Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 24:1 - ಕನ್ನಡ ಸತ್ಯವೇದವು C.L. Bible (BSI)

1 ತರುವಾಯ ಯೆಹೋಶುವನು ಎಲ್ಲ ಇಸ್ರಯೇಲ ಕುಲದವರನ್ನು ಶೆಕೆಮಿನಲ್ಲಿ ಸಭೆ ಸೇರಿಸಿದನು. ಹಿರಿಯರು, ನಾಯಕರು, ನ್ಯಾಯಾಧಿಪತಿಗಳು, ಅಧಿಕಾರಿಗಳು ಬಂದು ದೇವರ ಸನ್ನಿಧಿಯಲ್ಲಿ ಉಪಸ್ಥಿತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ತರುವಾಯ ಯೆಹೋಶುವನು ಇಸ್ರಾಯೇಲ್ಯರ ಎಲ್ಲಾ ಕುಲದವರನ್ನು ಶೆಕೆಮಿನಲ್ಲಿ ಸಭೆ ಸೇರಿಸಿದನು. ಹಿರಿಯರು, ಪ್ರಧಾನರು, ನ್ಯಾಯಾಧಿಪತಿಗಳು, ಅಧಿಕಾರಿಗಳು ಬಂದು ದೇವರ ಸನ್ನಿಧಿಯಲ್ಲಿ ಕಾಣಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ತರುವಾಯ ಯೆಹೋಶುವನು ಇಸ್ರಾಯೇಲ್ಯರ ಎಲ್ಲಾ ಕುಲದವರನ್ನು ಶೆಕೆವಿುನಲ್ಲಿ ಕೂಟಕ್ಕೆ ಕರಿಸಲು ಅವರ ಹಿರಿಯರೂ ಪ್ರಧಾನರೂ ನ್ಯಾಯಾಧಿಪತಿಗಳೂ ಅಧಿಕಾರಿಗಳೂ ಬಂದು ದೇವರ ಸನ್ನಿಧಿಯಲ್ಲಿ ಕಾಣಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋಶುವನು ಶೆಕೆಮಿನಲ್ಲಿ ಇಸ್ರೇಲಿನ ಎಲ್ಲ ಕುಲದವರನ್ನು, ಹಿರಿಯ ನಾಯಕರನ್ನು, ಕುಲದ ಪ್ರಧಾನರನ್ನು, ನ್ಯಾಯಾಧೀಶರನ್ನು, ಮುಖಂಡರನ್ನು ಮತ್ತು ಇಸ್ರೇಲಿನ ಅಧಿಕಾರಿಗಳನ್ನು ಒಟ್ಟಾಗಿ ಸೇರಿಸಿದನು. ಈ ಜನರು ದೇವರ ಸನ್ನಿಧಿಯಲ್ಲಿ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅನಂತರ ಯೆಹೋಶುವನು ಶೆಕೆಮಿನಲ್ಲಿ ಇಸ್ರಾಯೇಲಿನ ಸಮಸ್ತ ಗೋತ್ರದವರನ್ನು ಕೂಡಿಸಿ, ಇಸ್ರಾಯೇಲಿನ ಹಿರಿಯರನ್ನೂ ಅವರ ಮುಖ್ಯಸ್ಥರನ್ನೂ ಅವರ ನ್ಯಾಯಾಧಿಪತಿಗಳನ್ನೂ ಅವರ ಅಧಿಕಾರಿಗಳನ್ನೂ ಕರೆಯಿಸಿದನು. ಅವರು ದೇವರ ಮುಂದೆ ಬಂದು ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 24:1
13 ತಿಳಿವುಗಳ ಹೋಲಿಕೆ  

ಆತ ಇಸ್ರಯೇಲರೆಲ್ಲರನ್ನು, ಅವರ ಹಿರಿಯರನ್ನು, ಮುಖ್ಯಸ್ಥರನ್ನು, ನ್ಯಾಯಾಧಿಪತಿಗಳನ್ನು ಹಾಗೂ ಅಧಿಕಾರಿಗಳನ್ನು ತನ್ನ ಬಳಿಗೆ ಕರೆಯಿಸಿದನು. ಅವರಿಗೆ, “ನಾನು ಮುಪ್ಪಿನ ಮುದುಕನಾದೆ.


ನೀವಾದರೋ, ನಿಮ್ಮನ್ನು ಕಷ್ಟಸಂಕಟಗಳಿಂದ ಬಿಡಿಸಿದ ನಿಮ್ಮ ದೇವರಾದ ನನ್ನನ್ನು ತಿರಸ್ಕರಿಸಿ ಈಗ ನಮಗೊಬ್ಬ ಅರಸನನ್ನು ನೇಮಿಸೆಂದು ಕೇಳುತ್ತೀರಿ. ಆದುದರಿಂದ ನೀವು ನಿಮ್ಮ ನಿಮ್ಮ ಕುಲ ಹಾಗು ಗೋತ್ರಗಳ ಅನುಸಾರ ಸರ್ವೇಶ್ವರನ ಸನ್ನಿಧಿಯಲ್ಲಿ ಹಾಜರಾಗಿರಿ,” ಎಂದು ಅಪ್ಪಣೆ ಮಾಡಿದನು.


ಅಂತೆಯೇ ನಾನು ತಕ್ಷಣ ತಮ್ಮನ್ನು ಕರೆತರಲು ಕಳುಹಿಸಿದೆ. ತಾವು ಇಲ್ಲಿಗೆ ದಯಮಾಡಿಸಿದಿರಿ. ಪ್ರಭು ತಮಗೆ ಆಜ್ಞಾಪಿಸಿರುವುದನ್ನೆಲ್ಲಾ ಕೇಳಲು ನಾವೆಲ್ಲರೂ ಇಲ್ಲಿ ದೇವರ ಸನ್ನಿಧಿಯಲ್ಲಿ ಸೇರಿದ್ದೇವೆ,” ಎಂದನು.


ರೆಹಬ್ಬಾಮನು ಶೆಕೆಮಿಗೆ ಹೋದನು. ಅಲ್ಲಿ ಇಸ್ರಯೇಲರೆಲ್ಲರೂ ಅವನನ್ನು ಅರಸನನ್ನಾಗಿ ಮಾಡುವುದಕ್ಕೆ ಕೂಡಿಬಂದಿದ್ದರು.


ಆ ನಾಡಿನಲ್ಲಿ ಸಂಚರಿಸುತ್ತಾ ಅಬ್ರಾಮನು ಶೆಕೆಮ್ ಪುಣ್ಯಕ್ಷೇತ್ರದಲ್ಲಿರುವ ‘ಮೋರೆ’ ಎಂಬ ವೃಕ್ಷದ ಬಳಿಗೆ ಬಂದನು. ಆ ಕಾಲದಲ್ಲಿ ಕಾನಾನ್ಯರು ಆ ನಾಡಿನಲ್ಲಿ ವಾಸವಾಗಿದ್ದರು.


ಅಂತೆಯೆ ಅವರು ತಮ್ಮಲ್ಲಿದ್ದ ಎಲ್ಲ ಅನ್ಯದೇವರುಗಳನ್ನೂ ತಮ್ಮ ಕಿವಿಗಳಲ್ಲಿದ್ದ ಮುರುವುಗಳನ್ನೂ ಯಕೋಬನಿಗೆ ಒಪ್ಪಿಸಿಬಿಟ್ಟರು. ಅವನು ಅವುಗಳನ್ನು ಶೆಕೆಮ್ ಪಟ್ಟಣದ ಹತ್ತಿರ ಇದ್ದ ಒಂದು ಓಕ್ ಮರದ ಬುಡದಡಿಯಲ್ಲಿ ಹೂಳಿಬಿಟ್ಟನು.


ಈ ಸಂಗತಿಗಳನ್ನೆಲ್ಲಾ ನೀವು ಜ್ಞಾಪಕಮಾಡಿಕೊಂಡು ಈ ಒಡಂಬಡಿಕೆಯ ವಾಕ್ಯಗಳನ್ನು ಅನುಸರಿಸಿ ನಡೆಯಬೇಕು; ಆಗ ನೀವು ನಡೆಸುವ ಕೆಲಸಕಾರ್ಯಗಳಲ್ಲಿ ಜಾಣರಾಗಿ ಅಭಿವೃದ್ಧಿ ಹೊಂದುವಿರಿ.


ಅಂತೆಯೇ ಇಸ್ರಯೆಲರು ನಫ್ತಾಲಿ ಕುಲದವರ ಮಲೆನಾಡಿನ ಪ್ರದೇಶವಾದ ಗಲಿಲೇಯ ಪ್ರಾಂತ್ಯದಲ್ಲಿನ ಕೆದೆಷ್, ಎಫ್ರಯಿಮ್ ಮಲೆನಾಡಿನ ಪ್ರದೇಶದಲ್ಲಿನ ಶೆಕೆಮ್ ಹಾಗೂ ಯೂದವಂಶದ ಮಲೆನಾಡಿನ ಹೆಬ್ರೋನ್ ಎನಿಸಿಕೊಳ್ಳುವ ಕಿರ್ಯತರ್ಬ ಎಂಬ ನಗರಗಳನ್ನು ನೇಮಿಸಿದರು.


ಆಗ ಎಲ್ಲ ಜನರು ಬೇತೇಲಿಗೆ ಹೋಗಿ ಅಲ್ಲಿ ಸರ್ವೇಶ್ವರನ ಮುಂದೆ ಅಳುತ್ತಾ ಕುಳಿತು, ಸಾಯಂಕಾಲದವರೆಗೆ ಉಪವಾಸಮಾಡಿದರು. ಇದಲ್ಲದೆ ಅವರು ಸರ್ವೇಶ್ವರನಿಗೆ ದಹನಬಲಿಗಳನ್ನೂ ಶಾಂತಿಸಮಾಧಾನ ಬಲಿಗಳನ್ನೂ ಸಮರ್ಪಿಸಿದರು.


ಅನಂತರ ಅರಸನು ದೂತರ ಮುಖಾಂತರ ಜೆರುಸಲೇಮಿನ ಮತ್ತು ಜುದೇಯ ಪ್ರಾಂತ್ಯದ ಬೇರೆ ಎಲ್ಲಾ ಊರುಗಳ ಹಿರಿಯರನ್ನು ತನ್ನ ಬಳಿಗೆ ಕರೆಯಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು