ಯೆಹೋಶುವ 23:16 - ಕನ್ನಡ ಸತ್ಯವೇದವು C.L. Bible (BSI)16 ದೇವರಾದ ಸರ್ವೇಶ್ವರನ ನಿಬಂಧನೆಯನ್ನು ನೀವು ಮೀರಿ ಅನ್ಯದೇವತೆಗಳಿಗೆ ಸೇವೆಸಲ್ಲಿಸಿ, ಅಡ್ಡಬಿದ್ದರೆ, ಸರ್ವೇಶ್ವರನ ಕೋಪಾಗ್ನಿ ನಿಮ್ಮ ಮೇಲೆ ಎರಗುವುದು; ಅವರು ನಿಮಗೆ ಕೊಟ್ಟ ಈ ಒಳ್ಳೆಯ ನಾಡಿನಿಂದ ಹೊರದೂಡಲ್ಪಟ್ಟು ಬೇಗನೆ ನಾಶವಾಗುವಿರಿ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಿಮ್ಮ ದೇವರಾದ ಯೆಹೋವನ ನಿಬಂಧನೆಯನ್ನು ಮೀರಿ ಅನ್ಯದೇವತೆಗಳಿಗೆ ಅಡ್ಡಬಿದ್ದು ಸೇವಿಸಿದರೆ ಯೆಹೋವನ ಕೋಪಾಗ್ನಿಯು ನಿಮ್ಮ ಮೇಲೆ ಉರಿಯುವುದು ಮತ್ತು ಆತನು ಕೊಟ್ಟ ಒಳ್ಳೆಯ ದೇಶದಿಂದ ನೀವು ತೆಗೆದುಹಾಕಲ್ಪಟ್ಟು ಬೇಗನೆ ನಾಶವಾದೀರಿ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನೀವು ದೇವರಾದ ಯೆಹೋವನ ನಿಬಂಧನೆಯನ್ನು ಮೀರಿ ಅನ್ಯದೇವತೆಗಳಿಗೆ ಅಡ್ಡಬಿದ್ದು ಸೇವಿಸಿದರೆ ಯೆಹೋವನ ಕೋಪಾಗ್ನಿಯು ನಿಮ್ಮ ಮೇಲೆ ಉರಿಯುವದು; ಮತ್ತು ಆತನು ಕೊಟ್ಟ ಒಳ್ಳೆಯ ದೇಶದಿಂದ ನೀವು ತೆಗೆದುಹಾಕಲ್ಪಟ್ಟು ಬೇಗನೆ ನಾಶವಾದೀರಿ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನಿಮ್ಮ ದೇವರಾದ ಯೆಹೋವನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಪಾಲಿಸದೆ ಬೇರೆ ದೇವರುಗಳ ಸೇವೆಮಾಡಿದರೆ ಈ ದೇಶವನ್ನು ಕಳೆದುಕೊಳ್ಳುವಿರಿ. ನೀವು ಅನ್ಯದೇವರುಗಳನ್ನು ಪೂಜಿಸಬಾರದು. ಇಲ್ಲವಾದರೆ, ಯೆಹೋವನು ನಿಮ್ಮ ಮೇಲೆ ಬಹು ಕೋಪಗೊಂಡು ಆತನು ನಿಮಗೆ ಕೊಟ್ಟ ಈ ಒಳ್ಳೆಯ ದೇಶದಿಂದ ಬಲವಂತವಾಗಿ ಹೊರಡಿಸುವನು,” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಹಾಗೆಯೇ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಆಜ್ಞಾಪಿಸಿದ ಒಡಂಬಡಿಕೆಯನ್ನು ನೀವು ಉಲ್ಲಂಘಿಸಿ, ಅನ್ಯದೇವರುಗಳನ್ನು ಸೇವಿಸಿ, ಅವುಗಳಿಗೆ ಅಡ್ಡಬಿದ್ದರೆ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಟ್ಟ ಈ ಒಳ್ಳೆಯ ದೇಶದಿಂದ ನಿಮ್ಮನ್ನು ನಾಶಮಾಡುವ ಮಟ್ಟಿಗೂ ಅವರು ನಿಮ್ಮ ಮೇಲೆ ಸಕಲ ಕೇಡುಗಳನ್ನು ಬರಮಾಡುವರು. ಯೆಹೋವ ದೇವರ ಕೋಪವು ನಿಮ್ಮ ಮೇಲೆ ಉರಿಯುವುದು. ಅವರು ನಿಮಗೆ ಕೊಟ್ಟ ಒಳ್ಳೆಯ ದೇಶದಿಂದ ನೀವು ಬೇಗನೆ ನಾಶವಾಗಿಹೋಗುವಿರಿ,” ಎಂದನು. ಅಧ್ಯಾಯವನ್ನು ನೋಡಿ |