Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 24:10 - ಕನ್ನಡ ಸತ್ಯವೇದವು C.L. Bible (BSI)

10 ಆದರೆ ನಾನು ಆ ಬಿಳಾಮನಿಗೆ ಸಮ್ಮತಿ ಕೊಡಲಿಲ್ಲವಾದ್ದರಿಂದ ಅವನು ನಿಮ್ಮನ್ನು ಆಶೀರ್ವದಿಸುತ್ತಲೇ ಇರಬೇಕಾಯಿತು. ಹೀಗೆ ನಿಮ್ಮನ್ನು ಅವನ ಕೈಗೆ ಬೀಳದಂತೆ ತಪ್ಪಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆದರೆ ನಾನು ಬಿಳಾಮನಿಗೆ ಸಮ್ಮತಿಕೊಡಲಿಲ್ಲವಾದುದರಿಂದ ಅವನು ನಿಮ್ಮನ್ನು ಆಶೀರ್ವದಿಸುತ್ತಲೇ ಇರಬೇಕಾಯಿತು. ಹೀಗೆ ನಿಮ್ಮನ್ನು ಅವನ ಕೈಗೆ ಬೀಳದಂತೆ ತಪ್ಪಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆದರೆ ನಾನು ಆ ಬಿಳಾಮನಿಗೆ ಸಮ್ಮತಿಕೊಡಲಿಲ್ಲವಾದದರಿಂದ ಅವನು ನಿಮ್ಮನ್ನು ಆಶೀರ್ವದಿಸುತ್ತಲೇ ಇರಬೇಕಾಯಿತು. ಹೀಗೆ ನಿಮ್ಮನ್ನು ಅವನ ಕೈಗೆ ಬೀಳದಂತೆ ತಪ್ಪಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆದರೆ ಯೆಹೋವನಾದ ನಾನು ಬಿಳಾಮನಿಗೆ ಶಪಿಸಲು ಅನುಮತಿ ಕೊಡಲಿಲ್ಲ. ಅದಕ್ಕಾಗಿ ಬಿಳಾಮನು ನಿಮಗೆ ಶುಭವನ್ನೇ ಕೋರಿದನು. ಅವನು ಅನೇಕ ಸಲ ನಿಮ್ಮನ್ನು ಆಶೀರ್ವದಿಸಿದನು. ನಾನು ನಿಮ್ಮನ್ನು ಅವನ ಕೈಗಳಿಂದ ಬಿಡುಗಡೆ ಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದರೆ ನಾನು ಬಿಳಾಮನ ಮಾತನ್ನು ಕೇಳಲು ಮನಸ್ಸಿಲ್ಲದ್ದರಿಂದ ಅವನು ನಿಮ್ಮನ್ನು ಆಶೀರ್ವದಿಸುತ್ತಲೇ ಇರಬೇಕಾಯಿತು. ಹೀಗೆ ನಾನು ಅವನ ಕೈಯಿಂದ ನಿಮ್ಮನ್ನು ತಪ್ಪಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 24:10
10 ತಿಳಿವುಗಳ ಹೋಲಿಕೆ  

ಸಫಲವಾಗದು ನಿನ್ನ ವಿರುದ್ಧ ಪ್ರಯೋಗಿಸಿದ ಆಯುಧ ನ್ಯಾಯಸ್ಥಾನದಲ್ಲಿ ನಿನ್ನ ಪ್ರತಿವಾದಿ ಪಡೆವನು ಅಪಜಯ ನನ್ನ ದಾಸನನು ರಕ್ಷಿಸಿ ಆತನಿಗೆ ನೀಡುವೆ ವಿಜಯ” ಇದು ಸರ್ವೇಶ್ವರನ ವಾಕ್ಯ.


ಆದರೂ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಪ್ರೀತಿಸಿದ್ದರಿಂದ ಬಿಳಾಮನ ಮಾತಿಗೆ ಸಮ್ಮತಿಸದೆ, ಅವನಿಂದ ಶಾಪವನ್ನು ನುಡಿಸದೆ, ಆಶೀರ್ವಾದವನ್ನೇ ಹೇಳಿಸಿದರು.


ಆಗ ಸರ್ವೇಶ್ವರನ ದೂತನು, “ಆ ವ್ಯಕ್ತಿಗಳ ಸಂಗಡ ಹೋಗು. ಆದರೆ ನಾನು ನಿನಗೆ ಹೇಳುವುದನ್ನೇ ಹೊರತು ಬೇರೆ ಏನನ್ನೂ ಹೇಳಬೇಡ,” ಎಂದು ತಿಳಿಸಿದನು. ಬಿಳಾಮನು ಬಾಲಾಕನ ಮುಂದಾಳುಗಳ ಜೊತೆ ಹೊರಟನು.


ನೀವು ಜೋರ್ಡನನ್ನು ದಾಟಿ ಜೆರಿಕೋವಿಗೆ ಬಂದಿರಿ. ಆಗ ಜೆರಿಕೋವಿನವರು, ಅಮೋರಿಯರು, ಪೆರಿಜ್ಜೀಯರು, ಕಾನಾನ್ಯರು, ಹಿತ್ತಿಯರು, ಗಿರ್ಗಾಷ್ಟಿಯರು, ಹಿವ್ವಿಯರು ಹಾಗೂ ಯೆಬೂಸಿಯರು ಇವರೆಲ್ಲರೂ ನಿಮಗೆ ವಿರುದ್ಧ ಯುದ್ಧಕ್ಕೆ ಬಂದರು. ನಾನು ಅವರೆಲ್ಲರನ್ನು ನಿಮ್ಮ ಕೈವಶಮಾಡಿದೆ.


ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಕೊಟ್ಟ ಸಲಹೆಯನ್ನು ನೆನಪಿಗೆ ತಂದುಕೊಳ್ಳಿ. ಬೆಯೋರನ ಮಗನಾದ ಬಿಳಾಮನು ಕೊಟ್ಟ ಉತ್ತರವನ್ನು ಜ್ಞಾಪಿಸಿಕೊಳ್ಳಿ. ನೀವು ತಿಟ್ಟೀಮನ್ನು ಬಿಟ್ಟಂದಿನಿಂದ ಗಿಲ್ಗಾಲನ್ನು ಸೇರುವ ತನಕ ನಡೆದುದನೆಲ್ಲಾ ಸ್ಮರಿಸಿಕೊಳ್ಳಿ. ಆಗ ಸರ್ವೇಶ್ವರ ನಿಮ್ಮನ್ನು ರಕ್ಷಿಸಲು ಮಾಡಿದ ಮಹತ್ಕಾರ್ಯಗಳು ನಿಮಗೆ ಮನದಟ್ಟಾಗುವುವು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು