Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 3:10 - ಕನ್ನಡ ಸತ್ಯವೇದವು C.L. Bible (BSI)

10 ಚೈತನ್ಯಸ್ವರೂಪನಾದ ದೇವರು ನಿಮ್ಮ ಮಧ್ಯೆ ಇದ್ದಾರೆಂದು ನಿಮಗೆ ಈಗ ತಿಳಿಯುವುದು. ಅದೇ ಕಾನಾನ್ಯರನ್ನು, ಹಿತ್ತಿಯರನ್ನು, ಹಿವ್ವಿಯರನ್ನು, ಪೆರಿಜೀಯರನ್ನು, ಗಿರ್ಗಾಷಿಯರನ್ನು, ಅಮೋರಿಯರನ್ನು ಹಾಗೂ ಯೆಬೂಸಿಯರನ್ನು ನಿಮ್ಮ ಮುಂದಿನಿಂದ ಓಡಿಸಿಬಿಡುವರೆಂದು ನಿಮಗೆ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 “ಜೀವಸ್ವರೂಪನಾದ ದೇವರು ನಿಮ್ಮ ಮಧ್ಯದಲ್ಲಿ ಇದ್ದಾನೆಂದು ಆತನು ಕಾನಾನ್ಯರನ್ನು, ಹಿತ್ತಿಯರನ್ನು, ಹಿವ್ವಿಯರನ್ನು, ಪೆರಿಜೀಯರನ್ನು, ಗಿರ್ಗಾಷಿಯರನ್ನು, ಅಮೋರಿಯರನ್ನು, ಯೆಬೂಸಿಯರನ್ನು ನಿಮ್ಮ ಮುಂದೆ ಓಡಿಸಿಬಿಡುವನೆಂದು ನಿಮಗೆ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಚೈತನ್ಯಸ್ವರೂಪನಾದ ದೇವರು ನಿಮ್ಮ ಮಧ್ಯದಲ್ಲಿರುತ್ತಾನೆಂಬದೂ ಆತನು ಕಾನಾನ್ಯರು, ಹಿತ್ತಿಯರು, ಹಿವ್ವಿಯರು, ಪೆರಿಜೀಯರು, ಗಿರ್ಗಾಷಿಯರು, ಅಮೋರಿಯರು, ಯೆಬೂಸಿಯರು ಇವರನ್ನೆಲ್ಲಾ ನಿಮ್ಮ ಮುಂದೆ ತಪ್ಪದೆ ಹೊರಡಿಸುವನೆಂಬದೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಚೈತನ್ಯಸ್ವರೂಪನಾದ ದೇವರು ನಿಜವಾಗಿಯೂ ನಿಮ್ಮ ಸಂಗಡ ಇದ್ದಾನೆ ಎಂಬುದಕ್ಕೆ ಇಲ್ಲಿ ಒಂದು ಸಾಕ್ಷಿ ಇದೆ. ಆತನು ನಿಜವಾಗಿಯೂ ನಿಮ್ಮ ವೈರಿಗಳನ್ನು ಸೋಲಿಸುತ್ತಾನೆ ಎಂಬುದಕ್ಕೆ ಇಲ್ಲಿ ಸಾಕ್ಷಿ ಇದೆ. ಕಾನಾನ್ಯರು, ಹಿತ್ತಿಯರು, ಹಿವ್ವಿಯರು, ಪೆರಿಜೀಯರು, ಗಿರ್ಗಾಷಿಯರು, ಅಮೋರಿಯರು, ಯೆಬೂಸಿಯರು, ಇವರನ್ನೆಲ್ಲಾ ಆತನು ಸೋಲಿಸುತ್ತಾನೆ. ಆ ದೇಶದಿಂದ ಅವರನ್ನು ಬಲವಂತವಾಗಿ ಹೊರಗಟ್ಟುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಜೀವವುಳ್ಳ ದೇವರು ನಿಮ್ಮ ಮಧ್ಯದಲ್ಲಿರುವುದನ್ನೂ, ಅವರು ಕಾನಾನ್ಯರನ್ನೂ, ಹಿತ್ತಿಯರನ್ನೂ, ಹಿವ್ವಿಯರನ್ನೂ, ಪೆರಿಜೀಯರನ್ನೂ, ಗಿರ್ಗಾಷಿಯರನ್ನೂ, ಅಮೋರಿಯರನ್ನೂ, ಯೆಬೂಸಿಯರನ್ನೂ ನಿಮ್ಮ ಮುಂದೆ ನಿಶ್ಚಯವಾಗಿ ಓಡಿಸಿಬಿಡುವುದನ್ನೂ ನೀವು ತಿಳಿಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 3:10
37 ತಿಳಿವುಗಳ ಹೋಲಿಕೆ  

“ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ನಾಡಿಗೆ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಸೇರಿಸಿ, ಸಂಖ್ಯೆಯಲ್ಲೂ ಶಕ್ತಿಯಲ್ಲೂ ನಿಮ್ಮನ್ನು ಮೀರುವ ಜನಾಂಗಗಳನ್ನು ಅಲ್ಲಿಂದ ನಿಮ್ಮ ಮುಂದೆಯೆ ಹೊರಡಿಸುವರು.


ನಾನು ಒಬ್ಬ ದೂತನನ್ನು ನಿನಗೆ ಮುಂದಾಗಿ ಕಳಿಸಿ ಕಾನಾನ್ಯರನ್ನು, ಅಮೋರಿಯರನ್ನು, ಹಿತ್ತಿಯರನ್ನು, ಪೆರಿಜೀಯರನ್ನು, ಹಿವ್ವಿಯರನ್ನು, ಹಾಗು ಯೆಬೂಸಿಯರನ್ನು ಅಲ್ಲಿಂದ ಹೊರದೂಡುವೆನು.


ಜೀವಸ್ವರೂಪರಾದ ದೇವರ ಕೈಯಲ್ಲಿ ಸಿಕ್ಕಿಬೀಳುವುದು ಅದೆಷ್ಟು ಭಯಂಕರ!


ಆಗ ದಾವೀದನು ತನ್ನ ಬಳಿಯಲ್ಲೆ ನಿಂತಿದ್ದವರನ್ನು ನೋಡಿ, “ಜೀವಸ್ವರೂಪರಾದ ದೇವರ ಸೈನ್ಯವನ್ನು ಹೀಗೆ ಹಿಯ್ಯಾಳಿಸುವ, ಸುನ್ನತಿಯಿಲ್ಲದ ಈ ಫಿಲಿಷ್ಟಿಯನು ಎಷ್ಟರವನು? ಇವನನ್ನು ಕೊಂದು ಇಸ್ರಯೇಲರಿಗೆ ಬಂದಿರುವ ನಿಂದೆ ಅವಮಾನವನ್ನು ನೀಗಿಸುವವನಿಗೆ ಏನು ಸಿಕ್ಕುವುದೆಂದು ಹೇಳಿದಿರಿ?” ಎಂದು ಕೇಳಿದನು.


ಹೇ ಸರ್ವೇಶ್ವರಾ, ನೀವಾದರೋ ಸತ್ಯದೇವರು, ಜೀವಸ್ವರೂಪ ದೇವರು, ಶಾಶ್ವತ ರಾಜರು ನಿಮ್ಮ ಕೋಪಕ್ಕೆ ನಡುಗುತ್ತದೆ ಭೂಲೋಕ ನಿಮ್ಮ ರೋಷವನ್ನು ತಾಳಲಾರದು ಜನಾಂಗ.


ಜೀವಸ್ವರೂಪರಾದ ದೇವರನ್ನು ದೂಷಿಸುವುದಕ್ಕಾಗಿ ತನ್ನ ಯಜಮಾನ ಅಸ್ಸೀರಿಯದ ರಾಜನಿಂದ ಕಳುಹಿಸಲಾಗಿದ್ದ ರಬ್ಷಾಕೆಯ ನಿಂದಾವಾಕ್ಯಗಳನ್ನು ನಿಮ್ಮ ದೇವರಾದ ಸರ್ವೇಶ್ವರ ಕೇಳಿದ್ದಾರೆ. ನಿಮ್ಮ ದೇವರಾದ ಸರ್ವೇಶ್ವರ ತಾವು ಕೇಳಿದ ಆ ವಾಕ್ಯಗಳ ನಿಮಿತ್ತ ಮುಯ್ಯಿತೀರಿಸಾರು; ಹೀಗಿರಲು ಉಳಿದಿರುವ ಸ್ವಲ್ಪ ಜನರಿಗಾಗಿ ದೇವರನ್ನು ನೀವು ಪ್ರಾರ್ಥನೆ ಮಾಡಿ’ ಎಂದು ಹಿಜ್ಕೀಯ ಕೇಳಿಕೊಂಡಿದ್ದಾರೆ ಎಂದು ತಿಳಿಸಿ,” ಎಂದನು.


ಯಾಜಕ ಎಲ್ಲಾಜಾರನ ಮಗ ಫೀನೆಹಾಸನು ರೂಬೇನ್, ಗಾದ್, ಮನಸ್ಸೆ ಕುಲಗಳವರಿಗೆ, “ಸರ್ವೇಶ್ವರ ನಿಮ್ಮ ಮಧ್ಯೆ ಇರುತ್ತಾರೆಂದು ಈಗ ಅರಿವಾಯಿತು. ನೀವು ಸರ್ವೇಶ್ವರಸ್ವಾಮಿಗೆ ವಿರುದ್ಧ ಅಂಥ ದ್ರೋಹವನ್ನು ಮಾಡಲಿಲ್ಲವಾದ್ದರಿಂದ ಇಸ್ರಯೇಲರನ್ನು ಆತನ ಶಿಕ್ಷಾಹಸ್ತದಿಂದ ತಪ್ಪಿಸಿದಿರಿ,” ಎಂದನು.


ಆಗ ನಾನು ಅವರ ಮೇಲೆ ಬಹಳ ಸಿಟ್ಟುಗೊಂಡು, ಅವರನ್ನು ಬಿಟ್ಟು, ಅವರಿಗೆ ವಿಮುಖನಾಗುವೆನು. ಆದುದರಿಂದ ಅವರು ಸಂಹಾರಕ್ಕೆ ಗುರಿಯಾಗುವರು; ಅನೇಕ ಕಷ್ಟಗಳೂ ವಿಪತ್ತುಗಳೂ ಅವರಿಗೆ ಒದಗುವುವು. ಆಗ ಅವರು, ‘ನಮ್ಮ ದೇವರು, ನಮ್ಮ ಮಧ್ಯೆ ಇಲ್ಲದೆ ಹೋದುದರಿಂದಲೇ ಈ ವಿಪತ್ತುಗಳೆಲ್ಲಾ ನಮಗೆ ಸಂಭವಿಸಿವೆ,’ ಎಂದುಕೊಳ್ಳುವರು.


ಆದಕಾರಣ ಅವರನ್ನು ಈಜಿಪ್ಟಿನವರ ಕೈಯಿಂದ ಬಿಡಿಸುವುದಕ್ಕು ಮತ್ತು ಆ ದೇಶದಿಂದ ಹೊರತಂದು ಹಾಲೂ ಜೇನೂ ಹರಿಯುವ ಸವಿಸ್ತಾರವಾದ ಒಳ್ಳೆಯ ನಾಡಿಗೆ, ಅಂದರೆ ಕಾನಾನ್ಯರು, ಹಿತ್ತಿಯರು, ಆಮೋರಿಯರು, ಪೆರಿಜೀಯರು, ಹಿವ್ವಿಯರು ಹಾಗು ಯೆಬೂಸಿಯರು ವಾಸವಾಗಿರುವ ನಾಡಿಗೆ ನಡೆಸಿಕೊಂಡು ಹೋಗುವುದಕ್ಕು ಇಳಿದು ಬಂದಿದ್ದೇನೆ.


ನಾವು ನಿಮ್ಮಲ್ಲಿಗೆ ಬಂದಾಗ, ನೀವು ನಮ್ಮನ್ನು ಹೇಗೆ ಸ್ವಾಗತಿಸಿದಿರಿ; ವಿಗ್ರಹಗಳನ್ನು ತೊರೆದು, ಸತ್ಯ ಹಾಗೂ ಜೀವಸ್ವರೂಪರಾದ ದೇವರ ಕಡೆಗೆ ಹೇಗೆ ಅಭಿಮುಖರಾದಿರಿ;


ಆದರೂ ಇಸ್ರಯೇಲ್ ಜನಾಂಗ ಅಳೆಯುವುದಕ್ಕೂ ಎಣಿಸುವುದಕ್ಕೂ ಅಸಾಧ್ಯವಾದ ಕಡಲತೀರದ ಮರಳಿನಂತಾಗುವುದು. ದೇವರು ಅವರಿಗೆ ಇಂದು, “ನೀವು ನನ್ನ ಪ್ರಜೆಯಲ್ಲ” ಎಂದಿದ್ದಾರೆ; ಆದರೂ, “ನೀವು ಜೀವಸ್ವರೂಪಿಯಾದ ದೇವರ ಮಕ್ಕಳು” ಎನಿಸಿಕೊಳ್ಳುವ ದಿನ ಬರುವುದು.


ಪ್ರಭುವಿತ್ತ ನ್ಯಾಯತೀರ್ಪೇ ಆತನಿಗೆ ಪ್ರಚಾರಕ I ದುಷ್ಟರು ಗೈದ ಕುಯುಕ್ತಿಯೇ ಅವರಿಗೆ ಸಂಹಾರಕ II


ಅಗ್ನಿಜ್ವಾಲೆಯೊಳಗಿಂದ ಮಾತಾಡುವ ಚೈತನ್ಯಸ್ವರೂಪರಾದ ದೇವರ ಸ್ವರವನ್ನು ನಮ್ಮಂತೆ ಕೇಳಿಯೂ ಬದುಕಿರುವ ಮಾನವ ಯಾರಿದ್ದಾನೆ?


ಅದಕ್ಕೆ ಪೇತ್ರನು, “ಅಭಿಷಿಕ್ತರಾದ ಲೋಕೋದ್ಧಾರಕ ತಾವೇ, ಜೀವಸ್ವರೂಪರಾದ ದೇವರ ಪುತ್ರ ತಾವೇ,” ಎಂದನು.


ಆಗಲಿ, ಸರ್ವೇಶ್ವರ ನಿಮಗೊಂದು ಗುರುತನ್ನು ಕೊಡುವರು. ಇಗೋ, ಕನ್ಯೆಯೊಬ್ಬಳು ಗರ್ಭತಳೆದು ಪುತ್ರನೊಬ್ಬನನ್ನು ಪ್ರಸವಿಸುವಳು. ಇಮ್ಮಾನುವೇಲ್ ಎಂದು ಆತನಿಗೆ ಹೆಸರಿಡುವಳು.


ಮೀಕಾಯೆಹುವು ಅರಸನಿಗೆ, “ನೀನು ಸುರಕ್ಷಿತನಾಗಿ ಬರುವುದಾದರೆ ನಾನು ನುಡಿದದ್ದು ಸರ್ವೇಶ್ವರನ ಮಾತಲ್ಲವೆಂದು ತಿಳಿದುಕೋ,” ಎಂದು ಹೇಳಿ, “ಮಹಾಜನರೇ, ನನ್ನ ಮಾತನ್ನು ಗಮನದಲ್ಲಿಡಿ,” ಎಂದು ಕೂಗಿದನು.


ಸರ್ವೇಶ್ವರ ಇಸ್ರಯೇಲರಿಗೆ ಮಾಡಿದ ಅತ್ಯುನ್ನತ ವಾಗ್ದಾನಗಳಲ್ಲಿ ಒಂದೂ ತಪ್ಪಿಹೋಗಲಿಲ್ಲ. ಎಲ್ಲವೂ ನೆರವೇರಿದವು.


ಸರ್ವೇಶ್ವರ ಸ್ವಾಮಿ ತಮ್ಮ ಮಧ್ಯೆ ಇದ್ದಾರೋ ಇಲ್ಲವೋ ಎಂದು ಇಸ್ರಯೇಲರು ಅಲ್ಲಿ ಪರೀಕ್ಷಿಸಿದ್ದರಿಂದ ಮೋಶೆ ಆ ಸ್ಥಳಕ್ಕೆ ‘ಮಸ್ಸಾ’ ಎಂತಲೂ ಜನರು ತನ್ನೊಡನೆ ವಾಗ್ವಾದ ಮಾಡಿದ್ದರಿಂದ ‘ಮೆರೀಬಾ’ ಎಂತಲೂ ಹೆಸರಿಟ್ಟನು.


ತಾವೇ ದೇವರಿಂದ ಬಂದ ಪರಮಪೂಜ್ಯರು. ಹೌದು, ಇದೇ ನಮ್ಮ ವಿಶ್ವಾಸ ಮತ್ತು ಗ್ರಹಿಕೆ,” ಎಂದು ಹೇಳಿದನು.


ನೀವು ಆ ಜನರಿಗೆ ಹೆದರಿಕೊಳ್ಳಬೇಡಿ.


ಆಗ ಯೆಹೋಶುವನು ಇಸ್ರಯೇಲರಿಗೆ, “ಇಲ್ಲಿಗೆ ಬಂದು ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯ ಮಾತುಗಳನ್ನು ಕೇಳಿ:


ಜೋರ್ಡನ್ ಹೊಳೆಯ ಆಚೆ ಬೆಟ್ಟದ ಪ್ರದೇಶ, ಕಣಿವೆ ಪ್ರದೇಶ, ಲೆಬನೋನಿನ ಎದುರಿಗಿರುವ ಮಹಾಸಾಗರದ ತೀರಪ್ರದೇಶ ಇವುಗಳಲ್ಲಿ ವಾಸವಾಗಿದ್ದ ಅಮೋರಿಯ, ಹಿತ್ತಿಯ, ಕಾನಾನ್, ಪೆರಿಜ್ಜೀಯ, ಹಿವ್ವಿಯ, ಯೆಬೂಸಿಯ ರಾಜರು ನಡೆದ ಸಂಗತಿಯನ್ನು ಕೇಳಿದರು.


ಆಗ ದಾವೀದನು ಹಿತ್ತಿಯನಾದ ಅಹೀಮೆಲೆಕನನ್ನು ಹಾಗು ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಯನ್ನು ಉದ್ದೇಶಿಸಿ, “ನಿಮ್ಮಲ್ಲಿ ನನ್ನ ಸಂಗಡ ಸೌಲನ ಪಾಳೆಯಕ್ಕೆ ಯಾರು ಬರುವಿರಿ?” ಎಂದು ಕೇಳಿದನು. ಅದಕ್ಕೆ ಅಬೀಷೈಯು, “ನಾನು ಬರುತ್ತೇನೆ,” ಎಂದು ಉತ್ತರಕೊಟ್ಟನು.


ಜೀವಂತ ದೇವನಿಗಾಗಿ ದಾಹದಿಂದಿದೆ ಎನ್ನ ಮನ I ನಾ ತೆರಳಿ ಪಡೆವುದೆಂತು ಆ ದೇವನ ಮುಖದರ್ಶನ? II


ಆಮೋರಿಯರು, ಕಾನಾನ್ಯರು, ಗಿರ್ಗಾಷಿಯರು ಹಾಗು ಯೆಬೂಸಿಯರು ವಾಸವಾಗಿರುವ ಪ್ರಾಂತಗಳಿಂದ ಕೂಡಿರುವ ಈ ನಾಡನ್ನು ಕೊಡುವೆನು,” ಎಂದು ವಾಗ್ದಾನ ಮಾಡಿದರು.


ದಕ್ಷಿಣ ಪ್ರಾಂತದಲ್ಲಿ ಅಮಾಲೇಕ್ಯರು, ಮಲೆನಾಡಿನಲ್ಲಿ ಹಿತ್ತಿಯರು ಯೆಬೂಸಿಯರು ಹಾಗು ಅಮೋರಿಯರು ಮತ್ತು ಸಮುದ್ರ ತೀರದಲ್ಲಿ ಹಾಗೂ ಜೋರ್ಡನ್ ನದಿಯ ಪರಿಸರದಲ್ಲಿ ಕಾನಾನ್ಯರು ವಾಸವಾಗಿದ್ದಾರೆ,” ಎಂದು ವರದಿ ಮಾಡಿದರು.


ಪೂರ್ವ ಪಶ್ಚಿಮಗಳಲ್ಲಿರುವ ಕಾನಾನ್ಯರು, ಅಮೋರಿಯರು, ಹಿತ್ತಿಯರು, ಪೆರಿಜ್ಜೀಯರು, ಮಲೆನಾಡಿನ ಪ್ರದೇಶದಲ್ಲಿದ್ದ ಯೆಬೂಸಿಯರು, ಹೆರ್ನೋನಿನ ಬುಡದಲ್ಲಿ ಮಿಚ್ಪಾನಾಡಿನಲ್ಲಿದ್ದ ಹಿವ್ವಿಯರು ಇವರಿಗೂ ಹೇಳಿಕಳಿಸಿದನು.


ಇಳಿಜಾರಿನ ಪ್ರದೇಶ, ಕಣಿವೆ ಪ್ರದೇಶ, ತಪ್ಪಲು ಪ್ರದೇಶ, ಮರುಭೂಮಿ ಹಾಗೂ ದಕ್ಷಿಣಪ್ರಾಂತ್ಯ ಇವುಗಳನ್ನೂ ಇವುಗಳನ್ನು ಆಳುತ್ತಿದ್ದ ಹಿತ್ತೀಯ, ಅಮೋರಿಯ, ಕಾನಾನ್, ಪೆರಿಜ್ಜೀಯ, ಹಿವ್ವಿಯ ಹಾಗೂ ಯೆಬೂಸಿಯ ಅರಸರನ್ನೂ ಸೋಲಿಸಿ ಅವರ ನಾಡುಗಳನ್ನು ಇಸ್ರಯೇಲ್ ಕುಲಭಾಗಗಳಿಗೆ ಶಾಶ್ವತ ಸೊತ್ತಾಗಿ ಕೊಟ್ಟನು. ಆ ಅರಸರ ಪಟ್ಟಿ ಹೀಗಿದೆ :


ನೀವು ಜೋರ್ಡನನ್ನು ದಾಟಿ ಜೆರಿಕೋವಿಗೆ ಬಂದಿರಿ. ಆಗ ಜೆರಿಕೋವಿನವರು, ಅಮೋರಿಯರು, ಪೆರಿಜ್ಜೀಯರು, ಕಾನಾನ್ಯರು, ಹಿತ್ತಿಯರು, ಗಿರ್ಗಾಷ್ಟಿಯರು, ಹಿವ್ವಿಯರು ಹಾಗೂ ಯೆಬೂಸಿಯರು ಇವರೆಲ್ಲರೂ ನಿಮಗೆ ವಿರುದ್ಧ ಯುದ್ಧಕ್ಕೆ ಬಂದರು. ನಾನು ಅವರೆಲ್ಲರನ್ನು ನಿಮ್ಮ ಕೈವಶಮಾಡಿದೆ.


ಯೆಬೂಸಿಯ, ಅಮೋರಿಯ, ಗಿರ್ಗಾಷಿಯ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು