ಯೆಹೋಶುವ 24:33 - ಕನ್ನಡ ಸತ್ಯವೇದವು C.L. Bible (BSI)33 ಆರೋನನ ಮಗ ಎಲ್ಲಾಜಾರನೂ ಮರಣಹೊಂದಿದನು. ಅವನ ಶವವನ್ನು ಎಫ್ರಯಿಮ್ ಮಲೆನಾಡಿನಲ್ಲಿ ಅವನ ಮಗ ಫೀನೆಹಾಸನ ಪಾಲಿಗೆ ಬಂದ ಗುಡ್ಡದಲ್ಲಿ ಸಮಾಧಿಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಆರೋನನ ಮಗನಾದ ಎಲಿಯಾಜರನು ಮರಣ ಹೊಂದಿದನು. ಅವನ ಶವವನ್ನು ಎಫ್ರಾಯೀಮ್ ಪರ್ವತ ಪ್ರಾಂತ್ಯದಲ್ಲಿ ಅವನ ಮಗನಾದ ಫೀನೆಹಾಸನ ಪಾಲಿಗೆ ಬಂದ ಗುಡ್ಡದಲ್ಲಿ ಸಮಾಧಿಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಆರೋನನ ಮಗನಾದ ಎಲ್ಲಾಜಾರನೂ ಮರಣ ಹೊಂದಿದನು. ಅವನ ಶವವನ್ನು ಎಫ್ರಾಯೀಮ್ ಪರ್ವತಪ್ರಾಂತದಲ್ಲಿ ಅವನ ಮಗನಾದ ಫೀನೆಹಾಸನ ಪಾಲಿಗೆ ಬಂದ ಗುಡ್ಡದಲ್ಲಿ ಸಮಾಧಿಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಆರೋನನ ಮಗನಾದ ಎಲ್ಲಾಜಾರನು ಮರಣಹೊಂದಿದನು. ಗಿಬೇತ್‌ನಲ್ಲಿ ಎಲ್ಲಾಜಾರನನ್ನು ಸಮಾಧಿ ಮಾಡಲಾಯಿತು. ಗಿಬೇತ್ ಊರು ಎಫ್ರಾಯೀಮ್ ಪರ್ವತ ಪ್ರಾಂತ್ಯದಲ್ಲಿತ್ತು. ಆ ಊರನ್ನು ಎಲ್ಲಾಜಾರನ ಮಗನಾದ ಫೀನೆಹಾಸನಿಗೆ ಕೊಡಲಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಆರೋನನ ಮಗ ಎಲಿಯಾಜರನೂ ಮರಣಹೊಂದಿದನು. ಅವನನ್ನು ಅವನ ಮಗ ಫೀನೆಹಾಸನಿಗೆ ಎಫ್ರಾಯೀಮ್ ಬೆಟ್ಟದ ದೇಶದಲ್ಲಿ ಕೊಡಲಾದ ಗಿಬೆಯದಲ್ಲಿ ಸಮಾಧಿಮಾಡಿದರು. ಅಧ್ಯಾಯವನ್ನು ನೋಡಿ |
ನಾವು ಬಂದಿರುವ ಸಂಗತಿಯೇ ಬೇರೆ; ಎಫ್ರಯಿಮ್ ಪರ್ವತ ಪ್ರದೇಶದ ಬಿಕ್ರೀಯ ಮಗನಾದ ಶೆಬನೆಂಬವನು ಅರಸ ದಾವೀದನಿಗೆ ವಿರೋಧವಾಗಿ ಕೈಯೆತ್ತಿದ್ದಾನೆ. ಅವನನ್ನು ಒಪ್ಪಿಸಿಬಿಡಿ; ನಾನು ಊರನ್ನು ಬಿಟ್ಟು ಹೋಗುತ್ತೇನೆ,” ಎಂದು ಹೇಳಿದನು. ಅದಕ್ಕೆ ಆ ಸ್ತ್ರೀ, “ನೋಡಿ, ಈಗಲೇ ಅವನ ತಲೆಯನ್ನು ಗೋಡೆಯ ಕಿಂಡಿಯಿಂದ ನಿಮ್ಮ ಕಡೆಗೆ ಎಸೆಯಲಾಗುವುದು,” ಎಂದು ಉತ್ತರಕೊಟ್ಟು ತನ್ನ ಜನರ ಬಳಿಗೆ ಹೋಗಿ ಅವರಿಗೆ ವಿವೇಕದಿಂದ ಈ ಸಂಗತಿಯನ್ನು ತಿಳಿಸಿದಳು.