ಯೆಹೋಶುವ 24:2 - ಕನ್ನಡ ಸತ್ಯವೇದವು C.L. Bible (BSI)2 ಯೆಹೋಶುವ ಅವರೆಲ್ಲರನ್ನು ಉದ್ದೇಶಿಸಿ, “ನಿಮ್ಮ ದೇವರಾದ ಸರ್ವೇಶ್ವರಸ್ವಾಮಿ ಹೇಳುವುದನ್ನು ಗಮನಿಸಿರಿ: ‘ಅಬ್ರಹಾಮ್, ನಾಹೊರ್ ಎಂಬವರ ತಂದೆಯಾದ ತೆರಹ ಮೊದಲಾದ ನಿಮ್ಮ ಮೂಲ ಪುರುಷರು ಪೂರ್ವದಲ್ಲಿ ಯೂಫ್ರೆಟಿಸ್ ನದಿಯ ಆಚೆ ಇದ್ದರು. ಅನ್ಯದೇವತೆಗಳನ್ನು ಪೂಜಿಸುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಯೆಹೋಶುವನು ಅವರಿಗೆ, “ನಿಮ್ಮ ದೇವರಾದ ಯೆಹೋವನು ಹೇಳುವುದೇನೆಂದರೆ, ಅಬ್ರಹಾಮ, ನಾಹೋರ ಎಂಬುವವರ ತಂದೆಯಾದ ತೆರಹ, ಮೊದಲಾದ ನಿಮ್ಮ ಮೂಲ ಪುರುಷರು ಪೂರ್ವದಲ್ಲಿ ಯೂಫ್ರೆಟಿಸ್ ನದಿಯ ಆಚೆಯಲ್ಲಿದ್ದ ಅನ್ಯದೇವತೆಗಳನ್ನು ಪೂಜಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಯೆಹೋಶುವನು ಅವರೆಲ್ಲರಿಗೆ - ನಿಮ್ಮ ದೇವರಾದ ಯೆಹೋವನು ಹೇಳುವದೇನಂದರೆ - ಅಬ್ರಹಾಮ್, ನಾಹೋರ್ ಎಂಬವರ ತಂದೆಯಾದ ತೆರಹ ಮೊದಲಾದ ನಿಮ್ಮ ಮೂಲ ಪುರುಷರು ಪೂರ್ವದಲ್ಲಿ [ಯೂಫ್ರೇಟೀಸ್] ಹೊಳೆಯ ಆಚೆಯಲ್ಲಿದ್ದು ಅನ್ಯದೇವತೆಗಳನ್ನು ಪೂಜಿಸುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆಗ ಯೆಹೋಶುವನು ಅವರೆಲ್ಲರಿಗೆ, “ಇಸ್ರೇಲಿನ ದೇವರಾದ ಯೆಹೋವನು ನಿಮಗೆ ಹೇಳುವುದನ್ನು ನಾನು ನಿಮಗೆ ತಿಳಿಸುತ್ತಿದ್ದೇನೆ: ‘ಬಹಳ ಹಿಂದಿನ ಕಾಲದಲ್ಲಿ ನಿಮ್ಮ ಪೂರ್ವಿಕರು ಯೂಫ್ರೇಟೀಸ್ ನದಿಯ ಆಚೆಯ ದಡದಲ್ಲಿದ್ದರು, ನಾನು ಅಬ್ರಹಾಮ್ ಮತ್ತು ನಾಹೋರ್ ಎಂಬವರ ತಂದೆಯಾದ “ತೆರಹ” ಮೊದಲಾದ ಜನರ ಬಗ್ಗೆ ಮಾತನಾಡುತ್ತಿದ್ದೇನೆ. ಆ ಸಮಯದಲ್ಲಿ ಅವರು ಬೇರೆ ದೇವರುಗಳನ್ನು ಪೂಜಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಯೆಹೋಶುವನು ಅವರೆಲ್ಲರಿಗೂ, “ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ: ‘ಪೂರ್ವದಲ್ಲಿ ನಿಮ್ಮ ಮೂಲ ಪುರುಷರಾದ ಅಬ್ರಹಾಮನಿಗೂ ನಾಹೋರನಿಗೂ ತಂದೆಯಾದ ತೆರಹನು ಯೂಫ್ರೇಟೀಸ್ ನದಿಯ ಆಚೆ ವಾಸವಾಗಿದ್ದಾಗ ಅವರೆಲ್ಲರೂ ಅನ್ಯದೇವರುಗಳನ್ನು ಆರಾಧಿಸುತ್ತಿದ್ದರು. ಅಧ್ಯಾಯವನ್ನು ನೋಡಿ |