Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 23:15 - ಕನ್ನಡ ಸತ್ಯವೇದವು C.L. Bible (BSI)

15 ನಿಮ್ಮ ದೇವರಾದ ಸರ್ವೇಶ್ವರ ತಮ್ಮ ವಾಗ್ದಾನಕ್ಕನುಸಾರ ಈಗ ನಿಮಗೆ ಎಲ್ಲಾ ವಿಧದ ಒಳಿತನ್ನೂ ಅನುಗ್ರಹಿಸಿದಂತೆಯೇ ನಿಮ್ಮ ಮೇಲೆ ಎಲ್ಲಾ ತರದ ಕೇಡುಗಳನ್ನು ಬರಮಾಡಿ ತಾವು ಕೊಟ್ಟ ಈ ಚೆಲುವಾದ ನಾಡಿನಿಂದ ನಿಮ್ಮನ್ನು ನಿರ್ಮೂಲ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಿಮ್ಮ ದೇವರಾದ ಯೆಹೋವನು ತನ್ನ ವಾಗ್ದಾನಕ್ಕನುಸಾರವಾಗಿ ಈಗ ನಿಮಗೆ ಎಲ್ಲಾ ತರದ ಮೇಲನ್ನು ಅನುಗ್ರಹಿಸಿದಂತೆಯೇ ನಿಮ್ಮ ಮೇಲೆ ಸಕಲ ವಿಧವಾದ ಕೇಡುಗಳನ್ನು ಬರಮಾಡಿ, ತಾನು ಕೊಟ್ಟಿರುವ ಈ ಉತ್ತಮ ದೇಶದಿಂದ ನಿಮ್ಮನ್ನು ತೆಗೆದು ನಾಶಮಾಡಿಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನಿಮ್ಮ ದೇವರಾದ ಯೆಹೋವನು ತನ್ನ ವಾಗ್ದಾನಕ್ಕನುಸಾರವಾಗಿ ಈಗ ನಿಮಗೆ ಎಲ್ಲಾ ತರದ ಮೇಲನ್ನು ಅನುಗ್ರಹಿಸಿದಂತೆಯೇ ನಿಮ್ಮ ಮೇಲೆ ಸಕಲವಿಧವಾದ ಕೇಡುಗಳನ್ನೂ ಬರಮಾಡಿ ತಾನು ಕೊಟ್ಟಿರುವ ಈ ಉತ್ತಮದೇಶದಿಂದ ನಿಮ್ಮನ್ನು ತೆಗೆದು ನಾಶಮಾಡಿಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಿಮ್ಮ ದೇವರಾದ ಯೆಹೋವನು ಮಾಡಿದ ಪ್ರತಿಯೊಂದು ಒಳ್ಳೆಯ ವಾಗ್ದಾನವು ನೆರವೇರಿದೆ. ಅದೇ ರೀತಿಯಲ್ಲಿ ಯೆಹೋವನು ತನ್ನ ಉಳಿದ ವಾಗ್ದಾನವನ್ನು ನೆರವೇರಿಸುವನು. ನೀವು ತಪ್ಪುಗಳನ್ನು ಮಾಡಿದರೆ ನಿಮಗೆ ಕೆಟ್ಟದ್ದಾಗುವುದೆಂದೂ ಆತನು ನಿಮಗೆ ಕೊಟ್ಟ ಈ ಒಳ್ಳೆಯ ದೇಶದಿಂದ ಬಲವಂತವಾಗಿ ಹೊರಗಟ್ಟುವದಾಗಿಯೂ ಆತನು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಈಗ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ವಾಗ್ದಾನ ಮಾಡಿದ ಒಳ್ಳೆಯ ಕಾರ್ಯಗಳೆಲ್ಲಾ ನಿಮಗೆ ಹೇಗೆ ಸಂಭವಿಸಿದವೋ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 23:15
18 ತಿಳಿವುಗಳ ಹೋಲಿಕೆ  

ಯೆಹೂದ್ಯರಲ್ಲದ ಜನರಿಗೆ ಜೀವೋದ್ಧಾರವನ್ನು ತರುವ ಶುಭಸಂದೇಶವನ್ನು ನಾವು ಸಾರದಂತೆ ಅವರು ನಮ್ಮನ್ನು ತಡೆಗಟ್ಟುತ್ತಾರೆ. ಹೀಗೆ, ಅವರು ತಮ್ಮ ಪಾಪಕೃತ್ಯಗಳ ಪಟ್ಟಿಯನ್ನು ಸದಾ ಭರ್ತಿಮಾಡುತ್ತಾರೆ. ಕಡೆಗೆ, ದೇವರ ಕೋಪಾಗ್ನಿಯು ಅವರ ಮೇಲೆ ಬರುತ್ತದೆ.


ಇಸ್ರಯೇಲರು ಮತ್ತೊಮ್ಮೆ ಸರ್ವೇಶ್ವರಸ್ವಾಮಿಯ ದೃಷ್ಟಿಯಲ್ಲಿ ದ್ರೋಹಿಗಳಾದರು. ಆದುದರಿಂದ ಅವರನ್ನು ನಾಲ್ವತ್ತು ವರ್ಷಗಳ ತನಕ ಫಿಲಿಷ್ಟಿಯರ ಕೈಗೆ ಒಪ್ಪಿಸಲಾಯಿತು.


ಇಸ್ರಯೇಲರು ಮತ್ತೆ ಸರ್ವೇಶ್ವರಸ್ವಾಮಿಯ ದೃಷ್ಟಿಯಲ್ಲಿ ದ್ರೋಹಿಗಳಾದರು. ಆದ್ದರಿಂದ ಸರ್ವೇಶ್ವರ ಅವರನ್ನು ಏಳುವರ್ಷಕಾಲ ಮಿದ್ಯಾನ್ಯರ ಕೈಗೊಪ್ಪಿಸಿದರು.


ಆದುದರಿಂದ ಸರ್ವೇಶ್ವರ ಇಸ್ರಯೇಲರ ಮೇಲೆ ಕೋಪಗೊಂಡು ಅವರನ್ನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ರಾಜ್ಯದ ಅರಸ ಕೂಷನ್ ರಿಷಾತಯಿಮ್ ಎಂಬವನಿಗೆ ಮಾರಿಬಿಟ್ಟರು. ಈ ಕಾರಣ ಇಸ್ರಯೇಲರು ಎಂಟು ವರ್ಷಗಳವರೆಗೆ ಅವನಿಗೆ ಗುಲಾಮರಾಗಿದ್ದರು.


ಇಸ್ರಯೇಲರು ಮತ್ತೆ ಸರ್ವೆಶ್ವರನ ದೃಷ್ಟಿಯಲ್ಲಿ ದ್ರೋಹಿಗಳಾದರು. ಮೋವಾಬ್ಯರ ಅರಸ ಎಗ್ಲೋನನನ್ನು ಇಸ್ರಯೇಲರಿಗೆ ವಿರುದ್ಧ ಸರ್ವೇಶ್ವರ ಬಲಪಡಿಸಿದರು.


“ತಾವು ವಾಗ್ದಾನ ಮಾಡಿದಂತೆ ತಮ್ಮ ಪ್ರಜೆಗಳಾದ ಇಸ್ರಯೇಲರಿಗೆ ವಿಶ್ರಾಂತಿಯನ್ನು ಅನುಗ್ರಹಿಸಿದ ಸರ್ವೇಶ್ವರನಿಗೆ ಸ್ತೋತ್ರವಾಗಲಿ! ಅವರು ತಮ್ಮ ದಾಸ ಮೋಶೆಯ ಮುಖಾಂತರ ಮಾಡಿದ ಅತಿಶ್ರೇಷ್ಠ ವಾಗ್ದಾನಗಳಲ್ಲಿ ಒಂದೂ ತಪ್ಪಿಹೋಗಲಿಲ್ಲ.


ಸರ್ವೇಶ್ವರ ಇಸ್ರಯೇಲರನ್ನು ಹೊಡೆಯುವರು. ಆಗ ಅವರು ನೀರಿನಲ್ಲಿರುವ ಆಪು ಹುಲ್ಲೋ ಎಂಬಂತೆ ಹೊಯ್ದಾಡುವರು. ಅಶೇರ ವಿಗ್ರಹಸ್ತಂಭಗಳನ್ನು ಮಾಡಿಕೊಂಡು ಸರ್ವೇಶ್ವರನಿಗೆ ಕೋಪವನ್ನೆಬ್ಬಿಸಿದ ಅವರನ್ನು, ಅವರ ಪಿತೃಗಳಿಗೆ ಕೊಟ್ಟ ನಾಡಿನಿಂದ ಬೇರುಸಹಿತ ಕಿತ್ತುಹಾಕಿ ಯೂಫ್ರೆಟಿಸ್ ನದಿಯ ಆಚೆಯಲ್ಲಿರುವ ದೇಶದಲ್ಲೆಲ್ಲಾ ಚದರಿಸಿಬಿಡುವರು.


ಇದಕಾರಣ ಕಬಳಿಸಿದೆ ಜಗವನು ಶಾಪ, ತಟ್ಟಿದೆ ಆ ಜನರಿಗೆ ದಂಡನೆಯ ತಾಪ. ಸುಟ್ಟಮೇಲೆ ಉಳಿದಿಹರು ಅವರಲಿ ಕೆಲವರು ಮಾತ್ರ.


“ಇಗೋ, ಮುತ್ತಿಗೆಯ ದಿಬ್ಬಗಳು! ನಗರವನ್ನು ಆಕ್ರಮಿಸಲು ಬಂದುಬಿಟ್ಟಿದ್ದಾರೆ. ಖಡ್ಗ-ಕ್ಷಾಮ-ವ್ಯಾಧಿಗಳಿಂದ ನಗರವು ವಿರೋಧಿಗಳಾದ ಬಾಬಿಲೋನಿಯರ ಕೈ ಹಿಡಿತಕ್ಕೆ ಸಿಕ್ಕಿಹೋಗಿದೆ. ನೀವು ನುಡಿದಂತೆ ನೆರವೇರಿದೆ. ನಿಮ್ಮ ಕಣ್ಣಿಗೆ ಎಲ್ಲ ಬಟ್ಟಬಯಲಾಗಿದೆ.


ಆದ್ದರಿಂದ ಸೇನಾಧೀಶ್ವರ ಸರ್ವೇಶ್ವರನೂ ಇಸ್ರಯೇಲಿನ ದೇವರೂ ಆದ ನಾನು ಹೇಳುವುದನ್ನು ಗಮನಿಸು: ಯೆಹೂದ್ಯರಿಗೂ ಜೆರುಸಲೇಮಿನವರೆಲ್ಲರಿಗೂ ನಾನು ಕೊಟ್ಟ ಶಾಪದ ಕೇಡುಗಳನ್ನೆಲ್ಲಾ ಅವರ ಮೇಲೆ ಬರಮಾಡುವೆನು. ನಾನು ಹೇಳಿದರೂ ಅವರು ಕೇಳಲಿಲ್ಲ, ಕೂಗಿದರೂ ಉತ್ತರಕೊಡಲಿಲ್ಲ’.”


“ನೀವು ನನ್ನ ನಿಯಮಗಳನ್ನು ಕೈಗೊಂಡು ನನ್ನ ಆಜ್ಞೆಗಳನ್ನು ಅನುಸರಿಸಿ ನಡೆದರೆ


“ಸರ್ವೇಶ್ವರನಾದ ನನ್ನ ಮಾತು ಇವು: ಇಂಥ ಕಠಿಣವಾದ ಕಷ್ಟದುಃಖಗಳನ್ನು ಈ ಜನರ ಮೇಲೆ ಬರಮಾಡಿದಂತೆಯೇ ನಾನು ಇವರಿಗೆ ವಾಗ್ದಾನಮಾಡಿದ ಎಲ್ಲ ಒಳಿತನ್ನೂ ಬರಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು