Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 24:15 - ಕನ್ನಡ ಸತ್ಯವೇದವು C.L. Bible (BSI)

15 ಸರ್ವೇಶ್ವರನಿಗೆ ಸೇವೆಸಲ್ಲಿಸಿರಿ. ನಿಮಗೆ ಇದು ಸರಿಕಾಣದಿದ್ದರೆ ಯಾರಿಗೆ ಸೇವೆಸಲ್ಲಿಸಬೇಕೆಂದಿದ್ದೀರಿ? ಇಂದೇ ಆರಿಸಿಕೊಳ್ಳಿ: ನಿಮ್ಮ ಪೂರ್ವಜರು ಯೂಫ್ರಟಿಸ್ ನದಿಯ ಆಚೆಯಲ್ಲಿ ಪೂಜಿಸುತ್ತಿದ್ದ ದೇವತೆಗಳಿಗೋ? ಈ ನಾಡಿನ ಮೂಲನಿವಾಸಿಗಳಾದ ಅಮೋರಿಯರ ದೇವತೆಗಳಿಗೋ? ಹೇಳಿ. ನಾನು ಮತ್ತು ನನ್ನ ಮನೆಯವರು ಮಾತ್ರ ಸರ್ವೇಶ್ವರನಿಗೇ ಸೇವೆ ಸಲ್ಲಿಸುತ್ತೇವೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯೆಹೋವನನ್ನು ಆರಾಧಿಸುವುದು ನಿಮಗೆ ಸರಿಕಾಣದಿದ್ದರೆ ಯಾರನ್ನು ಸೇವಿಸಬೇಕೆಂದಿದ್ದೀರೆಂಬುದನ್ನು? ಈ ಹೊತ್ತೇ ಆರಿಸಿಕೊಳ್ಳಿರಿ: ನಿಮ್ಮ ಪೂರ್ವಿಕರು ಯೂಫ್ರೆಟಿಸ್ ನದಿಯ ಆಚೆಯಲ್ಲಿ ಸೇವಿಸುತ್ತಿದ್ದ ದೇವತೆಗಳೋ ಈ ದೇಶದ ಮೂಲ ನಿವಾಸಿಗಳಾದ ಅಮೋರಿಯರ ದೇವತೆಗಳೋ ಹೇಳಿರಿ. ನಾನೂ, ನನ್ನ ಮನೆಯವರೂ ಯೆಹೋವನನ್ನೇ ಸೇವಿಸುವೆವು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಯೆಹೋವನನ್ನು ಸೇವಿಸುವದು ನಿಮಗೆ ಸರಿಕಾಣದಿದ್ದರೆ ಯಾರನ್ನು ಸೇವಿಸಬೇಕೆಂದಿದ್ದೀರಿ? ಈ ಹೊತ್ತೇ ಆರಿಸಿಕೊಳ್ಳಿರಿ. ನಿಮ್ಮ ಪೂರ್ವಿಕರು [ಯೂಫ್ರೇಟೀಸ್] ನದಿಯ ಆಚೆಯಲ್ಲಿ ಸೇವಿಸುತ್ತಿದ್ದ ದೇವತೆಗಳೋ ಈ ದೇಶದ ಮೂಲನಿವಾಸಿಗಳಾದ ಅಮೋರಿಯರ ದೇವತೆಗಳೋ, ಹೇಳಿರಿ. ನಾನೂ ನನ್ನ ಮನೆಯವರೂ ಯೆಹೋವನನ್ನೇ ಸೇವಿಸುವೆವು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ನೀವು ಯೆಹೋವನ ಸೇವೆಮಾಡಲು ಇಷ್ಟಪಡದಿದ್ದರೆ ಯಾರ ಸೇವೆಯನ್ನು ಮಾಡಬೇಕೆಂದಿದ್ದೀರಿ? ಈ ಹೊತ್ತೇ ಆರಿಸಿಕೊಳ್ಳಿರಿ. ನಿಮ್ಮ ಪೂರ್ವಿಕರು ಯೂಫ್ರೇಟೀಸ್ ನದಿಯ ಆಚೆ ಇದ್ದಾಗ ಪೂಜಿಸುತ್ತಿದ್ದ ದೇವರುಗಳ ಸೇವೆಮಾಡುವಿರೋ ಅಥವಾ ಈ ಪ್ರದೇಶದಲ್ಲಿದ್ದ ಅಮೋರಿಯರ ದೇವತೆಗಳ ಸೇವೆಮಾಡುವಿರೋ ಎಂಬುದನ್ನು ನೀವು ಇಂದು ನಿರ್ಧರಿಸಬೇಕು. ಆಯ್ಕೆ ನಿಮಗೆ ಬಿಟ್ಟಿದ್ದು. ಆದರೆ ನಾನು ಮತ್ತು ನನ್ನ ಕುಟುಂಬದವರು ಯೆಹೋವನನ್ನೇ ಸೇವಿಸುತ್ತೇವೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಯೆಹೋವ ದೇವರನ್ನು ಸೇವಿಸುವುದು ನಿಮಗೆ ಇಷ್ಟವಿಲ್ಲದಿದ್ದರೆ, ಈ ಹೊತ್ತು ನೀವು ಯಾರನ್ನು ಸೇವಿಸಬೇಕೆಂದಿದ್ದೀರಿ? ನಿಮ್ಮ ಪಿತೃಗಳು ಯೂಫ್ರೇಟೀಸ್ ನದಿಯ ಆಚೆ ಸೇವಿಸಿದ ದೇವರುಗಳನ್ನೋ ಇಲ್ಲವೆ ನೀವು ವಾಸವಾಗಿರುವ ಅಮೋರಿಯರ ದೇವರುಗಳನ್ನೋ? ನೀವು ಆಯ್ದುಕೊಳ್ಳಿರಿ. ಆದರೆ ನಾನೂ ನನ್ನ ಮನೆಯವರೂ ಯೆಹೋವ ದೇವರನ್ನೇ ಸೇವಿಸುವೆವು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 24:15
22 ತಿಳಿವುಗಳ ಹೋಲಿಕೆ  

ಎಲೀಯನು ಜನರೆಲ್ಲರ ಬಳಿಗೆ ಹೋಗಿ, “ನೀವು ಎಷ್ಟರವರೆಗೆ ಎರಡು ಮನಸ್ಸುಳ್ಳವರಾಗಿರುವಿರಿ? ಸರ್ವೇಶ್ವರಸ್ವಾಮಿ ನಿಮಗೆ ದೇವರಾಗಿದ್ದರೆ ಅವರನ್ನೇ ಹಿಂಬಾಲಿಸಿರಿ; ಬಾಳನು ದೇವರಾಗಿದ್ದರೆ ಅವನನ್ನೇ ಹಿಂಬಾಲಿಸಿರಿ,” ಎಂದು ಹೇಳಿದನು. ಜನರು ಇದಕ್ಕೆ ಏನೂ ಉತ್ತರಕೊಡದೆ ಸುಮ್ಮನಿರುವುದನ್ನು ಕಂಡು, ಅವನು ಮತ್ತೆ ಅವರಿಗೆ,


“ಎಚ್ಚರಿಕೆಯಿಂದಿರಿ! ನಮ್ಮ ದೇವರಾದ ಸರ್ವೇಶ್ವರನನ್ನು ಬಿಟ್ಟು, ಆ ಜನಾಂಗಗಳ ದೇವರುಗಳನ್ನು ಅವಲಂಬಿಸುವ ಯಾವ ಕುಲವಾಗಲಿ, ಕುಟುಂಬವಾಗಲಿ, ಸ್ತ್ರೀಪುರುಷರಾಗಲಿ ನಿಮ್ಮಲ್ಲಿ ಇರಲೇಬಾರದು; ನಿಮ್ಮಲ್ಲಿ ಯಾವ ವಿಷಲತೆಯ ಬೇರೂ ಇರಬಾರದು.


“ಇಸ್ರಯೇಲ್ ವಂಶದವರೇ, ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಹೋಗಿರಿ, ನಿಮ್ಮ ವಿಗ್ರಹಗಳನ್ನು ಪೂಜಿಸಿರಿ; ಮುಂದಕ್ಕಾದರು ನನ್ನ ಮಾತನ್ನು ಕೇಳಿಯೇ ಕೇಳುವಿರಿ; ಇನ್ನು ಮೇಲಾದರು ನನ್ನ ಪರಿಶುದ್ಧನಾಮವನ್ನು ನಿಮ್ಮ ಬಲಿಗಳಿಂದ ಹಾಗೂ ವಿಗ್ರಹಗಳಿಂದ ನೀವು ಅಪಕೀರ್ತಿಗೆ ಒಳಪಡಿಸಲಾರಿರಿ.


ಬಾರ್ನಬನು ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ಕಂಡು ಸಂತೋಷಪಟ್ಟನು. ಪ್ರಭುವಿಗೆ ದೃಢಮನಸ್ಸಿನಿಂದ ಪ್ರಾಮಾಣಿಕರಾಗಿರುವಂತೆ ಪ್ರೋತ್ಸಾಹಿಸಿದನು.


ಅವರ ದೇವತೆಗಳನ್ನು ನೀವು ನಮಸ್ಕರಿಸಬಾರದು, ಪೂಜಿಸಬಾರದು ಮಾತ್ರವಲ್ಲ ಅವರ ಆಚರಣೆಗಳನ್ನು ಅನುಸರಿಸಲೇಬಾರದು. ಆ ಜನಗಳನ್ನು ನಿರ್ಮೂಲ ಮಾಡಿ ವಿಗ್ರಹಸ್ತಂಭಗಳನ್ನು ನಾಶಮಾಡಬೇಕು.


ಸರ್ವೇಶ್ವರನೆಂಬ ನಾನೇ ನಿಮ್ಮ ದೇವರಾಗಿದ್ದೇನೆಂದೂ ನೀವು ಅಮೋರಿಯರ ಮಧ್ಯೆ ವಾಸಿಸುವಾಗ ಅವರ ದೇವತೆಗಳನ್ನು ಪೂಜಿಸಬಾರದೆಂದೂ ಹೇಳಿದೆ. ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ’.”


ಅವನು ತನ್ನ ಪುತ್ರಪೌತ್ರರಿಗೆ, ‘ನೀವು ನ್ಯಾಯನೀತಿಯನ್ನು ಪಾಲಿಸುತ್ತಾ ಸರ್ವೇಶ್ವರ ಸ್ವಾಮಿಯ ಮಾರ್ಗದಲ್ಲೇ ನಡೆಯಬೇಕು; ಹಾಗೆ ಮಾಡಿದರೆ ವಾಗ್ದಾನ ಮಾಡಿದುದನ್ನೆಲ್ಲ ಈಡೇರಿಸುವರು,’ ಎಂದು ಬೋಧಿಸಲೆಂದೇ ನಾನು ಅವನನ್ನು ಆರಿಸಿಕೊಂಡಿದ್ದೇನೆ".


ಸನ್ಮಾರ್ಗದಲೇ ನಾ ನಡೆಯುವೆನು I ನನಗೆಂದು ನೀಡುವೆ ದರ್ಶನವನು? I ಮನೆಯೊಳಗೂ ಶುದ್ಧಹೃದಯಿ ನಾನು II


ನಡೆದುಕೊಳ್ಳುವೆನು ಶಪಥ ಮಾಡಿರುವಂತೆ I ನಿನ್ನ ನೀತಿವಿಧಿಗಳನು ಪಾಲಿಪೆನು ಅದರಂತೆ II


ಆ ದೇವರುಗಳು ಹತ್ತಿರವಿರುವ ಜನಾಂಗಗಳ ದೇವರುಗಳಾಗಿದ್ದರೂ ದೂರವಾದವರ ದೇವರುಗಳಾಗಿದ್ದರೂ ಭೂಲೋಕದ ಯಾವ ಭಾಗದವರ ದೇವರುಗಳಾಗಿದ್ದರೂ


ನೀವು ಆ ನಾಡಿನ ನಿವಾಸಿಗಳ ಸಂಗಡ ಒಪ್ಪಂದ ಮಾಡಿಕೊಳ್ಳದಂತೆ ಜಾಗರೂಕರಾಗಿರಿ. ಮಾಡಿಕೊಂಡರೆ ಅವರು ತಮ್ಮ ದೇವತೆಗಳನ್ನು ಪೂಜಿಸಿ ಬಲಿಯರ್ಪಿಸುವಾಗ ಬಲಿ ಭೋಜನಕ್ಕೆ ನಿಮ್ಮನ್ನು ಕರೆಯಬಹುದು. ನೀವು ಹೋಗಿ ಅದನ್ನು ಭುಜಿಸುವ ಸಂಭವವುಂಟು.


ಆಗ ಯಕೋಬನು ತನ್ನ ಮನೆಯವರಿಗೂ ಹಾಗು ತನ್ನ ಸಂಗಡ ಇದ್ದ ಎಲ್ಲರಿಗೂ, “ನಿಮ್ಮಲ್ಲಿ ಇರುವ ಅನ್ಯ ದೇವರುಗಳನ್ನು ತೊರೆದುಬಿಡಿ; ನಿಮ್ಮನ್ನೇ ಶುದ್ಧೀಕರಿಸಿಕೊಂಡು ಮಡಿವಸ್ತ್ರಗಳನ್ನು ಹಾಕಿಕೊಳ್ಳಿ; ನಾವು ಬೇತೇಲಿಗೆ ಹೊರಟುಹೋಗೋಣ.


ಅದಕ್ಕೆ ಜನರು, “ಸರ್ವೇಶ್ವರನನ್ನು ಬಿಟ್ಟು ಅನ್ಯದೇವತೆಗಳಿಗೆ ಸೇವೆಸಲ್ಲಿಸುವುದು ನಮ್ಮಿಂದ ದೂರವಿರಲಿ.


ಒಂದು ವೇಳೆ ಬಿಡಿಸದಿದ್ದರೂ ರಾಜರೇ, ಇದು ನಿಮಗೆ ತಿಳಿದಿರಲಿ: ನಾವು ನಿಮ್ಮ ದೇವರುಗಳಿಗೆ ಸೇವೆಮಾಡುವುದಿಲ್ಲ. ನೀವು ಸ್ಥಾಪಿಸಿರುವ ಬಂಗಾರದ ಪ್ರತಿಮೆಯನ್ನು ಆರಾಧಿಸುವುದಿಲ್ಲ,” ಎಂದು ಉತ್ತರಕೊಟ್ಟರು.


ಅನ್ಯಜನಾಂಗಗಳು ತಮ್ಮ ತಮ್ಮ ದೇವರುಗಳ ನಾಮಸ್ಮರಣೆಮಾಡಿ, ಅದರಂತೆ ನಡೆದುಕೊಳ್ಳುತ್ತಾರೆ. ನಾವಾದರೋ ನಮ್ಮ ದೇವರಾದ ಸರ್ವೇಶ್ವರಸ್ವಾಮಿಯ ನಾಮವನ್ನು ಸ್ಮರಿಸಿ ಅದಕ್ಕನುಗುಣವಾಗಿ ಸದಾಕಾಲವೂ ನಡೆದುಕೊಳ್ಳುವೆವು.


ಕೆಟ್ಟ ಕಾರ್ಯವನ್ನು ಮಾಡುವವರು ಬಹು ಮಂದಿ ಇದ್ದಾರೆ. ಆದರೂ ನೀವು ಅವರ ಜೊತೆ ಸೇರಬಾರದು. ಬಹು ಮಂದಿಯ ಮಾತಿಗೆ ಒಪ್ಪಿ ನ್ಯಾಯವನ್ನು ಕೆಡಿಸುವ ಸಾಕ್ಷಿಯನ್ನು ಹೇಳಬಾರದು.


ಆಗ ಬೇರೆ ಕಲ್ಲುಗಳನ್ನು ತರಿಸಿ ಮೊದಲಿದ್ದ ಕಲ್ಲುಗಳ ಸ್ಥಳದಲ್ಲಿ ಹಾಕಿಸಿ ಹೊಸಮಣ್ಣನ್ನು ತರಿಸಿ ಆ ಗೋಡೆಗಳಿಗೆ ಮೆತ್ತಬೇಕು.


ಯೆಬೂಸಿಯ, ಅಮೋರಿಯ, ಗಿರ್ಗಾಷಿಯ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು