Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 23:8 - ಕನ್ನಡ ಸತ್ಯವೇದವು C.L. Bible (BSI)

8 ಈವರೆಗೆ ಹೇಗೋ ಹಾಗೆಯೇ ಇನ್ನು ಮುಂದಕ್ಕೂ ನಿಮ್ಮ ದೇವರಾದ ಸರ್ವೇಶ್ವರನನ್ನೇ ಅಂಟಿಕೊಂಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಈವರೆಗೆ ಹೇಗೊ ಹಾಗೆಯೇ ಇನ್ನು ಮುಂದೆಯೂ ನಿಮ್ಮ ದೇವರಾದ ಯೆಹೋವನನ್ನೇ ಆತುಕೊಂಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಈವರೆಗೆ ಹೇಗೋ ಹಾಗೆಯೇ ಇನ್ನು ಮುಂದಕ್ಕೂ ನಿಮ್ಮ ದೇವರಾದ ಯೆಹೋವನನ್ನೇ ಹೊಂದಿಕೊಂಡಿರ್ರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಿಮ್ಮ ದೇವರಾದ ಯೆಹೋವನನ್ನೇ ಅನುಸರಿಸಿಕೊಂಡಿರಿ. ಈವರೆಗೆ ನೀವು ಹೇಗಿದ್ದಿರೋ ಅದೇ ರೀತಿಯಲ್ಲಿ ಮುಂದೆಯೂ ಇರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದರೆ, ಈವರೆಗೂ ಹೇಗೋ ಹಾಗೆಯೇ ಇನ್ನು ಮುಂದೆಯೂ ನಿಮ್ಮ ದೇವರಾದ ಯೆಹೋವ ದೇವರನ್ನೇ ನಂಬಿಕೊಂಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 23:8
11 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿ ಅವರಿಗೇ ಸೇವೆಸಲ್ಲಿಸಿ. ಅವರನ್ನು ಹೊಂದಿಕೊಂಡು ಅವರ ಹೆಸರಿನ ಮೇಲೆಯೇ ಪ್ರಮಾಣಮಾಡಬೇಕು.


ಆದರೆ ಸರ್ವೇಶ್ವರನ ದಾಸ ಮೋಶೆಯು ನಿಮಗೆ ಕೊಟ್ಟ ಧರ್ಮಶಾಸ್ತ್ರವನ್ನೂ ವಿಧಿಗಳನ್ನೂ ಜಾಗರೂಕತೆಯಿಂದ ಕೈಗೊಳ್ಳಿರಿ; ನಿಮ್ಮ ದೇವರಾದ ಸರ್ವೇಶ್ವರನನ್ನು ಪ್ರೀತಿಸಿ ಅವರ ಮಾರ್ಗದಲ್ಲಿ ನಡೆಯಿರಿ; ಅವರ ಆಜ್ಞೆಗಳನ್ನು ಕೈಗೊಂಡು ಅವರನ್ನೇ ನೆಚ್ಚಿಕೊಂಡು ಪೂರ್ಣ ಮನಸ್ಸಿನಿಂದಲೂ ಪೂರ್ಣ ಪ್ರಾಣದಿಂದಲೂ ಅವರಿಗೆ ಸೇವೆ ಸಲ್ಲಿಸಿರಿ,” ಎಂದು ಹೇಳಿದನು.


ಬಾರ್ನಬನು ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ಕಂಡು ಸಂತೋಷಪಟ್ಟನು. ಪ್ರಭುವಿಗೆ ದೃಢಮನಸ್ಸಿನಿಂದ ಪ್ರಾಮಾಣಿಕರಾಗಿರುವಂತೆ ಪ್ರೋತ್ಸಾಹಿಸಿದನು.


ಸರ್ವೇಶ್ವರ ಹೇಳುವ ಮಾರ್ಗದಲ್ಲೇ ನೀವು ನಡೆದು, ಅವರಲ್ಲಿಯೇ ಭಯಭಕ್ತಿ ಯಳ್ಳವರಾಗಿ, ಅವರ ಆಜ್ಞೆಗಳನ್ನೇ ಅನುಸರಿಸಿ, ಅವರಿಗೇ ವಿಧೇಯರಾಗಿ, ಅವರ ಸೇವೇಮಾಡುತ್ತಾ ಅವರನ್ನೇ ಹೊಂದಿಕೊಂಡಿರಬೇಕು.


“ನಾನು ಬೋಧಿಸುವ ಈ ಧರ್ಮೋಪದೇಶವನ್ನೆಲ್ಲ ನೀವು ಅನುಸರಿಸುವವರಾಗಿ, ನಿಮ್ಮ ದೇವರಾದ ಸರ್ವೇಶ್ವರನನ್ನು ಪ್ರೀತಿಸಿ, ಎಲ್ಲ ವಿಷಯಗಳಲ್ಲೂ ಅವರು ಹೇಳುವ ಮಾರ್ಗದಲ್ಲೇ ನಡೆದು, ಅವರನ್ನೇ ಹೊಂದಿಕೊಂಡಿದ್ದರೆ,


ನಿಮ್ಮ ದೇವರಾದ ಸರ್ವೇಶ್ವರನನ್ನು ಅವಲಂಭಿಸಿದ ನೀವಾದರೋ ಇಂದಿನವರೆಗೂ ಉಳಿದುಕೊಂಡಿದ್ದೀರಿ.


ಉಳಿದಿರುವ ಈ ಜನಾಂಗಗಳ ಜೊತೆ ಸೇರಿಕೊಳ್ಳಬೇಡಿ. ಅವರ ದೇವತೆಗಳ ಹೆಸರು ಹೇಳಿ ಆರಾಧಿಸಬಾರದು, ಪ್ರಮಾಣ ಮಾಡಬಾರದು, ಅವುಗಳನ್ನು ಪೂಜಿಸಬಾರದು. ಅವುಗಳಿಗೆ ಸೇವೆ ಮಾಡಬಾರದು.


ಸರ್ವೇಶ್ವರ ಮಹಾಪರಾಕ್ರಮಿಗಳಾದ ಜನಾಂಗಗಳನ್ನು ನಮ್ಮೆದುರಿನಿಂದ ಓಡಿಸಿಬಿಟ್ಟಿದ್ದಾರೆ. ನಮ್ಮನ್ನು ಪ್ರತಿಭಟಿಸಿ ನಿಂತವನು ಒಬ್ಬನೂ ಇಲ್ಲ.


ಇದಲ್ಲದೆ, ಇವನು ಸರ್ವೇಶ್ವರನನ್ನೇ ಹೊಂದಿಕೊಂಡು ಅವರನ್ನು ಬಿಡದೆ ಅನುಸರಿಸುತ್ತಾ, ಅವರು ಮೋಶೆಯ ಮುಖಾಂತರ ಅನುಗ್ರಹಿಸಿದ ಆಜ್ಞೆಗಳನ್ನು ಕೈಗೊಂಡನು.


ನೀವು ನಿಮ್ಮ ದೇವರಾದ ಸರ್ವೇಶ್ವರನ ಮಾತನ್ನು ಕೇಳದೆಹೋದರೆ, ಅವರಿಂದ ನಿಮ್ಮ ಮುಂದೆಯೇ ನಾಶವಾಗಿಹೋಗುವ ಅನ್ಯಜನಾಂಗಗಳಂತೆ ನೀವೂ ನಾಶವಾಗಿಹೋಗುವಿರಿ.


ಆ ಪ್ರವಾದಿಗೆ ಅಥವಾ ಆ ಕನಸುಗಾರನಿಗೆ ಮರಣಶಿಕ್ಷೆಯಾಗಬೇಕು. ಗುಲಾಮಗಿರಿಯಲ್ಲಿ ಇದ್ದ ನಿಮ್ಮನ್ನು ಬಿಡುಗಡೆಮಾಡಿ ಈಜಿಪ್ಟ್ ದೇಶದಿಂದ ಕರೆದುತಂದ ನಿಮ್ಮ ದೇವರಾದ ಸರ್ವೇಶ್ವರನಿಗೆ ವಿರೋಧವಾಗಿ ಅವನು ದ್ರೋಹದ ಮಾತುಗಳನ್ನಾಡಿ ನಿಮ್ಮ ದೇವರಾದ ಸರ್ವೇಶ್ವರ ಹೇಳಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸಬೇಕು ಎಂದಿದ್ದರೆ, ಅಂಥವನನ್ನು ಕೊಲ್ಲಿಸಿ, ಆ ದುಷ್ಟತ್ವವನ್ನು ನಿಮ್ಮ ಮಧ್ಯೆಯಿಂದ ತೊಡೆದುಹಾಕಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು