ಯೆಹೋಶುವ 20:5 - ಕನ್ನಡ ಸತ್ಯವೇದವು C.L. Bible (BSI)5 ಹತನಾದವನ ಹತ್ತಿರದ ಬಂಧು, ಕೊಂದವನನ್ನು ಹಿಂದಟ್ಟಿಕೊಂಡು ಅಲ್ಲಿಗೆ ಬಂದರೆ, ಅವರು ಅವನನ್ನು ಅವನ ಕೈಗೆ ಒಪ್ಪಿಸಬಾರದು. ಏಕೆಂದರೆ ಅವನು ನೆರೆಯವನನ್ನು ಕೊಂದದ್ದು ಅಕಸ್ಮಾತ್ತಾಗಿ, ಹಳೆಯ ದ್ವೇಷದಿಂದೇನೂ ಅಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಹತವಾದವನ ಸಮೀಪ ಬಂಧುವು ಕೊಂದವನನ್ನು ಹಿಂದಟ್ಟಿಕೊಂಡು ಅಲ್ಲಿಗೆ ಬಂದರೆ ಅವರು ಅವನನ್ನು ಅವನ ಕೈಗೆ ಒಪ್ಪಿಸಬಾರದು. ಏಕೆಂದರೆ ಅವನು ನೆರೆಯವನನ್ನು ಹಳೆಯ ದ್ವೇಷವೇನೂ ಇಲ್ಲದೆ ಆಕಸ್ಮಾತ್ತಾಗಿ ಕೊಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಹತವಾದವನ ಸಮೀಪಬಂಧುವು ಕೊಂದವನನ್ನು ಹಿಂದಟ್ಟಿಕೊಂಡು ಅಲ್ಲಿಗೆ ಬಂದರೆ ಅವರು ಅವನನ್ನು ಅವನ ಕೈಗೆ ಒಪ್ಪಿಸಬಾರದು. ಯಾಕಂದರೆ ಅವನು ನೆರೆಯವನನ್ನು ಪೂರ್ವದ್ವೇಷವೇನೂ ಇಲ್ಲದೆ ಅಕಸ್ಮಾತ್ತಾಗಿ ಕೊಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆದರೆ ಅವನನ್ನು ಬೆನ್ನಟ್ಟಿಕೊಂಡು ಬಂದವನು ಆಶ್ರಯನಗರಕ್ಕೆ ಬಂದರೆ, ಆ ನಗರದ ನಾಯಕರು ಕೊಂದವನನ್ನು ಬೆನ್ನಟ್ಟಿ ಬಂದವನ ಕೈಗೆ ಒಪ್ಪಿಸಬಾರದು. ಆಶ್ರಯಕೋರಿ ಅವರಲ್ಲಿಗೆ ಬಂದ ವ್ಯಕ್ತಿಯನ್ನು ಅವರು ರಕ್ಷಿಸಬೇಕು. ಯಾಕೆಂದರೆ ಆ ನರಹತ್ಯವು ಆಕಸ್ಮಿಕವಾದದ್ದೇ ಹೊರತು ದ್ವೇಷದಿಂದ ಮಾಡಿದ್ದಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ರಕ್ತದ ಸೇಡು ತೀರಿಸಿಕೊಳ್ಳುವವನು ಅವನನ್ನು ಹಿಂದಟ್ಟಿ ಬಂದರೆ, ಕೊಲೆ ಮಾಡಿದವನನ್ನು ಅವನ ಕೈಗೆ ಒಪ್ಪಿಸಿಕೊಡಬಾರದು. ಏಕೆಂದರೆ ಅವನು ತನ್ನ ನೆರೆಯವನನ್ನು ಅಕಸ್ಮಾತ್ತಾಗಿ ಕೊಂದನು ಮತ್ತು ಪೂರ್ವದಲ್ಲಿ ಅವನ ಬಗ್ಗೆ ದ್ವೇಷ ಇರಲಿಲ್ಲ. ಅಧ್ಯಾಯವನ್ನು ನೋಡಿ |