Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 24:19 - ಕನ್ನಡ ಸತ್ಯವೇದವು C.L. Bible (BSI)

19 ಆಗ ಯೆಹೋಶುವನು ಅವರಿಗೆ, “ನೀವು ಸರ್ವೇಶ್ವರನಿಗೆ ಸೇವೆಸಲ್ಲಿಸಲು ಶಕ್ತರಲ್ಲ. ಸರ್ವೇಶ್ವರಸ್ವಾಮಿ ಪರಿಶುದ್ಧರು; ತಮಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ದೇವರು; ಅವರು ನಿಮ್ಮ ಪಾಪ, ಅಪರಾಧಗಳನ್ನು ಕ್ಷಮಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆಗ ಯೆಹೋಶುವನು ಅವರಿಗೆ, “ನೀವು ಯೆಹೋವನನ್ನು ಸೇವಿಸಲು ಶಕ್ತರಲ್ಲ. ಯೆಹೋವನು ಪರಿಶುದ್ಧನು; ತನಗೆ ಸಲ್ಲಿಸಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ದೇವರು; ಆತನು ನಿಮ್ಮ ಪಾಪ, ಅಪರಾಧಗಳನ್ನೂ, ಕ್ಷಮಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆಗ ಯೆಹೋಶುವನು ಅವರಿಗೆ - ನೀವು ಯೆಹೋವನನ್ನು ಸೇವಿಸಲಾರಿರಿ. ಆತನು ಪರಿಶುದ್ಧನೂ ತನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದವನೂ ಆಗಿರುವ ದೇವರು. ಆತನು ನಿಮ್ಮ ದ್ರೋಹಾಪರಾಧಗಳನ್ನು ಕ್ಷವಿುಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆಗ ಯೆಹೋಶುವನು ಅವರಿಗೆ, “ಅದು ನಿಜವಲ್ಲ, ನೀವು ಯೆಹೋವನ ಸೇವೆಯನ್ನು ಮುಂದುವರೆಸಿಕೊಂಡು ಹೋಗಲಾರಿರಿ. ನಮ್ಮ ದೇವರಾದ ಯೆಹೋವನು ಪವಿತ್ರನಾಗಿದ್ದಾನೆ; ತನ್ನ ಜನರು ಅನ್ಯದೇವರುಗಳನ್ನು ಪೂಜಿಸುವುದನ್ನು ಆತನು ದ್ವೇಷಿಸುತ್ತಾನೆ. ಒಂದುವೇಳೆ ನೀವೇನಾದರೂ ಆತನ ವಿರುದ್ಧವಾಗಿ ತಿರುಗಿಕೊಂಡರೆ ಆತನು ನಿಮ್ಮನ್ನು ಕ್ಷಮಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅದಕ್ಕೆ ಯೆಹೋಶುವನು ಜನರಿಗೆ, “ನೀವು ಯೆಹೋವ ದೇವರನ್ನು ಸೇವಿಸಲಾರಿರಿ. ಏಕೆಂದರೆ ಅವರು ಪರಿಶುದ್ಧ ದೇವರು, ತಮಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ತೀಕ್ಷ್ಣ ದೇವರು. ಅವರು ನಿಮ್ಮ ದ್ರೋಹಗಳನ್ನೂ ಪಾಪಗಳನ್ನೂ ಮನ್ನಿಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 24:19
30 ತಿಳಿವುಗಳ ಹೋಲಿಕೆ  

ಸೇನಾಧೀಶ್ವರ ಸ್ವಾಮಿಯಾದರೋ ನ್ಯಾಯತೀರಿಸುವುದರಲ್ಲಿ ಸರ್ವಶ್ರೇಷ್ಠರು. ಧರ್ಮಪಾಲನೆಯಲ್ಲಿ ಪರಮಪರಿಶುದ್ಧರು ಎಂದು ಕಾಣಿಸಿಕೊಳ್ಳುತ್ತಾರೆ.


ನೀವು ಆತನಲ್ಲಿ ಲಕ್ಷ್ಯವಿಟ್ಟು ಮಾತಿಗೆ ಕಿವಿಗೊಡಬೇಕು. ಆತನಿಗೆ ಅವಿಧೇಯರಾಗಿ ಇರಬಾರದು. ಏಕೆಂದರೆ ಆತ ಬರುವುದು ನನ್ನ ಹೆಸರಿನಲ್ಲಿ. ನೀವು ಅವಿಧೇಯರಾದರೆ ಆತ ನಿಮ್ಮನ್ನು ಕ್ಷಮಿಸಲಾರನು.


ಘನಪಡಿಸಿರೆಮ್ಮ ಸ್ವಾಮಿ ದೇವನನು I ಶ್ರೀಪರ್ವತದಲಿ ವಂದಿಸಿ ಆತನನು I ಪರಮಪವಿತ್ರನು ಆ ನಮ್ಮ ದೇವನು II


ಪರಮ ಪಾವನನು ನಮ್ಮೀ ಸ್ವಾಮಿ ದೇವನು I ಹೊಗಳಿರಿ, ಆತನ ಪಾದಪೀಠಕೆ ಅಡ್ಡಬೀಳಿರಿ ನೀವೆಲ್ಲರು II


“ನಿಮ್ಮ ದೇವರಾದ ಸರ್ವೇಶ್ವರನೆಂಬ ನಾನು ಪರಿಶುದ್ಧ ನಾಗಿರುವಂತೆ ನೀವು ಕೂಡ ಪರಿಶುದ್ಧ ರಾಗಿರಬೇಕು .


ಅವುಗಳಿಗೆ ಅಡ್ಡಬೀಳಬೇಡ, ಅವುಗಳನ್ನು ಆರಾಧಿಸಬೇಡ. ಏಕೆಂದರೆ ನಾನೇ ನಿನ್ನ ದೇವರಾದ ಸರ್ವೇಶ್ವರ. ನನಗೆ ಸಲ್ಲತಕ್ಕ ಗೌರವವನ್ನು ನಾನು ಮತ್ತೊಬ್ಬರಿಗೆ ಸಲ್ಲಗೊಡಿಸುವುದಿಲ್ಲ. ನನ್ನನ್ನು ದ್ವೇಷಿಸುವವರನ್ನು ದಂಡಿಸುತ್ತೇನೆ; ಅವರ ದೋಷಫಲವನ್ನು ಅವರ ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುತ್ತೇನೆ.


“ಪರಮಪಾವನ ದೇವರಾದ ಸರ್ವೆಶ್ವರನ ಮುಂದೆ ಯಾರು ತಾನೆ ನಿಂತಾರು? ಇನ್ನು ಮುಂದೆ ಇವರು ಹೋಗತಕ್ಕ ಸ್ಥಳ ಯಾವುದು?” ಎಂದು ಮಾತಾಡಿಕೊಂಡರು ಜನರು.


ನೀವು ಬೇರೆ ದೇವರ ಮುಂದೆ ಅಡ್ಡಬೀಳಬಾರದು; ಏಕೆಂದರೆ ಸ್ವಾಭಿಮಾನಿಯೆಂಬ ಹೆಸರುಳ್ಳ ಸರ್ವೇಶ್ವರನಾದ ನಾನು ನನಗೆ ಸಲ್ಲಬೇಕಾದ ಅಭಿಮಾನವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸುವುದಿಲ್ಲ.


“ಯಾರೂ ಇಬ್ಬರು ಯಜಮಾನರಿಗೆ ಜೀತಮಾಡಲಾಗದು. ಅವನು ಒಬ್ಬನನ್ನು ದ್ವೇಷಿಸಿ, ಇನ್ನೊಬ್ಬನನ್ನು ಪ್ರೀತಿಸುತ್ತಾನೆ; ಅಥವಾ, ಒಬ್ಬನೊಡನೆ ಹೊಂದಿಕೊಂಡು ಇನ್ನೊಬ್ಬನನ್ನು ತಾತ್ಸಾರ ಮಾಡುತ್ತಾನೆ. ದೇವರಿಗೂ ದ್ರವ್ಯಕ್ಕೂ ಒಟ್ಟಿಗೆ ಸೇವೆಮಾಡಲು ನಿಮ್ಮಿಂದಾಗದು.”


ಪರಮಪಾವನವಾಗಿರುವ ಇಸ್ರಯೇಲಿನ ಸರ್ವೇಶ್ವರ ಸ್ವಾಮಿಯಾದ ನಾನು ನಿಮಗೆ ಹೇಳುವುದೇನೆಂದರೆ : “ನೀವು ಪಶ್ಚಾತ್ತಾಪಪಟ್ಟು ನನಗೆ ಅಭಿಮುಖವಾಗಿ ನೆಮ್ಮದಿಯಿಂದಿದ್ದರೆ ಉದ್ಧಾರವಾಗುವಿರಿ. ಶಾಂತಿಸಮಾಧಾನ ಮತ್ತು ಭಕ್ತಿಭರವಸೆಯಲ್ಲೇ ಶಕ್ತಿಯನ್ನು ಪಡೆಯುವಿರಿ.” ಆದರೆ ನೀವು ಒಪ್ಪಿಕೊಂಡಿಲ್ಲ.


ನಮಗೆ ಅಡ್ಡ ಬರಬೇಡಿ. ನಮ್ಮ ದಾರಿಯಿಂದ ದೂರವಿರಿ. ಇಸ್ರಯೇಲರ ಪರಮಪಾವನ ಸ್ವಾಮಿಯ ವಿಷಯವನ್ನು ನಮ್ಮ ಮುಂದೆ ಎತ್ತಬೇಡಿ,” ಎಂದು ಹೇಳುತ್ತಾರೆ.


ಆದರೂ ಅವರು ದೇವಸಂದೇಶಕರನ್ನು ಗೇಲಿಮಾಡಿದರು. ದೇವರ ಮಾತುಗಳನ್ನು ತುಚ್ಛೀಕರಿಸಿ ಅವರ ಪ್ರವಾದಿಗಳನ್ನು ಹೀಯಾಳಿಸಿದರು. ಆದ್ದರಿಂದ ದೇವಕೋಪಾಗ್ನಿ ಅವರ ಪ್ರಜೆಯ ಮೇಲೆ ಉರಿಯತೊಡಗಿತು. ಅದರ ತಾಪ ಆರಿಹೋಗಲೇ ಇಲ್ಲ.


ಏಲಿಯ ಮನೆಯವರ ಅಪರಾಧವು ಎಂದಿಗೂ ಬಲಿಯಿಂದಾಗಲಿ ನೈವೇದ್ಯಗಳಿಂದಾಗಲಿ ಪರಿಹಾರವಾಗುವುದಿಲ್ಲವೆಂದು ಪ್ರಮಾಣಮಾಡಿದ್ದೇನೆ,” ಎಂದು ಹೇಳಿದರು.


ಆಗ ನವೊಮಿ ರೂತಳಿಗೆ: “ನೋಡು, ನಿನ್ನ ಓರಗಿತ್ತಿಯು ತನ್ನ ಜನಾಂಗದವರ ಬಳಿಗೂ ತನ್ನ ಕುಲದೇವರ ಬಳಿಗೂ ಹಿಂದಿರುಗಿ ಹೋಗಿದ್ದಾಳೆ. ನೀನೂ ಅವಳಂತೆಯೇ ಹೋಗಿಬಿಡು,” ಎಂದು ಒತ್ತಾಯಪಡಿಸಿದಳು.


ಆಗ ಯೆಹೋಶುವ, “ಹಾಗಾದರೆ ನಿಮ್ಮಲ್ಲಿರುವ ಅನ್ಯದೇವತೆಗಳನ್ನು ತೊರೆದುಬಿಟ್ಟು ಇಸ್ರಯೇಲಿನ ದೇವರಾದ ಸರ್ವೇಶ್ವರನ ಕಡೆಗೆ ನಿಮ್ಮ ಹೃನ್ಮನಗಳನ್ನು ತಿರುಗಿಸಿಕೊಳ್ಳಿ,” ಎಂದನು.


ಸರ್ವೇಶ್ವರನೆಂಬ ನಾನು ಪರಿಶುದ್ಧನಾಗಿದ್ದೇನೆ, ಮತ್ತು ನೀವು ನನ್ನ ಜನರಾಗುವಂತೆ ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ್ದೇನೆ; ಆದ್ದರಿಂದ ನೀವು ನನಗೆ ಮೀಸಲಾಗಿರಬೇಕು.


ಆಗ ಮೋಶೆ ಆರೋನನಿಗೆ: “’ನನ್ನ ಬಳಿಯಿರುವವರ ಮುಖಾಂತರವೆ ನನ್ನ ಪರಿಶುದ್ಧತೆಯನ್ನು ತೋರ್ಪಡಿಸುವೆ ಜನರೆಲ್ಲರ ಸಮ್ಮುಖದಲೆ ನನ್ನ ಮಹಿಮೆಯನು ಶೃತಪಡಿಸುವೆ, ಎಂಬ ಸರ್ವೇಶ್ವರನ ನುಡಿಗೆ ಇದೊಂದು ದೃಷ್ಟಾಂತವೇ ಸರಿ,” ಎಂದನು. ಅದಕ್ಕೆ ಆರೋನನು ಮೌನವಾಗಿದ್ದನು.


ಕೇಡನ್ನು ನೋಡಲಾರದಷ್ಟು ನಿಷ್ಕಳಂಕ ನಿಮ್ಮ ಕಣ್ಣು. ಕೆಡುಕನ್ನು ಸಹಿಸಲಾಗದಸ್ಟು ಪವಿತ್ರರು ನೀವು. ಇಂತಿರಲು ಕೆಡುಕನ್ನು ನೋಡಿಕೊಂಡಿರುವಿರೇಕೆ? ದುಷ್ಟನು ಶಿಷ್ಟನಾದವನನ್ನು ಕಬಳಿಸುತ್ತಿರುವುದನ್ನು ನೋಡಿ ಸುಮ್ಮನಿರುವಿರೇಕೆ?


ಮರಗಳ ರೆಂಬೆಕೊಂಬೆಗಳು ಒಣಗಿ ಮುರಿದುಹೋಗಿವೆ. ಹೆಂಗಸರ ಕೈಗೆ ಒಲೆಪಾಲಾಗುವ ಸೌದೆಯಾಗಿವೆ. ಈ ಪ್ರಜೆಗಳು ಮಂದಮತಿಗಳೇ ಸರಿ. ಈ ಕಾರಣ, ಸೃಷ್ಟಿಕರ್ತನು ಇವರನ್ನು ಕರುಣಿಸನು. ನಿರ್ಮಿಸಿದಾತನು ಇವರಿಗೆ ದಯೆ ತೋರಿಸನು.


ಸಾವಿರಾರು ತಲೆಗಳವರೆಗೂ ಅಚಲಪ್ರೀತಿ ತೋರುವವನು, ದೋಷಾಪರಾಧಗಳನ್ನೂ ಪಾಪಗಳನ್ನೂ ಕ್ಷಮಿಸುವವನು; ಆದರೂ ತಪ್ಪಿತಸ್ಥರನ್ನು ಶಿಕ್ಷಿಸದೆ ಬಿಡದವನು. ಹೆತ್ತವರ ದೋಷಪರಿಣಾಮಗಳನ್ನು ಮಕ್ಕಳ ಮೇಲೆ ಮೂರುನಾಲ್ಕು ತಲೆಗಳವರೆಗೆ ಬರಮಾಡುವವರು.


ನಾನು ನಿಮ್ಮ ದೇವರಾದ ಸರ್ವೇಶ್ವರನಾಗಿರುವ ಕಾರಣ ನೀವು ನನ್ನವರಾಗಿ ಪರಿಶುದ್ಧರಾಗಿರಬೇಕು.


ಈ ನಾಡಿನ ನಿವಾಸಿಗಳಾಗಿದ್ದ ಅಮೋರಿಯರು ಮೊದಲಾದ ಎಲ್ಲಾ ಜನಾಂಗಗಳನ್ನು ಇಲ್ಲಿಂದ ಹೊರಡಿಸಿಬಿಟ್ಟವರು ಅವರೇ. ಆದುದರಿಂದ ನಾವು ಕೂಡ ಸರ್ವೇಶ್ವರನಿಗೆ ಸೇವೆಸಲ್ಲಿಸುತ್ತೇವೆ. ಅವರೇ ನಮ್ಮ ದೇವರು,” ಎಂದು ಉತ್ತರಕೊಟ್ಟರು.


ಆತ ಪರಮ ಪವಿತ್ರನು, ಸ್ತುತಿಸಲಿ ಅವರೆಲ್ಲರು I ಆತ ಘನಗಂಭೀರನು, ಸ್ತುತಿಸಲಿ ಆತನ ಶ್ರೀನಾಮವನು II


ಸರ್ವೇಶ್ವರ ಸ್ವಗೌರವವನು ಕಾಪಾಡಿಕೊಳ್ಳುವ ದೇವರು ಮುಯ್ಯಿತೀರಿಸುವ, ಹೌದು, ಕಡುಕೋಪದಿಂದ ಮುಯ್ಯಿತೀರಿಸುವ ದೇವರು. ಸರ್ವೇಶ್ವರ ಮುಯ್ಯಿತೀರಿಸುತ್ತಾರೆ ತನ್ನ ವಿರೋಧಿಗಳಿಗೆ ದೀರ್ಘರೋಷವಿಡುತ್ತಾರೆ, ತಮ್ಮ ಶತ್ರುಗಳ ಮೇಲೆ.


ಏಕೆಂದರೆ ನಾನು ನಿಮ್ಮ ದೇವರಾದ ಸರ್ವೇಶ್ವರ; ನೀವು ದೇವಜನರಿಗೆ ತಕ್ಕಂತಿರಬೇಕು. ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು. ನೆಲದ ಮೇಲೆ ಹರಿದಾಡುವ ಯಾವ ಜಂತುವಿನಿಂದಾದರೂ ನೀವು ನಿಮ್ಮನ್ನು ಅಶುದ್ಧಮಾಡಿಕೊಳ್ಳಬಾರದು.


ನಿಮ್ಮ ದೇವರಾಗಿರುವುದಕ್ಕೆ ನಿಮ್ಮನ್ನು ಈಜಿಪ್ಟಿನಿಂದ ಬರಮಾಡಿದ ಸರ್ವೇಶ್ವರ ನಾನು; ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು.


ಮಾನವನು ತಗ್ಗಿಹೋಗಿದ್ದಾನೆ, ಅಧೋಗತಿಗೆ ಇಳಿದಿದ್ದಾನೆ. ಸ್ವಾಮೀ, ಅವನಿಗೆ ಕ್ಷಮೆ ನೀಡಬೇಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು