Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 24:14 - ಕನ್ನಡ ಸತ್ಯವೇದವು C.L. Bible (BSI)

14 “ಈ ಕಾರಣ ನೀವು ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿರಿ. ಪೂರ್ಣ ಮನಸ್ಸಿನಿಂದ ಯಥಾರ್ಥಚಿತ್ತದಿಂದ ಅವರಿಗೆ ಸೇವೆಸಲ್ಲಿಸಿರಿ. ನಿಮ್ಮ ಪೂರ್ವಜರು ಯೂಫ್ರಟಿಸ್ ನದಿಯಾಚೆಯಲ್ಲೂ ಈಜಿಪ್ಟಿನಲ್ಲೂ ಪೂಜಿಸುತ್ತಿದ್ದ ದೇವತೆಗಳನ್ನು ತೊರೆದುಬಿಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಹೀಗಿರುವುದರಿಂದ, “ನೀವು ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿರಿ ಆತನನ್ನು ಪೂರ್ಣಮನಸ್ಸಿನಿಂದಲೂ, ಯಥಾರ್ಥಚಿತ್ತದಿಂದಲೂ ಸೇವಿಸಿರಿ. ನಿಮ್ಮ ಪೂರ್ವಿಕರು ಯೂಫ್ರೆಟಿಸ್ ನದಿಯ ಆಚೆಯಲ್ಲಿಯೂ ಐಗುಪ್ತದಲ್ಲಿಯೂ ಪೂಜಿಸುತ್ತಿದ್ದ ದೇವತೆಗಳನ್ನು ನಿಮ್ಮಲ್ಲಿಂದ ತೆಗೆದುಹಾಕಿರಿ. ಯೆಹೋವನನ್ನೇ ಸೇವಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಹೀಗಿರುವದರಿಂದ ನೀವು ಯೆಹೋವನಲ್ಲಿ ಭಯ ಭಕ್ತಿಯುಳ್ಳವರಾಗಿರ್ರಿ; ಆತನನ್ನು ಪೂರ್ಣಮನಸ್ಸಿನಿಂದಲೂ ಯಥಾರ್ಥಚಿತ್ತದಿಂದಲೂ ಸೇವಿಸಿರಿ. ನಿಮ್ಮ ಪೂರ್ವಿಕರು [ಯೂಫ್ರೇಟೀಸ್] ನದಿಯ ಆಚೆಯಲ್ಲಿಯೂ ಐಗುಪ್ತದಲ್ಲಿಯೂ ಪೂಜಿಸುತ್ತಿದ್ದ ದೇವತೆಗಳನ್ನು ನಿಮ್ಮಲ್ಲಿಂದ ತೆಗೆದುಹಾಕಿರಿ; ಯೆಹೋವನನ್ನೇ ಸೇವಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ತರುವಾಯ ಯೆಹೋಶುವನು ಜನರಿಗೆ, “ಈಗ ನೀವು ಯೆಹೋವನ ಮಾತುಗಳನ್ನು ಕೇಳಿದ್ದೀರಿ. ನೀವು ಆತನಲ್ಲಿ ಭಯಭಕ್ತಿಯಿಂದಿರಬೇಕು. ನಿಮ್ಮ ಪೂರ್ವಿಕರು ಯೂಫ್ರೇಟೀಸ್ ನದಿಯ ಆಚೆಯಲ್ಲಿಯೂ ಈಜಿಪ್ಟಿನಲ್ಲಿಯೂ ಪೂಜಿಸುತ್ತಿದ್ದ ಸುಳ್ಳುದೇವರುಗಳನ್ನು ಎಸೆದುಬಿಡಿ. ಈಗ ನೀವು ಯೆಹೋವನ ಸೇವೆಯನ್ನು ಮಾತ್ರ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ಆದ್ದರಿಂದ ನೀವು ಈಗ ಯೆಹೋವ ದೇವರಿಗೆ ಭಯಪಟ್ಟು ಯಥಾರ್ಥದಲ್ಲಿಯೂ ಸತ್ಯದಲ್ಲಿಯೂ ಅವರನ್ನು ಸೇವಿಸಿರಿ. ನಿಮ್ಮ ಪೂರ್ವಜರು ಯೂಫ್ರೇಟೀಸ್ ನದಿಯ ಆಚೆಯಲ್ಲಿಯೂ ಈಜಿಪ್ಟಿನಲ್ಲಿಯೂ ಸೇವಿಸಿದ ದೇವರುಗಳನ್ನು ತೊರೆದುಬಿಟ್ಟು ಯೆಹೋವ ದೇವರನ್ನೇ ನೀವು ಸೇವಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 24:14
34 ತಿಳಿವುಗಳ ಹೋಲಿಕೆ  

ನೀವಾದರೋ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿದ್ದು, ಅವರು ನಿಮಗಾಗಿ ಮಾಡಿದ ಮಹತ್ಕಾರ್ಯಗಳನ್ನು ಸ್ಮರಿಸಿಕೊಂಡು, ಅವರಿಗೆ ಶ್ರದ್ಧೆಯಿಂದಲೂ ಪೂರ್ಣಮನಸ್ಸಿನಿಂದಲೂ ಸೇವೆಸಲ್ಲಿಸುತ್ತಾ ಬರಬೇಕು.


“ಆದುದರಿಂದ ಇಸ್ರಯೇಲರೇ, ನೀವು ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿ ಉಳ್ಳವರಾಗಿರಬೇಕು; ಎಲ್ಲ ವಿಷಯಗಳಲ್ಲೂ ಅವರು ಹೇಳುವ ಮಾರ್ಗದಲ್ಲೇ ನಡೆಯಬೇಕು; ಅವರನ್ನು ಪ್ರೀತಿಸುತ್ತಾ ಸಂಪೂರ್ಣವಾದ ಹೃದಯದಿಂದಲೂ ಮನಸ್ಸಿನಿಂದಲೂ ಸೇವೆಮಾಡಬೇಕು;


ಆಗ ಯಕೋಬನು ತನ್ನ ಮನೆಯವರಿಗೂ ಹಾಗು ತನ್ನ ಸಂಗಡ ಇದ್ದ ಎಲ್ಲರಿಗೂ, “ನಿಮ್ಮಲ್ಲಿ ಇರುವ ಅನ್ಯ ದೇವರುಗಳನ್ನು ತೊರೆದುಬಿಡಿ; ನಿಮ್ಮನ್ನೇ ಶುದ್ಧೀಕರಿಸಿಕೊಂಡು ಮಡಿವಸ್ತ್ರಗಳನ್ನು ಹಾಕಿಕೊಳ್ಳಿ; ನಾವು ಬೇತೇಲಿಗೆ ಹೊರಟುಹೋಗೋಣ.


ಲೋಕದ ಜನರೊಡನೆ, ವಿಶೇಷವಾಗಿ ನಿಮ್ಮೊಡನೆ ವ್ಯವಹರಿಸುವಾಗ ನಾವು ಕೇವಲ ಮಾನವ ಜ್ಞಾನವನ್ನಾಶ್ರಯಿಸದೆ ದೇವರ ಅನುಗ್ರಹವನ್ನೇ ಆಶ್ರಯಿಸಿ ನಡೆದುಕೊಂಡೆವು. ದೇವದತ್ತವಾದ ನಿಷ್ಕಪಟ ಮನಸ್ಸಿನಿಂದಲೂ ಪರಿಶುದ್ಧತೆಯಿಂದಲೂ ವರ್ತಿಸಿದೆವು. ಇದಕ್ಕೆ ನಮ್ಮ ಮನಸ್ಸೇ ಸಾಕ್ಷಿ. ಇದಕ್ಕಾಗಿ ನಾವು ಹೆಮ್ಮೆಪಡುತ್ತೇವೆ.


ಆಗ ಯೆಹೋಶುವ, “ಹಾಗಾದರೆ ನಿಮ್ಮಲ್ಲಿರುವ ಅನ್ಯದೇವತೆಗಳನ್ನು ತೊರೆದುಬಿಟ್ಟು ಇಸ್ರಯೇಲಿನ ದೇವರಾದ ಸರ್ವೇಶ್ವರನ ಕಡೆಗೆ ನಿಮ್ಮ ಹೃನ್ಮನಗಳನ್ನು ತಿರುಗಿಸಿಕೊಳ್ಳಿ,” ಎಂದನು.


ಪ್ರಭುವಿನ ಶಾಸ್ತ್ರಾನುಸಾರ ನಡೆದವರು ಧನ್ಯರು I ದೋಷರಹಿತ ಮಾರ್ಗದಲಿ ನಡೆವವರು ಧನ್ಯರು II


ಆಮೇಲೆ ನಾನು ಅವರ ಸಂತಾನದವರಿಗೆ - ‘ನೀವು ನಿಮ್ಮ ಪಿತೃಗಳ ಕಟ್ಟಳೆಗಳನ್ನು ಅನುಸರಿಸದೆ ಅವರ ವಿಧಿಗಳನ್ನು ಕೈಗೊಳ್ಳದೆ ಅವರ ವಿಗ್ರಹಗಳಿಂದ ನಿಮ್ಮನ್ನು ಅಪವಿತ್ರ ಮಾಡಿಕೊಳ್ಳಬೇಡಿ;


ಸುಜ್ಞಾನಕ್ಕೆ ಮೂಲವು ದೈವಭಯವು I ಅದರ ಪಾಲನೆಯು ವಿವೇಕತನವು I ಪ್ರಭುವಿಗೆ ಸ್ತೋತ್ರ ಸದಾಕಾಲವು II


ಬಳಿಕ ಮಾನವನಿಗೆ ಇಂತೆಂದನು: ‘ಸರ್ವೇಶ್ವರನಲ್ಲಿ ಭಯಭಕ್ತಿ ಇಡುವುದೇ ಸುಜ್ಞಾನ ದುಷ್ಟತನವನ್ನು ಬಿಟ್ಟುಬಿಡುವುದೇ ವಿವೇಕ’.”


ನೀವು ನಿಮ್ಮ ಸೇವಕರಾದ ಪ್ರವಾದಿಗಳ ಮುಖಾಂತರ ನಮಗೆ, ‘ನೀವು ಸ್ವತಂತ್ರಿಸಿಕೊಳ್ಳುವುದಕ್ಕೆ ಹೋಗುವ ನಾಡು ಅನ್ಯದೇಶಗಳವರ ಅಶುದ್ಧತ್ವದಿಂದಲೂ ಅವರ ವಿಗ್ರಹಗಳಿಂದಲೂ ಮಲಿನವಾಗಿದೆ. ಅದು ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ಆ ವಿಗ್ರಹಗಳ ಅಸಹ್ಯತೆಯಿಂದ ತುಂಬಿದೆ.


“ಸರ್ವೇಶ್ವರಾ, ನಾನು ಶ್ರದ್ಧೆಯಿಂದಲೂ ಪ್ರಾಮಾಣಿಕತೆಯಿಂದಲೂ ನಡೆದುಕೊಂಡಿದ್ದೇನೆ. ನಿಮ್ಮ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದುದನ್ನು ನೆನಪಿಗೆ ತಂದುಕೊಳ್ಳಿ,” ಎಂದು ಬಹಳವಾಗಿ ಕಣ್ಣೀರಿಡುತ್ತಾ ಪ್ರಾರ್ಥಿಸಿದನು.


ಯೆಹೋಶುವ ಅವರೆಲ್ಲರನ್ನು ಉದ್ದೇಶಿಸಿ, “ನಿಮ್ಮ ದೇವರಾದ ಸರ್ವೇಶ್ವರಸ್ವಾಮಿ ಹೇಳುವುದನ್ನು ಗಮನಿಸಿರಿ: ‘ಅಬ್ರಹಾಮ್, ನಾಹೊರ್ ಎಂಬವರ ತಂದೆಯಾದ ತೆರಹ ಮೊದಲಾದ ನಿಮ್ಮ ಮೂಲ ಪುರುಷರು ಪೂರ್ವದಲ್ಲಿ ಯೂಫ್ರೆಟಿಸ್ ನದಿಯ ಆಚೆ ಇದ್ದರು. ಅನ್ಯದೇವತೆಗಳನ್ನು ಪೂಜಿಸುತ್ತಿದ್ದರು.


ನೀವು ನಿಮ್ಮ ದೇವರಾದ ಸರ್ವೇಶ್ವರನ ಸೇವೆಯ ವಿಷಯದಲ್ಲಿ ಸದಾಚಾರವುಳ್ಳವರು ಆಗಿರಬೇಕು.


ಅವರು ಇದುವರೆಗೆ ಪೂಜಿಸುತ್ತಿದ್ದ ಅಜದೇವತೆಗಳಿಗೆ ಇನ್ನು ಮುಂದೆ ಬಲಿಕೊಟ್ಟು ದೇವದ್ರೋಹಿಗಳಾಗಬಾರದು. ಅವರಿಗೂ ಅವರ ಸಂತತಿಯವರಿಗೂ ಇದು ಶಾಶ್ವತನಿಯಮ.


ಇಂತಿರಲು ಜುದೇಯ, ಗಲಿಲೇಯ ಮತ್ತು ಸಮಾರಿಯದ ಧರ್ಮಸಭೆಯಲ್ಲಿ ಶಾಂತಿ ನೆಲಸಿತು. ಸಭೆ ಬೆಳೆಯುತ್ತಾ ಪ್ರಭುವಿನ ಭಯಭಕ್ತಿಯಲ್ಲಿ ಬಾಳುತ್ತಾ ಪವಿತ್ರಾತ್ಮ ಅವರ ನೆರವಿನಿಂದ ಪ್ರವರ್ಧಿಸುತ್ತಾ ಇತ್ತು.


ಹದವಾದ ಭೂಮಿಯ ಮೇಲೆ ಬಿದ್ದ ಬೀಜಗಳು ಎಂದರೆ ದೇವರ ವಾಕ್ಯವನ್ನು ಕೇಳಿ ಅದನ್ನು ಸದ್ಗುಣಶೀಲ ಹಾಗೂ ಸಾತ್ವಿಕವಾದ ಹೃದಯದಲ್ಲಿಟ್ಟು ಸಹನೆಯಿಂದ ಫಲ ತರುವವರು.”


ತದನಂತರ ಇಸ್ರಯೇಲಿನವರು ತಮ್ಮ ದೇವರಾದ ಸರ್ವೇಶ್ವರನನ್ನು ಮತ್ತು ಅರಸ ದಾವೀದನನ್ನು ಆಶ್ರಯಿಸುವರು. ಅಂತಿಮ ದಿನಗಳಲ್ಲಿ ಅವರು ಭಯಭಕ್ತಿಯುಳ್ಳವರಾಗಿ ಸರ್ವೇಶ್ವರಸ್ವಾಮಿಯನ್ನೂ ಅವರ ಕೃಪಾಶ್ರಯವನ್ನೂ ಮರೆಹೋಗುವರು.


ಅವರು ಈಜಿಪ್ಟಿನಲ್ಲಿ ಸೂಳೆತನ ಮಾಡುತ್ತಿದ್ದರು. ಬಾಲ್ಯದಲ್ಲಿ ವೇಶ್ಯೆಯರಾಗಿ ನಡೆಯುತ್ತಿದ್ದರು. ಅಲ್ಲಿನ ಪುರುಷರು ಅವರ ಸ್ತನಗಳನ್ನು ಹಿಸುಕಿದರು, ಎಳೆಯ ತೊಟ್ಟುಗಳನ್ನು ಸವರಿಸಿದರು.


ಹೀಗೆ ನೀವು ಉತ್ತಮೋತ್ತಮವಾದುವುಗಳನ್ನೇ ಆರಿಸಿಕೊಂಡು, ಪ್ರಭು ಕ್ರಿಸ್ತರ ದಿನದಂದು ನಿರ್ದೋಷಿಗಳೂ ನಿಷ್ಕಳಂಕರೂ ಆಗಿ ಕಾಣಿಸಿಕೊಳ್ಳುವಿರಿ.


ಪ್ರಭು ಯೇಸುಕ್ರಿಸ್ತರಲ್ಲಿ ಚಿರಪ್ರೀತಿಯನ್ನಿಟ್ಟ ಎಲ್ಲರಿಗೂ ದೇವರ ಅನುಗ್ರಹ ಲಭಿಸಲಿ!


ಪಾಪವನು ಕ್ಷಮಿಸುವವನು ನೀನು I ಎಂತಲೆ ಭಯಭಕ್ತಿಗೆ ಪಾತ್ರನು II


ನಿನ್ನ ನಿಬಂಧನೆಗಳಲಿ ಸ್ಥಿರವಿದೆ ಎನ್ನ ಮನ I ನನಗೆ ಒದಗದು ಆಗ ಆಶಾಭಂಗ, ಅವಮಾನ II


‘ಊಚ್’ ಎಂಬ ನಾಡಿನಲ್ಲಿ ‘ಯೋಬ’ ಎಂಬ ಒಬ್ಬ ವ್ಯಕ್ತಿಯಿದ್ದ. ಆತನು ದೋಷರಹಿತ, ಸತ್ಯವಂತ, ದೇವರಲ್ಲಿ ಭಯಭಕ್ತಿ ಉಳ್ಳವನು, ಕೆಟ್ಟದ್ದನ್ನು ತೊರೆದು ಬಾಳಿದವನು.


ಅಬ್ರಾಮನಿಗೆ ತೊಂಬತ್ತೊಂಬತ್ತು ವರ್ಷಗಳಾಗಿದ್ದಾಗ, ಸರ್ವೇಶ್ವರ ದರ್ಶನವಿತ್ತು ಇಂತೆಂದರು: “ನಾನು ಸರ್ವಶಕ್ತ ಸರ್ವೇಶ್ವರ. ನೀನು ನನ್ನ ಸಮ್ಮುಖದಲ್ಲಿದ್ದು ನಿರ್ದೋಷಿಯಾಗಿ ನಡೆದುಕೊಳ್ಳಬೇಕು.


ಆಗ ಸಮುವೇಲನು ಅವರಿಗೆ, “ನೀವು ಪೂರ್ಣಮನಸ್ಸಿನಿಂದ ಸರ್ವೇಶ್ವರನಿಗೆ ಅಭಿಮುಖರಾಗಿ ನಿಮ್ಮ ಮಧ್ಯದಲ್ಲಿರುವ ಅಷ್ಟೋರೆತ್ ಮೊದಲಾದ ಅನ್ಯದೇವತೆಗಳನ್ನು ತೆಗೆದುಹಾಕಿರಿ. ಸರ್ವೇಶ್ವರನ ಮೇಲೆಯೇ ಮನಸ್ಸಿಟ್ಟು ಅವರೊಬ್ಬರಿಗೇ ಸೇವೆಸಲ್ಲಿಸಿರಿ; ಆಗ ಅವರು ನಿಮ್ಮನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವರು,” ಎಂದನು.


ನೀವೂ ನಿಮ್ಮ ಅರಸನೂ ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿ ಅವರಿಗೆ ವಿಧೇಯರಾಗಿ ಅವರನ್ನೇ ಪೂಜಿಸಿರಿ; ಅವರ ಮಾತನ್ನು ತಪ್ಪದೆ ಪಾಲಿಸುತ್ತಾ ಅವರನ್ನೇ ಹೊಂದಿಕೊಂಡಿರಿ. ಹೀಗೆ ಮಾಡಿದರೆ ಎಷ್ಟೋ ಒಳ್ಳೆಯದು.


ನಿನ್ನ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವನಾಗಿರು; ಅವರಿಗೇ ಸೇವೆಮಾಡು; ಅವರ ಹೆಸರು ಹೇಳಿ ಪ್ರಮಾಣಮಾಡು.


“ಈಜಿಪ್ಟಿನಿಂದ ನಿಮ್ಮನು ಕರೆತಂದ ಸ್ವಾಮಿ ದೇವನು ನಾನು I ತೆರೆಯಿರಿ ನಿಮ್ಮ ಬಾಯನು, ತುಂಬಿಸಿ ತೃಪ್ತಿಪಡಿಸುವೆ ನಾನದನು II


ಇಲ್ಲ ಮನುಜಾ, ನಿನಗೆ ಯಾವುದು ಒಳಿತೆಂದು ಸರ್ವೇಶ್ವರ ಈಗಾಗಲೇ ಸ್ಪಷ್ಟಪಡಿಸಿದ್ದಾರೆ: ನ್ಯಾಯನೀತಿಯ ನಡವಳಿಕೆ, ಕರುಣೆಯಲ್ಲಿ ಅಚಲ ಆಸಕ್ತಿ, ದೇವರ ಮುಂದೆ ನಮ್ರತೆ, ಇಷ್ಟನ್ನೇ ಆ ಸ್ವಾಮಿ ನಿನ್ನಿಂದ ಅಪೇಕ್ಷಿಸುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು