ಯೆಹೋಶುವ 24:8 - ಕನ್ನಡ ಸತ್ಯವೇದವು C.L. Bible (BSI)8 ‘ನೀವು ದೀರ್ಘಕಾಲ ಮರುಭೂಮಿಯಲ್ಲಿದ್ದಿರಿ. ಅನಂತರ ನಿಮ್ಮನ್ನು ಜೋರ್ಡನಿನ ಆಚೆ ಅಮೋರಿಯರ ನಾಡಿಗೆ ಕರೆತಂದೆ. ನಿಮ್ಮೊಡನೆ ಯುದ್ಧಕ್ಕೆ ಬಂದ ಅವರನ್ನು ನಿಮ್ಮ ಕೈವಶಮಾಡಿದೆ. ನೀವು ಅವರ ನಾಡನ್ನು ಸ್ವತಂತ್ರಿಸಿಕೊಂಡಿರಿ. ಅವರನ್ನು ನಿಮ್ಮೆದುರಿನಲ್ಲೇ ನಾಶಮಾಡಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನೀವು ಬಹು ಕಾಲದವರೆಗೆ ಅರಣ್ಯದಲ್ಲಿದ್ದ ನಂತರ ನಿಮ್ಮನ್ನು ಯೊರ್ದನಿನ ಆಚೆಯಲ್ಲಿ ಅಮೋರಿಯರ ದೇಶಕ್ಕೆ ಕರೆತಂದೆನು. ನಿಮ್ಮೊಡನೆ ಯುದ್ಧಕ್ಕೆ ಬಂದ ಅವರನ್ನು ನಿಮ್ಮ ಕೈಗೆ ಕೊಟ್ಟುಬಿಟ್ಟೆನು. ನೀವು ಅವರ ದೇಶವನ್ನು ಸ್ವಾಧೀನಮಾಡಿಕೊಂಡಿರಿ. ಅವರನ್ನು ನಿಮ್ಮೆದುರಿನಲ್ಲೇ ಸಂಹರಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನೀವು ಬಹುಕಾಲದವರೆಗೆ ಅರಣ್ಯದಲ್ಲಿದ್ದನಂತರ ನಿಮ್ಮನ್ನು ಯೊರ್ದನಿನ ಆಚೆಯಲ್ಲಿ ಅಮೋರಿಯರ ದೇಶಕ್ಕೆ ಕರತಂದೆನು. ನಿಮ್ಮೊಡನೆ ಯುದ್ಧಕ್ಕೆ ಬಂದ ಅವರನ್ನು ನಿಮ್ಮ ಕೈಗೆ ಕೊಟ್ಟುಬಿಟ್ಟೆನು. ನೀವು ಅವರ ದೇಶವನ್ನು ಸ್ವತಂತ್ರಿಸಿಕೊಂಡಿರಿ. ಅವರನ್ನು ನಿಮ್ಮೆದುರಿನಲ್ಲಿ ಸಂಹರಿಸಿದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆಗ ನಾನು ನಿಮ್ಮನ್ನು ಜೋರ್ಡನ್ ನದಿಯ ಪೂರ್ವದಲ್ಲಿರುವ ಅಮೋರಿಯರ ಪ್ರದೇಶಕ್ಕೆ ಕರೆತಂದೆನು. ಆ ಜನರು ನಿಮ್ಮೊಂದಿಗೆ ಯುದ್ಧಮಾಡಿದರು. ಆದರೆ ನೀವು ಅವರನ್ನು ಸೋಲಿಸುವಂತೆ ನಾನು ಮಾಡಿದೆ. ಆ ಜನರನ್ನು ನಾಶಮಾಡುವ ಶಕ್ತಿಯನ್ನು ನಾನು ನಿಮಗೆ ಕೊಟ್ಟೆನು. ಆಗ ನೀವು ಆ ಪ್ರದೇಶವನ್ನು ಸ್ವಾಧೀನಪಡಿಸಿಕೊಂಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 “ ‘ನಾನು ಈಜಿಪ್ಟಿನಲ್ಲಿ ಮಾಡಿದ್ದನ್ನು ನಿಮ್ಮ ಕಣ್ಣುಗಳು ಕಂಡವು. ಮರುಭೂಮಿಯಲ್ಲಿ ಬಹುಕಾಲದವರೆಗೆ ವಾಸವಾಗಿದ್ದೀರಿ. ಅನಂತರ ಯೊರ್ದನ್ ನದಿ ಆಚೆ ವಾಸವಾಗಿದ್ದ ಅಮೋರಿಯರ ದೇಶಕ್ಕೆ ನಿಮ್ಮನ್ನು ಕರೆದುಕೊಂಡು ಬಂದೆನು. ಅವರು ನಿಮ್ಮ ಸಂಗಡ ಯುದ್ಧಮಾಡುವಾಗ ಅವರ ದೇಶವನ್ನು ನೀವು ಸ್ವಾಧೀನ ಮಾಡಿಕೊಳ್ಳುವ ಹಾಗೆ ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿ, ಅವರನ್ನು ನಿಮ್ಮ ಎದುರಿನಿಂದ ನಾಶಮಾಡಿದೆನು. ಅಧ್ಯಾಯವನ್ನು ನೋಡಿ |