Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 23:12 - ಕನ್ನಡ ಸತ್ಯವೇದವು C.L. Bible (BSI)

12 ದೇವರಿಗೆ ವಿಮುಖರಾಗಿ, ನಿಮ್ಮ ಮಧ್ಯೆ ಉಳಿದಿರುವ ಈ ಜನಾಂಗಗಳೊಡನೆ ಕೊಟ್ಟು ತಂದು ಮಿಶ್ರವಾಗಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನೀವು ದೇವರಿಗೆ ವಿಮುಖರಾಗಿ ನಿಮ್ಮ ಮಧ್ಯದಲ್ಲಿ ಉಳಿದಿರುವ ಈ ಜನಾಂಗಗಳೊಡನೆ ಸೇರಿಕೊಂಡು ಅವರೊಂದಿಗೆ ಗಂಡು ಹೆಣ್ಣು ಕೊಟ್ಟು ತಂದು ಸಂಬಂಧವನ್ನಿಟ್ಟುಕೊಂಡರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನೀವು ದೇವರಿಗೆ ವಿಮುಖರಾಗಿ ನಿಮ್ಮ ಮಧ್ಯದಲ್ಲಿ ಉಳಿದಿರುವ ಈ ಜನಾಂಗಗಳೊಡನೆ ಕೊಟ್ಟು ತಂದು ವಿುಶ್ರವಾದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ಯೆಹೋವನನ್ನೇ ಅನುಸರಿಸಿರಿ. ಇಸ್ರೇಲಿಗೆ ಸೇರಿಲ್ಲದ ಅನ್ಯರೊಂದಿಗೆ ಸ್ನೇಹ ಮಾಡಬೇಡಿ. ಅವರ ಜನರನ್ನು ಮದುವೆಯಾಗಬೇಡಿ. ನೀವು ಅವರೊಂದಿಗೆ ಸ್ನೇಹ ಮಾಡಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ಆದರೆ, ನೀವು ದೇವರಿಂದ ತಿರುಗಿಕೊಂಡು ನಿಮ್ಮಲ್ಲಿ ಉಳಿದಿರುವ ಈ ಜನಾಂಗಗಳಲ್ಲಿ ಸೇರಿಕೊಂಡು ಅವರೊಂದಿಗೆ ಮದುವೆ ಮಾಡಿಕೊಟ್ಟರೆ, ನೀವು ಅವರ ಬಳಿಗೂ ಅವರು ನಿಮ್ಮ ಬಳಿಗೂ ಪ್ರವೇಶಿಸಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 23:12
28 ತಿಳಿವುಗಳ ಹೋಲಿಕೆ  

ಅವರೊಡನೆ ಬೀಗತನ ಮಾಡಬಾರದು; ಅವರ ಮಕ್ಕಳಿಗೆ ಹೆಣ್ಣುಗಳನ್ನು ಕೊಡಲೂಬಾರದು, ಅವರಿಂದ ತರಲೂಬಾರದು.


ನನಗೆ ಬೆನ್ನು ತೋರಿಸಿ, ನನ್ನ ದರ್ಶನವನ್ನು ಬಯಸದೆ, ನನ್ನ ಮಾರ್ಗಬಿಟ್ಟವರನ್ನು ಧ್ವಂಸಮಾಡುವೆನು.”


ಆದರೆ ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು, ಅಧರ್ಮಮಾಡಿ, ದುಷ್ಟನು ನಡೆಸುವ ದುರಾಚಾರಗಳನ್ನೆಲ್ಲಾ ನಡೆಸಿದರೆ, ಅವನು ಜೀವಿಸುವನೇ? ಅವನು ಮಾಡಿದ ಯಾವ ಸುಕೃತ್ಯವೂ ಅವನ ಲೆಕ್ಕಕ್ಕೆ ಸೇರಿಸಲ್ಪಡದು, ಅವನು ಮಾಡುತ್ತಿರುವ ಪಾಪಾಪರಾಧಗಳಿಂದಲೇ ಸಾಯುವನು.


“ನಾನು ಬೆಳಕಿನಲ್ಲಿದ್ದೇನೆ” ಎಂದು ಹೇಳಿಕೊಂಡು ತನ್ನ ಸಹೋದರನನ್ನು ದ್ವೇಷಿಸುವವನು ಇನ್ನೂ ಕತ್ತಲಲ್ಲೇ ಇದ್ದಾನೆ.


ನಿಮ್ಮ ಪ್ರೀತಿ ನಿಷ್ಕಪಟವಾಗಿರಲಿ. ಕೆಟ್ಟದ್ದನ್ನು ದ್ವೇಷಿಸಿರಿ. ಒಳ್ಳೆಯದನ್ನು ಕೈಬಿಡದಿರಿ.


ಅಂದಿನಿಂದ ಯೇಸುಸ್ವಾಮಿಯ ಹಿಂಬಾಲಕರಲ್ಲಿ ಹಲವರು ಅವರ ಸಹವಾಸವನ್ನು ಬಿಟ್ಟುಬಿಟ್ಟರು. ಹೋದವರು ಹಿಂದಿರುಗಿ ಬರಲಿಲ್ಲ.


ಪುನಃ ಹೊರಟುಹೋಗಿ ತನಗಿಂತಲೂ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ತನ್ನೊಡನೆ ಕರೆದುಕೊಂಡು ಬರುತ್ತದೆ. ಅವು ಆ ಮನುಷ್ಯನ ಒಳಹೊಕ್ಕು ನೆಲಸುತ್ತವೆ. ಆಗ ಅವನ ಪರಿಸ್ಥಿತಿ ಪೂರ್ವಸ್ಥಿತಿಗಿಂತಲೂ ಅಧೋಗತಿಗಿಳಿಯುತ್ತದೆ. ಈ ದುಷ್ಟ ಪೀಳಿಗೆಗೆ ಸಂಭವಿಸುವ ಗತಿಯೂ ಅದೇ,” ಎಂದರು.


ಎಲೈ ಪಾಪಿಷ್ಠ ಜನವೇ, ದೋಷಭರಿತ ಪ್ರಜೆಯೇ, ದುಷ್ಟಪೀಳಿಗೆಯೇ, ಭ್ರಷ್ಟಸಂತಾನವೇ, ನಿಮ್ಮ ಗತಿಯನ್ನು ಏನೆಂದು ಹೇಳಲಿ. ನೀವು ಸರ್ವೇಶ್ವರನನ್ನು ತೊರೆದಿದ್ದೀರಿ. ಇಸ್ರಯೇಲರ ಪರಮಪಾವನ ಸ್ವಾಮಿಯನ್ನು ಧಿಕ್ಕರಿಸಿದ್ದೀರಿ. ಅವರಿಗೆ ಬೆನ್ನುಮಾಡಿ ಬೇರೆಯಾಗಿದ್ದೀರಿ.


ಅಕ್ರಮಿಗಳ ದುರ್ಗತಿ ದುರ್ಮಾರ್ಗಿಗಳಿಗೆ I ಶುಭವಾಗಲಿ ಪ್ರಭೂ, ಇಸ್ರಯೇಲರಿಗೆ II


ಅವನ ಕೀಳು ಬಾಯಿಯ ತುಂಬ ಕೇಡು ಕಪಟ I ಸನ್ಮತಿ ಸತ್ಕಾರ್ಯಗಳನ್ನು ಬಿಟ್ಟೇಬಿಟ್ಟ II


ಅವನು ವೃದ್ಧನಾದಾಗ ಇವರು ಅವನ ಹೃದಯವನ್ನು ಅನ್ಯದೇವತೆಗಳ ಕಡೆಗೆ ತಿರುಗಿಸಿದರು. ಈ ಕಾರಣ ಅವನು ತನ್ನ ದೇವರಾದ ಸರ್ವೇಶ್ವರನಲ್ಲಿಟ್ಟಿದ್ದ ಯಥಾರ್ಥ ಭಕ್ತಿಯನ್ನು ಕಳೆದುಕೊಂಡನು. ತನ್ನ ತಂದೆಯಾದ ದಾವೀದನಂತೆ ನಡೆಯಲಿಲ್ಲ.


ಸರ್ವೇಶ್ವರ ಈ ಜನಾಂಗಗಳ ವಿಷಯದಲ್ಲಿ ಇಸ್ರಯೇಲರಿಗೆ, “ನಿಮಗೂ ಅವರಿಗೂ ಕೊಟ್ಟುಕೊಳ್ಳುವ ಸಂಬಂಧ ಇರಕೂಡದು; ಹೀಗೆ ವಿವಾಹ ಸಂಬಂಧವಾಗುವುದಾದರೆ ಅವರು ನಿಮ್ಮ ಮನಸ್ಸನ್ನು ತಮ್ಮ ದೇವತೆಗಳ ಕಡೆಗೆ ತಿರುಗಿಸಬಹುದು,” ಎಂದು ಎಚ್ಚರಿಸಿದ್ದರು. ಆದರೂ ಸೊಲೊಮೋನನು ಅವರ ಮಹಿಳೆಯರಲ್ಲಿ ಅನುರಕ್ತನಾಗಿದ್ದನು.


ಅವನ ಮನಸ್ಸು ಯಕೋಬನ ಮಗಳಾದ ಆ ದೀನಳ ಮೇಲೆಯೇ ತಲ್ಲೀನಗೊಂಡಿತ್ತು. ಆಕೆಯನ್ನು ಮೋಹಿಸಿ ಅವಳ ಮನವೊಲಿಸುವಂಥ ಮಾತುಗಳನ್ನಾಡಿದನು.


ಈ ಕಾರಣ, ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರಿಬ್ಬರೂ ಒಂದೇ ಒಡಲಾಗಿ ಬಾಳುವರು.


ಹಾಗೆ ಮಾಡಿದರೆ ಅವರು ನಿಮ್ಮ ಮಕ್ಕಳನ್ನು ಸರ್ವೇಶ್ವರನಿಂದ ವಿಮುಖಗೊಳಿಸಿ ಇತರ ದೇವರುಗಳನ್ನು ಪೂಜಿಸುವಂತೆ ಮಾಡಬಹುದು. ಆಗ ಸರ್ವೇಶ್ವರ ನಿಮ್ಮ ಮೇಲೆ ಕೋಪಗೊಂಡು ಬೇಗನೆ ನಿಮ್ಮನ್ನು ನಾಶಮಾಡುವರು.


ಇಂತಿರಲು ಜಾಗರೂಕತೆಯಿಂದಿರಿ, ನಿಮ್ಮ ಪ್ರಾಣದಂತೆ ದೇವರಾದ ಸರ್ವೇಶ್ವರನನ್ನೇ ಪ್ರೀತಿಸಿರಿ.


ಅವರ ಕನ್ಯೆಯರನ್ನು ತಾವು ತಂದು ತಮ್ಮ ಕನ್ಯೆಯರನ್ನು ಅವರ ಕುಮಾರರಿಗೆ ಕೊಟ್ಟು ಅವರ ದೇವತೆಗಳನ್ನು ಪೂಜಿಸಿದರು.


ನಿಮ್ಮ ಮಧ್ಯೆಯಿರುವ ನಿಮ್ಮ ದೇವರಾದ ಸರ್ವೇಶ್ವರ ತಮಗೆ ಸಲ್ಲಬೇಕಾದ ಗೌರವವನ್ನು ಇನ್ನೊಬ್ಬನಿಗೆ ಸಲ್ಲಗೊಡಿಸದ ದೇವರು; ಅವರು ನಿಮ್ಮ ಮೇಲೆ ಕೋಪಗೊಂಡರೆ ನಿಮ್ಮನ್ನು ಭೂಮಿಯ ಮೇಲೆ ಉಳಿಯದಂತೆ ನಾಶಮಾಡಬಹುದು.


ಆಗ ಅವರು ಅವನಿಗೆ, “ಸುನ್ನತಿಯಿಲ್ಲದ ಫಿಲಿಷ್ಟಿಯರ ಹೆಣ್ಣನ್ನು ವರಿಸಬೇಕೆಂದಿರುವೆಯಾ? ನಿನ್ನ ಬಂಧುಗಳಲ್ಲಿ ಅದೂ ನಮ್ಮ ಎಲ್ಲಾ ಜನರಲ್ಲಿ ನಿನಗೆ ಹೆಣ್ಣು ಸಿಕ್ಕುವುದಿಲ್ಲವೇ?” ಎಂದು ಪ್ರತಿಭಟಿಸಿದರು. ಅವನು, “ನನಗಾಗಿ ಆಕೆಯನ್ನೇ ತನ್ನಿ. ಆಕೆಯನ್ನೇ ಮೆಚ್ಚಿಕೊಂಡಿದ್ದೇನೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು