Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 23:6 - ಕನ್ನಡ ಸತ್ಯವೇದವು C.L. Bible (BSI)

6 ಮೋಶೆಯ ಧರ್ಮಶಾಸ್ತ್ರವನ್ನೂ ಎಲ್ಲಾ ವಿಧಿಗಳನ್ನೂ ಕೈಗೊಳ್ಳುವುದರಲ್ಲಿ ಸ್ಥಿರಚಿತ್ತದಿಂದಿರಿ. ಎಡಕ್ಕಾಗಲಿ ಬಲಕ್ಕಾಗಲಿ ಓರೆಯಾಗಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಮೋಶೆಯ ಧರ್ಮಶಾಸ್ತ್ರವಿಧಿಗಳನ್ನೆಲ್ಲಾ ಸ್ಥಿರಚಿತ್ತದಿಂದ ಕೈಕೊಳ್ಳಿರಿ. ಅದನ್ನು ಬಿಟ್ಟು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಮೋಶೆಯ ಧರ್ಮಶಾಸ್ತ್ರವಿಧಿಗಳನ್ನೆಲ್ಲಾ ಸ್ಥಿರಚಿತ್ತದಿಂದ ಕೈಕೊಳ್ಳಿರಿ; ಎಡಕ್ಕಾದರೂ ಬಲಕ್ಕಾದರೂ ಓರೆಯಾಗಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ಯೆಹೋವನ ಆಜ್ಞೆಗಳನ್ನೆಲ್ಲಾ ಜಾಗರೂಕತೆಯಿಂದ ಕೈಕೊಂಡು ನಡೆಯಿರಿ. ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಎಲ್ಲವನ್ನು ಪಾಲಿಸಿರಿ. ಆ ಧರ್ಮಶಾಸ್ತ್ರಕ್ಕೆ ವಿಮುಖರಾಗಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ನೀವು ಬಲಗೊಳ್ಳಿರಿ, ಎಡಕ್ಕಾಗಲಿ, ಬಲಕ್ಕಾಗಲಿ ತಿರುಗದೆ, ಮೋಶೆಯ ನಿಯಮದ ಗ್ರಂಥದಲ್ಲಿ ಬರೆದಿರುವ ಎಲ್ಲವನ್ನು ಕೈಗೊಂಡು ನಡೆಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 23:6
14 ತಿಳಿವುಗಳ ಹೋಲಿಕೆ  

“ಆದುದರಿಂದ ನಿಮ್ಮ ದೇವರಾದ ಸರ್ವೇಶ್ವರ ಆಜ್ಞಾಪಿಸಿದಂತೆಯೇ ನಡೆದುಕೊಳ್ಳಿ, ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಳ್ಳಬೇಡಿ. ಬದಲಿಗೆ, ನಿಮ್ಮ ದೇವರಾದ ಸರ್ವೇಶ್ವರ ಆಜ್ಞಾಪಿಸಿದ ಮಾರ್ಗದಲ್ಲೇ ಮುನ್ನಡೆಯಿರಿ.


ಪಾಪದ ವಿರುದ್ಧ ನೀವು ಕೈಗೊಂಡ ಹೋರಾಟದಲ್ಲಿ ನಿಮ್ಮ ರಕ್ತವನ್ನೇ ಸುರಿಸುವ ಸ್ಥಿತಿಗೆ ನೀವಿನ್ನೂ ಬಂದಿಲ್ಲ.


ಹೀಗೆ ಮಾಡಿದರೆ ಅವನೂ ಅವನ ಸಂತತಿಯವರೂ ದೀರ್ಘಕಾಲ ಇಸ್ರಯೇಲರ ಮೇಲೆ ರಾಜ್ಯಾಧಿಕಾರ ನಡೆಸುವರು.


ಆದರೆ ಹೇಡಿಗಳಿಗೆ, ಹೇಯಕೃತ್ಯಗಾರರಿಗೆ ಅವಿಶ್ವಾಸಿಗಳಿಗೆ, ಹಲವು ಅಸತ್ಯಗಾರರಿಗೆ ಕಾಮುಕರಿಗೆ, ಕೊಲೆಗಾರರಿಗೆ ವಿಗ್ರಹಾರಾಧಕರಿಗೆ, ಮಾಟಮಂತ್ರಗಾರರಿಗೆ ಗಂಧಕದಿಂದುರಿಯುವ ಅಗ್ನಿಸರೋವರವೇ ಗತಿ ಇದುವೇ ಅವರೆಲ್ಲರ ಎರಡನೆಯ ಮೃತಿ.” ಎಂದು ಹೇಳಿದನು.


ಜಾಗರೂಕರಾಗಿರಿ, ವಿಶ್ವಾಸದಲ್ಲಿ ದೃಢರಾಗಿರಿ, ಧೈರ್ಯಶಾಲಿಗಳಾಗಿರಿ, ಸ್ಥೈರ್ಯದಿಂದ ಬಾಳಿರಿ.


ಸರ್ವೇಶ್ವರ : “ಸುಳ್ಳಾಡಲು ಬಿಲ್ಲಿನಂತೆ ನಾಲಿಗೆ ಬಗ್ಗಿಸುತ್ತಾರೆ ಸತ್ಯಕ್ಕೆ ಪ್ರತಿಕೂಲವಾಗಿಯೆ ನಾಡಿನಲ್ಲಿ ಪ್ರಬಲಿಸಿದ್ದಾರೆ ಕೇಡಿನಿಂದ ಕೇಡಿಗೆ ಹಾರುತ್ತಾರೆ; ನನ್ನನ್ನಾದರೊ ಅರಿಯದೆ ಇದ್ದಾರೆ.”


ನೀಚಕಾರ್ಯಗಳನು ನಾ ವೀಕ್ಷಿಸಲಾರೆ I ಅಧರ್ಮಿಗಳ ನಡೆಯನು ನಾ ಸಹಿಸಲಾರೆ I ಅಂಥವರ ಸಹವಾಸವನು ನಾ ತಾಳಲಾರೆ II


ತಪ್ಪಿಸಿಕೊಳ್ಳಲಿಲ್ಲ ನಾ ನಿನ್ನ ವಿಧಿಗಳಿಂದ I ನೀನೇ ನನಗದರ ಬೋಧನೆ ಮಾಡಿದ್ದರಿಂದ II


ನಿನ್ನ ದೇವರಾದ ಸರ್ವೇಶ್ವರಸ್ವಾಮಿಯ ಕಟ್ಟಳೆಯನ್ನು ಕೈಗೊಂಡು ಅವರ ಮಾರ್ಗದಲ್ಲೇ ನಡೆದುಕೋ; ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಅವರ ಆಜ್ಞಾನಿಯಮ-ವಿಧಿನಿರ್ಣಯಗಳನ್ನು ಪಾಲಿಸು. ಹೀಗೆ ಮಾಡುವುದಾದರೆ ನೀನು ಏನು ಮಾಡಿದರೂ ಎಲ್ಲಿಗೆ ಹೋದರೂ ಕೃತಾರ್ಥನಾಗುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು