Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 21:11 - ಕನ್ನಡ ಸತ್ಯವೇದವು C.L. Bible (BSI)

11 ಇವುಗಳಲ್ಲಿ ಯೆಹೂದ ಮಲೆನಾಡಿನ ಹೆಬ್ರೋನೆಂಬ ಗೋಮಾಳ ಸಹಿತವಾದ ಕಿರ್ಯತರ್ಬವೂ ಸೇರಿರುತ್ತದೆ. (ಕಿರ್ಯತರ್ಬ ಎಂದರೆ ಅನಾಕನ ತಂದೆಯಾದ ಅರ್ಬನನಗರ).

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇವುಗಳಲ್ಲಿ ಯೆಹೂದ ಬೆಟ್ಟದ ಸೀಮೆಯ ಹೆಬ್ರೋನೆಂಬ ಗೋಮಾಳ ಸಹಿತವಾದ ಕಿರ್ಯತರ್ಬವೂ ಸೇರಿರುತ್ತದೆ. (ಕಿರ್ಯಾತ ಅರ್ಬ ಎಂದರೆ ಅನಾಕನ ತಂದೆಯಾದ ಅರ್ಬನ ಪಟ್ಟಣ) ಅದರ ಸುತ್ತಲಿರುವ ಉಪನಗರಗಳನ್ನೂ ಅವರಿಗೆ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಇವುಗಳಲ್ಲಿ ಯೆಹೂದ ಬೆಟ್ಟದ ಸೀಮೆಯ ಹೆಬ್ರೋನೆಂಬ ಗೋಮಾಳ ಸಹಿತವಾದ ಕಿರ್ಯತರ್ಬವೂ ಸೇರಿರುತ್ತದೆ. (ಕಿರ್ಯತರ್ಬವಂದರೆ ಅನಾಕನ ತಂದೆಯಾದ ಅರ್ಬನ ಪಟ್ಟಣ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅವರಿಗೆ ಹೆಬ್ರೋನ್ ಎಂಬ ಕಿರ್ಯತರ್ಬನಗರ (ಇದಕ್ಕೆ ಅನಾಕನ ತಂದೆಯಾದ ಅರ್ಬನ ಹೆಸರಿಡಲಾಗಿತ್ತು.) ಮತ್ತು ಅವರ ಪಶುಗಳಿಗಾಗಿ ಆ ನಗರದ ಹತ್ತಿರದ ಸ್ವಲ್ಪ ಭೂಮಿಯನ್ನು ಕೊಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯೆಹೂದದ ಬೆಟ್ಟಗಳಲ್ಲಿರುವ ಅನಾಕನ ಪಿತೃವಾದ ಕಿರ್ಯತ್ ಅರ್ಬನ ಹೆಸರಿದ್ದ ಪಟ್ಟಣವಾದ ಹೆಬ್ರೋನನ್ನೂ, ಅದರ ಸುತ್ತಲಿರುವ ಗೋಮಾಳಗಳನ್ನೂ ಅವರಿಗೆ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 21:11
15 ತಿಳಿವುಗಳ ಹೋಲಿಕೆ  

ಇದು ಯೆಹೂದ ಸೀಮೆಯ ಹೆಬ್ರೋನನ್ನೂ ಅದರ ಸುತ್ತಲಿನ ಪ್ರದೇಶಗಳನ್ನೂ ಒಳಗೊಂಡಿತ್ತು.


ಇದಾದ ಕೆಲವು ದಿನಗಳಲ್ಲೇ ಮರಿಯಳು ಪ್ರಯಾಣಹೊರಟು ಜುದೇಯದ ಗುಡ್ಡಗಾಡಿನಲ್ಲಿರುವ ಒಂದು ಊರಿಗೆ ತ್ವರೆಯಾಗಿ ಬಂದಳು.


ನಾಲ್ಕು ವರ್ಷಗಳಾದನಂತರ ಅಬ್ಷಾಲೋಮನು ಅರಸನಿಗೆ, “ನಾನು ಸರ್ವೇಶ್ವರನಿಗೆ ಹೊತ್ತ ಹರಕೆಗಳನ್ನು ಸಲ್ಲಿಸುವುದಕ್ಕಾಗಿ ಹೆಬ್ರೋನಿಗೆ ಹೋಗಬೇಕಾಗಿದೆ, ಅಪ್ಪಣೆಯಾಗಲಿ.


‘ಕಿರ್ಯತರ್ಬ’ ಎಂದು ಈ ಮುಂದೆ ಹೆಸರುಗೊಂಡಿದ್ದ ಹೆಬ್ರೋನಿಗೆ ಹೋಗಿ ಅಲ್ಲಿದ್ದ ಕಾನಾನ್ಯರ ಮೇಲೆ ದಾಳಿಮಾಡಿ ಅವರಲ್ಲಿ ಶೇಷೈ, ಅಹೀಮನ್, ತಲ್ಮೈ ಎಂಬವರನ್ನು ಸೋಲಿಸಿದರು.


ಅದರ ಹಿಂದಿನ ಹೆಸರು, ‘ಕಿರ್ಯತ್ ಅರ್ಬ’ ಎಂದು. ಅರ್ಬ ಎಂಬವನು ಈ ಎತ್ತರದ ವ್ಯಕ್ತಿಗಳಲ್ಲಿ ಪ್ರಮುಖನು. ಯುದ್ಧವು ನಿಂತಿತು. ನಾಡಿನಲ್ಲಿ ಶಾಂತಿಸಮಾಧಾನ ನೆಲೆಸಿತು.


ಯಕೋಬನು ತನ್ನ ತಂದೆ ಇಸಾಕನ ಬಳಿಗೆ ಮಮ್ರೆಗೆ ಬಂದನು. ಮಮ್ರೆಯು ಹೆಬ್ರೋನೆಂಬ ಕಿರ್ಯತರ್ಬಕ್ಕೆ ಸೇರಿದುದು. ಅದೇ ಅಬ್ರಹಾಮ್ ಹಾಗು ಇಸಾಕನು ಪರದೇಶಸ್ಥರಾಗಿ ವಾಸವಾಗಿದ್ದ ಸ್ಥಳ.


ಇಷ್ಟು ವರ್ಷಗಳಾದ ಮೇಲೆ ಆಕೆ ಕಾನಾನ್ ನಾಡಿನ ಹೆಬ್ರೋನೆಂಬ ಕಿರ್ಯತರ್ಬದಲ್ಲಿ ಕಾಲವಾದಳು. ಅಬ್ರಹಾಮನು ಅಲ್ಲಿಗೆ ಬಂದು ಅವಳಿಗಾಗಿ ಕಣ್ಣೀರಿಟ್ಟು ಗೋಳಾಡಿದನು.


ಆದ್ದರಿಂದ ಇಸ್ರಯೇಲರು ಅವರಿಗೆ ಯೆಹೂದ ಮತ್ತು ಸಿಮೆಯೋನ್ ಕುಲಗಳಿಂದ ಕೆಳಗೆ ಹೇಳಿರುವ ನಗರಗಳನ್ನು ಕೊಟ್ಟರು:


ಆದರೆ ಇದಕ್ಕೆ ಸೇರಿದ ಹೊಲಗಳನ್ನು ಮತ್ತು ಗ್ರಾಮಗಳನ್ನು ಯಫುನ್ನೆಯ ಮಗ ಕಾಲೇಬನಿಗೆ ಕೊಟ್ಟರು.


ಮತ್ತು ದಾವೀದನೂ ಅವನ ಜನರೂ ಸಂಚರಿಸುತ್ತಿದ್ದ ಇತರ ಎಲ್ಲಾ ಸ್ಥಳಗಳವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು