Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 24:26 - ಕನ್ನಡ ಸತ್ಯವೇದವು C.L. Bible (BSI)

26 ಇದು ಮಾತ್ರವಲ್ಲ, ಈ ಎಲ್ಲಾ ಮಾತುಕತೆಗಳನ್ನು ದೇವರ ಧರ್ಮಶಾಸ್ತ್ರಗ್ರಂಥದಲ್ಲಿ ಬರೆದಿಟ್ಟನು. ಒಂದು ದೊಡ್ಡ ಕಲ್ಲನ್ನು ಸರ್ವೇಶ್ವರನ ಆಲಯದ ಹತ್ತಿರದಲ್ಲೇ ಇದ್ದ ಓಕ್ ವೃಕ್ಷದ ಅಡಿಯಲ್ಲಿ ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಇದಲ್ಲದೆ, ಅವನು ಈ ಎಲ್ಲಾ ಮಾತುಗಳನ್ನು ದೇವರ ಧರ್ಮಶಾಸ್ತ್ರದ ಗ್ರಂಥದಲ್ಲಿ ಬರೆದು, ಒಂದು ದೊಡ್ಡ ಕಲ್ಲನ್ನು ತಂದು ಯೆಹೋವನ ಆಲಯದ ಬಳಿಯಲ್ಲಿ ಇದ್ದ ಅಲ್ಲಾವೃಕ್ಷದ ಅಡಿಯಲ್ಲಿ ನಿಲ್ಲಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಇದಲ್ಲದೆ ಅವನು ಈ ಎಲ್ಲಾ ಮಾತುಗಳನ್ನು ದೇವರ ಧರ್ಮಶಾಸ್ತ್ರಗ್ರಂಥದಲ್ಲಿ ಬರೆದು ಒಂದು ದೊಡ್ಡ ಕಲ್ಲನ್ನು ತಂದು ಯೆಹೋವನ ಆಲಯದ ಬಳಿಯಲ್ಲೇ ಇದ್ದ ಅಲ್ಲಾವೃಕ್ಷದ ಅಡಿಯಲ್ಲಿ ನಿಲ್ಲಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಯೆಹೋಶುವನು ಇವುಗಳನ್ನು ದೇವರ ಧರ್ಮಶಾಸ್ತ್ರ ಗ್ರಂಥದಲ್ಲಿ ಬರೆದನು. ಯೆಹೋಶುವನು ಅಲ್ಲಿದ್ದ ಒಂದು ದೊಡ್ಡ ಕಲ್ಲನ್ನು ತೆಗೆದುಕೊಂಡು ಈ ಒಡಂಬಡಿಕೆಗೆ ಸಾಕ್ಷಿಯಾಗಿ ಅದನ್ನು ಯೆಹೋವನ ಪವಿತ್ರಗುಡಾರದ ಹತ್ತಿರವಿದ್ದ ಓಕ್ ಮರದ ಕೆಳಗೆ ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಈ ಮಾತುಗಳನ್ನು ಯೆಹೋಶುವನು ದೇವರ ನಿಯಮದ ಗ್ರಂಥದಲ್ಲಿ ಬರೆದು, ಒಂದು ದೊಡ್ಡ ಕಲ್ಲನ್ನು ಎತ್ತಿ, ಅದನ್ನು ಯೆಹೋವ ದೇವರ ಪರಿಶುದ್ಧಸ್ಥಳದ ಬಳಿಯಲ್ಲಿ ಇದ್ದ ಏಲಾ ಮರದ ಕೆಳಗೆ ನೆಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 24:26
10 ತಿಳಿವುಗಳ ಹೋಲಿಕೆ  

ತರುವಾಯ ಎಲ್ಲಾ ಶೆಕೆಮಿನವರೂ ಹಾಗು ಮಿಲ್ಲೋ ಕೋಟೆಯವರೂ ಶೆಕೆಮಿನ ಬಳಿಯಲ್ಲಿ ಸ್ಮಾರಕಸ್ತಂಭವಿರುವ ಓಕ್ ಮರದ ಹತ್ತಿರ ಕೂಡಿಬಂದು ಅಬೀಮೆಲೆಕನನ್ನು ತಮ್ಮ ಅರಸನನ್ನಾಗಿ ಮಾಡಿಕೊಂಡರು.


ಅಂತೆಯೆ ಅವರು ತಮ್ಮಲ್ಲಿದ್ದ ಎಲ್ಲ ಅನ್ಯದೇವರುಗಳನ್ನೂ ತಮ್ಮ ಕಿವಿಗಳಲ್ಲಿದ್ದ ಮುರುವುಗಳನ್ನೂ ಯಕೋಬನಿಗೆ ಒಪ್ಪಿಸಿಬಿಟ್ಟರು. ಅವನು ಅವುಗಳನ್ನು ಶೆಕೆಮ್ ಪಟ್ಟಣದ ಹತ್ತಿರ ಇದ್ದ ಒಂದು ಓಕ್ ಮರದ ಬುಡದಡಿಯಲ್ಲಿ ಹೂಳಿಬಿಟ್ಟನು.


ಮೋಶೆ ಸರ್ವೇಶ್ವರನ ಆಜ್ಞೆಗಳನ್ನೆಲ್ಲ ಬರೆದಿಟ್ಟನು. ಬೆಳಿಗ್ಗೆ ಎದ್ದು ಆ ಬೆಟ್ಟದಡಿಯಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು. ಇಸ್ರಯೇಲರ ಹನ್ನೆರಡು ಕುಲಗಳಿಗೆ ಹನ್ನೆರಡು ಕಲ್ಲಿನ ಕಂಬಗಳನ್ನು ಸ್ಥಾಪನೆ ಮಾಡಿಸಿದನು.


ಅಲ್ಲಿರುವಾಗ ರೆಬೆಕ್ಕಳ ದಾದಿ ದೆಬೋರಳು ಸತ್ತುಹೋದಳು. ಆಕೆಯನ್ನು ಬೇತೇಲಿನ ಕಣಿವೆಯಲ್ಲಿರುವ ಮತ್ತೊಂದು ಓಕ್ ಮರದ ಬುಡದಲ್ಲಿ ಸಮಾಧಿಮಾಡಿ ಅದಕ್ಕೆ ‘ಅಲ್ಲೋನ್ ಬಾಕೂತ್’ ಎಂದು ಹೆಸರಿಟ್ಟರು.


ಆಗ ಯಕೋಬನು ಒಂದು ಕಲ್ಲನ್ನು ತೆಗೆದುಕೊಂಡು ಸ್ಮಾರಕಸ್ತಂಭವಾಗಿ ನಿಲ್ಲಿಸಿದನು.


ಅನಂತರ ಸಮುವೇಲನು ಮಿಚ್ಪೆಗೂ ಶೇನಿಗೂ ಮಧ್ಯದಲ್ಲಿ ಒಂದು ಕಲ್ಲನ್ನು ನಿಲ್ಲಿಸಿ, “ಸರ್ವೇಶ್ವರ ಇಲ್ಲಿಯವರೆಗೆ ನಮಗೆ ಸಹಾಯ ಮಾಡಿದರು,” ಎಂದು ಹೇಳಿ ಅದಕ್ಕೆ, ‘ಎಬನೆಜೆರ್’ ಎಂದು ಹೆಸರಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು