Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 21:1 - ಕನ್ನಡ ಸತ್ಯವೇದವು C.L. Bible (BSI)

1 ಲೇವಿ ಕುಲಾಧಿಪತಿಗಳು ಕಾನಾನ್ ನಾಡಿನ ಶೀಲೋವಿನಲ್ಲಿದ್ದ ಯಾಜಕ ಎಲ್ಲಾಜಾರ್, ನೂನನ ಮಗ ಯೆಹೋಶುವ ಮತ್ತು ಇಸ್ರಯೇಲ್ ಕುಲಾಧಿಪತಿಗಳ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಲೇವಿ ಕುಲಾಧಿಪತಿಗಳು ಕಾನಾನ್ ದೇಶದ ಶೀಲೋವಿನಲ್ಲಿದ್ದ ಮಹಾಯಾಜಕನಾದ ಎಲ್ಲಾಜಾರ, ನೂನನ ಮಗನಾದ ಯೆಹೋಶುವ ಮತ್ತು ಇಸ್ರಾಯೇಲ ಕುಲಾಧಿಪತಿಗಳು ಇವರ ಬಳಿಗೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಲೇವಿಕುಲಾಧಿಪತಿಗಳು ಕಾನಾನ್‍ದೇಶದ ಶೀಲೋವಿನಲ್ಲಿದ್ದ ಮಹಾಯಾಜಕನಾದ ಎಲ್ಲಾಜಾರ್, ನೂನನ ಮಗನಾದ ಯೆಹೋಶುವ, ಇಸ್ರಾಯೇಲ್ ಕುಲಾಧಿಪತಿಗಳು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಲೇವಿ ಕುಲಾಧಿಪತಿಗಳು ಮಾತಾಡುವುದಕ್ಕಾಗಿ ಯಾಜಕನಾದ ಎಲ್ಲಾಜಾರನ, ನೂನನ ಮಗನಾದ ಯೆಹೋಶುವನ ಮತ್ತು ಇಸ್ರೇಲಿನ ಬೇರೆ ಕುಲಾಧಿಪತಿಗಳ ಬಳಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಲೇವಿ ಗೋತ್ರದ ಹಿರಿಯರು, ನೂನನ ಮಗನಾದ ಯೆಹೋಶುವನ ಬಳಿಗೂ ಇಸ್ರಾಯೇಲರ ಗೋತ್ರಗಳ ಹಿರಿಯರ ಬಳಿಗೂ ಯಾಜಕನಾದ ಎಲಿಯಾಜರನ ಬಳಿಗೂ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 21:1
9 ತಿಳಿವುಗಳ ಹೋಲಿಕೆ  

ಯಾಜಕ ಎಲ್ಲಾಜಾರನು, ನೂನನ ಮಗ ಯೆಹೋಶುವನು ಹಾಗೂ ಇಸ್ರಯೇಲ್ ಕುಲಾಧಿಪತಿಗಳು


ಹೀಗೆ ಯಾಜಕ ಎಲ್ಲಾಜಾರನು, ನೂನನ ಮಗ ಯೆಹೋಶುವ ಮತ್ತು ಇಸ್ರಯೇಲ್ ಕುಲ ಮುಖ್ಯಸ್ಥರೂ ಶೀಲೋವಿನಲ್ಲಿದ್ದ ದೇವದರ್ಶನದ ಗುಡಾರದ ದ್ವಾರದಲ್ಲಿ ಸರ್ವೇಶ್ವರನ ಸನ್ನಿಧಿಯಲ್ಲೇ ಚೀಟುಹಾಕಿ ಪ್ರಾಂತ್ಯಗಳನ್ನು ಹಂಚಿಕೊಟ್ಟರು; ನಾಡಿನ ವಿಭಜನಾಕಾರ್ಯ ಮುಗಿಯಿತು.


ಇವರು ಮಹಾಯಾಜಕನಾದ ಎಲ್ಲಾಜಾರ್, ನೂನನ ಮಗ ಯೆಹೋಶುವ ಹಾಗೂ ಕುಲಾಧಿಪತಿಗಳ ಬಳಿಗೆ ಬಂದು, “ನಮ್ಮ ಅಣ್ಣತಮ್ಮಂದಿರೊಡನೆ ನಮಗೂ ಪಾಲುಕೊಡಬೇಕೆಂದು ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದ್ದಾರಲ್ಲವೆ?” ಎಂದು ಹೇಳಿದರು. ಯೆಹೋಶುವನು ಸರ್ವೇಶ್ವರನ ಅಪ್ಪಣೆಯಂತೆ ಅವರಿಗೆ ಅವರ ತಂದೆಯ ಅಣ್ಣತಮ್ಮಂದಿರ ಜೊತೆಗೆ ಸೊತ್ತನ್ನು ಪಾಲಾಗಿಕೊಟ್ಟನು.


ಆರೋನನ ಮಗನಾದ ಎಲ್ಲಾಜಾರನು ಪೂಟಿಯೇಲನ ಮಕ್ಕಳಲ್ಲಿ ಒಬ್ಬಾಕೆಯನ್ನು ಮದುವೆಮಾಡಿಕೊಂಡನು. ಆಕೆ ಅವನಿಗೆ ಫಿನೇಹಾಸನನ್ನು ಹೆತ್ತಳು. ಅವರವರ ಗೋತ್ರದ ಮೇರೆಗೆ ಇವರೇ ಲೇವಿಯರ ಪೂರ್ವಿಕರು.


ಅವರ ಗೋತ್ರಗಳ ಮೂಲಪುರುಷರು ಇವರು: ಇಸ್ರಯೇಲನ ಜ್ಯೇಷ್ಠ ಪುತ್ರನಾದ ರೂಬೇನನಿಗೆ ಹನೋಕ್, ಫಲ್ಲು, ಹೆಚ್ರೋನ್ ಮತ್ತು ಕರ್ಮೀ ಎಂಬವರು ಮಕ್ಕಳು. ಇವರೇ ರೂಬೇನನಿಂದ ಉಂಟಾದ ಗೋತ್ರಗಳಿಗೆ ಮೂಲ ಪುರುಷರು.


ಅವರ ಕೋಪ ಭೀಕರ, ಅದಕ್ಕಿರಲಿ ಧಿಕ್ಕಾರ! ಅವರ ರೌದ್ರ - ಕ್ರೂರ, ಅದಕ್ಕಿರಲಿ ಧಿಕ್ಕಾರ! ವಿಭಾಗಿಸುವೆನವರನು ಯಕೋಬ ಕುಲದಲಿ ಚದರಿಸುವೆನವರನು ಇಸ್ರಯೇಲರಲಿ.


ಜೋರ್ಡನ್ ನದಿಯ ತೀರದಲ್ಲಿ ಜೆರಿಕೋ ನಗರದ ಹತ್ತಿರವಿರುವ ಮೋವಾಬ್ಯರ ಮೈದಾನದಲ್ಲಿ ಸರ್ವೇಶ್ವರ ಸ್ವಾಮಿ ಮೋಶೆಗೆ ಹೇಳಿದ್ದೇನೆಂದರೆ -


ಇಸ್ರಯೇಲರ ಸೊತ್ತಿನಲ್ಲಿ ಆಯಾ ಕುಲದ ಸೊತ್ತಿನ ಅಳತೆಗೆ ತಕ್ಕಹಾಗೆ, ಅಂದರೆ ಹೆಚ್ಚು ಉಳ್ಳವರಿಂದ ಹೆಚ್ಚಾಗಿಯೂ ಕಡಿಮೆ ಉಳ್ಳವರಿಂದ ಕಡಿಮೆಯಾಗಿಯೂ ಲೇವಿಯರಿಗೆ ಊರುಗಳನ್ನು ಕೊಡಿಸಬೇಕು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು