ಯೆಹೋಶುವ 22:32 - ಕನ್ನಡ ಸತ್ಯವೇದವು C.L. Bible (BSI)32 ಯಾಜಕ ಎಲ್ಲಾಜಾರನ ಮಗ ಫೀನೆಹಾಸನು ಮತ್ತು ಮುಖ್ಯಸ್ಥರು ಗಿಲ್ಯಾದ್ ನಾಡಿನಲ್ಲಿದ್ದ ರೂಬೇನ್ಯರನ್ನು ಹಾಗೂ ಗಾದ್ಯರನ್ನು ಬೀಳ್ಕೊಟ್ಟು ಕಾನಾನ್ ನಾಡಿನಲ್ಲಿದ್ದ ಇಸ್ರಯೇಲರ ಬಳಿಗೆ ಬಂದು ಅವರಿಗೆ ಈ ಸಮಾಚಾರವನ್ನು ತಿಳಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಮಹಾಯಾಜಕನಾದ ಎಲ್ಲಾಜಾರನ ಮಗನಾದ ಫೀನೆಹಾಸನು, ಪ್ರಭುಗಳು, ಗಿಲ್ಯಾದ್ ಸೀಮೆಯಲ್ಲಿದ್ದ ರೂಬೇನ್ಯರು, ಗಾದ್ಯರು ಇವರ ಬಳಿಯಿಂದ ಕಾನಾನ್ ದೇಶದಲ್ಲಿದ್ದ ಇಸ್ರಾಯೇಲರ ಬಳಿಗೆ ಬಂದು, ಅವರಿಗೆ ಈ ವರ್ತಮಾನವನ್ನು ತಿಳಿಸಲು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಮಹಾಯಾಜಕ ಎಲ್ಲಾಜಾರನ ಮಗನಾದ ಫೀನೆಹಾಸನೂ ಪ್ರಭುಗಳೂ ಗಿಲ್ಯಾದ್ ಸೀಮೆಯಲ್ಲಿದ್ದ ರೂಬೇನ್ಯರು, ಗಾದ್ಯರು ಇವರ ಬಳಿಯಿಂದ ಕಾನಾನ್ ದೇಶದಲ್ಲಿದ್ದ ಇಸ್ರಾಯೇಲ್ಯರ ಬಳಿಗೆ ಬಂದು ಅವರಿಗೆ ಈ ವರ್ತಮಾನವನ್ನು ತಿಳಿಸಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಆಗ ಫೀನೆಹಾಸನು ಮತ್ತು ಕುಲಾಧಿಪತಿಗಳು ಆ ಸ್ಥಳದಿಂದ ತಮ್ಮ ಮನೆಗಳಿಗೆ ಹೋದರು. ಅವರು ರೂಬೇನ್ಯರನ್ನು ಮತ್ತು ಗಾದ್ಯರನ್ನು ಗಿಲ್ಯಾದ್ ಪ್ರದೇಶದಲ್ಲಿ ಬಿಟ್ಟು ಕಾನಾನಿಗೆ ಹಿಂತಿರುಗಿ ನಡೆದ ಸಂಗತಿಯನ್ನು ಇಸ್ರೇಲರಿಗೆ ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಯಾಜಕನಾದ ಎಲಿಯಾಜರನ ಮಗ ಫೀನೆಹಾಸನೂ ಪ್ರಧಾನರೂ ಗಿಲ್ಯಾದ್ ದೇಶದಲ್ಲಿರುವ ರೂಬೇನ್ಯರನ್ನೂ ಗಾದ್ಯರನ್ನೂ ಬಿಟ್ಟು ಕಾನಾನ್ ದೇಶದಲ್ಲಿರುವ ಇಸ್ರಾಯೇಲರ ಬಳಿಗೆ ತಿರುಗಿಬಂದು, ಅವರಿಗೆ ವರ್ತಮಾನವನ್ನು ತಿಳಿಸಿದರು. ಅಧ್ಯಾಯವನ್ನು ನೋಡಿ |