Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 22:34 - ಕನ್ನಡ ಸತ್ಯವೇದವು C.L. Bible (BSI)

34 ರೂಬೇನ್ಯರು ಹಾಗೂ ಗಾದ್ಯರು ‘ಸರ್ವೇಶ್ವರನೇ ದೇವರು’ ಎಂಬುದಕ್ಕೆ ಈ ಬಲಿಪೀಠವೇ ಸಾಕ್ಷಿ ಎಂದು ಹೇಳಿ ಅದಕ್ಕೆ ‘ಏದ್’ ಎಂದು ಹೆಸರಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ರೂಬೇನ್ಯರೂ ಗಾದ್ಯರೂ ಯೆಹೋವನೇ ದೇವರು ಎಂಬುದಕ್ಕೆ ಈ ಯಜ್ಞವೇದಿಯೇ ಸಾಕ್ಷಿ ಎಂದು ಹೇಳಿ ಅದಕ್ಕೆ ಏದ್ ಎಂಬ ಹೆಸರಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ರೂಬೇನ್ಯರೂ ಗಾದ್ಯರೂ ಯೆಹೋವನೇ ದೇವರು ಎಂಬದಕ್ಕೆ ಈ ವೇದಿಯೇ ಸಾಕ್ಷಿ ಎಂದು ಹೇಳಿ ಅದಕ್ಕೆ ಏದ್ ಎಂಬ ಹೆಸರಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ರೂಬೇನ್ಯರು ಮತ್ತು ಗಾದ್ಯರು, “ಯೆಹೋವನೇ ದೇವರು ಎಂಬುದಕ್ಕೆ ಈ ಯಜ್ಞವೇದಿಕೆಯೇ ಸಾಕ್ಷಿ” ಎಂದು ಅದಕ್ಕೆ “ಏದ್” ಎಂದು ಹೆಸರಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ರೂಬೇನ್ಯರೂ ಗಾದ್ಯರೂ ಆ ಬಲಿಪೀಠಕ್ಕೆ, “ನಮ್ಮ ನಡುವೆ ಯೆಹೋವ ದೇವರೇ ದೇವರಾಗಿದ್ದಾರೆ ಎಂಬುದಕ್ಕೆ ಸಾಕ್ಷಿ,” ಎಂದು ಹೆಸರಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 22:34
8 ತಿಳಿವುಗಳ ಹೋಲಿಕೆ  

ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಸೈತಾನನೇ, ತೊಲಗು. ‘ನಿನ್ನ ದೇವರಾದ ಸರ್ವೇಶ್ವರನನ್ನು ಆರಾಧಿಸು. ಅವರೊಬ್ಬರಿಗೇ ಸೇವೆಸಲ್ಲಿಸು,’ ಎಂದೂ ಪವಿತ್ರಗ್ರಂಥದಲ್ಲಿ ಬರೆದಿದೆ,” ಎಂದರು.


ಆದರೆ ಸರ್ವೇಶ್ವರನ ಸನ್ನಿಧಿಯಲ್ಲಿ ದಹನಬಲಿ, ಸಮರ್ಪಣಬಲಿ, ಶಾಂತಿಸಮಾಧಾನದ ಬಲಿ ಮುಂತಾದುವುಗಳನ್ನು ಅರ್ಪಿಸಿ ಆರಾಧಿಸುವುದಕ್ಕೆ ನಿಮಗೆ ಹಕ್ಕು ಉಂಟೆಂಬುದಕ್ಕೆ ಇದು ಗುರುತಾಗಿರಲಿ. ನಮಗೂ ನಿಮಗೂ ನಮ್ಮ ಸಂತಾನಕ್ಕೂ ನಿಮ್ಮ ಸಂತಾನಕ್ಕೂ ಇದು ಸಾಕ್ಷಿಯಾಗಿರಲಿ.’ ಇದರಿಂದ ಮುಂದೆ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ, ‘ಸರ್ವೇಶ್ವರನಲ್ಲಿ ನಿಮಗೆ ಪಾಲಿಲ್ಲ’ ಎಂದು ಹೇಳುವುದಕ್ಕೆ ಆಸ್ಪದವಿರದು.


ಇಂತೆನ್ನುತ್ತಾರೆ ಸರ್ವೇಶ್ವರ : “ನೀವೇ ನನಗೆ ಸಾಕ್ಷಿಗಳು; ನನ್ನಿಂದ ಆಯ್ಕೆಯಾದ ನನ್ನ ದಾಸರು; ಏಕೆನೆ ನಾನೇ ಪರಮಾತ್ಮನೆಂದು ಅರಿತು, ವಿಶ್ವಾಸವಿಟ್ಟು, ಗ್ರಹಿಸಬೇಕಾದವರು; ದೇವರಾರೂ ನನಗಿಂತ ಮುಂದೆ ಇರಲಿಲ್ಲ ನನ್ನಾನಂತರವೂ ಇರುವುದಿಲ್ಲ.


ಜನರೆಲ್ಲರೂ ಅದನ್ನು ಕಂಡು ಬೋರಲಬಿದ್ದರು; “ಸರ್ವೇಶ್ವರನೇ ದೇವರು, ಸರ್ವೇಶ್ವರನೇ ದೇವರು,” ಎಂದು ಕೂಗಿದರು.


ಬಳಿಕ ಎಲ್ಲಾ ಜನರಿಗೆ, “ಇಗೋ, ನೋಡಿ ಈ ಕಲ್ಲು! ಇದು ನಿಮ್ಮ ವಿಷಯದಲ್ಲಿ ಸಾಕ್ಷಿ ಹೇಳುವುದು. ಸರ್ವೇಶ್ವರ ನಮಗೆ ಹೇಳಿದ ಎಲ್ಲ ಮಾತುಗಳನ್ನು ಇದು ಕೇಳಿದೆ.


ಆ ಕುಪ್ಪೆಗೆ ಲಾಬಾನನು ‘ಯಗರಸಾಹದೂತ’ ಎಂದೂ ಯಕೋಬನು ‘ಗೆಲೇದ್’ ಎಂದೂ ಹೆಸರಿಟ್ಟರು.


ಲಾಬಾನನು ಯಕೋಬನಿಗೆ, “ಈ ದಿನ ನಿನಗೂ ನನಗೂ ಆದ ಒಪ್ಪಂದಕ್ಕೆ ಈ ಕುಪ್ಪೆಯೇ ಸಾಕ್ಷಿ” ಎಂದು ಹೇಳಿದ ಕಾರಣ ಅದಕ್ಕೆ ‘ಗೆಲೇದ್’ ಎಂದು ಹೆಸರಾಯಿತು.


ಆ ದಿನದಂದು ಈಜಿಪ್ಟಿನ ನಡುವೆ ಸರ್ವೇಶ್ವರ ಸ್ವಾಮಿಗೆ ಒಂದು ಬಲಿಪೀಠವಿರುವುದು ಮತ್ತು ನಾಡಿನ ಗಡಿಯಲ್ಲಿ ಸ್ವಾಮಿಯ ಸ್ಥಂಭ ಇರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು