Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 21:39 - ಕನ್ನಡ ಸತ್ಯವೇದವು C.L. Bible (BSI)

39 ಹೆಷ್ಬೋನ್ ಹಾಗೂ ಯಗ್ಜೇರ್ ಎಂಬ ಗೋಮಾಳ ಸಹಿತವಾದ ನಾಲ್ಕು ನಗರಗಳು ಸಿಕ್ಕಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಹೆಷ್ಬೋನ್, ಯಗ್ಜೇರ್ ಎಂಬ ಗೋಮಾಳ ಸಹಿತವಾದ ನಾಲ್ಕುಪಟ್ಟಣಗಳು ದೊರಕಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಮಹನಯಿಮ್, ಹೆಷ್ಬೋನ್, ಯಗ್ಜೇರ್ ಎಂಬ ಗೋಮಾಳ ಸಹಿತವಾದ ನಾಲ್ಕು ಪಟ್ಟಣಗಳೂ ಸಿಕ್ಕಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಹೆಷ್ಬೋನ್, ಯಗ್ಜೇರ್ ಪಟ್ಟಣಗಳನ್ನು ಕೊಟ್ಟರು. ಒಟ್ಟಿನಲ್ಲಿ ಗಾದ್ಯರು ಅವರಿಗೆ ನಾಲ್ಕು ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಪ್ರತಿಯೊಂದು ಪಟ್ಟಣಗಳ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಹೆಷ್ಬೋನನ್ನೂ ಯಜ್ಜೇರನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 21:39
14 ತಿಳಿವುಗಳ ಹೋಲಿಕೆ  

‘ಸಿಬ್ಮ’ದ ದ್ರಾಕ್ಷಾಲತೆಯೇ, ಯಜ್ಜೇರಿನ ನಿಮಿತ್ತ ದುಃಖಿಸುವುದಕ್ಕಿಂತಲು ನಿನ್ನನ್ನು ಕಂಡು ಹೆಚ್ಚಾಗಿ ದುಃಖಿಸುತ್ತೇನೆ. ನಿನ್ನ ಶಾಖೆಗಳು ಸಮುದ್ರದಾಚೆಗೂ ಯಜ್ಜೇರಿನ ಸರೋವರದವರೆಗೂ ವ್ಯಾಪಿಸಿವೆ. ಈಗ ನಿನ್ನ ಹಣ್ಣುಹಂಪಲುಗಳ ಮೇಲೆ ಹಾಗು ದ್ರಾಕ್ಷೆಯ ಸುಗ್ಗಿಯ ಮೇಲೆ ಸೂರೆಗಾರ ಬಂದೆರಗಿದ್ದಾನೆ.


ಒಟ್ಟಾರೆ ಮೀಶೋರೆಂಬ ಎತ್ತರವಾದ ಬಯಲಿನಲ್ಲಿದ್ದ ಎಲ್ಲ ನಗರಗಳು, ಹೆಷ್ಬೋನಿನಲ್ಲಿ ಆಳುತ್ತಿದ್ದ ಅಮೋರಿಯರ ಅರಸ ಸೀಹೋನನ ಸಮಸ್ತ ರಾಜ್ಯ. ಮೋಶೆ ಈ ನಾಡಿನಲ್ಲಿ ವಾಸವಾಗಿದ್ದ ಸೀಹೋನನನ್ನೂ ಎವೀ, ರೆಕೆಮ್, ಚೂರ್, ಹೂರ್, ರೆಬಾ ಎಂಬ ಮಿದ್ಯಾನ್ ಪ್ರಭುಗಳಾಗಿದ್ದ ಅವನ ಸರದಾರರನ್ನೂ ಸದೆಬಡಿದನು.


ಮೇದೆಬದ ಬಯಲುನಾಡಿಗೆ ಸೇರಿದ ಹೆಷ್ಬೋನ್ ನಗರ, ಅಲ್ಲೆ ಎತ್ತರವಾದ ಬಯಲಿನಲ್ಲಿರುವ ದೀಬೋನ್, ಬಾಮೋತ್ ಬಾಳ್, ಬೇತ್ಬಾಳ್ಮೆಯೋನ್ ಯಹಚಾ,


ರೂಬೇನ್ಯರು ಹೆಷ್ಬೋನ್, ಎಲೆಯಾಲೆ, ಕಿರ್ಯತಯಿಮ್, ಸಿಬ್ಮಾ ಎಂಬ ಊರುಗಳನ್ನು ಹಾಗು


ಅಟ್ರೋತ್ಷೋಫಾನ್, ಯಗ್ಜೇರ್, ಯೊಗ್ಬೆಹಾ, ಬೇತ್ನಿಮಾ,


ಸರ್ವೇಶ್ವರ ಸ್ವಾಮಿ ಇಸ್ರಯೇಲರಿಗೆ ಅಧೀನಪಡಿಸಿರುವ ಈ ಪ್ರದೇಶ, ಅಂದರೆ ಅಟಾರೋತ್, ದೀಬೋನ್, ಯಗ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬಿಯೋನ್ ಎಂಬ ಪಟ್ಟಣಗಳನ್ನು ಒಳಗೊಂಡ ಈ ಪ್ರದೇಶ ದನಕುರಿಗಳ ಮೇವಿಗೆ ಹುಲುಸಾದ ಪ್ರದೇಶ.


ರೂಬೇನ್ ಕುಲದವರಿಗೂ ಗಾದ್ ಕುಲದವರಿಗೂ ಬಹಳ ದನಕುರಿಗಳಾಗಿದ್ದವು. ಯಗ್ಜೇರ್ ಹಾಗು ಗಿಲ್ಯಾದ್ ಪ್ರದೇಶಗಳನ್ನು ದನಕುರಿಗಳ ಮೇವಿಗೆ ತಕ್ಕ ಸ್ಥಳ ಎಂದು ಅವರು ನೋಡಿ ತಿಳಿದುಕೊಂಡರು.


ಹೆಷ್ಬೋನಿನ ಅರಸ ಸೀಹೋನನ ರಾಜ್ಯದ ಉಳಿದ ಭಾಗವಾಗಿರುವ ಯಗ್ಜೇರ್, ಗಿಲ್ಯಾದಿನ ಎಲ್ಲ ನಗರಗಳು, ರಬ್ಬಾ ಊರಿನ ಪೂರ್ವದಲ್ಲಿ ಇರುವ ಅರೋಯೇರ್ ನಗರದವರೆಗೆ ವಿಸ್ತರಿಸಿಕೊಂಡಿರುವ ಅಮ್ಮೋನಿಯರ ಅರ್ಧರಾಜ್ಯ,


ಗಾದ್ಯರ ಸೊತ್ತಿನಿಂದ ಕೊಲೆಮಾಡಿದವನಿಗೆ ಆಶ್ರಯ ನಗರವಾಗಿರುವ ಗಿಲ್ಯಾದಿನ ರಾಮೋತ್, ಮಹನಯಿಮ್,


ಮಿಕ್ಕ ಲೇವಿಯರಾದ ಮೆರಾರೀ ಗೋತ್ರಗಳಿಗೆ ಚೀಟಿನಿಂದ ಹೀಗೆ ದೊರೆತ ನಗರಗಳು ಒಟ್ಟು ಹನ್ನೆರಡು.


ದಾವೀದನ ಆಳ್ವಿಕೆಯ ನಲವತ್ತನೆಯ ವರ್ಷದಲ್ಲಿ ಹೆಬ್ರೋನ್ಯರಿಗೆ ಸೇರಿದವರು ಯಾರಾರೆಂದು ವಿಚಾರಣೆ ನಡೆದಾಗ ಗಿಲ್ಯಾದಿನ ಯಾಜೇರಿನ ಶ್ರೀಮಂತರಲ್ಲಿ ಅನೇಕರು ಅವರ ಗೋತ್ರದವರು ಯಾರೆಂದು ಗೊತ್ತಾಯಿತು. ಈ ಹೆಬ್ರೋನ್ಯರಲ್ಲಿ ಯೇರೀಯನು ಮುಖ್ಯಸ್ಥನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು