ಮ ವಿಷಯದಲ್ಲಿ ನಮಗೆ ಮಹಾಭೀತಿ ಉಂಟಾಗಿದೆ. ನಾಡಿನ ನಿವಾಸಿಗಳೆಲ್ಲರೂ ಕಂಗೆಟ್ಟು ಹೋಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ಯೆಹೋವನು ಈ ದೇಶವನ್ನು ನಿಮಗೆ ಕೊಟ್ಟಿದ್ದಾನೆಂದು ನಾನು ಬಲ್ಲೆನು. ನಿಮ್ಮ ವಿಷಯದಲ್ಲಿ ನಮಗೆ ಮಹಾಭಯವುಂಟಾಗಿದೆ; ದೇಶದ ನಿವಾಸಿಗಳೆಲ್ಲರೂ ಕಂಗೆಟ್ಟುಹೋಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆಕೆಯು ಮಾಳಿಗೆಹತ್ತಿ ಅವರ ಬಳಿಗೆ ಬಂದು ಹೇಳಿದ್ದೇನಂದರೆ - ಯೆಹೋವನು ಈ ದೇಶವನ್ನು ನಿಮಗೆ ಕೊಟ್ಟಿರುವದನ್ನು ಬಲ್ಲೆನು. ನಿಮ್ಮ ನಿವಿುತ್ತ ನಮಗೆ ಮಹಾಭೀತಿಯುಂಟಾಗಿದೆ; ದೇಶದ ನಿವಾಸಿಗಳೆಲ್ಲರೂ ಕಂಗೆಟ್ಟುಹೋಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ಯೆಹೋವನು ಈ ದೇಶವನ್ನು ನಿಮ್ಮ ಜನರಿಗೆ ಕೊಟ್ಟಿದ್ದಾನೆಂದು ನಾನು ಬಲ್ಲೆ. ನಿಮ್ಮ ವಿಷಯ ಕೇಳಿ ನಮಗೆ ಭಯ ಉಂಟಾಗಿದೆ. ಈ ದೇಶದಲ್ಲಿರುವ ಎಲ್ಲಾ ಜನರು ನಿಮ್ಮಿಂದ ಭಯಭೀತರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ಯೆಹೋವ ದೇವರು ನಿಮಗೆ ದೇಶವನ್ನು ಕೊಟ್ಟಿದ್ದಾರೆಂದೂ, ನಿಮ್ಮ ನಿಮಿತ್ತ ನಮಗೆ ಮಹಾ ಭೀತಿಯಾಗಿದೆ ಎಂದೂ ನಿಮಗೋಸ್ಕರ ದೇಶದ ನಿವಾಸಿಗಳೆಲ್ಲರೂ ಕಂಗೆಟ್ಟು ಹೋಗಿದ್ದಾರೆಂದೂ ನಾನು ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 2:9
39 ತಿಳಿವುಗಳ ಹೋಲಿಕೆ  

ನೀವು ಹೋಗುವ ಎಲ್ಲ ಕಡೆಯಲ್ಲಿಯೂ ನಾನು ಜನಗಳ ಮನಸ್ಸಿನಲ್ಲಿ ಹೆದರಿಕೆಯನ್ನು ಹುಟ್ಟಿಸಿ, ಕಳವಳವನ್ನು ಉಂಟುಮಾಡಿ, ನಿಮ್ಮನ್ನು ವಿರೋಧಿಸುವವರು ಓಡಿಹೋಗುವಂತೆ ಮಾಡುವೆನು.


ಲೋಕದಲ್ಲಿರುವ ಎಲ್ಲ ಜನಗಳಿಗೂ ಇಂದಿನಿಂದ ನಿಮ್ಮ ಬಗ್ಗೆ ದಿಗಿಲೂ ಹೆದರಿಕೆಯೂ ಉಂಟಾಗುವಂತೆ ಮಾಡುತ್ತೇನೆ. ಅವರು ನಿಮ್ಮ ಸುದ್ದಿಯನ್ನು ಕೇಳಿದ ಮಾತ್ರಕ್ಕೆ ಗಡಗಡನೆ ನಡುಗಿ ಸಂಕಟಪಡುವರು,’ ಎಂದು ಹೇಳಿದರು.


ನನ್ನ ಮಹಾಶಕ್ತಿಯಿಂದಲೂ ನೀಡುಗೈಯಿಂದಲೂ ಲೋಕವನ್ನೂ ಭೂಮಿಯನ್ನೂ ಅದರ ಮಾನವರನ್ನು ಮತ್ತು ಪ್ರಾಣಿಗಳನ್ನೂ ಸೃಷ್ಟಿಸಿದವನೂ ನಾನೇ. ಈ ನನ್ನ ಸೃಷ್ಟಿಯನ್ನು ನನಗೆ ಸರಿ ತೋಚಿದವನಿಗೆ ಕೊಡಬಲ್ಲೆ.


ಪಾಪಾತ್ಮನು ನೂರು ಸಾರಿ ಕೆಟ್ಟದ್ದನ್ನು ಮಾಡಿ ದೀರ್ಘಕಾಲ ಬದುಕಿದರೂ ದೇವರಿಗೆ ಹೆದರಿ ಭಯಭಕ್ತಿಯುಳ್ಳವರಿಗೆ ಒಳ್ಳೆಯದೇ ಆಗುವುದೆಂದು ಬಲ್ಲೆನು.


ಪ್ರಭುವಿಗೆ ಸ್ವಂತವಾದುದು ಪರಲೋಕ I ನರರಿಗೆ ಕೊಟ್ಟಿಹನಾತನು ಭೂಲೋಕ II


ಇದನು ಕಂಡು ಕೆರಳುವನಾ ದುರುಳನು I ಹೊಂದುವನು ಈ ಪರಿ ಆಶಾಭಂಗವನು I ಹಲ್ಲು ಕಡಿಯುತ ಅವನು ಹಾಳಾಗುವನು II


ನಾನಂತು ಬಲ್ಲೆ, ನನ್ನ ಉದ್ಧಾರಕ ಜೀವಸ್ವರೂಪನೆಂದು ಕಡೆಯ ದಿನದಂದು ಧರೆಗಾತ ಇಳಿದುಬರುವನೆಂದು.


ಇದನ್ನೆಲ್ಲಾ ಕೇಳಿ ನಮ್ಮ ಎದೆ ಒಡೆದುಹೋಗಿದೆ. ನಿಮ್ಮನ್ನು ಎದುರಿಸುವ ಧೈರ್ಯ ಯಾರಿಗೂ ಇಲ್ಲ. ನಿಮ್ಮ ದೇವರಾದ ಸರ್ವೇಶ್ವರರೊಬ್ಬರೇ ಪರಲೋಕದಲ್ಲೂ ಭೂಲೋಕದಲ್ಲೂ ದೇವರು.


ಅವರು ಪ್ರಯಾಣಮಾಡುತ್ತಿದ್ದಾಗ ದೇವರು ಸುತ್ತಮುತ್ತಣದ ಊರಿನವರಲ್ಲಿ ಭಯ ಹುಟ್ಟಿಸಿದರು. ಇದರಿಂದಾಗಿ ಆ ಊರಿವನರಾರೂ ಯಕೋಬನ ಮಕ್ಕಳನ್ನು ಹಿಂದಟ್ಟಿ ಬರಲಿಲ್ಲ.


ನನ್ನದನ್ನು ನನ್ನಿಷ್ಟಾನುಸಾರ ಕೊಡುವ ಹಕ್ಕು ನನಗಿಲ್ಲವೆ? ನನ್ನ ಔದಾರ್ಯವನ್ನು ಕಂಡು ನಿನಗೇಕೆ ಹೊಟ್ಟೆಯುರಿ?’ ಎಂದ.


ನಿನೆವೆ ಬರಿದಾಗಿದೆ; ಬಟ್ಟಬರಿದಾಗಿ ಪಾಳುಬಿದ್ದಿದೆ; ಎದೆಕರಗಿದೆ, ಮೊಣಕಾಲುಗಳು ಅದರುತ್ತಿವೆ. ಎಲ್ಲರ ಸೊಂಟಗಳು ಮುರಿದಂತಾಗಿವೆ, ಅವರ ಮುಖಗಳು ಬಾಡಿಹೋಗಿವೆ.


ಈಜಿಪ್ಟಿನ ವಿಷಯವಾಗಿ ದೈವೋಕ್ತಿ : ಇಗೋ, ಸರ್ವೇಶ್ವರ ವೇಗವಾಗಿ ಚಲಿಸುವ ಮೇಘಗಳ ಮೇಲೆ ಈಜಿಪ್ಟಿಗೆ ಬರುವರು. ಅವರ ಮುಂದೆ ಈಜಿಪ್ಟಿನ ವಿಗ್ರಹಗಳು ನಡುಗುವುವು. ಈಜಿಪ್ಟಿನವರ ಹೃದಯ ಕರಗಿ ನೀರಾಗುವುದು.


ಸರ್ವೇಶ್ವರ ಸಿರಿಯಾದ ಪಾಳೆಯದವರಿಗೆ ರಥರಥಾಶ್ವಸಹಿತವಾದ ಮಹಾಸೈನ್ಯಘೋಷವು ಕೇಳಿಸುವಂತೆ ಮಾಡಿದ್ದರು. ಆದ್ದರಿಂದ ಅವರು, “ಇಸ್ರಯೇಲರ ಅರಸನು ಹಿತ್ತಿಯ ಹಾಗು ಈಜಿಪ್ಟ್ ಅರಸರಿಗೆ ಹಣಕೊಟ್ಟು ಅವರನ್ನು ನಮಗೆ ವಿರುದ್ಧ ಕರೆದುತಂದಿದ್ದಾನೆ,” ಎಂದುಕೊಂಡು,


ಅನಂತರ ನಾಮಾನನು ತನ್ನ ಪರಿವಾರದವರೊಡನೆ ಹಿಂದಿರುಗಿ ದೈವಪುರುಷನ ಬಳಿಗೆ ಹೋಗಿ ಅವನ ಮುಂದೆ ನಿಂತನು. “ಇಸ್ರಯೇಲ್ ನಾಡಿನಲ್ಲಿರುವ ದೇವರ ಹೊರತು, ಲೋಕದಲ್ಲಿ ಬೇರೆ ದೇವರು ಇಲ್ಲವೇ ಇಲ್ಲವೆಂಬುದು ಈಗ ನನಗೆ ಗೊತ್ತಾಯಿತು; ತಾವು ದಯವಿಟ್ಟು ಈ ಕಾಣಿಕೆಯನ್ನು ಅಂಗೀಕರಿಸಬೇಕು,” ಎಂದು ಹೇಳಿದನು.


ಆಗ ಸಿಂಹಹೃದಯಿಗಳಾದ ಶೂರರ ಎದೆಯೂ ಕರಗಿ ನೀರಾಗುವುದು. ನಿಮ್ಮ ತಂದೆ ರಣವೀರನೆಂದೂ ಅವನ ಸಂಗಡ ಇದ್ದವರು ಪರಾಕ್ರಮಶಾಲಿಗಳೆಂದೂ ಎಲ್ಲಾ ಇಸ್ರಯೇಲರು ಬಲ್ಲರಷ್ಟೆ.


“ಇದು ಇಸ್ರಯೇಲನಾದ ಯೋವಾಷನ ಮಗ ಗಿದ್ಯೋನನ ಕತ್ತಿಯೇ ಹೊರತು ಮತ್ತೊಂದಲ್ಲ; ದೇವರು ಮಿದ್ಯಾನ್ಯರನ್ನೂ ಅವರ ಪಾಳೆಯಗಳನ್ನೂ ಅವನ ಕೈಗೆ ಒಪ್ಪಿಸಿರುವರು,” ಎಂದನು.


ಪರಾತ್ಪರ ದೇವರು ಜನಾಂಗಗಳನು ಬೇರೆಬೇರೆಮಾಡಿದಾಗ, ಅವರವರಿಗೆ ಸ್ವದೇಶಗಳನು ವಿಂಗಡಿಸಿಕೊಟ್ಟಾಗ, ದೇವಕುವರರ ಸಂಖ್ಯಾನುಸಾರ ಪ್ರದೇಶಗಳನು ಗೊತ್ತುಮಾಡಿದಾಗ.


ಜಗದ ಜನರೆಲ್ಲರು ನಿಮ್ಮನ್ನು ಸರ್ವೇಶ್ವರನ ಜನರೆಂದು ತಿಳಿದುಕೊಂಡು ನಿಮಗೆ ಭಯಪಡುವರು.


ಯಾರೂ ನಿಮ್ಮ ಮುಂದೆ ನಿಲ್ಲುವುದಿಲ್ಲ. ನೀವು ಕಾಲಿಡುವ ಎಲ್ಲ ಪ್ರದೇಶಗಳ ಜನಗಳಿಗೂ ನಿಮ್ಮಿಂದ ದಿಗಿಲೂ ಹೆದರಿಕೆಯೂ ಉಂಟಾಗುವ ಹಾಗೆ ನಿಮ್ಮ ದೇವರಾದ ಸರ್ವೇಶ್ವರ ತಾನೇ ಹೇಳಿರುವಂತೆ ಮಾಡುವರು.


ಆತ ತನ್ನ ಜನರನ್ನು ಅವರ ಕೈಯಿಂದ ಬಿಡಿಸಿ, ಆ ಈಜಿಪ್ಟಿನವರು ಯಾವ ವಿಷಯದಲ್ಲಿ ಗರ್ವಪಡುತ್ತಿದ್ದರೋ ಆ ವಿಷಯದಲ್ಲೇ ಅವರನ್ನು ತಗ್ಗಿಸಿದ್ದಾನೆ. ಆದ್ದರಿಂದ ಸರ್ವೇಶ್ವರ ಸ್ವಾಮಿಯೇ ಎಲ್ಲ ದೇವರುಗಳಿಗಿಂತ ದೊಡ್ಡವರೆಂದು ಈಗ ತಿಳಿದುಕೊಂಡಿದ್ದೇನೆ,” ಎಂದು ಹೇಳಿದನು.


ವಿಶ್ವಾಸವಿದ್ದುದರಿಂದಲೇ ರಹಾಬಳೆಂಬ ಜಾರಿಣಿ ಇಸ್ರಯೇಲ್ ಗೂಢಚಾರರಿಗೆ ಸೌಹಾರ್ದತೆಯಿಂದ ಆಶ್ರಯ ನೀಡಿ, ಅವಿಶ್ವಾಸಿಗಳೊಡನೆ ನಾಶವಾಗದೆ ಉಳಿದಳು.


ಮೋಶೆ ಕಾದೇಶಿನಿಂದ ಎದೋಮ್ಯರ ಅರಸನ ಬಳಿಗೆ ದೂತರನ್ನು ಕಳಿಸಿದನು. “ತಮ್ಮ ಸಂಬಂಧಿಕರಾದ ಇಸ್ರಯೇಲರು ತಮ್ಮಲ್ಲಿ ಮಾಡುವ ಮನವಿ ಇದು - ನಮಗೆ ಸಂಭವಿಸಿದ ಕಷ್ಟದುಃಖಗಳೆಲ್ಲಾ ತಮಗೆ ತಿಳಿದೇ ಇವೆ.


“ಆರೋನನು ದೇಹತ್ಯಜಿಸಿ ತನ್ನ ಪೂರ್ವಜರನ್ನು ಸೇರಲಿ. ನೀವಿಬ್ಬರೂ ಮೆರೀಬಾ ಪ್ರವಾಹದ ಬಳಿ ನನ್ನ ಮಾತನ್ನು ಮೀರಿ ನಡೆದಿರಿ. ಆದ್ದರಿಂದ ನಾನು ಇಸ್ರಯೇಲರಿಗೆ ವಾಗ್ದಾನ ಮಾಡಿದ ನಾಡನ್ನು ಆರೋನನು ಪ್ರವೇಶಿಸಕೂಡದು.


ಆ ಗೂಢಚಾರರು ಮಲಗಿಕೊಳ್ಳುವ ಮೊದಲೇ ಆಕೆ ಮಾಳಿಗೆ ಹತ್ತಿ, ಅವರ ಬಳಿಗೆ ಬಂದು,


ಇದಲ್ಲದೆ, ಅವರು ಯೆಹೋಶುವನಿಗೆ, “ಸರ್ವೇಶ್ವರಸ್ವಾಮಿ ನಿಜವಾಗಿ ಈ ನಾಡನ್ನೆಲ್ಲಾ ನಮಗೆ ಕೊಟ್ಟಿದ್ದಾರೆ. ಅದರ ನಿವಾಸಿಗಳೆಲ್ಲ ನಮ್ಮನ್ನು ಕಂಡು ನಡುಗುತ್ತ ಇದ್ದಾರೆ,” ಎಂದು ತಿಳಿಸಿದರು.


ಅವರು, “ನಿಮ್ಮ ಸೇವಕರಾದ ನಾವು ನಿಮ್ಮ ದೇವರಾದ ಸರ್ವೇಶ್ವರನ ನಾಮ ಮಹತ್ತನ್ನು ಕೇಳಿ ಬಹುದೂರ ದೇಶದಿಂದ ಬಂದಿದ್ದೇವೆ. ಆ ನಿಮ್ಮ ದೇವರು ಈಜಿಪ್ಟಿನಲ್ಲಿ ನಡೆಸಿದ ಮಹತ್ಕಾರ್ಯಗಳ ಸುದ್ದಿಯನ್ನು ನಮ್ಮ ಹಿರಿಯರೂ ದೇಶನಿವಾಸಿಗಳೂ ಕೇಳಿದ್ದಾರೆ.


ಹೆಷ್ಬೋನಿನ ಅರಸ ಸೀಹೋನ್ ಮತ್ತು ಅಷ್ಟರೋತಿನಲ್ಲಿ ವಾಸವಾಗಿದ್ದ ಬಾಷಾನಿನ ಅರಸ ಓಗ್ ಎಂಬ ಈ ಇಬ್ಬರು ಅಮೋರಿಯರಿಗೆ ಆ ದೇವರು ಮಾಡಿದ್ದೆಲ್ಲವನ್ನು ಕೇಳಿದ್ದಾರೆ.


ಅವರು ಯೆಹೋಶುವನಿಗೆ, “ನಿಮ್ಮ ದೇವರಾದ ಸರ್ವೇಶ್ವರ ತಮ್ಮ ದಾಸ ಮೋಶೆಗೆ, ‘ನಾನು ನಿಮಗೆ ಈ ದೇಶವನ್ನೆಲ್ಲ ಕೊಡುವಾಗ ನೀವು ಇದರ ನಿವಾಸಿಗಳನ್ನೆಲ್ಲಾ ಸಂಹರಿಸಬೇಕು’ ಎಂದು ಆಜ್ಞಾಪಿಸಿದ್ದಾರೆಂದು ಕೇಳಿ ನಮ್ಮ ಪ್ರಾಣ ತೆಗೆಯುವಿರೆಂದು ಹೆದರಿ ಹೀಗೆ ಮಾಡಿದೆವು.


ಟೈರಿನ ದುರ್ಗತಿಯ ಸುದ್ದಿಯನ್ನು ಕೇಳಿದ ಈಜಿಪ್ಟಿನವರು ಸಹ ಕಳವಳಪಡುವರು.


ಜೋರ್ಡನಿನ ಪಶ್ಚಿಮದಲ್ಲಿದ್ದ ಅಮೋರಿಯರ ಎಲ್ಲ ಅರಸರು ಮತ್ತು ಸಮುದ್ರದ ಬಳಿಯಿದ್ದ ಸರ್ವ ಕಾನಾನ್ ರಾಜರು ಸರ್ವೇಶ್ವರ ಸ್ವಾಮಿ ಇಸ್ರಯೇಲರ ಕಣ್ಮುಂದೆಯೇ ಜೋರ್ಡನನ್ನು ಬತ್ತಿಸಿ ಆ ನದಿ ದಾಟಿಸಿದರೆಂದು ಕೇಳಿದರು. ಆಗ ಅವರ ಎದೆ ಒಡೆದುಕೋಯಿತು. ಇಸ್ರಯೇಲರ ಮುಂದೆ ಅವರಿಗೆ ಧೈರ್ಯವಿಲ್ಲದೆ ಹೋಯಿತು.


ಆಗ ಸರ್ವೇಶ್ವರಸ್ವಾಮಿ ಯೆಹೋಶುವನಿಗೆ, “ನೋಡು, ನಾನು ಜೆರಿಕೋವನ್ನು, ಅದರ ಅರಸನನ್ನು ಹಾಗು ಅದರ ಯುದ್ಧವೀರರನ್ನು ನಿನ್ನ ಕೈಗೆ ಒಪ್ಪಿಸಿದ್ದೇನೆ.


ಈ ಸುದ್ದಿ ಸುತ್ತ-ಮುತ್ತಲಿನ ನಮ್ಮ ವಿರೋಧಿಗಳಾದ ಜನಾಂಗಗಳಿಗೆ ಮುಟ್ಟಿತು. ಅವರು ಭಯಭೀತರಾದರು. ಸೊಕ್ಕು ಮುರಿದವರಾಗಿ ಹಾಗೇ ಕುಗ್ಗಿಹೋದರು. ಈ ಕಾರ್ಯ ನಮ್ಮ ದೇವರಿಂದಲೇ ಪೂರ್ಣಗೊಂಡಿತು ಎಂದು ಅವರಿಗೆ ಮನದಟ್ಟಾಯಿತು.


ರಾಜನಿರ್ಣಯ ಶಾಸನಗಳು ಪ್ರಕಟವಾದ ಸಂಸ್ಥಾನಗಳಲ್ಲೂ ನಗರಗಳಲ್ಲೂ ವಾಸಿಸುತ್ತಿದ್ದ ಯೆಹೂದ್ಯರೆಲ್ಲರಿಗೆ ಶುಭದಿನ ಉದಯವಾಯಿತು. ಅವರು ಅದನ್ನು ಸಂತೋಷದ ಹಾಗೂ ಸಂಭ್ರಮದ ದಿನವನ್ನಾಗಿ ಆಚರಿಸಿದರು. ಜನರಲ್ಲಿ ಅನೇಕರು ಯೆಹೂದ್ಯರಿಗೆ ಭಯಪಟ್ಟು ಅವರ ಮತಕ್ಕೆ ಸೇರಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು