Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 23:11 - ಕನ್ನಡ ಸತ್ಯವೇದವು C.L. Bible (BSI)

11 ಇಂತಿರಲು ಜಾಗರೂಕತೆಯಿಂದಿರಿ, ನಿಮ್ಮ ಪ್ರಾಣದಂತೆ ದೇವರಾದ ಸರ್ವೇಶ್ವರನನ್ನೇ ಪ್ರೀತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಹೀಗಿರುವುದರಿಂದ ನಿಮ್ಮ ನಿಮ್ಮ ಮನಸ್ಸುಗಳನ್ನು ಬಹು ಜಾಗರೂಕತೆಯಿಂದ ಕಾಪಾಡಿಕೊಂಡು ನಿಮ್ಮ ದೇವರಾದ ಯೆಹೋವನನ್ನೇ ಪ್ರೀತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಹೀಗಿರುವದರಿಂದ ನಿಮ್ಮ ನಿಮ್ಮ ಮನಸ್ಸುಗಳನ್ನು ಬಹು ಜಾಗರೂಕತೆಯಿಂದ ಕಾಪಾಡಿಕೊಂಡು ನಿಮ್ಮ ದೇವರಾದ ಯೆಹೋವನನ್ನೇ ಪ್ರೀತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆದ್ದರಿಂದ ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸುವುದರಲ್ಲಿ ಬಹು ಎಚ್ಚರಿಕೆಯಿಂದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಹೀಗಿರುವುದರಿಂದ ನಿಮ್ಮ ನಿಮ್ಮ ಮನಸ್ಸುಗಳನ್ನು ಬಹು ಜಾಗರೂಕತೆಯಿಂದ ಕಾಪಾಡಿಕೊಂಡು ನಿಮ್ಮ ದೇವರಾದ ಯೆಹೋವ ದೇವರನ್ನೇ ಪ್ರೀತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 23:11
17 ತಿಳಿವುಗಳ ಹೋಲಿಕೆ  

ಆದರೆ ಸರ್ವೇಶ್ವರನ ದಾಸ ಮೋಶೆಯು ನಿಮಗೆ ಕೊಟ್ಟ ಧರ್ಮಶಾಸ್ತ್ರವನ್ನೂ ವಿಧಿಗಳನ್ನೂ ಜಾಗರೂಕತೆಯಿಂದ ಕೈಗೊಳ್ಳಿರಿ; ನಿಮ್ಮ ದೇವರಾದ ಸರ್ವೇಶ್ವರನನ್ನು ಪ್ರೀತಿಸಿ ಅವರ ಮಾರ್ಗದಲ್ಲಿ ನಡೆಯಿರಿ; ಅವರ ಆಜ್ಞೆಗಳನ್ನು ಕೈಗೊಂಡು ಅವರನ್ನೇ ನೆಚ್ಚಿಕೊಂಡು ಪೂರ್ಣ ಮನಸ್ಸಿನಿಂದಲೂ ಪೂರ್ಣ ಪ್ರಾಣದಿಂದಲೂ ಅವರಿಗೆ ಸೇವೆ ಸಲ್ಲಿಸಿರಿ,” ಎಂದು ಹೇಳಿದನು.


ದೇವರನ್ನು ಪ್ರೀತಿಸುವವರಿಗೂ ದೇವರ ಸಂಕಲ್ಪದ ಮೇರೆಗೆ ಕರೆಹೊಂದಿದವರಿಗೂ ಸಕಲವೂ ಹಿತಕರವಾಗಿ ಪರಿಣಮಿಸುವುದು.ಇದನ್ನು ನಾವು ಚೆನ್ನಾಗಿ ಅರಿತಿದ್ದೇವೆ.


ನಿನ್ನ ಹೃದಯವನ್ನು ಕಾಪಾಡು ಜಾಗರೂಕತೆಯಿಂದ; ಏಕೆಂದರೆ ಜೀವಧಾರೆ ಹೊರಡುವುದು ಅದರಿಂದ.


ನಿಮ್ಮಲ್ಲಿ ಯಾರೂ ದೇವರ ಅನುಗ್ರಹವನ್ನು ಕಳೆದುಕೊಳ್ಳದಂತೆ ಎಚ್ಚರಿಕೆಯಾಗಿರಿ. ಯಾವ ವಿಷದ ಬೇರೂ ನಿಮ್ಮಲ್ಲಿ ತಲೆದೋರಿ, ಅಸಮಾಧಾನವನ್ನು ಹುಟ್ಟಿಸಿ, ಸಭೆಯನ್ನು ಕೆಡಿಸದಂತೆ ನೋಡಿಕೊಳ್ಳಿ.


ಯಾರಾದರೂ ಪ್ರಭುವನ್ನು ಪ್ರೀತಿಸದೆಹೋದರೆ ಅವರಿಗೆ ಧಿಕ್ಕಾರ! “ಮಾರನಥ" - ಪ್ರಭುವೇ ಬನ್ನಿ.


ಆದರೆ ದೇವರನ್ನು ಪ್ರೀತಿಸುವವನನ್ನು ದೇವರು ಗುರುತಿಸುತ್ತಾರೆ.


ನನ್ನನ್ನು ಪ್ರೀತಿಸಿ ನನ್ನ ಆಜ್ಞೆಗಳನ್ನು ಕೈಗೊಳ್ಳುವವರಿಗಾದರೋ ಸಾವಿರ ತಲೆಗಳವರೆಗೆ ದಯೆತೋರಿಸುತ್ತೇನೆ.


ಆದುದರಿಂದ ನಿಮ್ಮ ನಡತೆಯ ವಿಷಯದಲ್ಲಿ ನೀವು ಅತ್ಯಂತ ಜಾಗರೂಕರಾಗಿರಿ; ಮೂಢರಂತಿರದೆ ಜಾಣರಾಗಿ ಜೀವಿಸಿರಿ.


“ಮಿತಿಮೀರಿದ ಭೋಜನದಿಂದಾಗಲಿ, ಕುಡಿತದಿಂದಾಗಲಿ, ಲೌಕಿಕ ಚಿಂತೆಗಳಿಂದಾಗಲಿ ಮಂದಮತಿಗಳಾಗಬೇಡಿ. ಆ ದಿನವು ಅನಿರೀಕ್ಷಿತ ಉರುಲಿನಂತೆ ನಿಮ್ಮನ್ನು ಸಿಕ್ಕಿಸೀತು, ಜಾಗರೂಕರಾಗಿರಿ!


ಹೀಗಿರುವಲ್ಲಿ, ನೀವು ಬಹಳ ಜಾಗರೂಕತೆಯಿಂದಿರಿ; ನಿಮ್ಮ ಕಣ್ಣುಗಳಿಂದಲೇ ನೋಡಿದ ಘಟನೆಗಳನ್ನು ಎಷ್ಟು ಮಾತ್ರಕ್ಕೂ ಮರೆಯದಿರಿ; ಜೀವಮಾನಪರ್ಯಂತ ಇವುಗಳನ್ನು ನೆನಪಿನಲ್ಲಿ ಇಡಿ; ನಿಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ತಿಳಿಸುತ್ತಾ ಹೋಗಿ,


“ಹೋರೇಬಿನಲ್ಲಿ” ಸರ್ವೇಶ್ವರ ಅಗ್ನಿಜ್ವಾಲೆಯೊಳಗಿಂದ ನಿಮ್ಮ ಸಂಗಡ ಮಾತನಾಡಿದರು. ಆಗ ನಿಮಗೆ ಯಾವ ಆಕಾರವೂ ಕಾಣಿಸಲಿಲ್ಲ. ಆದುದರಿಂದ ಬಹಳ ಎಚ್ಚರಿಕೆಯಿಂದಿರಿ.


ನಿಮ್ಮ ದೇವರಾದ ಸರ್ವೇಶ್ವರ ತಮ್ಮ ವಾಗ್ದಾನದಂತೆ ನಿಮ್ಮ ಪರವಾಗಿ ಯುದ್ಧಮಾಡಿದರು. ಆದ್ದರಿಂದಲೇ ನಿಮ್ಮಲ್ಲಿ ಒಬ್ಬನು ಸಾವಿರ ಜನರನ್ನು ಓಡಿಸುವಷ್ಟು ಶಕ್ತನಾದ.


ದೇವರಿಗೆ ವಿಮುಖರಾಗಿ, ನಿಮ್ಮ ಮಧ್ಯೆ ಉಳಿದಿರುವ ಈ ಜನಾಂಗಗಳೊಡನೆ ಕೊಟ್ಟು ತಂದು ಮಿಶ್ರವಾಗಬೇಡಿ.


ನಾನು ಈಗ ನಿಮಗೆ ಬೋಧಿಸುವಂತೆ ನೀವು ನಿಮ್ಮ ದೇವರಾದ ಸರ್ವೇಶ್ವರನನ್ನು ಪ್ರೀತಿಸಿ, ಅವರು ಹೇಳಿದ ಮಾರ್ಗದಲ್ಲಿ ನಡೆದು, ಅವರ ಆಜ್ಞಾವಿಧಿನಿರ್ಣಯಗಳನ್ನು ಅನುಸರಿಸಿದರೆ ನೀವು ಬದುಕಿಬಾಳುವಿರಿ, ಅಭಿವೃದ್ಧಿಯಾಗುವಿರಿ, ಮತ್ತು ನೀವು ಸ್ವಾಧೀನ ಮಾಡಿಕೊಳ್ಳಲು ಹೋಗುವ ನಾಡಿನಲ್ಲಿ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಆಶೀರ್ವದಿಸುವರು.


ನಿಮ್ಮ ದೇವರಾದ ಸರ್ವೇಶ್ವರನನ್ನು ಪ್ರೀತಿಸಿ ಅವರ ಮಾತಿಗೆ ವಿಧೇಯರಾಗಿರಿ; ಅವರನ್ನು ಹೊಂದಿಕೊಂಡೇ ಇರಿ. ಸರ್ವೇಶ್ವರ ನಿಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಕೋಬರಿಗೆ ಪ್ರಮಾಣಮಾಡಿ ಕೊಟ್ಟ ನಾಡಿನಲ್ಲಿ ನೀವು ಬದುಕಿ ಬಾಳುವುದಕ್ಕೂ ಬಹುಕಾಲ ಇರುವುದಕ್ಕೂ ಅವರೇ ಆಧಾರ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು