Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 22:22 - ಕನ್ನಡ ಸತ್ಯವೇದವು C.L. Bible (BSI)

22 “ದೇವಾಧಿದೇವರಾದ ಸರ್ವೇಶ್ವರ ಇದಕ್ಕೆ ಸಾಕ್ಷಿ; ಆ ದೇವಾಧಿದೇವ ಸರ್ವೇಶ್ವರಸ್ವಾಮಿಗೆ ಇದು ಗೊತ್ತಿದೆ. ಇಸ್ರಯೇಲರಿಗೂ ಗೊತ್ತಾಗುವುದು. ನಾವು ದ್ರೋಹಿಗಳು, ಸರ್ವೇಶ್ವರನಿಗೆ ವಿರುದ್ಧ ಪಾಪಮಾಡಿದವರು ಆಗಿದ್ದರೆ ಆ ಸ್ವಾಮಿ ನಮ್ಮನ್ನು ಇಂದೇ ಜೀವದಿಂದುಳಿಸದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 “ದೇವಾಧಿದೇವನಾದ ಯೆಹೋವನು ಇದಕ್ಕೆ ಸಾಕ್ಷಿ; ಆ ದೇವಾಧಿದೇವನಾದ ಯೆಹೋವನಿಗೆ ಇದು ಗೊತ್ತಿದೆ. ಇಸ್ರಾಯೇಲರಿಗೂ ಗೊತ್ತಾಗುವುದು. ನಾವು ದ್ರೋಹಿಗಳು, ಯೆಹೋವನ ವಿರುದ್ಧವಾಗಿ ಪಾಪಮಾಡಿದವರು ಆಗಿದ್ದರೆ ಯೆಹೋವನು ನಮ್ಮನ್ನು ಈ ಹೊತ್ತೇ ನಮ್ಮ ಜೀವವನ್ನು ತೆಗೆದುಬಿಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಇದಕ್ಕೆ ಸಾಕ್ಷಿ; ದೇವದೇವನಾದ ಯೆಹೋವನಿಗೆ ಇದು ಗೊತ್ತುಂಟು. ಇಸ್ರಾಯೇಲ್ಯರಿಗೂ ಗೊತ್ತಾಗುವದು. ನಾವು ದ್ರೋಹಿಗಳೂ ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದವರೂ ಆಗಿದ್ದರೆ ಆತನು ನಮ್ಮನ್ನು ಈ ಹೊತ್ತೇ ಕೈಬಿಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 “ನಮ್ಮ ದೇವರು ಯೆಹೋವನೇ! ನಮ್ಮ ದೇವರು ಯೆಹೋವನೇ ಎಂದು ಇನ್ನೊಮ್ಮೆ ನಾವು ಹೇಳುತ್ತೇವೆ. ನಾವು ಇದನ್ನು ಏಕೆ ಮಾಡಿದೆವೆಂಬುದು ದೇವರಿಗೆ ತಿಳಿದಿದೆ. ನೀವೂ ಅದನ್ನು ತಿಳಿದುಕೊಂಡಿರಬೇಕೆಂಬುದು ನಮ್ಮ ಆಶೆ. ನಾವು ಮಾಡಿದ್ದನ್ನು ನೀವು ವಿವೇಚಿಸಿ ನೋಡಬಹುದು. ನಾವೇನಾದರೂ ತಪ್ಪುಮಾಡಿದ್ದೇವೆಂದು ಅನಿಸಿದ್ದಲ್ಲಿ ಆಗ ನೀವು ನಮ್ಮನ್ನು ಕೊಲ್ಲಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 “ದೇವಾದಿದೇವರಾದ ಯೆಹೋವ ದೇವರು ಇದಕ್ಕೆ ಸಾಕ್ಷಿ, ನಾವು ದೇವಾದಿದೇವರಾದ ಯೆಹೋವ ದೇವರಿಗೆ ವಿರುದ್ಧ ಪಾಪಮಾಡಿದವರಾಗಿದ್ದರೆ ಅಥವಾ ಅವಿಧೇಯರಾಗಿದ್ದರೆ, ಆ ದೇವರು ನಮ್ಮನ್ನು ಇಂದೇ ಜೀವದಿಂದುಳಿಸದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 22:22
40 ತಿಳಿವುಗಳ ಹೋಲಿಕೆ  

ಮನುಷ್ಯರ ಅಂತರಂಗಗಳನ್ನು ಬಲ್ಲಂಥ ನೀವು, ನಿಮ್ಮ ನಿವಾಸವಾಗಿರುವ ಪರಲೋಕದಿಂದ ಆಲಿಸಿರಿ; ಅವರಿಗೆ ಪಾಪಪರಿಹಾರವನ್ನು ಅನುಗ್ರಹಿಸಿರಿ; ನೀವೊಬ್ಬರೇ ಎಲ್ಲಾ ಮಾನವರ ಹೃದಯಗಳನ್ನು ಬಲ್ಲವನಾಗಿರುವುದರಿಂದ ಪ್ರತಿಯೊಬ್ಬನಿಗೂ ಅವನವನು ಹಿಡಿಯುವ ಮಾರ್ಗಕ್ಕೆ ತಕ್ಕ ಹಾಗೆ ಫಲವನ್ನು ಕೊಡಿ.


ನಿಮ್ಮ ದೇವರಾದ ಸರ್ವೇಶ್ವರ ದೇವಾದಿದೇವರು, ಸರ್ವೇಶ್ವರಾಧಿ ಸರ್ವೇಶ್ವರ. ಅವರು ಪರಮ ದೇವರೂ ಪರಾಕ್ರಮಿಯೂ ಭಯಂಕರರೂ ಆಗಿದ್ದಾರೆ. ಅವರು ಮುಖದಾಕ್ಷಿಣ್ಯ ನೋಡುವವರಲ್ಲ, ಲಂಚ ತೆಗೆದುಕೊಳ್ಳುವವರಲ್ಲ.


ದೇವಾ, ನಿನಗದು ಬಯಲಾಗದಿರುತ್ತಿತ್ತೆ? I ನಮ್ಮೆದೆ ಗುಟ್ಟು ನಿನಗೆ ತಿಳಿಯದಿರುತ್ತಿತ್ತೆ? II


ನಾನು ಅಪರಾಧಿಯಲ್ಲವೆಂದು ತಿಳಿದಿದೆಯಲ್ಲವೆ? ನಿನ್ನ ಕೈಯಿಂದ ಬಿಡಿಸಬಲ್ಲವರಾರೂ ಇಲ್ಲವಲ್ಲವೆ?


ಸರ್ವೇಶ್ವರನಾದ ನಾನು ಹೃದಯ ಪರಿಶೀಲಕ ಹೌದು, ಅಂತರಿಂದ್ರಿಯಗಳನ್ನು ಪರಿಶೋಧಿಸುವಾತ.


ಆತನ ಉಡುಪಿನ ಮೇಲೂ ತೊಡೆಯ ಮೇಲೂ ‘ರಾಜಾಧಿರಾಜ ಮತ್ತು ಪ್ರಭುಗಳ ಪ್ರಭು’ ಎಂಬ ಹೆಸರು ಲಿಖಿತವಾಗಿತ್ತು.


ಅವಳ ಮಕ್ಕಳನ್ನು ಸಂಹರಿಸದೆ ಬಿಡೆನು. ಹೃನ್ಮನಗಳನ್ನು ಪರಿಶೋಧಿಸುವಾತನು ನಾನೇ ಎಂದು ಎಲ್ಲ ಸಭೆಗಳಿಗೂ ಆಗ ಮನದಟ್ಟು ಆಗುವುದು; ನಿಮ್ಮಲ್ಲಿರುವ ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲವನ್ನು ನೀಡುತ್ತೇನೆ.


ನಾವು ಯಾರಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ, ಅವರ ಕಣ್ಣಿಗೆ ಮುಚ್ಚುಮರೆಯಾದುದು ಯಾವುದೂ ಇಲ್ಲ. ಅವರ ದೃಷ್ಟಿಗೆ ಎಲ್ಲವೂ ಬಟ್ಟಬಯಲು.


ನಾನು ಹೇಳುತ್ತಿರುವುದು ಸುಳ್ಳಲ್ಲ, ನಮ್ಮ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರೇ ಇದನ್ನು ಬಲ್ಲರು. ಅವರಿಗೆ ಯುಗಯುಗಾಂತರಕ್ಕೂ ಸ್ತುತಿ ಸಲ್ಲಲಿ!


ನಿಮ್ಮಿಂದ ನಾನು ಏನನ್ನೂ ತೆಗೆದುಕೊಳ್ಳುತ್ತಿಲ್ಲವೇಕೆ? ನಿಮ್ಮ ಮೇಲೆ ಪ್ರೀತಿ ಇಲ್ಲದ್ದರಿಂದಲೋ? ಇಲ್ಲ, ನಿಮ್ಮ ಮೇಲೆ ನಮಗಿರುವ ಪ್ರೀತಿ ಎಷ್ಟೆಂದು ದೇವರೇ ಬಲ್ಲರು.


ಪ್ರಭುವಿನ ಭಯಭಕ್ತಿ ನಮಗಿರುವುದರಿಂದ ನಾವು ಮಾನವರ ಮನವೊಲಿಸಲು ಪ್ರಯತ್ನಿಸುತ್ತೇವೆ. ನಾವು ಎಂಥವರೆಂದು ದೇವರು ಚೆನ್ನಾಗಿ ಬಲ್ಲರು. ಅದು ನಿಮ್ಮ ಮನಸ್ಸಾಕ್ಷಿಗೂ ಅರಿವಾಗಿದೆಯೆಂದು ನಂಬುತ್ತೇವೆ.


ಹಾಗೇನಾದರೂ ಮಾಡಿ, ಮರಣದಂಡನೆಗೆ ಅರ್ಹನಾಗಿದ್ದರೆ, ಅದಕ್ಕೆ ಗುರಿಯಾಗಲು ಹಿಂಜರಿಯುವುದಿಲ್ಲ. ಆದರೆ ಅವರು ನನ್ನ ವಿರುದ್ಧ ತಂದಿರುವ ಆಪಾದನೆಗಳು ಜೊಳ್ಳಾಗಿದ್ದ ಪಕ್ಷದಲ್ಲಿ, ಯಾರೂ ನನ್ನನ್ನು ಇವರ ಕೈಗೊಪ್ಪಿಸಲಾಗದು. ನಾನು ಚಕ್ರವರ್ತಿಗೇ ಅಪೀಲುಮಾಡಿಕೊಳ್ಳುತ್ತೇನೆ,” ಎಂದನು.


ಅನಂತರ ಎಲ್ಲರೂ ಪ್ರಾರ್ಥನೆಮಾಡುತ್ತಾ, “ಸರ್ವೇಶ್ವರಾ, ನೀವು ಸರ್ವರ ಅಂತರಂಗಗಳನ್ನು ಅರಿತಿರುವಿರಿ. ಯೂದನು ತನ್ನ ಪ್ರೇಷಿತಸ್ಥಾನದಿಂದ ಭ್ರಷ್ಟನಾದ, ತನಗೆ ತಕ್ಕುದಾದ ಸ್ಥಳಕ್ಕೆ ತೆರಳಿದ. ಈ ಸೇವಾಸ್ಥಾನಕ್ಕೆ ಇವರಿಬ್ಬರಲ್ಲಿ ನೀವು ಆರಿಸಿದವನು ಯಾರೆಂದು ನಮಗೆ ತೋರಿಸಿರಿ,” ಎಂದರು.


ಮೂರನೇ ಬಾರಿಯೂ ಯೇಸು, “ಯೊವಾನ್ನನ ಮಗನಾದ ಸಿಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಕೇಳಿದರು. “ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಯೇಸು ಮೂರನೇ ಬಾರಿ ಕೇಳಿದ್ದನ್ನು ಕಂಡು ಪೇತ್ರನು ನೊಂದುಕೊಂಡನು. “ಪ್ರಭುವೇ, ನಿಮಗೆ ಎಲ್ಲವು ತಿಳಿದೇ ಇದೆ. ನಾನು ನಿಮ್ಮನ್ನು ಪ್ರೀತಿಸುತ್ತೇನೆ ಎಂದೂ ನಿಮಗೆ ತಿಳಿದಿದೆ,” ಎಂದು ಹೇಳಿದನು. ಅದಕ್ಕೆ ಯೇಸು, “ನನ್ನ ಕುರಿಗಳನ್ನು ಮೇಯಿಸು;


ಆಗ ಸಜ್ಜನರಿಗೂ ದುರ್ಜನರಿಗೂ, ದೇವರಸೇವೆ ಮಾಡುವವರಿಗೂ ಮಾಡದವರಿಗೂ ಇರುವ ವ್ಯತ್ಯಾಸವನ್ನು ಮತ್ತೆ ನೀವು ಮನಗಾಣುವಿರಿ.


ಆ ಸ್ವಾಮಿಗೆ ವಿರುದ್ಧ ನಾನು ಪಾಪಮಾಡಿದ್ದರಿಂದ ಅವರ ಕೋಪವನ್ನು ನಾನು ಸಹಿಸಿಕೊಳ್ಳಬೇಕಾಗುತ್ತದೆ. ಅವರು ನನ್ನ ಪರವಾಗಿ ವಾದಿಸಿ ನನಗಾದ ಅನ್ಯಾಯವನ್ನು ನೀಗಿಸುವರು; ನನ್ನನ್ನು ಕತ್ತಲೆಯಿಂದ ಬೆಳಕಿಗೆ ತರುವರು. ಅವರಿಂದ ಬರುವ ರಕ್ಷಣಾನೀತಿಯನ್ನು ಆಗ ಸವಿಯುವೆನು.


“(ಉತ್ತರದ) ರಾಜನು ಮನಸ್ಸು ಬಂದ ಹಾಗೆ ನಡೆದು ತಾನು ಎಲ್ಲ ದೇವರುಗಳಿಗಿಂತಲೂ ದೊಡ್ಡವನೆಂದು ತನ್ನನ್ನೇ ಹೆಚ್ಚಿಸಿಕೊಂಡು ಗರ್ವಿಷ್ಠನಾಗುವನು. ದೇವಾಧಿದೇವರನ್ನು ಅತಿಯಾಗಿ ದೂಷಿಸುವನು. ನಿಮ್ಮ ಮೇಲಿನ ದೈವಕೋಪ ತೀರುವ ತನಕ ಅವನು ವೃದ್ಧಿಯಾಗುವನು. ದೈವಸಂಕಲ್ಪ ನೆರವೇರಲೇಬೇಕು.


ದಾನಿಯೇಲನ ವಿವರಕ್ಕೆ ಉತ್ತರವಾಗಿ, “ನೀನು ಈ ಗುಟ್ಟನ್ನು ಬಯಲಿಗೆ ತರಲು ಸಮರ್ಥನಾದ ಕಾರಣ ನಿಮ್ಮ ದೇವರು ದೇವಾಧಿದೇವರು, ರಾಜಾಧಿರಾಜರು, ಗುಟ್ಟನ್ನು ಬಟ್ಟಬಯಲಾಗಿಸುವವರು! ಇದು ಸತ್ಯ,” ಎಂದು ಹೇಳಿದನು.


ಸರ್ವೇಶ್ವರಾ, ನನ್ನ ಪರಿಚಯ ನಿಮಗಿದೆ ನಿಮ್ಮ ನೋಟ ನನ್ನ ಮೇಲಿದೆ. ನನ್ನ ಹೃದಯ ನಿಮ್ಮೊಂದಿಗಿದೆ, ಇದರ ಪರೀಕ್ಷೆ ನಿಮ್ಮಿಂದಾಗಿದೆ. ಅವರನ್ನೋ, ಕುರಿಗಳೋ ಎಂಬಂತೆ ಕೊಲೆಗೆ ಕರೆದೊಯ್ಯಿರಿ ವಧ್ಯದಿವಸದವರೆಗೂ ಅವರನ್ನು ವಿಂಗಡಿಸಿಡಿ.


ದೇವಾದಿ ದೇವನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.


ನಾಚಲಿ ವ್ಯರ್ಥವಿಗ್ರಹಗಳನು ಪೂಜಿಸಿ ಹಿಗ್ಗುವವರು I ಪ್ರಭುವಿಗೆ ಅಡ್ಡಬೀಳಲಿ ಆ ದೇವರುಗಳೆಲ್ಲರು II


ಏಕೆಂದರೆ ಪ್ರಭು ದೇವಾಧಿದೇವನು I ದೇವರುಗಳಲೆಲ್ಲ ರಾಜಾಧಿರಾಜನು II


ಸ್ವರ್ಗಸಭೆಯಲಿ ದೇವ ಅಗ್ರಸ್ಥಾನ ವಹಿಸಿಹನು I ದೇವರುಗಳ ಸಮೂಹದಲಿ ನ್ಯಾಯವಿಚಾರಿಸುತಿಹನು II


ಬೆಳಗಿಸುವನು ನಿನ್ನ ಸತ್ಯಸಂಧತೆಯನು ಸೂರ್ಯೋದಯದಂತೆ I ಪ್ರಕಟಿಸುವನು ನಿನ್ನಾ ನ್ಯಾಯನಿಷ್ಠೆಯನು ನಡುಹಗಲಿನಂತೆ II


ಆತನಾದರೊ ಬಲ್ಲ ನಾನು ಹಿಡಿವ ದಾರಿಯನು ಆತ ನನ್ನನು ಶೋಧಿಸಿದರೆ ಚೊಕ್ಕ ಬಂಗಾರವಾಗುವೆನು.


ತಂತ್ರಮಂತ್ರಗಳಷ್ಟೇ ಕೆಟ್ಟದು ಪ್ರತಿಭಟನೆ ಕಳ್ಳಭಕ್ತಿಗೂ ವಿಗ್ರಹಾರಾಧನೆಗೂ ಸಮಾನ ಹಟಮಾರಿತನ. ನೀ ತಳ್ಳಿಬಿಟ್ಟೆ ಸರ್ವೇಶ್ವರನ ಆದೇಶವನ್ನು; ತಳ್ಳಿಬಿಟ್ಟರವರು ನಿನ್ನ ಅರಸುತನವನ್ನು,” ಎಂದು ನುಡಿದನು.


ಆತ ತನ್ನ ಜನರನ್ನು ಅವರ ಕೈಯಿಂದ ಬಿಡಿಸಿ, ಆ ಈಜಿಪ್ಟಿನವರು ಯಾವ ವಿಷಯದಲ್ಲಿ ಗರ್ವಪಡುತ್ತಿದ್ದರೋ ಆ ವಿಷಯದಲ್ಲೇ ಅವರನ್ನು ತಗ್ಗಿಸಿದ್ದಾನೆ. ಆದ್ದರಿಂದ ಸರ್ವೇಶ್ವರ ಸ್ವಾಮಿಯೇ ಎಲ್ಲ ದೇವರುಗಳಿಗಿಂತ ದೊಡ್ಡವರೆಂದು ಈಗ ತಿಳಿದುಕೊಂಡಿದ್ದೇನೆ,” ಎಂದು ಹೇಳಿದನು.


ಆಗ ರೂಬೇನ್ಯರು, ಗಾದ್ಯರು ಹಾಗು ಮನಸ್ಸೆಕುಲದ ಅರ್ಧಜನರು, ಇಸ್ರಯೇಲಿನ ಆ ಕುಲಾಧಿಪತಿಗಳಿಗೆ ಹೀಗೆಂದು ಉತ್ತರಿಸಿದರು:


ಜೀವೋದ್ಧಾರದ ಶುಭಸಂದೇಶವನು ಸಾರಿದೆ ಮಹಾಸಭೆಗೆ I ನಾ ಸಾರಿದೆ ಅದನು ಮೌನವಿರದೆ, ಇದು ಗೊತ್ತಿದೆ ಪ್ರಭು ನಿನಗೆ II


ದೇವಾಧಿದೇವನಾದ ಪ್ರಭುವಿನ ನುಡಿ ಇಡೀ ಜಗಕೆ I ಆತನ ಸನ್ನಿಧಿಗೆ ಕರೆ, ಪೂರ್ವದಿಂದ ಪಶ್ಚಿಮದವರೆಗೆ II


ಇನ್ನು ನಿಲ್ಲಲಿ ಗರ್ವದ ಮಾತು ಬಾಯಿಂದ ಬರದಿರಲಿ ಸೊಕ್ಕಿನ ಸೊಲ್ಲು; ಸರ್ವೇಶ್ವರನಾದ ದೇವನೇ ಸರ್ವಜ್ಞನು. ಮಾನವಕ್ರಿಯೆಗಳ ತೂಕ ನೋಡುವಾತನವನು.


ನನ್ನ ಹೆಗಲಿನ ಕೀಲು ತಪ್ಪಿಹೋಗಲಿ ನನ್ನ ತೋಳು ಅದರ ಸಂದಿನಿಂದ ಕಳಚಿಬೀಳಲಿ.


ಎಣಿಕೆಯಾಗಿಹೆವು ಕೊಯ್ಗುರಿಗಳಂತೆ ನಾವೆಲ್ಲ I ಬಲಿಯಾಗುತಿಹೆವು ನಿನ್ನ ನಿಮಿತ್ತವೆ ದಿನವೆಲ್ಲ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು